< ಎಸ್ತೇರಳು 4 >

1 ಮೊರ್ದೆಕೈಯು ನಡೆದದ್ದನ್ನೆಲ್ಲಾ ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ತಲೆಯ ಮೇಲೆ ಹಾಕಿಕೊಂಡು, ಪಟ್ಟಣದ ಮಧ್ಯದಲ್ಲಿ ಹೋಗುತ್ತಾ ಮಹಾದುಃಖದಿಂದ ಗೋಳಾಡಿದನು.
Et lorsque Mardochée apprit tout ce qui s'était fait, il déchira ses habits, et revêtit le cilice et la cendre, et parut au milieu de la ville et poussa un haut et lamentable cri.
2 ಗೋಣಿತಟ್ಟು ಕಟ್ಟಿಕೊಂಡವರು ಅರಮನೆಯ ಒಳಗೆ ಹೋಗಬಾರದೆಂದು ಅಪ್ಪಣೆಯಾಗಿತ್ತು. ಆದುದರಿಂದ ಅವನು ಅರಮನೆಯ ಹೆಬ್ಬಾಗಿಲಿನ ಮುಂದೆ ಬಂದನು.
Et il vint jusque devant la porte du roi, car il n'était pas permis d'entrer en cilice dans la porte du roi.
3 ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ಮತ್ತು ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ, ಉಪವಾಸ, ರೋದನೆ ಮತ್ತು ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕುಳಿತುಕೊಂಡರು.
Et dans toutes les provinces où parvinrent l'ordre du roi et son édit, il y eut une grande désolation parmi les Juifs, et jeûne et pleurs et deuil, et beaucoup se couvrirent du cilice et de la cendre.
4 ಎಸ್ತೇರಳ ಸೇವಕಿಯರೂ ಕಂಚುಕಿಗಳೂ ರಾಣಿಯಾದ ಆಕೆಯ ಬಳಿಗೆ ಬಂದು ಈ ವಿಚಾರವನ್ನು ತಿಳಿಸಿದಾಗ ಆಕೆಯು ಬಹಳವಾಗಿ ಕಳವಳಗೊಂಡು ಮೊರ್ದೆಕೈಗೆ ವಸ್ತ್ರಗಳನ್ನು ಕಳುಹಿಸಿ, “ಗೋಣಿತಟ್ಟನ್ನು ತೆಗೆದುಬಿಟ್ಟು, ಇವುಗಳನ್ನು ಧರಿಸಿಕೋ” ಎಂದು ಹೇಳಿಕಳುಹಿಸಿದಳು. ಆದರೆ ಅವನು ಅವುಗಳನ್ನು ಸ್ವೀಕರಿಸಲಿಲ್ಲ.
Et les compagnes d'Esther et ses eunuques vinrent l'informer. Alors la reine fut dans une angoisse extrême, et elle envoya des habits pour en vêtir Mardochée, et lui faire déposer le cilice, mais il ne les accepta pas.
5 ಆಗ ಆಕೆ ಅರಸನಿಂದ ತನ್ನ ಸೇವೆಗೋಸ್ಕರ ನೇಮಿಸಲ್ಪಟ್ಟಿದ್ದ ಹತಾಕನೆಂಬ ರಾಜ ಕಂಚುಕಿಯನ್ನು ಕರೆಯಿಸಿ, “ನೀನು ಮೊರ್ದೆಕೈಯ ಬಳಿಗೆ ಹೋಗಿ, ಇದಕ್ಕೆ ಕಾರಣವೇನು ಎಂದು ವಿಚಾರಿಸಿಕೊಂಡು ಬಾ” ಎಂದು ಹೇಳಿಕಳುಹಿಸಿದಳು.
Alors Esther appela Hathach, l'un des eunuques que le roi avait placés auprès d'elle, et le dépêcha à Mardochée pour savoir ce que c'était et à quel sujet.
6 ಹತಾಕನು ಅರಮನೆಯ ಬಾಗಿಲಿನ ಮುಂದಿರುವ ಪಟ್ಟಣದ ಬಯಲಿಗೆ ಮೊರ್ದೆಕೈಯ ಹತ್ತಿರ ಹೋದನು.
Et Hathach alla trouver Mardochée dans la Place de la ville, qui est devant la porte du roi.
7 ಮೊರ್ದೆಕೈಯು ತನಗೆ ಸಂಭವಿಸಿದ್ದೆಲ್ಲವನ್ನೂ, ಹಾಮಾನನು ಯೆಹೂದ್ಯರನ್ನು ನಾಶಮಾಡಲು ರಾಜಭಂಡಾರಕ್ಕೆ ಕೊಡುತ್ತೇನೆಂದು ನಿಗದಿಪಡಿಸಿದ ಬೆಳ್ಳಿಯ ಹಣ ಇಷ್ಟೆಂಬುದನ್ನೂ ಅವನಿಗೆ ತಿಳಿಸಿದನು.
Et Mardochée lui raconta tout ce qui lui était survenu, en indiquant la somme d'argent qu'Aman avait promis de payer pour le prix des Juifs au trésor du roi, afin de les détruire.
8 ಅದರೊಂದಿಗೆ ತಮ್ಮನ್ನು ಸಂಹರಿಸುವುದಕ್ಕೋಸ್ಕರ ಶೂಷನಿನಲ್ಲಿ ಪ್ರಕಟವಾದ ರಾಜಶಾಸನದ ಒಂದು ಪ್ರತಿಯನ್ನು ಕೊಟ್ಟು, “ಇದನ್ನು ಎಸ್ತೇರಳಿಗೆ ತೋರಿಸಿ ವಿವರಿಸು; ಮತ್ತು ಆಕೆಯು ಅರಸನ ಬಳಿಗೆ ಹೋಗಿ ಅವನು ಕೃಪೆ ತೋರಿಸುವಂತೆ ಅವನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹ ಮಾಡಲಿ” ಎಂದು ಹೇಳಿಕಳುಹಿಸಿದನು.
Et il lui remit aussi la copie du rescrit publié dans Suse pour leur massacre, afin qu'il le montrât à Esther, qu'il la mît au fait de tout, et lui enjoignît de se rendre chez le roi pour implorer sa pitié et le prier en faveur de son peuple.
9 ಹತಾಕನು ಹಿಂದಿರುಗಿ ಬಂದು ಎಸ್ತೇರಳಿಗೆ ಮೊರ್ದೆಕೈಯ ಮಾತುಗಳನ್ನು ತಿಳಿಸಿದನು.
Et Hathach vint rapporter à Esther les paroles de Mardochée.
10 ೧೦ ಎಸ್ತೇರಳು ಅವನನ್ನು ಪುನಃ ಮೊರ್ದೆಕೈಯ ಬಳಿಗೆ ಕಳುಹಿಸಿ,
Et Esther répondant à Hathach lui donna ce message pour Mardochée:
11 ೧೧ “ಅರಸನು ತನ್ನ ಬಳಿಗೆ ಬರಲು ಹೇಳಿದ ಹೊರತು ಅವನ ಬಳಿಗೆ ಒಳಗಣ ಪ್ರಾಕಾರಕ್ಕೆ ಹೋಗುವವರು ಮರಣದಂಡನೆಗೆ ಪಾತ್ರರಾಗುವರು ಎಂಬ ಒಂದೇ ನಿಯಮವು ಎಲ್ಲಾ ಸ್ತ್ರೀಪುರುಷರಿಗುಂಟು. ಯಾರ ಕಡೆಗೆ ಅವನು ತನ್ನ ಸುವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು ಎಂಬುದು ಅರಸನ ಎಲ್ಲಾ ಸೇವಕರಿಗೂ ಮತ್ತು ಸಂಸ್ಥಾನಗಳ ಎಲ್ಲಾ ಜನರಿಗೂ ಗೊತ್ತು. ನನಗಂತೂ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಆಮಂತ್ರಣವಾಗಲಿಲ್ಲ” ಎಂದು ಹೇಳಿಸಿದಳು.
Tous les serviteurs du roi et les peuples des provinces du roi savent que quiconque, homme et femme, entre chez le roi dans la cour intérieure, sans être appelé, est, en vertu d'une loi spéciale, passible de la mort, à moins que le roi ne lui tende son sceptre d'or pour lui laisser la vie. Or je n'ai point été appelée à entrer chez le roi voici trente jours.
12 ೧೨ ಹತಾಕನು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದನು.
Et l'on rapporta à Mardochée les paroles d'Esther.
13 ೧೩ ಅವನು ಎಸ್ತೇರಳಿಗೆ, “ಯೆಹೂದ್ಯರೆಲ್ಲಾ ನಾಶವಾದರೂ ನಾನೊಬ್ಬಳು ಅರಮನೆಯಲ್ಲಿರುವುದರಿಂದ ಉಳಿಯುವೆನು ಎಂದು ಭಾವಿಸಿಕೊಳ್ಳಬೇಡ.
Et Mardochée renvoya cette réponse à Esther: Ne te figure pas en ton âme pouvoir être sauvée dans le palais du roi plus que tous les Juifs.
14 ೧೪ ನೀನು ಈಗ ಸುಮ್ಮನಿದ್ದುಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ, ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು” ಎಂದು ಹೇಳಿಕಳುಹಿಸಿದನು.
Que si tu restais neutre à cette heure-ci, le secours et la délivrance arriveraient aux Juifs d'autre part, et toi et la maison de ton père vous péririez. Et qui sait si ce n'est pas pour cette heure-ci que tu es parvenue au rang de reine?
15 ೧೫ ಆಗ ಎಸ್ತೇರಳು ಮೊರ್ದೆಕೈಗೆ, “ನೀನು ಹೋಗಿ ಶೂಷನಿನಲ್ಲಿ ಸಿಕ್ಕುವ ಎಲ್ಲಾ ಯೆಹೂದ್ಯರನ್ನು ಕೂಡಿಸು;
Et Esther dit en réponse à Mardochée:
16 ೧೬ ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ” ಎಂದು ಹೇಳಿಸಿದಳು.
Va et rassemble tous les Juifs qui se trouvent dans Suse, et jeûnez pour moi, et ne mangez ni ne buvez pendant trois jours, ni jour, ni nuit. Moi aussi avec mes compagnes je jeûnerai de même, et ensuite j'irai chez le roi, malgré la loi; et si je péris, je périrai.
17 ೧೭ ಮೊರ್ದೆಕೈ ಹಿಂದಿರುಗಿ ಹೋಗಿ ಎಸ್ತೇರಳು ಹೇಳಿದಂತೆಯೇ ಮಾಡಿದನು.
Et Mardochée s'en alla et exécuta tous les ordres que lui donnait Esther.

< ಎಸ್ತೇರಳು 4 >