< ಎಸ್ತೇರಳು 5 >
1 ೧ ಮೂರನೆಯ ದಿನದಲ್ಲಿ ಎಸ್ತೇರಳು ರಾಜವಸ್ತ್ರಭೂಷಿತಳಾಗಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ, ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದಲ್ಲಿ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತುಕೊಂಡಿದ್ದನು.
Ke len in lalo se aktolu, Esther el nokomang nuknuk in kasra lal ac som ac tu inkalkal se oan loac ke lohm sel tokosra, ac ngetang nu ke infukil lun tron. Tokosra el muta infukil sac fin tron lal, ac ngetang nu ke nien utyak ah.
2 ೨ ಅವನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ ಆಕೆಯ ಮೇಲೆ ದಯವಿಟ್ಟು ತನ್ನ ಕೈಯಲ್ಲಿದ್ದ ಸುವರ್ಣದಂಡವನ್ನು ಆಕೆಯ ಕಡೆಗೆ ಚಾಚಿದನು.
Ke pacl se tokosra el liyalak Kasra Esther lah el tu lik ah, insial insewowo sel, ac el asroeang scepter gold soko ah nu sel. Na Kasra Esther el utyak ac kahlya mutun scepter gold soko ah.
3 ೩ ಎಸ್ತೇರಳು ಅರಸನ ಸಮೀಪಕ್ಕೆ ಹೋಗಿ ದಂಡದ ತುದಿಯನ್ನು ಮುಟ್ಟಿದಳು. ಆಗ ಅರಸನು ಆಕೆಗೆ, “ಎಸ್ತೇರ್ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವುದು? ನನ್ನ ಅರ್ಧರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ” ಅಂದನು.
Tokosra el siyuk, “Kasra Esther, mea kom lungse— Fahk nu sik lah mea kom enenu, na ac fah itukot nu sum, finne tafu tokosrai luk.”
4 ೪ ಅದಕ್ಕೆ ಎಸ್ತೇರಳು, “ಅರಸನು ಒಪ್ಪುವುದಾದರೆ ನಾನು ಈಹೊತ್ತು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ಹಾಮಾನನೊಡನೆ ಬರೋಣವಾಗಲಿ” ಎಂದು ಅರಿಕೆಮಾಡಿದಳು.
Esther el topuk ac fahk, “Fin wo sin tokosra, nga kena suli tokosra ac Haman nu ke sie kufwa nga akoo nu suwos oyeku.”
5 ೫ ಕೂಡಲೆ ಅರಸನು, “ಎಸ್ತೇರಳ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೆ ಹಾಮಾನನನ್ನು ಕರೆದುಕೊಂಡು ಬನ್ನಿರಿ” ಎಂದು ಅಪ್ಪಣೆಮಾಡಿ ಎಸ್ತೇರಳು ಮಾಡಿಸಿದ್ದ ಔತಣಕ್ಕೆ ಹಾಮಾನನ ಜೊತೆಯಲ್ಲಿ ಹೋದನು.
Na tokosra el sapla nu yorol Haman elan sulaklak tuku, eltal in som fal nu ke solsol lal Esther. Ouinge tokosra ac Haman som nu ke kufwa se Esther el akoela nu selos.
6 ೬ ದ್ರಾಕ್ಷಾರಸ ಪಾನಮಾಡುವಾಗ ಅರಸನು ತಿರುಗಿ ಎಸ್ತೇರಳಿಗೆ, “ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಅಂದನು.
Ke pacl se eltal nim wain, tokosra el siyuk sel Esther, “Fahk nu sik ma kom lungse, ac nga ac fah sot nu sum. Kom finne siyuk ke tafu tokosrai luk, ac fah itukot nu sum.”
7 ೭ ಅದಕ್ಕೆ ಎಸ್ತೇರಳು, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ನಾನು ಕೇಳುವುದನ್ನು ಕೊಡುವುದಕ್ಕೂ ನನ್ನ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೂ ಮನಸ್ಸುಳ್ಳವರಾಗಿದ್ದರೆ
Esther el topuk,
8 ೮ ನಾನು ತಮಗೋಸ್ಕರ ಸಿದ್ಧಮಾಡಿಸುವ ಔತಣಕ್ಕೆ ನಾಳೆಯೂ ಹಾಮಾನನ ಜೊತೆಯಲ್ಲಿ ಬರೋಣವಾಗಲಿ; ಆಗ ಅರಸರು ಹೇಳಿದಂತೆ ಮಾಡುವೆನು. ಇದೇ ನನ್ನ ಮನವಿ” ಎಂದು ಉತ್ತರಕೊಟ್ಟಳು.
“Fin wo sin Tokosra, ac Tokosra fin insewowo in lohng mwe siyuk luk, nga kena tuh Tokosra ac Haman in tuku nu ke sie pac kufwa nga akoo nu suwos lutu. In pacl sacn nga ac fah fahk nu sin Tokosra ma nga enenu.”
9 ೯ ಆ ದಿನ ಹಾಮಾನನು ಆನಂದಲಹರಿಯಲ್ಲಿ ಮನೆಗೆ ಹೋಗುತ್ತಿರುವಾಗ ಮೊರ್ದೆಕೈಯು ತನಗೆ ಭಯಪಡದೆ, ತನ್ನ ಮುಂದೆ ಏಳದೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತಿರುವುದನ್ನು ಕಂಡು ಅವನ ಮೇಲೆ ಕೋಪಭರಿತನಾದನು.
Ke Haman el tuyak liki kufwa uh, el arulana engan ac insewowo. Tusruktu el liyalak Mordecai ke nien utyak nu ke inkul sin tokosra, ac ke Mordecai el tiana tuyak ku akkalemye sunakinyal ke el alukella, Haman el foloyak sel.
10 ೧೦ ಆದರೂ ತನ್ನ ಕೋಪವನ್ನು ಬಿಗಿಹಿಡಿದುಕೊಂಡು ಮನೆಗೆ ಹೋಗಿ ತನ್ನ ಆಪ್ತರನ್ನೂ, ಪತ್ನಿಯಾದ ಜೆರೆಷಳನ್ನೂ ಕರೆದನು.
Tusruktu el tiana akkalemye toasr lal, ac el folokla nu lohm sel. Na el pangoneni mwet kawuk lal nu in lohm sel, ac solalma Zeresh, mutan kial, elan tuku welulos.
11 ೧೧ ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ, ಪುತ್ರಲಾಭಾತಿಶಯವನ್ನೂ, ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಿಗಿಂತ, ರಾಜಸೇವಕರಿಗಿಂತ ತನಗೇ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿ,
El konkin nu selos ke lupan kasrup lal, pusiyen wen natul, ac ke tokosra el tuh kilukunulak nu ke sie kunokon fulat, ac ke arulana yohk sripal liki leum saya lun tokosra.
12 ೧೨ “ಇದಲ್ಲದೆ ಎಸ್ತೇರ್ ರಾಣಿಯು ತಾನು ಸಿದ್ಧಮಾಡಿಸಿದ ಔತಣಕ್ಕೆ ಅರಸನ ಜೊತೆಯಲ್ಲಿ ನನ್ನ ಹೊರತಾಗಿ ಇನ್ನಾರನ್ನೂ ಆಹ್ವಾನಿಸಲಿಲ್ಲ. ನಾಳೆಯೂ ಅರಸನ ಜೊತೆಯಲ್ಲಿ ಬರಬೇಕೆಂದು ನನಗೆ ಹೇಳಿದ್ದಾಳೆ.
Haman el tafwela mu, “Sayen ma inge, Kasra Esther el tuh akoo sie kufwa, tia nu sin kutena mwet, a nu sik ac tokosra mukena, na el sifilpa suli kut nu lutu.
13 ೧೩ ಆದರೂ ಮೊರ್ದೆಕೈ ಎಂಬ ಯೆಹೂದ್ಯನು ಅರಮನೆಯ ಬಾಗಿಲಿನಲ್ಲಿ ನನ್ನ ಕಣ್ಣ ಮುಂದೆ ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ತೃಪ್ತಿಯಾಗುವುದಿಲ್ಲ” ಅಂದನು.
Tusruktu ma inge nukewa ma pilasr sik ke nga srakna liyel Mordecai, mwet Jew sac, muta ke nien utyak nu inkul fulat sin tokosra.”
14 ೧೪ ಅದಕ್ಕೆ ಅವನ ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ, “ಐವತ್ತು ಮೊಳ ಎತ್ತರವಾದ ಒಂದು ಗಲ್ಲುಗಂಬವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡೆದುಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆ ಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು” ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಗಂಬವನ್ನು ಸಿದ್ಧಮಾಡಿಸಿದನು.
Ke ma inge, mutan kial ac mwet kawuk lal elos fahk nu sel, “Efu kom ku tia sap in musaiyukla sie nien loksak, ke fit itngoul limekosr fulata— Lututang kom ku in siyuk sel tokosra elan sapkin tuh Mordecai elan sripsripyak kac, na kom ac engan ac som nu ke kufwa ah.” Haman el eis mu nunak na wowo se, ouinge el sapkin in musala nien loksak se.