< ಎಸ್ತೇರಳು 6 >
1 ೧ ಆ ರಾತ್ರಿಯಲ್ಲಿ ಅರಸನಿಗೆ ನಿದ್ರೆಬರಲಿಲ್ಲ; ಆದುದರಿಂದ ಅವನು ಪೂರ್ವ ಘಟನೆಗಳ ಗ್ರಂಥವನ್ನು ತರಲು ಸೇವಕರಿಗೆ ಅಪ್ಪಣೆಮಾಡಿ ಅದನ್ನು ಪಾರಾಯಣಮಾಡಿಸುತ್ತಿದ್ದನು.
Həmin gecə padşahın yuxusu qaçdı. O əmr etdi ki, hökmranlığının xatirə kitabı – salnamələr kitabı gətirilsin. Bunlar padşahın hüzurunda oxundu.
2 ೨ ಅಹಷ್ವೇರೋಷ್ ರಾಜನನ್ನು ಕೊಲ್ಲಬೇಕೆಂದು ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರೂ ರಾಜಕಂಚುಕಿಗಳು ಒಳಸಂಚುಮಾಡಿದ ಸಂಗತಿಯೂ ಅದು ಮೊರ್ದೆಕೈ ಮುಖಾಂತರ ಬಯಲಿಗೆ ಬಂದ ಸಂಗತಿಯೂ ಅದರಲ್ಲಿ ಬರೆಯಲಾಗಿತ್ತು.
Orada belə bir yazı tapıldı: «Saray darvazasının keşikçilərindən Biqtana ilə Tereş adlı iki hərəmağası padşah Axaşveroşa sui-qəsd hazırlamışdı. Mordokay bunu padşaha xəbər vermişdi».
3 ೩ ಆಗ ಅರಸನು, “ಇದಕ್ಕಾಗಿ ಮೊರ್ದೆಕೈಗೆ ಯಾವ ಸ್ಥಾನಮಾನಗಳು ದೊರಕಿದವು?” ಎಂದು ವಿಚಾರಿಸಿದಾಗ ಅವನ ಸಾನ್ನಿಧ್ಯಸೇವಕರಾದ ಪರಿವಾರದವರು, “ಏನೂ ದೊರಕಲಿಲ್ಲ” ಎಂದು ಹೇಳಿದರು.
Padşah dedi: «Buna görə Mordokaya hansı şərəf və mükafat verildi?» Onun xidmətində duran nökərlər dedi: «Buna görə ona heç nə edilməyib».
4 ೪ ಅರಸನು, “ಪ್ರಾಕಾರದಲ್ಲಿ ಯಾರಿದ್ದಾರೆ?” ಎಂದು ಕೇಳಿದನು. ಅಷ್ಟರಲ್ಲಿ ಹಾಮಾನನು ತಾನು ಸಿದ್ಧಮಾಡಿಸಿದ ಗಲ್ಲಿಗೆ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಅರಸನ ಅಪ್ಪಣೆ ಪಡೆದುಕೊಳ್ಳಬೇಕೆಂದು ಅರಮನೆಯ ಹೊರಗಣ ಪ್ರಾಕಾರದಲ್ಲಿ ಬಂದು ನಿಂತಿದ್ದನು.
Padşah dedi: «Həyətdə kim var?» Bu zaman Haman padşah sarayının bayır həyətinə girmişdi ki, padşahla danışıb Mordokayı düzəltdiyi dar ağacından asdırsın.
5 ೫ ಆಗ ರಾಜಸೇವಕರು, “ಇಗೋ, ಪ್ರಾಕಾರದಲ್ಲಿ ಹಾಮಾನನಿರುತ್ತಾನೆ” ಎಂದು ಬಿನ್ನವಿಸಿದರು. ಆಗ ಅರಸನು, “ಅವನು ಒಳಗೆ ಬರಲಿ” ಅಂದನು.
Padşahın nökərləri ona dedi: «Budur, Haman həyətdə dayanıb». Padşah dedi: «Gəlsin içəri».
6 ೬ ಹಾಮಾನನು ಬಂದಾಗ, “ಅರಸನು ಯಾರನ್ನಾದರು ಸನ್ಮಾನಿಸಬೇಕೆಂದು ಇಷ್ಟವುಳ್ಳವನಾಗಿದ್ದರೆ ಅಂಥವನಿಗೆ ಮಾಡಬೇಕಾದದ್ದೇನು?” ಎಂದು ಅವನನ್ನು ಕೇಳಿದನು.
Haman içəri gələndə padşah ona dedi: «Padşahın şərəfləndirmək istədiyi adama nə edilməlidir?» Haman da özlüyündə düşündü: «Məndən başqa kimi şərəfləndirmək istər ki?»
7 ೭ ಅದಕ್ಕೆ ಹಾಮಾನನು, “ಅರಸನು ನನ್ನನ್ನಲ್ಲದೆ ಇನ್ನಾರನ್ನು ಸನ್ಮಾನಿಸುವುದಕ್ಕೆ ಇಷ್ಟವುಳ್ಳವನಾಗಿರುವನು” ಅಂದುಕೊಂಡನು.
Bu halda Haman padşaha belə dedi: «Padşah kimi şərəfləndirmək istəyirsə, qoy belə edilsin:
8 ೮ ಅವನು ಅರಸನಿಗೆ, “ಯಾರನ್ನಾದರೂ ಸನ್ಮಾನಿಸಬೇಕೆಂದು ಅರಸನಿಗೆ ಇಷ್ಟವಿದ್ದರೆ ತಾನು ಧರಿಸಿಕೊಳ್ಳುವ ರಾಜ ವಸ್ತ್ರಗಳನ್ನೂ ಮತ್ತು ಸವಾರಿಮಾಡುವ ಪಟ್ಟದ ಕುದುರೆಯನ್ನೂ ತರಿಸಬೇಕು.
padşahın geyindiyi şahlıq libası, padşahın mindiyi və başına şahlıq kəkili qoyulan at gətirilsin.
9 ೯ ಆ ವಸ್ತ್ರಗಳನ್ನೂ ಕುದುರೆಯನ್ನೂ ಪ್ರಧಾನರಾದ ಅರಸನ ಸರದಾರರಲ್ಲೊಬ್ಬನ ವಶಕ್ಕೆ ಕೊಟ್ಟು, ಅರಸನು ಸನ್ಮಾನಿಸಬೇಕೆಂದಿರುವ ಪುರುಷನಿಗೆ ಆ ರಾಜವಸ್ತ್ರಗಳನ್ನು ಹಾಕಿಸಬೇಕು. ಅನಂತರ ಅವನನ್ನು ಆ ಕುದುರೆಯ ಮೇಲೆ ಕುಳ್ಳಿರಿಸಿ ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸುತ್ತಾ ಅವನ ಮುಂದೆ, ‘ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ’ ಎಂದು ಪ್ರಕಟಣೆ ಮಾಡಿಸಬೇಕು” ಎಂದು ಹೇಳಿದನು.
Həmin paltar və at padşahın ən yüksək rütbəli rəislərindən birinin əlinə verilsin ki, padşahın şərəfləndirmək istədiyi adamı geyindirərək ata mindirsinlər və şəhər meydanında gəzdirsinlər və qabağa düşüb belə car çəksinlər: “Padşah istədiyi adamı bu cür şərəfləndirir”».
10 ೧೦ ಕೂಡಲೆ ಅರಸನು ಹಾಮಾನನಿಗೆ, “ನೀನು ಹೇಳಿದ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ಬೇಗನೆ ತೆಗೆದುಕೊಂಡು ಬಂದು ಅರಮನೆಯ ಬಾಗಿಲಿನಲ್ಲಿ ಕುಳಿತುಕೊಂಡಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು; ನೀನು ಹೇಳಿದವುಗಳಲ್ಲಿ ಒಂದನ್ನೂ ನೆರವೇರಿಸದೆ ಬಿಡಬೇಡ” ಎಂದು ಅಪ್ಪಣೆಮಾಡಿದನು.
Padşah Hamana dedi: «Paltar və atı tez götürüb saray darvazasında vəzifəsi olan Yəhudi Mordokaya dediklərinin heç birini əskiltmədən et».
11 ೧೧ ಹಾಮಾನನು ಆ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ತೆಗೆದುಕೊಂಡು ಬಂದು, ಮೊರ್ದೆಕೈಯನ್ನು ಭೂಷಿಸಿ, ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ, ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ” ಎಂದು ಪ್ರಕಟಣೆಮಾಡಿಸಿದನು.
Haman paltar və at götürüb Mordokayı geyindirdi. Sonra ata mindirərək şəhərin meydanında gəzdirdi və qarşısında car çəkərək dedi: «Padşah istədiyi adamı bu cür şərəfləndirir».
12 ೧೨ ಮೊರ್ದೆಕೈಯು ಹಿಂತಿರುಗಿ ಅರಮನೆಯ ಬಾಗಿಲಿಗೆ ಹೋದನು. ಹಾಮಾನನಾದರೋ ದುಃಖದಿಂದ ಮುಖವನ್ನು ಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಹೋಗಿ ತನ್ನ ಹೆಂಡತಿಯಾದ ಜೆರೆಷಳ ಮತ್ತು ಎಲ್ಲಾ ಆಪ್ತರ ಮುಂದೆ ತನಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದನು.
Bundan sonra Mordokay saray darvazasına qayıtdı. Haman isə dərdli və başıörtülü halda tez evə qayıtdı.
13 ೧೩ ಆಗ ಅವನ ಪಂಡಿತರೂ ಮತ್ತು ಹೆಂಡತಿಯೂ ಅವನಿಗೆ, “ಯಾವನ ಮುಂದೆ ನಿನ್ನ ಸೋಲು ಪ್ರಾರಂಭವಾಯಿತೋ ಆ ಮನುಷ್ಯನು ಯೆಹೂದ ಸಂತಾನದವನಾಗಿದ್ದರೆ ನೀನು ಗೆಲ್ಲಲಾರಿ, ಅವನ ಮುಂದೆ ಬಿದ್ದು ಹಾಳಾಗುವಿ” ಅಂದರು.
O, arvadı Zereşə və dostlarına başına gələn bütün əhvalatları danışdı. Müdrik məsləhətçiləri ilə arvadı Zereş ona dedi: «Qarşısında mövqeyini əldən verdiyin Mordokay Yəhudi soyundandırsa, ona gücün çatmaz, mütləq qarşısında məhv olacaqsan».
14 ೧೪ ಅವರು ಇನ್ನೂ ಅವನೊಡನೆ ಮಾತನಾಡುತ್ತಿರುವಾಗಲೇ ರಾಜಕಂಚುಕಿಗಳು ಬಂದು ಎಸ್ತೇರಳು ಮಾಡಿಸಿರುವ ಔತಣಕ್ಕೆ ಬೇಗ ಬರಬೇಕೆಂದು ಹಾಮಾನನನ್ನು ಕರೆದೊಯ್ದರು.
Elə onunla söhbət edirdilər ki, padşahın hərəmağaları Hamanı tələsik Esterin qurduğu ziyafətə apardı.