< ಎಸ್ತೇರಳು 9 >

1 ಅರಸನ ಆಜ್ಞಾನಿರ್ಣಯಗಳನ್ನು ನೆರವೇರಿಸತಕ್ಕ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನವು ಬಂದಿತು. ಆ ದಿನದಲ್ಲಿ ಯೆಹೂದ್ಯರನ್ನು ಸ್ವಾಧೀನ ಮಾಡಿಕೊಳ್ಳಬಹುದೆಂದು ಅವರ ವೈರಿಗಳು ನಿರೀಕ್ಷಿಸಿಕೊಂಡಿದ್ದರು. ಆದರೆ ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮ ವೈರಿಗಳನ್ನು ಸ್ವಾಧೀನಮಾಡಿಕೊಂಡರು.
וּבִשְׁנֵים עָשָׂר חֹדֶשׁ הוּא־חֹדֶשׁ אֲדָר בִּשְׁלוֹשָׁה עָשָׂר יוֹם בּוֹ אֲשֶׁר הִגִּיעַ דְּבַר־הַמֶּלֶךְ וְדָתוֹ לְהֵעָשׂוֹת בַּיּוֹם אֲשֶׁר שִׂבְּרוּ אֹיְבֵי הַיְּהוּדִים לִשְׁלוֹט בָּהֶם וְנַהֲפוֹךְ הוּא אֲשֶׁר יִשְׁלְטוּ הַיְּהוּדִים הֵמָּה בְּשֹׂנְאֵיהֶֽם׃
2 ಆದುದರಿಂದ ಅರಸನಾದ ಅಹಷ್ವೇರೋಷನ ಸಮಸ್ತ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿದ್ದ ಯೆಹೂದ್ಯರು ತಮಗೆ ಕೇಡು ಬಯಸಿದವರಿಗೆ ವಿರುದ್ಧವಾಗಿ ಕೈಯೆತ್ತುವುದಕ್ಕೆ ಸೇರಿಕೊಂಡಾಗ ಯಾರಿಗೂ ಅವರ ಎದುರಿನಲ್ಲಿ ನಿಲ್ಲಲಾಗಲಿಲ್ಲ.
נִקְהֲלוּ הַיְּהוּדִים בְּעָרֵיהֶם בְּכָל־מְדִינוֹת הַמֶּלֶךְ אֳחַשְׁוֵרוֹשׁ לִשְׁלֹחַ יָד בִּמְבַקְשֵׁי רָֽעָתָם וְאִישׁ לֹא־עָמַד לִפְנֵיהֶם כִּֽי־נָפַל פַּחְדָּם עַל־כָּל־הָעַמִּֽים׃
3 ಅವರಿಂದ ಎಲ್ಲಾ ಜನಾಂಗದವರಿಗೆ ಭಯವುಂಟಾಯಿತು; ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಪ್ರಾಬಲ್ಯವು ಹೆಚ್ಚಾಗುತ್ತಾ ಬಂದ ಹಾಗೆಲ್ಲಾ, ಅವನ ಸುದ್ದಿಯೂ ಸಕಲ ಸಂಸ್ಥಾನಗಳಲ್ಲಿಯೂ ಹಬ್ಬಿತು.
וְכָל־שָׂרֵי הַמְּדִינוֹת וְהָאֲחַשְׁדַּרְפְּנִים וְהַפַּחוֹת וְעֹשֵׂי הַמְּלָאכָה אֲשֶׁר לַמֶּלֶךְ מְנַשְּׂאִים אֶת־הַיְּהוּדִים כִּֽי־נָפַל פַּֽחַד־מָרְדֳּכַי עֲלֵיהֶֽם׃
4 ಸರ್ವ ಸಂಸ್ಥಾನಾಧಿಕಾರಿಗಳೂ, ಉಪರಾಜರೂ, ದೇಶಾಧಿಪತಿಗಳೂ ಮತ್ತು ಇತರ ರಾಜೋದ್ಯೋಗಸ್ಥರೂ ಅವನಿಗೆ ಹೆದರಿ ಯೆಹೂದ್ಯರಿಗೆ ಸಹಾಯಕರಾದರು.
כִּֽי־גָדוֹל מָרְדֳּכַי בְּבֵית הַמֶּלֶךְ וְשָׁמְעוֹ הוֹלֵךְ בְּכָל־הַמְּדִינוֹת כִּֽי־הָאִישׁ מָרְדֳּכַי הוֹלֵךְ וְגָדֽוֹל׃
5 ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ, ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ವೈರಿಗಳನ್ನು ಇಷ್ಟವಿದ್ದಂತೆ ಮಾಡಿದರು.
וַיַּכּוּ הַיְּהוּדִים בְּכָל־אֹיְבֵיהֶם מַכַּת־חֶרֶב וְהֶרֶג וְאַבְדָן וַיַּֽעֲשׂוּ בְשֹׂנְאֵיהֶם כִּרְצוֹנָֽם׃
6 ಯೆಹೂದ್ಯರು ಶೂಷನ್ ಕೋಟೆಯಲ್ಲೇ ಐನೂರು ಜನರನ್ನು ಕೊಂದುಬಿಟ್ಟರು.
וּבְשׁוּשַׁן הַבִּירָה הָרְגוּ הַיְּהוּדִים וְאַבֵּד חֲמֵשׁ מֵאוֹת אִֽישׁ׃
7 ಹತರಾದವರಲ್ಲಿ ಪರ್ಷಂದಾತ, ದಲ್ಫೋನ್, ಅಸ್ಪಾತ,
וְאֵת ׀ פַּרְשַׁנְדָּתָא וְאֵת ׀ דַּֽלְפוֹן וְאֵת ׀ אַסְפָּֽתָא׃
8 ಪೋರಾತ, ಆದಲ್ಯ, ಅರೀದಾತ,
וְאֵת ׀ פּוֹרָתָא וְאֵת ׀ אֲדַלְיָא וְאֵת ׀ אֲרִידָֽתָא׃
9 ಪರ್ಮಷ್ಟ, ಅರೀಸೈ, ಅರಿದೈ, ವೈಜಾತ ಎಂಬುವವರಿದ್ದರು.
וְאֵת ׀ פַּרְמַשְׁתָּא וְאֵת ׀ אֲרִיסַי וְאֵת ׀ אֲרִדַי וְאֵת ׀ וַיְזָֽתָא׃
10 ೧೦ ಇವರು ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಮಕ್ಕಳು. ಇಷ್ಟು ಜನರನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.
עֲשֶׂרֶת בְּנֵי הָמָן בֶּֽן־הַמְּדָתָא צֹרֵר הַיְּהוּדִים הָרָגוּ וּבַבִּזָּה לֹא שָׁלְחוּ אֶת־יָדָֽם׃
11 ೧೧ ಆ ದಿನ ಶೂಷನ್ ಕೋಟೆಯಲ್ಲಿ ಹತರಾದವರ ಸಂಖ್ಯೆಯನ್ನು ಅರಸನಿಗೆ ತಿಳಿಸಲಾಯಿತು.
בַּיּוֹם הַהוּא בָּא מִסְפַּר הֽ͏ַהֲרוּגִים בְּשׁוּשַׁן הַבִּירָה לִפְנֵי הַמֶּֽלֶךְ׃
12 ೧೨ ಆಗ ಅರಸನು ಎಸ್ತೇರ್ ರಾಣಿಗೆ, “ಯೆಹೂದ್ಯರು ಶೂಷನ್ ಕೋಟೆಯಲ್ಲೇ ಐನೂರು ಜನರನ್ನೂ, ಹಾಮಾನನ ಹತ್ತು ಮಂದಿ ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ; ಉಳಿದ ರಾಜಸಂಸ್ಥಾನಗಳಲ್ಲಿ ಎಷ್ಟೋ ಜನರು ಹತರಾಗಿರಬಹುದು. ನಿನ್ನ ವಿಜ್ಞಾಪನೆ ಇನ್ನು ಯಾವುದಿದ್ದರೂ ನೆರವೇರುವುದು, ನೀನು ಏನು ಕೇಳಿಕೊಂಡರೂ ಕೊಡುವೆನು” ಎಂದು ಹೇಳಿದನು.
וַיֹּאמֶר הַמֶּלֶךְ לְאֶסְתֵּר הַמַּלְכָּה בְּשׁוּשַׁן הַבִּירָה הָרְגוּ הַיְּהוּדִים וְאַבֵּד חֲמֵשׁ מֵאוֹת אִישׁ וְאֵת עֲשֶׂרֶת בְּנֵֽי־הָמָן בִּשְׁאָר מְדִינוֹת הַמֶּלֶךְ מֶה עָשׂוּ וּמַה־שְּׁאֵֽלָתֵךְ וְיִנָּתֵֽן לָךְ וּמַה־בַּקָּשָׁתֵךְ עוֹד וְתֵעָֽשׂ׃
13 ೧೩ ಅದಕ್ಕೆ ಎಸ್ತೇರಳು, “ಅರಸನ ಇಷ್ಟವಿದ್ದರೆ ನಾಳೆಯೂ ಇಂದಿನ ರಾಜಾಜ್ಞೆಯ ಪ್ರಕಾರ ಮಾಡುವುದಕ್ಕೂ ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೆ ಹಾಕುವುದಕ್ಕೂ ಶೂಷನಿನಲ್ಲಿರುವ ಯೆಹೂದ್ಯರಿಗೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡಳು.
וַתֹּאמֶר אֶסְתֵּר אִם־עַל־הַמֶּלֶךְ טוֹב יִנָּתֵן גַּם־מָחָר לַיְּהוּדִים אֲשֶׁר בְּשׁוּשָׁן לַעֲשׂוֹת כְּדָת הַיּוֹם וְאֵת עֲשֶׂרֶת בְּנֵֽי־הָמָן יִתְלוּ עַל־הָעֵֽץ׃
14 ೧೪ ಆಗ ಅರಸನು ಹಾಗೆ ಮಾಡುವುದಕ್ಕೆ ಅಪ್ಪಣೆಕೊಟ್ಟನು. ಕೂಡಲೆ ಈ ಸಂಬಂಧವಾದ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾಯಿತು ಮತ್ತು ಹಾಮಾನನ ಹತ್ತು ಮಕ್ಕಳನ್ನು ಗಲ್ಲಿಗೆ ಏರಿಸಲಾಯಿತು.
וַיֹּאמֶר הַמֶּלֶךְ לְהֵֽעָשׂוֹת כֵּן וַתִּנָּתֵן דָּת בְּשׁוּשָׁן וְאֵת עֲשֶׂרֶת בְּנֵֽי־הָמָן תָּלֽוּ׃
15 ೧೫ ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಲ್ಲೂ ಒಟ್ಟಿಗೆ ಸೇರಿ ಅಲ್ಲಿನ ಮುನ್ನೂರು ಜನರನ್ನು ಕೊಂದರು; ಆದರೆ ಕೊಳ್ಳೆಗೆ ಕೈಹಾಕಲಿಲ್ಲ.
וַיִּֽקָּהֲלוּ היהודיים הַיְּהוּדִים אֲשֶׁר־בְּשׁוּשָׁן גַּם בְּיוֹם אַרְבָּעָה עָשָׂר לְחֹדֶשׁ אֲדָר וַיּֽ͏ַהַרְגוּ בְשׁוּשָׁן שְׁלֹשׁ מֵאוֹת אִישׁ וּבַבִּזָּה לֹא שָׁלְחוּ אֶת־יָדָֽם׃
16 ೧೬ ಅದೇ ಮೇರೆಗೆ ರಾಜಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮ ವಿರೋಧಿಗಳ ಕಾಟವನ್ನು ನಿಲ್ಲಿಸಿ, ಪ್ರಾಣ ರಕ್ಷಿಸಿಕೊಳ್ಳುವುದಕ್ಕಾಗಿ ಕೂಡಿಕೊಂಡು ತಮ್ಮ ವೈರಿಗಳಲ್ಲಿ ಎಪ್ಪತ್ತೈದು ಸಾವಿರ ಜನರನ್ನು ಸಂಹರಿಸಿದರು; ಆದರೆ ಸುಲಿಗೆಮಾಡುವುದಕ್ಕೆ ಕೈ ಹಾಕಲಿಲ್ಲ.
וּשְׁאָר הַיְּהוּדִים אֲשֶׁר בִּמְדִינוֹת הַמֶּלֶךְ נִקְהֲלוּ ׀ וְעָמֹד עַל־נַפְשָׁם וְנוֹחַ מֵאֹיְבֵיהֶם וְהָרֹג בְּשֹׂנְאֵיהֶם חֲמִשָּׁה וְשִׁבְעִים אָלֶף וּבַבִּזָּה לֹא שָֽׁלְחוּ אֶת־יָדָֽם׃
17 ೧೭ ಇದು ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ನಡೆಯಿತು. ಅವರು ಹದಿನಾಲ್ಕನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು. ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನು ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡರು.
בְּיוֹם־שְׁלֹשָׁה עָשָׂר לְחֹדֶשׁ אֲדָר וְנוֹחַ בְּאַרְבָּעָה עָשָׂר בּוֹ וְעָשֹׂה אֹתוֹ יוֹם מִשְׁתֶּה וְשִׂמְחָֽה׃
18 ೧೮ ಆದರೆ ಶೂಷನಿನ ಯೆಹೂದ್ಯರು ಹದಿಮೂರನೆಯ ಮತ್ತು ಹದಿನಾಲ್ಕನೆಯ ದಿನಗಳನ್ನು ವೈರಿಗಳನ್ನು ವಧಿಸುವುದಕ್ಕೆ ನೇಮಿಸಿಕೊಂಡಿದ್ದರಿಂದ ಹದಿನೈದನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು.
והיהודיים וְהַיְּהוּדִים אֲשֶׁר־בְּשׁוּשָׁן נִקְהֲלוּ בִּשְׁלֹשָׁה עָשָׂר בּוֹ וּבְאַרְבָּעָה עָשָׂר בּוֹ וְנוֹחַ בַּחֲמִשָּׁה עָשָׂר בּוֹ וְעָשֹׂה אֹתוֹ יוֹם מִשְׁתֶּה וְשִׂמְחָֽה׃
19 ೧೯ ಆದುದರಿಂದ ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನೂ ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ, ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ.
עַל־כֵּן הַיְּהוּדִים הפרוזים הַפְּרָזִים הַיֹּשְׁבִים בְּעָרֵי הַפְּרָזוֹת עֹשִׂים אֵת יוֹם אַרְבָּעָה עָשָׂר לְחֹדֶשׁ אֲדָר שִׂמְחָה וּמִשְׁתֶּה וְיוֹם טוֹב וּמִשְׁלוֹחַ מָנוֹת אִישׁ לְרֵעֵֽהוּ׃
20 ೨೦ ಮೊರ್ದಕೈಯು ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಯೆಹೂದ್ಯರಿಗೆ ಪತ್ರಗಳ ಮುಖಾಂತರ ತಿಳಿಯಪಡಿಸಿದ ಸಂಗತಿಗಳು:
וַיִּכְתֹּב מָרְדֳּכַי אֶת־הַדְּבָרִים הָאֵלֶּה וַיִּשְׁלַח סְפָרִים אֶל־כָּל־הַיְּהוּדִים אֲשֶׁר בְּכָל־מְדִינוֹת הַמֶּלֶךְ אֲחַשְׁוֵרוֹשׁ הַקְּרוֹבִים וְהָרְחוֹקִֽים׃
21 ೨೧ ಪ್ರತಿವರ್ಷವೂ ಫಾಲ್ಗುಣಮಾಸದ ಹದಿನಾಲ್ಕನೆಯ ಮತ್ತು ಹದಿನೈದನೆಯ ದಿನಗಳನ್ನು ಉತ್ಸವದಿನಗಳನ್ನಾಗಿ ಆಚರಿಸುವುದು ಶಾಶ್ವತನಿಯಮ ಎಂದೆಣಿಸಬೇಕು.
לְקַיֵּם עֲלֵיהֶם לִהְיוֹת עֹשִׂים אֵת יוֹם אַרְבָּעָה עָשָׂר לְחֹדֶשׁ אֲדָר וְאֵת יוֹם־חֲמִשָּׁה עָשָׂר בּוֹ בְּכָל־שָׁנָה וְשָׁנָֽה׃
22 ೨೨ ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿ ಉಂಟಾಯಿತು. ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂದಿತು. ಆದುದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡು ಬಡವರಿಗೆ ದಾನಧರ್ಮ ಮಾಡಬೇಕು.
כַּיָּמִים אֲשֶׁר־נָחוּ בָהֶם הַיְּהוּדִים מֵאוֹיְבֵיהֶם וְהַחֹדֶשׁ אֲשֶׁר נֶהְפַּךְ לָהֶם מִיָּגוֹן לְשִׂמְחָה וּמֵאֵבֶל לְיוֹם טוֹב לַעֲשׂוֹת אוֹתָם יְמֵי מִשְׁתֶּה וְשִׂמְחָה וּמִשְׁלוֹחַ מָנוֹת אִישׁ לְרֵעֵהוּ וּמַתָּנוֹת לָֽאֶבְיוֹנִֽים׃
23 ೨೩ ಅದರಂತೆ ಯೆಹೂದ್ಯರು ಮೊರ್ದೆಕೈಯ ಪತ್ರದಲ್ಲಿ ನಿರೂಪಿತವಾದದ್ದನ್ನು ಅಂಗೀಕರಿಸಿ, ಆ ವರ್ಷದಲ್ಲಿ ನಡೆದ ಉತ್ಸವವು ತಮ್ಮಲ್ಲಿ ವಾರ್ಷಿಕೋತ್ಸವವಾಗಿ ಆಚರಿಸಬೇಕೆಂದು ಗೊತ್ತುಮಾಡಿಕೊಂಡರು.
וְקִבֵּל הַיְּהוּדִים אֵת אֲשֶׁר־הֵחֵלּוּ לַעֲשׂוֹת וְאֵת אֲשֶׁר־כָּתַב מָרְדֳּכַי אֲלֵיהֶֽם׃
24 ೨೪ ಎಲ್ಲಾ ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡು ಅವರನ್ನು ತಳಮಳಗೊಳಿಸಿ ಹಾಳುಮಾಡುವುದರ ವಿಷಯವಾಗಿ ಪೂರ್ ಅಂದರೆ ಚೀಟನ್ನು ಹಾಕಿಸಿದನಲ್ಲಾ.
כִּי הָמָן בֶּֽן־הַמְּדָתָא הָֽאֲגָגִי צֹרֵר כָּל־הַיְּהוּדִים חָשַׁב עַל־הַיְּהוּדִים לְאַבְּדָם וְהִפִּיל פּוּר הוּא הַגּוֹרָל לְהֻמָּם וּֽלְאַבְּדָֽם׃
25 ೨೫ ಇದು ಅರಸನ ಮುಂದೆ ಬಂದಾಗ ಅವನು, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕು” ಎಂದು ಪತ್ರದ ಮೂಲಕ ಅಪ್ಪಣೆಮಾಡಿದನಷ್ಟೆ.
וּבְבֹאָהּ לִפְנֵי הַמֶּלֶךְ אָמַר עִם־הַסֵּפֶר יָשׁוּב מַחֲשַׁבְתּוֹ הָרָעָה אֲשֶׁר־חָשַׁב עַל־הַיְּהוּדִים עַל־רֹאשׁוֹ וְתָלוּ אֹתוֹ וְאֶת־בָּנָיו עַל־הָעֵֽץ׃
26 ೨೬ ಆ “ಪೂರ್” ಎಂಬ ಶಬ್ದದ ಆಧಾರದಿಂದ ಆ ದಿನಗಳಿಗೆ “ಪೂರೀಮ್” ಎಂದು ಹೆಸರಾಯಿತು.
עַל־כֵּן קָֽרְאוּ לַיָּמִים הָאֵלֶּה פוּרִים עַל־שֵׁם הַפּוּר עַל־כֵּן עַל־כָּל־דִּבְרֵי הָאִגֶּרֶת הַזֹּאת וּמָֽה־רָאוּ עַל־כָּכָה וּמָה הִגִּיעַ אֲלֵיהֶֽם׃
27 ೨೭ ಯೆಹೂದ್ಯರು ಆ ಪತ್ರದ ಮಾತುಗಳನ್ನೂ ಅವುಗಳ ಸಂಬಂಧವಾಗಿ ತಾವೇ ಅನುಭವಿಸಿದ್ದನ್ನೂ, ತಮಗೆ ಸಂಭವಿಸಿದ್ದನ್ನೂ ಮನಸ್ಸಿಗೆ ತೆಗೆದುಕೊಂಡು,
קִיְּמוּ וקבל וְקִבְּלוּ הַיְּהוּדִים ׀ עֲלֵיהֶם ׀ וְעַל־זַרְעָם וְעַל כָּל־הַנִּלְוִים עֲלֵיהֶם וְלֹא יַעֲבוֹר לִהְיוֹת עֹשִׂים אֵת שְׁנֵי הַיָּמִים הָאֵלֶּה כִּכְתָבָם וְכִזְמַנָּם בְּכָל־שָׁנָה וְשָׁנָֽה׃
28 ೨೮ ಪ್ರತಿವರ್ಷವೂ ಆ ಎರಡು ದಿನಗಳನ್ನು ಅವುಗಳ ಕುರಿತಾದ ಶಾಸನದ ಪ್ರಕಾರ ನೇಮಿತವಾದ ಕಾಲದಲ್ಲಿ ಆಚರಿಸುವುದು ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಮೀರಬಾರದ ಪದ್ಧತಿ ನಿಯಮಗಳಾಗಬೇಕೆಂದೂ ಯುಗಯುಗಾಂತರಗಳಲ್ಲಿ ಎಲ್ಲಾ ಗೋತ್ರ ಸಂಸ್ಥಾನ ನಗರಗಳವರು ಈ ಪೂರೀಮ್ ಹಬ್ಬದ ಆಚರಣೆ ಯೆಹೂದ್ಯರಲ್ಲಿ ಎಂದೂ ನಿಂತುಹೋಗಬಾರದು. ಅದರ ಜ್ಞಾಪಕವು ಅವರ ಸಂತಾನದವರಲ್ಲಿ ಅಳಿದುಹೋಗಲೇಬಾರದು ಎಂದೂ ಗೊತ್ತುಮಾಡಿಕೊಂಡರು.
וְהַיָּמִים הָאֵלֶּה נִזְכָּרִים וְנַעֲשִׂים בְּכָל־דּוֹר וָדוֹר מִשְׁפָּחָה וּמִשְׁפָּחָה מְדִינָה וּמְדִינָה וְעִיר וָעִיר וִימֵי הַפּוּרִים הָאֵלֶּה לֹא יַֽעַבְרוּ מִתּוֹךְ הַיְּהוּדִים וְזִכְרָם לֹא־יָסוּף מִזַּרְעָֽם׃
29 ೨೯ ಇದಲ್ಲದೆ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಅಧಿಕಾರಯುಕ್ತಳಾಗಿ ಪೂರೀಮ್ ಸಂಬಂಧವಾದ ಆ ಎರಡನೆಯ ಶಾಸನವನ್ನು ದೃಢಪಡಿಸುವುದಕ್ಕೋಸ್ಕರ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಪತ್ರಗಳನ್ನು ಬರೆದಳು.
וַתִּכְתֹּב אֶסְתֵּר הַמַּלְכָּה בַת־אֲבִיחַיִל וּמָרְדֳּכַי הַיְּהוּדִי אֶת־כָּל־תֹּקֶף לְקַיֵּם אֵת אִגֶּרֶת הַפּוּרִים הַזֹּאת הַשֵּׁנִֽית׃
30 ೩೦ ಅವನು ಅಹಷ್ವೇರೋಷನ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿದ್ದ ಯೆಹೂದ್ಯರೆಲ್ಲರಿಗೂ ಪತ್ರವನ್ನು ಕಳುಹಿಸಿದನು.
וַיִּשְׁלַח סְפָרִים אֶל־כָּל־הַיְּהוּדִים אֶל־שֶׁבַע וְעֶשְׂרִים וּמֵאָה מְדִינָה מַלְכוּת אֲחַשְׁוֵרוֹשׁ דִּבְרֵי שָׁלוֹם וֶאֱמֶֽת׃
31 ೩೧ ಆಕೆಯು ದಯಾಸತ್ಯತೆಗಳುಳ್ಳ ಮಾತುಗಳಿಂದ ಆ ಪತ್ರಗಳಲ್ಲಿ, “ಯೆಹೂದ್ಯರು ತಮ್ಮಲ್ಲಿಯೂ ಮತ್ತು ತಮ್ಮ ಸಂತಾನದವರಲ್ಲಿಯೂ ಉಪವಾಸ ಮತ್ತು ಪ್ರಲಾಪ ದಿನಗಳನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ತಾವೇ ಗೊತ್ತುಮಾಡಿಕೊಂಡ ಪ್ರಕಾರ ಈ ಪೂರೀಮ್ ದಿನಗಳನ್ನೂ ನನ್ನ ಮತ್ತು ಯೆಹೂದ್ಯನಾದ ಮೊರ್ದೆಕೈಯ ನಿರೂಪದಂತೆ ಪ್ರತಿವರ್ಷ ತಪ್ಪದೆ ನೇಮಿತವಾದ ಕಾಲದಲ್ಲಿ ಆಚರಿಸಬೇಕು” ಎಂದು ಬರೆದಿದ್ದಳು.
לְקַיֵּם אֵת־יְמֵי הַפֻּרִים הָאֵלֶּה בִּזְמַנֵּיהֶם כַּאֲשֶׁר קִיַּם עֲלֵיהֶם מָרְדֳּכַי הַיְּהוּדִי וְאֶסְתֵּר הַמַּלְכָּה וְכַאֲשֶׁר קִיְּמוּ עַל־נַפְשָׁם וְעַל־זַרְעָם דִּבְרֵי הַצֹּמוֹת וְזַעֲקָתָֽם׃
32 ೩೨ ಎಸ್ತೇರಳ ಆ ಅಪ್ಪಣೆ ಪೂರೀಮ್ ಹಬ್ಬವನ್ನು ಸ್ಥಾಪಿಸಿತು. ಆ ನಿರೂಪವು ಅಪ್ಪಣೆಯು ಗ್ರಂಥದಲ್ಲಿ ದಾಖಲಿಸಲ್ಪಪಟ್ಟಿತು.
וּמַאֲמַר אֶסְתֵּר קִיַּם דִּבְרֵי הַפֻּרִים הָאֵלֶּה וְנִכְתָּב בַּסֵּֽפֶר׃

< ಎಸ್ತೇರಳು 9 >