< ಎಸ್ತೇರಳು 1 >

1 ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.
Xảy trong đời vua A-suê-ru, tức A-suê-ru kia mà cai trị trên một trăm hai mươi bảy tỉnh, từ Aán-độ cho đến Ê-thi-ô-bi,
2 ಅಹಷ್ವೇರೋಷ ರಾಜನು ಶೂಷನ್ ಕೋಟೆಯಲ್ಲಿ ತನ್ನ ರಾಜಸಿಂಹಾಸದಲ್ಲಿ ಆಸೀನನಾಗಿ ಆಡಳಿತ ನಡೆಸುತ್ತಿದ್ದನು.
khi vua ngự ngôi vương quốc tại Su-sơ, kinh đô người,
3 ಅವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಸರದಾರರಿಗೋಸ್ಕರವೂ ಮತ್ತು ಪರಿವಾರದವರಿಗಾಗಿ ಒಂದು ಔತಣ ಏರ್ಪಡಿಸಿದ್ದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ, ಪ್ರಧಾನರೂ ಮತ್ತು ಸಂಸ್ಥಾನದ ಅಧಿಕಾರಿಗಳೂ, ರಾಜನ ಸನ್ನಿಧಿಗೆ ಸೇರಿ ಬಂದಿದ್ದರು.
nhằm năm thứ ba đời trị vì mình, người bày ra một bữa tiệc yến cho hết thảy quan trưởng và thần bộc mình. Đạo binh nước Phe-rơ-sơ và Mê-đi, các bực sang trọng cùng các quan cai của hàng tỉnh đều ở trước mặt người.
4 ಅವನು ಅನೇಕ ದಿನ ಅಂದರೆ, ನೂರ ಎಂಭತ್ತು ದಿನಗಳವರೆಗೂ ಅವರಿಗೆ ತನ್ನ ಘನವಾದ ರಾಜ್ಯದ ಐಶ್ವರ್ಯವನ್ನೂ ಮತ್ತು ಮಹಾಮಹಿಮೆಯ ವೈಭವದ ಪ್ರತಾಪಗಳನ್ನೂ ಪ್ರದರ್ಶಿಸಿದನು.
Trong nhiều ngày, tức trong một trăm tám mươi ngày, người bày tỏ sự giàu có sang trọng của nước và sự oai nghi rực rỡ của người.
5 ಆ ನಂತರ ಅರಸನು ಶೂಷನ್ ಕೋಟೆಯಲ್ಲಿದ್ದ ಎಲ್ಲಾ ಶ್ರೇಷ್ಠರಿಗೂ ಮತ್ತು ಕನಿಷ್ಠರಿಗೂ ಅರಮನೆಯ ತೋಟದ ಆವರಣದಲ್ಲಿ ಏಳು ದಿನಗಳವರೆಗೂ ಔತಣಮಾಡಿಸಿದನು.
Khi các ngày đó đã qua rồi, vua bày đãi hết dân sự đang có ở tại kinh đô Su-sơ, hoặc lớn hay nhỏ, một cuộc tiệc yến bảy ngày, tại nơi hành lang của thượng uyển.
6 ಆ ತೋಟದ ಆವರಣವು ಬಿಳೀ ನೂಲಿನ ಬಟ್ಟೆಗಳೂ, ನೀಲಿಬಟ್ಟೆಗಳೂ, ಧೂಮ್ರವರ್ಣವುಳ್ಳ ನಾರಿನ ದಾರಗಳು ಮತ್ತು ಅಮೃತಶಿಲೆಯ ಕಲ್ಲುಕಂಬಗಳಿಗೆ ಕಟ್ಟಲಾದ ಬೆಳ್ಳಿಯ ಉಂಗುರ ಇವುಗಳಿಂದ ಅಲಂಕೃತವಾಗಿತ್ತು. ಜರತಾರಿ ಕಸೂತಿ ಹಾಕಿರುವ ಬೆಳ್ಳಿ ಬಂಗಾರದ ಸುಖಾಸನಗಳು, ಅವುಗಳನ್ನು ಕೆಂಪು, ಬಿಳಿ, ಹಳದಿ ಮತ್ತು ಕಪ್ಪು ಬಣ್ಣಗಳುಳ್ಳ ಅಮೃತಶಿಲೆಗಳ ಕಲ್ಲುಗಳಿಂದ ರಚಿತವಾದ ನೆಲಗಟ್ಟಿನ ಮೇಲೆ ಇಡಲಾಗಿತ್ತು.
Tư bề có treo màn trướng sắc trắng, xanh lá cây, và xanh da trời, dùng dây gai màu trắng và màu tím cột vào vòng bạc và trụ cẩm thạch; các giường sập bằng vàng và bạc, đặt trên nền lót cẩm thạch đỏ và trắng, ngọc phụng và cẩm thạch đen.
7 ಬಂಗಾರದ ಪಾನ ಪಾತ್ರೆಗಳು ನಾನಾ ಆಕಾರದಲ್ಲಿದ್ದವು. ರಾಜದ್ರಾಕ್ಷಾರಸದ ಔತಣ ಕೂಟವು ಅರಸರ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿತ್ತು.
Người ta đãi uống bằng chén vàng, những chén nhiều thứ khác nhau, và có ngự tửu rất nhiều, cho xứng đáng theo bực giàu sang của vua.
8 “ಪಾನಮಾಡುವುದರಲ್ಲಿ ಯಾರಿಗೂ ಒತ್ತಾಯಮಾಡಬಾರದು” ಎಂದು ರಾಜಾಜ್ಞೆಯಿತ್ತು. ಪ್ರತಿಯೊಬ್ಬರಿಗೂ ಅವರವರ ಇಷ್ಟದಂತೆ ಕೊಡಬೇಕೆಂದು ರಾಜನು ತನ್ನ ಎಲ್ಲಾ ಮನೆವಾರ್ತೆಯವರಿಗೆ ಆಜ್ಞಾಪಿಸಿದ್ದನು.
Người ta uống rượu tùy theo lịnh truyền chẳng ai ép phải uống; vì vua đã truyền các thần tể cung điện hãy làm tùy ý của mỗi người muốn.
9 ವಷ್ಟಿ ರಾಣಿಯೂ ಅಹಷ್ವೇರೋಷ ರಾಜನ ಅರಮನೆಯಲ್ಲಿ ಸ್ತ್ರೀಯರಿಗೋಸ್ಕರ ಔತಣಮಾಡಿಸಿದಳು.
Hoàng hậu Vả-thi cũng đãi một bữa tiệc cho các người nữ tại cung vua A-suê-ru.
10 ೧೦ ಏಳನೆಯ ದಿನದಲ್ಲಿ ಅಹಷ್ವೇರೋಷ ರಾಜನು ದ್ರಾಕ್ಷಾರಸ ಪಾನಮಾಡಿ ಆನಂದಲಹರಿಯಲ್ಲಿದ್ದಾಗ ಬಹು ಸುಂದರಿಯಾದ ತನ್ನ ರಾಣಿಯ ಸೌಂದರ್ಯವನ್ನು ಜನರಿಗೂ, ಸರದಾರರಿಗೂ ತೋರಿಸಬೇಕೆಂದು ಬಯಸಿದನು. ಅವನು ತನ್ನ ಸಾನ್ನಿಧ್ಯಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳು ಕಂಚುಕಿಗಳಿಗೆ,
Qua ngày thứ bảy, vua uống rượu, hứng lòng rồi, bèn truyền cho Mê-hu-man, Bít-tha, Hạt-bô-na, Biếc-tha, A-bác-tha, Xê-thạt và Cạt-cách, tức bảy hoạn quan hầu-chực vua A-suê-ru,
11 ೧೧ “ವಷ್ಟಿ ರಾಣಿಯು ರಾಜಮುಕುಟವನ್ನು ಧರಿಸಿಕೊಂಡು ರಾಜಸನ್ನಿಧಿಗೆ ಬರಬೇಕೆಂಬದಾಗಿ ಹೇಳಿರಿ” ಎಂದು ಆಜ್ಞಾಪಿಸಿದನು. ಅವಳು ಅತಿ ಸೌಂದರ್ಯವತಿಯಾಗಿದ್ದಳು.
dẫn hoàng hậu Vả-thi đến trước mặt vua, đội mão triều hoàng hậu, đặng tỏ ra phết lịch sự của bà cho dân sự và cho các quan trưởng xem thấy; vì tướng mạo bà rất tốt đẹp.
12 ೧೨ ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿ ರಾಣಿಯು, “ಬರುವುದಿಲ್ಲ” ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶವುಳ್ಳವನಾದನು.
Nhưng hoàng hậu Vả-thi không khứng đến theo mạng của vua truyền bởi các hoạn quan. Vua bèn nổi giận dữ, phát nóng nả trong lòng.
13 ೧೩ ವಿಧಿನಾಯ್ಯಗಳನ್ನು ಬಲ್ಲವರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.
Vả, thường khi vua có sự gì, bèn hỏi bàn các người rõ luật thông pháp.
14 ೧೪ ಅರಸನಾದ ಅಹಷ್ವೇರೋಷನ ಆಸ್ಥಾನದಲ್ಲಿ ರಾಜಸಾನ್ನಿಧ್ಯ ಸೇವಕರೂ ಮತ್ತು ರಾಜಸಭಾಪ್ರಧಾನರೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಪಾರಸಿಯ ಮತ್ತು ಮೇದ್ಯ ದೇಶಗಳ ರಾಜ ಪ್ರಮುಖರಾಗಿದ್ದರು.
Những quan kế cận vua hơn hết là Cạt-sê-na, Sê-thạt, Aùt-ma-tha, Ta-rê-si, Mê-re, Mạt-sê-na, Mê-mu-can, tức bảy quan trưởng của nước Phe-rơ-sơ và Mê-đi, thường thấy mặt vua và ngồi bực cao nhất trong nước.
15 ೧೫ ಅವನು ಸಮುಯೋಚಿತ ಜ್ಞಾನವುಳ್ಳವರಾದ ಇವರನ್ನು, “ಕಂಚುಕಿಗಳ ಮುಖಾಂತರ ತನಗುಂಟಾದ ರಾಜಾಜ್ಞೆಯನ್ನು ಕೈಗೊಳ್ಳದೆ ಹೋದ ವಷ್ಟಿ ರಾಣಿಗೆ ನಿಯಮದ ಪ್ರಕಾರ ಮಾಡತಕ್ಕದ್ದೇನು?” ಎಂದು ಕೇಳಿದನು.
Bấy giờ vua hỏi chúng rằng: Hoàng hậu Vả-thi chẳng có vâng theo mạng lịnh của vua A-suê-ru cậy các hoạn quan truyền cho; vậy thì theo luật pháp chúng ta phải xử bà thể nào?
16 ೧೬ ಆಗ ಮೆಮೂಕಾನನು ಅರಸನ ಮತ್ತು ಸರದಾರರ ಮುಂದೆ, “ವಷ್ಟಿ ರಾಣಿಯ ಅಪರಾಧವು ಅರಸನೊಬ್ಬನಿಗೇ ವಿರುದ್ಧವಾದುದಲ್ಲ.
Mê-mu-can thưa trước mặt vua và các quan trưởng rằng: Vả-thi chẳng những làm mất lòng vua mà thôi, nhưng lại hết thảy những quan trưởng, và dân sự ở trong các tỉnh của vua A-suê-ru;
17 ೧೭ ರಾಣಿಯ ನಡತೆಯು ಎಲ್ಲಾ ಸ್ತ್ರೀಯರಿಗೂ ಗೊತ್ತಾಗಿ ಅವರೂ ತಮ್ಮ ಗಂಡಂದಿರ ಮಾತನ್ನು ನಿರಾಕರಿಸುವುದಕ್ಕೆ ಮತ್ತು ತಿರಸ್ಕರಿಸುವುದಕ್ಕೆ ಇದು ಕಾರಣವಾಗಬಹುದು. ಅವರು ‘ಅರಸನಾದ ಅಹಷ್ವೇರೋಷನು ವಷ್ಟಿ ರಾಣಿಯನ್ನು ರಾಜಸನ್ನಿಧಿಗೆ ಬರಬೇಕೆಂದು ಹೇಳಿಕಳುಹಿಸಿದಾಗ ಆಕೆಯು ಹೋಗಲಿಲ್ಲವಲ್ಲಾ’ ಅನ್ನುವರು.
vì việc nầy đồn ra trong các người nữ, khiến họ khinh bỉ chồng mình, nói rằng vua A-suê-ru có biểu dẫn hoàng hậu Vả-thi đến trước mặt vua, mà nàng không có đến.
18 ೧೮ ರಾಣಿಯ ಮಾತನ್ನು ಕೇಳಿದ ಪಾರಸಿಯ ಮತ್ತು ಮೇದ್ಯ ಕುಲೀನ ಸ್ತ್ರೀಯರು ಈ ಹೊತ್ತೇ ಅದನ್ನು ಅರಸನ ಎಲ್ಲಾ ಸರದಾರರಿಗೂ ಹೇಳುವರು. ಹೀಗೆ ಎಷ್ಟೋ ತಿರಸ್ಕಾರವೂ ಮತ್ತು ಕೋಪವೂ ಉಂಟಾಗುವುದು.
Ngày nay, các vợ quan trưởng Phe-rơ-sơ và Mê-đi mà đã hay việc hoàng hậu đã làm, cũng sẽ nói một cách với chồng mình, rồi sẽ có lắm điều khinh bỉ và cơn giận.
19 ೧೯ ಅರಸನು ಒಪ್ಪುವುದಾದರೆ ವಷ್ಟಿಯು ಪುನಃ ಅಹಷ್ವೇರೋಷ ರಾಜನು ಸನ್ನಿಧಿಗೆ ಬರಲೇ ಬಾರದೆಂಬ ರಾಜಾಜ್ಞೆಯು ಪ್ರಕಟವಾಗಿ ಅದು ಎಂದಿಗೂ ರದ್ದಾಗದ ಹಾಗೆ ಪಾರಸಿಯ ಮತ್ತು ಮೇದ್ಯ ಶಾಸನಗಳಲ್ಲಿ ಲಿಖಿತವಾಗಲಿ; ಅರಸನು ಆಕೆಯ ಪಟ್ಟವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಳಿಗೆ ಕೊಡಲಿ.
Nếu đẹp ý vua, khá giáng chiếu chỉ, chép vào trong sách luật pháp của nước Phe-rơ-sơ và Mê-đi, chẳng hề hay đổi đặng, rằng Vả-thi sẽ chẳng còn vào đến trước mặt vua A-suê-ru nữa; vua khá ban vị hoàng hậu của Vả-thi cho một người khác tốt hơn nàng.
20 ೨೦ ಈ ರಾಜನಿರ್ಣಯವು ಬಹು ವಿಸ್ತಾರವಾದ ಅವನ ರಾಜ್ಯದಲ್ಲೆಲ್ಲಾ ಗೊತ್ತಾದಾಗ ಶ್ರೇಷ್ಠರೂ, ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಗೌರವ ಸಲ್ಲಿಸುವರು” ಎಂದು ಹೇಳಿದನು.
Khi chiếu chỉ của vua đã làm được truyền khắp trong nước vua, vì nước thật rộng lớn, thì các người vợ tất phải tôn kính chồng mình, từ người sang trọng cho đến kẻ nhỏ hèn.
21 ೨೧ ಈ ಮಾತು ಅರಸನಿಗೂ, ಅವನ ಸರದಾರರಿಗೂ ಒಳ್ಳೆಯದೆಂದು ತೋರಿದಾಗ ಅರಸನು ಮೆಮೂಕಾನನ ಮಾತಿನಂತೆಯೇ ಮಾಡಿದನು.
Lời nầy đẹp ý vua và các quan trưởng; vua bèn làm theo lời của Mê-mu-can đã luận,
22 ೨೨ ಅವನು, “ಪ್ರತಿಯೊಂದು ಕುಟುಂಬದಲ್ಲಿ ಪುರುಷನೇ ಒಡೆಯನಾಗಿರುವನು ಮತ್ತು ಅವನ ಸ್ವಜನರ ಭಾಷೆಯೇ ಉಪಯೋಗವಾಗಬೇಕು” ಎಂಬುದಾಗಿ ಎಲ್ಲಾ ರಾಜ ಸಂಸ್ಥಾನಗಳಲ್ಲಿ ಪತ್ರಗಳ ಮೂಲಕ ಪ್ರಕಟಿಸಿದನು. ಈ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಬರೆಯಲ್ಪಟ್ಟವು.
hạ chiếu cho các tỉnh của vua, theo chữ và tiếng của mỗi tỉnh mỗi dân, mà bảo rằng mỗi người đàn ông phải làm chủ của nhà mình, và lấy tiếng bổn xứ mình mà dạy biểu.

< ಎಸ್ತೇರಳು 1 >