< ವಿಮೋಚನಕಾಂಡ 11 >

1 ಯೆಹೋವನು ಮೋಶೆಗೆ, “ಫರೋಹನಿಗೂ ಮತ್ತು ಐಗುಪ್ತ್ಯರಿಗೂ ಇನ್ನೊಂದು ಉಪದ್ರವವನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆ ಕೊಡುವನು. ಮಾತ್ರವಲ್ಲದೆ ನಿಮ್ಮೆಲ್ಲರನ್ನು ಬಲವಂತದಿಂದ ಕಳುಹಿಸಿ ಬಿಡುವನು.
“Još ću samo jednom nedaćom udariti faraona i Egipat”, reče Jahve Mojsiju. “Poslije toga pustit će vas odavde. I više: sam će vas odavde potjerati.
2 ಆದುದರಿಂದ ಸ್ತ್ರೀಪುರುಷರೆಲ್ಲರೂ ತಮ್ಮ ತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂಬುದಾಗಿ ಜನರಿಗೆ ಸ್ಪಷ್ಟವಾಗಿ ಹೇಳು” ಎಂದನು.
Kaži svijetu neka svaki čovjek ište od svoga susjeda i svaka žena od svoje susjede srebrnih i zlatnih dragocjenosti.”
3 ಯೆಹೋವನು ಇಸ್ರಾಯೇಲರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದನು. ಇದಲ್ಲದೆ ಐಗುಪ್ತ ದೇಶದಲ್ಲಿ ಫರೋಹನ ಪ್ರಜಾಪರಿವಾರದವರು ಹಾಗು ಜನರು ಮೋಶೆಯನ್ನು ಮಹಾಶ್ರೇಷ್ಠಪುರುಷನೆಂದು ಭಾವಿಸಿದರು.
Jahve učini te Egipćani bijahu naklonjeni narodu. Sam Mojsije postane vrlo uvažen u egipatskoj zemlji, u očima faraonovih službenika i u očima naroda.
4 ಆಗ ಮೋಶೆ ಫರೋಹನಿಗೆ, “ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಾನು ಮಧ್ಯರಾತ್ರಿಯಲ್ಲಿ ಐಗುಪ್ತ್ಯರ ನಡುವೆ ಹಾದುಹೋಗುವೆನು.
A onda Mojsije navijesti: “Ovako poručuje Jahve: 'O ponoći proći ću Egiptom.
5 ಆಗ ಸಿಂಹಾಸನದ ಮೇಲೆ ಕುಳಿತಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಬೀಸುವಕಲ್ಲಿನ ಹಿಂದೆ ಕುಳಿತಿರುವ ದಾಸಿಯ ಚೊಚ್ಚಲು ಮಗನವರೆಗೂ ಐಗುಪ್ತ ದೇಶದಲ್ಲಿರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಪಶುಗಳಲ್ಲಿಯೂ ಚೊಚ್ಚಲಾದವುಗಳೆಲ್ಲಾ ಸಾಯುವವು.
Svaki će prvorođenac u egipatskoj zemlji umrijeti, od prvorođenca faraonova, koji bi imao sjediti na njegovu prijestolju, do prvorođenca ropkinje koja se nalazi uz mlinski kamen; a uginut će i sve prvine od stoke.
6 ಆಗ ಐಗುಪ್ತ ದೇಶದಲ್ಲೆಲ್ಲಾ ದೊಡ್ಡ ಗೋಳಾಟವುಂಟಾಗುವುದು, ಅಂಥ ಗೋಳಾಟವು ಈವರೆಗೆ ದೇಶದಲ್ಲಿ ಎಂದೂ ಉಂಟಾಗಿರಲಿಲ್ಲ, ಮುಂದೆಯೂ ಉಂಟಾಗುವುದಿಲ್ಲ.
U svoj će zemlji egipatskoj nastati veliki jauk, kakva nije bilo niti će kad poslije biti.
7 ಆದರೆ ಐಗುಪ್ತ್ಯರಿಗೂ, ಇಸ್ರಾಯೇಲರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬುದು ನಿಮಗೆ ತಿಳಿಯುವಂತೆ ಇಸ್ರಾಯೇಲರಲ್ಲಿರುವ ಮನುಷ್ಯರ ಎದುರಿಗಾಗಲಿ, ಪಶುಗಳ ಎದುರಿಗಾಗಲಿ ಒಂದು ನಾಯಿಯಾದರೂ ಬೊಗಳುವುದಿಲ್ಲ’
Među Izraelcima ni pas neće zalajati na živo stvorenje: ni na čovjeka ni na životinju.' Po tome ćete znati da Jahve luči Izraelca od Egipćanina.
8 ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, ‘ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು’ ಎಂದು ಬೇಡುವರು. ಆ ಮೇಲೆ ನಾನು ಹೊರಟುಹೋಗುವೆನು” ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.
Onda će svi ovi tvoji dvorani k meni doći, preda me se baciti i vikati: Nosi se i ti i sav puk koji za tobom ide! Poslije toga ću otići.” I gnjevan ode od faraona.
9 ಯೆಹೋವನು ಮೋಶೆಗೆ, “ಐಗುಪ್ತ ದೇಶದಲ್ಲಿ ನನ್ನ ಮಹತ್ಕಾರ್ಯಗಳನ್ನು ಇನ್ನೂ ಹೆಚ್ಚಾಗಿ ನಡೆಯಬೇಕಾಗಿರುವುದರಿಂದ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ” ಎಂದು ಹೇಳಿದನು.
“Neće vas faraon poslušati”, reče Jahve Mojsiju, “a to da bi se umnožila moja znamenja u zemlji egipatskoj.”
10 ೧೦ ಮೋಶೆ ಮತ್ತು ಆರೋನರು ಫರೋಹನ ಮುಂದೆ ಆ ಮಹತ್ಕಾರ್ಯಗಳನ್ನೆಲ್ಲಾ ಮಾಡಿದರು. ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಫರೋಹನು ಇಸ್ರಾಯೇಲರಿಗೆ ತನ್ನ ದೇಶವನ್ನು ಬಿಟ್ಟು ಹೋಗುವುದಕ್ಕೆ ಅಪ್ಪಣೆ ಕೊಡದೆ ಹೋದನು.
Mojsije i Aron izveli su sva ta znamenja pred faraonom, ali je Jahve okorio srce faraonu, tako te on nije puštao Izraelaca da odu iz njegove zemlje.

< ವಿಮೋಚನಕಾಂಡ 11 >