< ವಿಮೋಚನಕಾಂಡ 13 >
1 ೧ ಯೆಹೋವನು ಮೋಶೆಯ ಸಂಗಡ ಮಾತನಾಡಿ,
१फिर यहोवा ने मूसा से कहा,
2 ೨ “ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು.
२“क्या मनुष्य के क्या पशु के, इस्राएलियों में जितने अपनी-अपनी माँ के पहलौठे हों, उन्हें मेरे लिये पवित्र मानना; वह तो मेरा ही है।”
3 ೩ ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.
३फिर मूसा ने लोगों से कहा, “इस दिन को स्मरण रखो, जिसमें तुम लोग दासत्व के घर, अर्थात् मिस्र से निकल आए हो; यहोवा तो तुम को वहाँ से अपने हाथ के बल से निकाल लाया; इसमें ख़मीरी रोटी न खाई जाए।
4 ೪ ಚೈತ್ರ ಮಾಸದ ಈ ದಿನದಲ್ಲೇ ನೀವು ಹೊರಗೆ ಬಂದಿರುವಿರಿ.
४अबीब के महीने में आज के दिन तुम निकले हो।
5 ೫ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿ ಹೇಳಿದಂತೆ, ನಿಮ್ಮನ್ನು ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚರಣೆಯನ್ನು ನಡೆಸಬೇಕು.
५इसलिए जब यहोवा तुम को कनानी, हित्ती, एमोरी, हिब्बी, और यबूसी लोगों के देश में पहुँचाएगा, जिसे देने की उसने तुम्हारे पुरखाओं से शपथ खाई थी, और जिसमें दूध और मधु की धारा बहती हैं, तब तुम इसी महीने में पर्व करना।
6 ೬ ಏಳು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು, ಏಳನೆಯ ದಿನದಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಆಚರಿಸಬೇಕು.
६सात दिन तक अख़मीरी रोटी खाया करना, और सातवें दिन यहोवा के लिये पर्व मानना।
7 ೭ ಆ ಏಳು ದಿನವೂ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮಾತ್ರವಲ್ಲದೆ, ನಿಮ್ಮಲ್ಲಿ ಹುಳಿಹಿಟ್ಟು ಕಾಣಿಸಬಾರದು. ಇಲ್ಲವೆ ಹುಳಿಹಿಟ್ಟು ನಿಮ್ಮ ಗಡಿಯಲ್ಲೇ ಕಾಣಬಾರದು.
७इन सातों दिनों में अख़मीरी रोटी खाई जाए; वरन् तुम्हारे देश भर में न ख़मीरी रोटी, न ख़मीर तुम्हारे पास देखने में आए।
8 ೮ ಆ ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ, ನಮ್ಮ ಜನರು ಐಗುಪ್ತ ದೇಶದಿಂದ ಹೊರಟು ಬಂದಾಗ ಯೆಹೋವನು ನಮಗೋಸ್ಕರ ಮಾಡಿದ್ದನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ಈ ಆಚರಣೆಯನ್ನು ಆಚರಿಸುತ್ತೇವೆ.
८और उस दिन तुम अपने-अपने पुत्रों को यह कहकर समझा देना, कि यह तो हम उसी काम के कारण करते हैं, जो यहोवा ने हमारे मिस्र से निकल आने के समय हमारे लिये किया था।
9 ೯ ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.
९फिर यह तुम्हारे लिये तुम्हारे हाथ में एक चिन्ह होगा, और तुम्हारी आँखों के सामने स्मरण करानेवाली वस्तु ठहरे; जिससे यहोवा की व्यवस्था तुम्हारे मुँह पर रहे क्योंकि यहोवा ने तुम्हें अपने बलवन्त हाथों से मिस्र से निकाला है।
10 ೧೦ ಹೀಗಿರುವುದರಿಂದ ಪ್ರತಿವರ್ಷವು ನಿಯಮಿತವಾದ ಕಾಲದಲ್ಲಿ ನೀವು ಈ ಆಚರಣೆಯನ್ನು ಮಾಡಬೇಕು.
१०इस कारण तुम इस विधि को प्रतिवर्ष नियत समय पर माना करना।
11 ೧೧ “ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಪ್ರಮಾಣಮಾಡಿದ ಪ್ರಕಾರ ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಆ ದೇಶವನ್ನು ನಿಮಗೆ ಕೊಟ್ಟ ನಂತರ,
११“फिर जब यहोवा उस शपथ के अनुसार, जो उसने तुम्हारे पुरखाओं से और तुम से भी खाई है, तुम्हें कनानियों के देश में पहुँचाकर उसको तुम्हें दे देगा,
12 ೧೨ ನಿಮ್ಮಲ್ಲಿಯೂ ನಿಮ್ಮ ಪಶುಗಳಲ್ಲಿಯೂ ಹುಟ್ಟುವ ಪ್ರಥಮ ಗರ್ಭಫಲವು ಗಂಡಾದ ಪಕ್ಷಕ್ಕೆ ಅದು ಯೆಹೋವನ ಭಾಗವೆಂದು ತಿಳಿದುಕೊಂಡು ಅದನ್ನು ಆತನಿಗೆ ಸಮರ್ಪಿಸಬೇಕು.
१२तब तुम में से जितने अपनी-अपनी माँ के जेठे हों उनको, और तुम्हारे पशुओं में जो ऐसे हों उनको भी यहोवा के लिये अर्पण करना; सब नर बच्चे तो यहोवा के हैं।
13 ೧೩ ಮೊದಲು ಹುಟ್ಟಿದ ಕತ್ತೆಯ ಚೊಚ್ಚಲಮರಿಗೆ ಬದಲಾಗಿ ಕುರಿಮರಿಯನ್ನು ಬಿಡಿಸಿಕೊಳ್ಳಬಹುದು. ಹಾಗೆ ಬಿಡಿಸದೆ ಹೋದರೆ ಅದರ ಕುತ್ತಿಗೆ ಮುರಿದು ಕೊಲ್ಲಬೇಕು. ಮನುಷ್ಯರ ಚೊಚ್ಚಲ ಗಂಡು ಮಕ್ಕಳನ್ನು ಯೆಹೋವನಿಗಾಗಿ ಬಿಡಿಸಿಕೊಳ್ಳಲೇ ಬೇಕು.
१३और गदही के हर एक पहलौठे के बदले मेम्ना देकर उसको छुड़ा लेना, और यदि तुम उसे छुड़ाना न चाहो तो उसका गला तोड़ देना। पर अपने सब पहलौठे पुत्रों को बदला देकर छुड़ा लेना।
14 ೧೪ ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.
१४और आगे के दिनों में जब तुम्हारे पुत्र तुम से पूछें, ‘यह क्या है?’ तो उनसे कहना, ‘यहोवा हम लोगों को दासत्व के घर से, अर्थात् मिस्र देश से अपने हाथों के बल से निकाल लाया है।
15 ೧೫ ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿ ಮನುಷ್ಯರ ಚೊಚ್ಚಲಮಕ್ಕಳನ್ನು, ಪಶುಗಳ ಚೊಚ್ಚಲು ಮರಿಗಳನ್ನು ಅಂತೂ ಆ ದೇಶದಲ್ಲಿ ಚೊಚ್ಚಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೋ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ’” ಎಂದು ಹೇಳಬೇಕು.
१५उस समय जब फ़िरौन ने कठोर होकर हमको जाने देना न चाहा, तब यहोवा ने मिस्र देश में मनुष्य से लेकर पशु तक सब के पहिलौठों को मार डाला। इसी कारण पशुओं में से तो जितने अपनी-अपनी माँ के पहलौठे नर हैं, उन्हें हम यहोवा के लिये बलि करते हैं; पर अपने सब जेठे पुत्रों को हम बदला देकर छुड़ा लेते हैं।’
16 ೧೬ ಯೆಹೋವನು ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವುದರ ಗುರುತಾಗಿ ಅದನ್ನು ನಿಮ್ಮ ಕೈಗಳ ಮೇಲೆಯೂ, ಹಣೆಯ ಮೇಲೆ ಜ್ಞಾಪಕಪಟ್ಟಿಯಂತೆಯೂ ಇರಬೇಕು.
१६यह तुम्हारे हाथों पर एक चिन्ह-सा और तुम्हारी भौहों के बीच टीका-सा ठहरे; क्योंकि यहोवा हम लोगों को मिस्र से अपने हाथों के बल से निकाल लाया है।”
17 ೧೭ ಫರೋಹನು ಇಸ್ರಾಯೇಲರಿಗೆ ಹೋಗುವುದಕ್ಕೆ ಅಪ್ಪಣೆ ಕೊಟ್ಟಾಗ, ಫಿಲಿಷ್ಟಿಯರ ದೇಶದ ಮಾರ್ಗವು ಸಮೀಪವಾಗಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ಹೋಗಗೊಡಿಸಲಿಲ್ಲ. ಏಕೆಂದರೆ, “ದೇವರು, ಜನರು ಯುದ್ಧವನ್ನು ನೋಡಿ ಗಾಬರಿಯಾಗಿ ಮನಸ್ಸನ್ನು ಬದಲಾಯಿಸಿಕೊಂಡು ಐಗುಪ್ತಕ್ಕೆ ಹಿಂದಿರುಗಿ ಹೋದಾರೂ” ಎಂದು ಹೇಳಿದನು.
१७जब फ़िरौन ने लोगों को जाने की आज्ञा दे दी, तब यद्यपि पलिश्तियों के देश में होकर जो मार्ग जाता है वह छोटा था; तो भी परमेश्वर यह सोचकर उनको उस मार्ग से नहीं ले गया कि कहीं ऐसा न हो कि जब ये लोग लड़ाई देखें तब पछताकर मिस्र को लौट आएँ।
18 ೧೮ ಹೀಗಿರುವುದರಿಂದ ಯೆಹೋವನು ಜನರನ್ನು ಕೆಂಪುಸಮುದ್ರದ ಸಮೀಪದಲ್ಲಿರುವ ಮರುಭೂಮಿಯನ್ನು ಬಳಸಿಕೊಂಡು ಹೋಗುವಂತೆ ಮಾಡಿದನು. ಆದರೂ ಇಸ್ರಾಯೇಲರು ಯುದ್ಧಸನ್ನದ್ದರಾಗಿ ಐಗುಪ್ತ ದೇಶದೊಳಗಿಂದ ಹೊರಟುಬಂದರು.
१८इसलिए परमेश्वर उनको चक्कर खिलाकर लाल समुद्र के जंगल के मार्ग से ले चला। और इस्राएली पाँति बाँधे हुए मिस्र से निकल गए।
19 ೧೯ ಇದಲ್ಲದೆ ಯೋಸೇಫನು ಇಸ್ರಾಯೇಲರಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸಿ ತನ್ನ ವಾಗ್ದಾನವನ್ನು ನೆರವೇರಿಸುವವನಾಗಿರುವುದರಿಂದ ನೀವು ಹೋಗುವಾಗ ನನ್ನ ದೇಹದ ಅಸ್ತಿಮೂಳೆಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕು” ಎಂದು ಖಂಡಿತವಾದ ಪ್ರಮಾಣವನ್ನು ಮಾಡಿಸಿದ್ದರಿಂದ ಮೋಶೆಯು ಅವನ ಮೂಳೆಗಳನ್ನು ತನ್ನ ಸಂಗಡ ತೆಗೆದುಕೊಂಡು ಹೋದನು.
१९और मूसा यूसुफ की हड्डियों को साथ लेता गया; क्योंकि यूसुफ ने इस्राएलियों से यह कहकर, ‘परमेश्वर निश्चय तुम्हारी सुधि लेगा,’ उनको इस विषय की दृढ़ शपथ खिलाई थी कि वे उसकी हड्डियों को अपने साथ यहाँ से ले जाएँगे।
20 ೨೦ ಅವರು ಸುಕ್ಕೋತಿನಿಂದ ಪ್ರಯಾಣ ಮಾಡಿ ಮರಳುಗಾಡಿನ ಅಂಚಿನಲ್ಲಿರುವ ಏತಾಮಿನಲ್ಲಿ ಪಾಳೆಯಮಾಡಿ ಇಳಿದುಕೊಂಡರು.
२०फिर उन्होंने सुक्कोत से कूच करके जंगल की छोर पर एताम में डेरा किया।
21 ೨೧ ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.
२१और यहोवा उन्हें दिन को मार्ग दिखाने के लिये बादल के खम्भे में, और रात को उजियाला देने के लिये आग के खम्भे में होकर उनके आगे-आगे चला करता था, जिससे वे रात और दिन दोनों में चल सके।
22 ೨೨ ಹಗಲಿನಲ್ಲಿ ಮೇಘಸ್ತಂಭವಾಗಿ, ರಾತ್ರಿಯಲ್ಲಿ ಅಗ್ನಿಸ್ತಂಭವಾಗಿ ಜನರನ್ನು ಬಿಟ್ಟು ಹೋಗದೆ ಅಲ್ಲಿಯೇ ಇರುತ್ತಿದ್ದನು.
२२उसने न तो बादल के खम्भे को दिन में और न आग के खम्भे को रात में लोगों के आगे से हटाया।