< ವಿಮೋಚನಕಾಂಡ 14 >
1 ೧ ಯೆಹೋವನು ಮೋಶೆಯ ಸಂಗಡ ಮಾತನಾಡಿ
Пәрвәрдигар Мусаға:
2 ೨ “ಇಸ್ರಾಯೇಲರು ಹಿಂದಿರುಗಿ ಹೋಗಿ ಪೀಹಹೀರೋತಿನ ಪೂರ್ವಕಡೆಯಲ್ಲಿ ಮಿಗ್ದೋಲಿಗೂ ಕೆಂಪು ಸಮುದ್ರಕ್ಕೂ ನಡುವೆ ಬಾಳ್ಚೆಫೋನಿಗೆ ಎದುರಾಗಿ ಇಳಿದುಕೊಳ್ಳಬೇಕೆಂದು ಅವರಿಗೆ ಹೇಳು. ಅದರ ಎದುರಾಗಿಯೇ ಸಮುದ್ರದ ಬಳಿಯಲ್ಲೇ ಅವರು ಇಳಿದುಕೊಳ್ಳಬೇಕು.
— Сән Исраилларға: «Силәр бурулуп Мигдол билән деңизниң арилиғидики Пи-Һаһиротниң алдиға берип чедир тикиңлар; Баал-Зефонниң удулидики деңизниң бойида чедир тикиңлар», дегин.
3 ೩ ಫರೋಹನು ಅದನ್ನು ಕಂಡು ಇಸ್ರಾಯೇಲರನ್ನು ಕುರಿತು, ‘ಅವರಿಗೆ ದಾರಿತಪ್ಪಿದೆ, ಎಲ್ಲಾ ಕಡೆಯಲ್ಲಿಯೂ ಮರುಭೂಮಿ ಅವರನ್ನು ಸುತ್ತುವರಿದಿದೆ’ ಎಂದು ಅಂದುಕೊಳ್ಳುವನು.
Шуниң билән Пирәвн: «Исраиллар зиминда езип қалди, чөлниң ичидә қамилип қалди» дәп ойлайду;
4 ೪ ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಐಗುಪ್ತ್ಯರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು.
Исраилларни қоғлисун дәп Мән Пирәвнниң көңлини қаттиқ қилимән; шундақ қилип, Мән Пирәвн вә униң пүткүл қошунлири арқилиқ Өз улуқлуғумни аян қилимән; вә мисирлиқлар Мениң Пәрвәрдигар екәнлигимни билиду, — деди. Исраиллар Худаниң сөзи бойичә қилди.
5 ೫ ಇಸ್ರಾಯೇಲರು ಓಡಿಹೋದರೆಂಬ ವರ್ತಮಾನವು ಐಗುಪ್ತದ ಅರಸನಾದ ಫರೋಹನಿಗೆ ತಿಳಿದುಬಂದಾಗ, ಅವರ ವಿಷಯದಲ್ಲಿ ಫರೋಹನ ಮತ್ತು ಅವನ ಪರಿವಾರದವರ ಹೃದಯವು ಅವರಿಗೆ ವಿರುದ್ಧವಾಗಿ ಕಠಿಣಗೊಂಡಿತು. ಅವರು, “ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲರನ್ನು ಹೊರಟು ಹೋಗುವುದಕ್ಕೆ ಬಿಟ್ಟೆವಲ್ಲಾ” ಎಂದುಕೊಂಡರು.
«У хәлиқ қечип кәтти» дәп Мисирниң падишасиға хәвәр бериливиди, Пирәвн билән әмәлдарлири хәлиқ тоғрисидики қараридин йенип: «Исраилларни қуллуқтин қоювәткинимиз, бу зади немә қилғинимиз?!» — дейишти.
6 ೬ ಆಗ ಫರೋಹನು ತನ್ನ ರಥಬಲವನ್ನು ಸಿದ್ಧಪಡಿಸಿಕೊಂಡು ತನ್ನ ಭಟರೊಡನೆ ಹೊರಟನು.
[Пирәвн] дәрһал җәң һарвусини қоштуруп, өз хәлқини башлап йолға чиқти.
7 ೭ ಶ್ರೇಷ್ಠವಾದ ಆರುನೂರು ರಥಗಳನ್ನೂ, ಐಗುಪ್ತ ದೇಶದ ಎಲ್ಲಾ ರಥಗಳನ್ನೂ ತೆಗೆದುಕೊಂಡು ಬೆನ್ನಟ್ಟಿ ಹೋದನು. ಆ ಎಲ್ಲಾ ರಥಗಳಲ್ಲಿ ಅಧಿಪತಿಗಳನ್ನೂ ಕರೆಸಿ ಕೊಂಡನು.
У йәнә алтә йүз хилланған җәң һарвуси, шундақла Мисирдики барлиқ җәң һарвулирини жиғдуруп, уларниң һәр биригә ләшкәр башлиқлирини олтарғузуп елип маңди.
8 ೮ ಯೆಹೋವನು ಐಗುಪ್ತ ದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಇಸ್ರಾಯೇಲರನ್ನು ಬೆನ್ನಟ್ಟಿಹೋದನು. ಆದರೆ ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಹೊರಟು ಬಂದಿದ್ದರು.
Пәрвәрдигар Мисирниң падишаси Пирәвнниң көңлини қаттиқ қилғини үчүн, у Исраилларни қоғлиди. Бу чағда Исраиллар қоллирини егиз көтиришкән һалда Мисирдин чиқип болған еди.
9 ೯ ಐಗುಪ್ತ್ಯರು ಅಂದರೆ ಫರೋಹನ ಕುದುರೆಗಳೂ, ರಥಗಳೂ, ಅವನ ರಾಹುತರೂ, ಸೈನ್ಯದವರೆಲ್ಲರೂ ಅವರ ಹಿಂದೆ ಹೊರಟು ಇಸ್ರಾಯೇಲರು ಪೀಹಹೀರೋತಿನ ಹತ್ತಿರ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುತ್ತಿರುವಾಗಲೇ ಅವರ ಸಮೀಪಕ್ಕೆ ಬಂದರು.
Мисирлиқларниң [һәммиси] йәни Пирәвнниң барлиқ атлири билән җәң һарвулири, атлиқ ләшкәрлири билән пүткүл қошуни уларни қоғлап, Исраиллар деңиз бойиға чедир тиккән җайда, йәни Пи-Һаһиротниң йенида, Баал-Зефонниң удулида уларға йетишти.
10 ೧೦ ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲರು ಕಣ್ಣೆತ್ತಿ ತಮ್ಮ ಹಿಂದೆ ಹೊರಟು ಬಂದಿದ್ದ ಐಗುಪ್ತ್ಯರನ್ನು ಕಂಡು, ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯಿಟ್ಟರು.
Пирәвн йеқинлашқанда, Исраиллар бешини көтирип қаривиди, мана, мисирлиқлар уларниң арқисидин жүрүш қилип қоғлап келивататти! Шуни көргәндә Исраиллар толиму қорқушуп, Пәрвәрдигарға нида-пәряд көтәрди.
11 ೧೧ ಅವರು ಮೋಶೆಗೆ, “ಐಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನಮಗೆ ಈ ರೀತಿಮಾಡಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದೆ?
Улар Мусаға: — Мисирда гөристан тепилмасмиди, сән бизни чөлдә өлсун дәп мошу йәргә елип кәлдиңғу?! Бизни Мисирдин елип чиқип, бизгә мундақ қилғиниң немиси?!
12 ೧೨ ನಾವು ಐಗುಪ್ತ ದೇಶದಲ್ಲಿರುವಾಗಲೇ, ‘ನೀನು ನಮ್ಮ ಗೊಡವೆಗೆ ಬರಬೇಡ. ನಾವು ಐಗುಪ್ತ್ಯರಿಗೆ ದಾಸರಾಗಿಯೇ ಇರುವೆವು’ ಎಂಬುದಾಗಿ ನಿನಗೆ ಹೇಳಲಿಲ್ಲವೇ. ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ್ಯರಿಗೆ ದಾಸರಾಗಿರುವುದೇ ಮೇಲಲ್ಲವೇ” ಎಂದು ಹೇಳಿದರು.
Мисирда турған вақтимизда биз саңа: «Бизни мисирлиқларниң қуллуғида болушимизға қойғин, биз билән кариң болмисун» дәп ейтмиғанмидуқ? Мисирлиқларниң қуллуғида болғинимиз чөлгә келип өлгинимиздин әвзәл болатти! — деди.
13 ೧೩ ಆದರೆ ಮೋಶೆ ಆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.
Буниң билән Муса хәлиққә: — Қорқмай, тик туруңлар, Пәрвәрдигарниң бүгүн силәргә жүргүзидиған ниҗатини көрисиләр; чүнки силәр бүгүн көргән мисирлиқларни иккинчи көрмәйсиләр.
14 ೧೪ ಯೆಹೋವನೇ ನಿಮಗಾಗಿ ಯುದ್ಧಮಾಡುವನು. ನೀವಂತು ಸುಮ್ಮನೇ ನಿಂತುಕೊಂಡಿರಿ” ಎಂದು ಹೇಳಿದನು.
Пәрвәрдигар силәр үчүн җәң қилиду, лекин силәр болсаңлар җим турсаңларла болди, деди.
15 ೧೫ ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ನನಗೆ ಮೊರೆಯಿಡುವುದೇನು? ಮುಂದಕ್ಕೆ ಹೊರಡಬೇಕೆಂದು ಇಸ್ರಾಯೇಲರಿಗೆ ಹೇಳು.
Андин Пәрвәрдигар Мусаға: — Немишкә сән Маңа пәряд көтирисән? Исраилларға: «Алдиға меңиңлар» дәп буйруғин.
16 ೧೬ ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು, ಆಗ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಕೊಂಡು ಹೋಗುವರು.
Лекин сән һасаңни көтирип қолуңни деңизға узитип, уни иккигә бөлгин; шундақта, Исраиллар деңизниң оттурисидин қуруқ йәр билән өтүп кетиду.
17 ೧೭ ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನು. ಅವರು ಇವರನ್ನು ಹಿಂದಟ್ಟುವರು. ಆಗ ನಾನು ಫರೋಹನ ಮೇಲೆಯೂ, ಅವನ ಸಮಸ್ತ ಸೈನ್ಯದವರ ಮೇಲೆಯೂ, ರಥಗಳ ಮೇಲೆಯೂ ಮತ್ತು ಕುದುರೆಗಳ ಮೇಲೆಯೂ ಪ್ರಖ್ಯಾತಿಗೊಳ್ಳುವೆನು.
Мана, Мән уларни қоғлисун дәп мисирлиқларниң көңүллирини қаттиқ қилимән, шуниң билән Мән Пирәвн вә униң пүткүл қошуни, җәң һарвулири вә атлиқлири арқилиқ Өз улуқлуғимни аян қилимән.
18 ೧೮ ನಾನು ಫರೋಹನನಲ್ಲಿಯೂ ಅವನ ರಥಗಳಲ್ಲಿಯೂ, ಕುದುರೆಗಳಲ್ಲಿಯೂ ಪ್ರಖ್ಯಾತಿ ಹೊಂದಿದ ನಂತರ ನಾನೇ ಯೆಹೋವನು ಎಂಬುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಎಂದನು.
Шундақ қилип, Мән Пирәвн вә униң җәң һарвулири вә атлиқлири арқилиқ Өз улуқлуғимни аян қилғинимда, мисирлиқлар Мениң Пәрвәрдигар екәнлигимни билиду, деди.
19 ೧೯ ಆಗ ಇಸ್ರಾಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಅವರ ಮುಂದಾಗಿ ಹೋಗುತ್ತಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
Исраилниң қошуниниң алдида жүрүватқан Худаниң Пәриштиси әнди уларниң кәйнигә өтти; шуниңдәк уларниң алдида маңған булут түврүгиму уларниң кәйнигә йөткилип,
20 ೨೦ ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ, ಇಸ್ರಾಯೇಲರ ಪಾಳೆಯಕ್ಕೂ ನಡುವೆ ಬಂದಿತು. ಅದು ಐಗುಪ್ತ್ಯರಿಗೆ ಕತ್ತಲನ್ನೂ, ಇಸ್ರಾಯೇಲರಿಗೆ ರಾತ್ರಿಯಲ್ಲಿ ಬೆಳಕನ್ನು ಕೊಟ್ಟಿದ್ದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಾಗಲಿಲ್ಲ.
мисирлиқларниң чедиргаһи билән Исраилниң чедиргаһиниң арилиғида тохтиди; бу булут бир тәрәптә қараңғулуқ чүшүрүп, йәнә бир тәрәптә кечини йорутти. Буниң билән пүтүн бир кечә бир қошун йәнә бир қошунға йеқин келәлмиди.
21 ೨೧ ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು.
Муса қолини деңизниң үстигә узатти; Пәрвәрдигар пүтүн кечә шәриқтин күчлүк бир шамал чиқирип, деңизниң сүйини кәйнигә яндурди; У суни яндуруп деңизни қуруқ йәр қилди, сулар иккигә бөлүнди.
22 ೨೨ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲಿ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತುಕೊಂಡಿತು.
Шу тәриқидә Исраиллар деңизниң оттурисидики қуруқ йәрдин меңип, өтүп кәтти; сулар болса уларниң оң вә сол йенида көтирилип тамдәк туратти.
23 ೨೩ ಐಗುಪ್ತ್ಯರೂ ಅಂದರೆ ಫರೋಹನ ಕುದುರೆಗಳೂ, ರಥಗಳೂ, ರಾಹುತರೂ ಅವರನ್ನು ಬೆನ್ನಟ್ಟುವವರಾಗಿ ಅವರ ಹಿಂದೆಯೇ ಸಮುದ್ರದೊಳಗೆ ಬಂದರು.
Амма мисирлиқлар уларни қоғлап келивататти — Пирәвнниң барлиқ атлири, җәң һарвулири вә атлиқ ләшкәрлири уларниң кәйнидин деңизниң оттурисиғичә кәлди.
24 ೨೪ ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿ ಸ್ತಂಭ ಮತ್ತು ಮೇಘ ಸ್ತಂಭದೊಳಗಿನಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅವರಲ್ಲಿ ಗಲಿಬಿಲಿಯನ್ನು ಉಂಟುಮಾಡಿದನು.
Таң атқанда шундақ болдики, Пәрвәрдигар от билән булут түврүгидә туруп мисирлиқларниң қошуниға қариди вә мисирлиқларниң қошуниға паракәндичилик чүшүрди.
25 ೨೫ ಯೆಹೋವನು ಅವರ ರಥಗಳ ಚಕ್ರದ ಕೀಲುಗಳಲ್ಲಿ ವ್ಯತ್ಯಾಸ ಮಾಡಿಬಿಟ್ಟದ್ದರಿಂದ ಐಗುಪ್ತರು ಬಹು ಕಷ್ಟದಿಂದ ರಥಗಳನ್ನು ಸಾಗಿಸಿಕೊಂಡು ಹೋಗಬೇಕಾಯಿತು. ಆಗ ಐಗುಪ್ತ್ಯರು, “ನಾವು ಇಸ್ರಾಯೇಲರ ಮುಂದೆ ನಿಲ್ಲಲಾರೆವು, ಓಡಿ ಹೋಗೋಣ, ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಿದ್ದಾನೆ” ಎಂದು ಹೇಳಿಕೊಂಡರು.
У уларниң һарвулириниң чақлирини патқузуп, һайдап меңишини мүшкүл қилди. Мисирлиқлар: — Жүрүңлар, Исраилниң алдидин қачайли, чүнки Пәрвәрдигар улар үчүн мисирлиқларға қарши җәң қиливатиду, — дейишти.
26 ೨೬ ಅಷ್ಟರಲ್ಲಿ ಯೆಹೋವನು ಮೋಶೆಗೆ, “ಸಮುದ್ರದ ಮೇಲೆ ನಿನ್ನ ಕೈಚಾಚು, ಆಗ ಅದರ ನೀರು ಮೊದಲಿನಂತೆ ಬಂದು ಐಗುಪ್ತ್ಯರನ್ನೂ, ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು” ಎಂದು ಹೇಳಿದನು.
Пәрвәрдигар Мусаға: — Сулар йенип мисирлиқларниң үстигә, уларниң җәң һарвулириниң үстигә вә атлиқлириниң үстигә еқип берип, уларни чөктүрүвәтсун дәп қолуңни деңизниң үстигә узатқин, — деди.
27 ೨೭ ಮೋಶೆ ಸಮುದ್ರದ ಮೇಲೆ ಕೈಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಐಗುಪ್ತ್ಯರು ಓಡಿಹೋಗುತ್ತಾ ಅದರ ಎದುರಾಗಿಯೇ ಬಂದರು. ಹೀಗೆ ಯೆಹೋವನು ಐಗುಪ್ತ್ಯರನ್ನು ಸಮುದ್ರದೊಳಗೆ ತಳ್ಳಿಬಿಟ್ಟನು.
Муса қолини деңизниң үстигә узитивиди, таң атқанда деңизниң сүйи йәнә әслий һалитигә йенип кәлди. Қечиватқан мисирлиқлар еқинға қарши жүгүрүшти, Пәрвәрдигар уларни деңизниң оттурисида моллақ атқузди.
28 ೨೮ ನೀರು ಮೊದಲಿನಂತೆ ಬಂದು ಆ ರಥಗಳನ್ನೂ, ರಾಹುತರನ್ನೂ, ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನೂ ಮುಳುಗಿಸಿಬಿಟ್ಟಿತ್ತು, ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.
Су әслигә йенип келип, җәң һарвулири билән атлиқларни, йәни Исраилларниң арқидин қоғлап деңизға киргән Пирәвнниң пүткүл қошунини ғәриқ қиливәтти; улардин бириму сақ қалмиди.
29 ೨೯ ಇಸ್ರಾಯೇಲರಾದರೋ, ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು.
Лекин Исраиллар деңизниң оттурисидики қуруқ йәр билән меңип өтүп кәтти; сулар уларниң оң вә сол йенида көтирилип тамдәк туратти.
30 ೩೦ ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಐಗುಪ್ತ್ಯರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಾಯೇಲರು ನೋಡಿದರು.
Шу тәриқидә Пәрвәрдигар у күни Исраилларни мисирлиқларниң қолидин қутқузди; Исраиллар мисирлиқларниң деңизниң бойида өлүк ятқинини көрди.
31 ೩೧ ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಾಯೇಲರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯನ್ನಿಟ್ಟರು.
Исраил хәлқи Пәрвәрдигарниң мисирлиқларға ишләткән зор қудритини көрүп, Пәрвәрдигардин қорқти; улар Пәрвәрдигарға вә униң қули Мусаға ишәнди.