< ವಿಮೋಚನಕಾಂಡ 15 >
1 ೧ ಆಗ ಮೋಶೆಯೂ, ಇಸ್ರಾಯೇಲರೂ ಯೆಹೋವನನ್ನು ಸ್ತುತಿಸುವುದಕ್ಕಾಗಿ ಈ ಕೀರ್ತನೆಯನ್ನು ಹಾಡಿದರು: “ಯೆಹೋವನಿಗೆ ಸ್ತೋತ್ರ ಗಾನಮಾಡೋಣ; ಆತನು ಮಹಾಜಯಶಾಲಿಯಾದವನು. ಕುದುರೆಗಳನ್ನು ಮತ್ತು ರಾಹುತರನ್ನು ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ.
Então cantou Moisés e os filhos de Israel este cântico ao SENHOR, e disseram: Cantarei eu ao SENHOR, porque se triunfou grandemente, Lançando no mar ao cavalo e ao que nele subia.
2 ೨ ನನ್ನ ಬಲವೂ, ಕೀರ್ತನೆಯೂ ಯಾಹುವೇ. ಆತನಿಂದ ನನಗೆ ರಕ್ಷಣೆ ಉಂಟಾಯಿತು. ನಮ್ಮ ದೇವರು ಆತನೇ, ಆತನನ್ನು ಸ್ತುತಿಸುವೆನು, ನಮ್ಮ ಪೂರ್ವಿಕರ ದೇವರು ಆತನೇ, ಆತನ ಮಹಿಮೆಯನ್ನು ಪ್ರಖ್ಯಾತಿಪಡಿಸುವೆವು.
O SENHOR é minha força, e minha canção, E foi-me por salvação: Este é meu Deus, e a este engrandecerei; Deus de meu pai, e a este exaltarei.
3 ೩ ಯೆಹೋವನು ಯುದ್ಧವೀರನು; ಯೆಹೋವ ಎಂಬುದು ಆತನ ನಾಮವಾಗಿದೆ.
O SENHOR, homem de guerra; o SENHOR é seu nome.
4 ೪ ಆತನು ಫರೋಹನ ರಥಗಳನ್ನೂ, ಸ್ಯೆನಿಕರನ್ನೂ ಸಮುದ್ರದಲ್ಲಿ ಕೆಡವಿಹಾಕಿದನು. ಫರೋಹನ ಶ್ರೇಷ್ಠ ವೀರರನ್ನು ಕೆಂಪುಸಮುದ್ರದಲ್ಲಿ ಮುಳುಗಿಸಿ ಬಿಟ್ಟನು.
Os carros de Faraó e a seu exército lançou no mar; E seus escolhidos príncipes foram afundados no mar Vermelho.
5 ೫ ಆಳವಾದ ಸಾಗರವು ಅವರನ್ನು ಮುಚ್ಚಿಬಿಟ್ಟಿತು. ಅವರು ಕಲ್ಲಿನಂತೆ ಸಮುದ್ರದ ತಳವನ್ನು ಸೇರಿದರು.
Os abismos os cobriram; Como pedra desceram aos profundos.
6 ೬ ಯೆಹೋವನೇ, ನಿನ್ನ ಬಲಗೈಯಲ್ಲಿರುವ ಶಕ್ತಿ ಎಷ್ಟೋ ಮಹಿಮೆಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಬಲಗೈ ಶತ್ರುಗಳನ್ನು ಪುಡಿಪುಡಿಮಾಡಿಬಿಡುತ್ತದೆ.
Tua mão direita, ó SENHOR, foi engrandecida em força; Tua mão direita, ó SENHOR, quebrantou ao inimigo.
7 ೭ ನೀನು ಅತ್ಯಧಿಕ ಮಹತ್ವವುಳ್ಳವನಾಗಿ ನಿನ್ನೆದುರಿಗೆ ನಿಲ್ಲುವವರನ್ನು ಕೆಡವಿಬಿಟ್ಟಿರುವೆ. ನಿನ್ನ ಕೋಪಾಗ್ನಿಯು ಹೊರಟು ಅವರನ್ನು ಒಣಗಿದ ಹುಲ್ಲನ್ನೋ ಎಂಬಂತೆ ಸುಟ್ಟು ಭಸ್ಮಮಾಡಿ ಬಿಟ್ಟಿದೆ.
E com a grandeza de tua poder transtornaste aos que se levantaram contra ti: Enviaste teu furor; os tragou como o restolho.
8 ೮ ನಿನ್ನ ಮೂಗಿನ ಶ್ವಾಸದಿಂದ ಸಮುದ್ರದ ನೀರು ಒಟ್ಟುಗೂಡಿದವು; ಪ್ರವಾಹವು ಗೋಡೆಯೋಪಾದಿಯಲ್ಲಿ ನಿಂತುಕೊಂಡಿತು; ಸಾಗರದಾಳದೊಳಗಿನ ನೀರು ಗಟ್ಟಿಯಾಯಿತು.
Com o sopro de tuas narinas se amontoaram as águas; Pararam-se as correntezas como em um amontoado; Os abismos se solidificaram em meio do mar.
9 ೯ ಶತ್ರುವು, ‘ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು; ಅವರಲ್ಲಿ ನಮ್ಮ ಬಯಕೆಯನ್ನು ತೀರಿಸಿಕೊಳ್ಳುವೆವು. ನಾವು ಖಡ್ಗವನ್ನು ಹಿಡಿದು; ಶಕ್ತಿಯಿಂದ ಅವರನ್ನು ಸಂಹಾರಮಾಡುವೆವು’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದರು.
O inimigo disse: Perseguirei, prenderei, repartirei despojos; Minha alma se encherá deles; Tirarei minha espada, minha mão os destruirá.
10 ೧೦ ಆದರೆ ನೀನು ಗಾಳಿಯನ್ನು ಊದಿದಾಗ, ಸಮುದ್ರವು ಅವರನ್ನು ಮುಚ್ಚಿಕೊಂಡಿತು; ಅವರು ಮಹಾಸಾಗರದೊಳಗೆ ಸೀಸದ ಗುಂಡಿನಂತೆ ಮುಳುಗಿಹೋದರು.
Sopraste com teu vento, cobriu-os o mar: Afundaram-se como chumbo nas impetuosas águas.
11 ೧೧ ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?
Quem como tu, SENHOR, entre os deuses? Quem como tu, magnífico em santidade, Terrível em louvores, autor de maravilhas?
12 ೧೨ ನೀನು ನಿನ್ನ ಬಲಗೈಯನ್ನು ಚಾಚಿದಾಗ, ಭೂಮಿಯು ಬಾಯ್ದೆರೆದು ಶತ್ರುಗಳನ್ನು ನುಂಗಿಬಿಟ್ಟಿತಲ್ಲಾ.
Estendeste a tua mão direita; a terra os tragou.
13 ೧೩ ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ನೀನು ನಿನ್ನ ಪ್ರಜೆಯನ್ನು ಬಿಡುಗಡೆ ಮಾಡಿರುವೆ. ನಿನ್ನ ಶಕ್ತಿಯಿಂದ ಅವರನ್ನು ನೀನು ವಾಸಮಾಡುವ ಪರಿಶುದ್ಧ ನಿವಾಸಕ್ಕೆ ನಡೆಸಿರುವೆ.
Conduziste em tua misericórdia a este povo, ao qual salvaste; Levaste-o com tua força à habitação de teu santuário.
14 ೧೪ ಜನಾಂಗಗಳು ಇದನ್ನು ಕೇಳಿ ನಡುಗುವರು. ಫಿಲಿಷ್ಟಿಯದಲ್ಲಿ ವಾಸಿಸುವವರು ಭಯಭೀತರಾಗುವರು.
Ouviram-no os povos, e tremerão; Dor se apoderará dos moradores da filístia.
15 ೧೫ ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಮೋವಾಬ್ಯರ ಸೈನಿಕರು ನಡುಗುವರು; ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು.
Então os príncipes de Edom se perturbarão; Aos robustos de Moabe os ocupará tremor; Todos os moradores de Canaã se abaterão.
16 ೧೬ ಭಯವೂ, ಹೆದರಿಕೆಯೂ, ಅವರಿಗುಂಟಾಗುವುದು. ನಿನ್ನ ಭುಜಬಲದ ಶಕ್ತಿಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. ಅಷ್ಟರಲ್ಲಿ ಯೆಹೋವನೇ, ನೀನು ಕಾಪಾಡಿದ ನಿನ್ನ ಪ್ರಜೆಗಳು ದಾಟಿ ಹೋಗಿ ದೇಶವನ್ನು ಸೇರುವರು.
Caia sobre eles tremor e espanto; À grandeza de teu braço emudeçam como uma pedra; Até que tenha passado teu povo, ó SENHOR, Até que tenha passado este povo que tu resgataste.
17 ೧೭ ನೀನು ಅವರನ್ನು ನಿನ್ನ ಸ್ವಕೀಯ ದೇಶವಾಗಿರುವ ಬೆಟ್ಟದ ಸೀಮೆಗೆ ತಂದು ಬಲಪಡಿಸುವಿ, ಯೆಹೋವನೇ, ನೀನು ಸ್ವಂತ ನಿವಾಸಕ್ಕಾಗಿ ಕಟ್ಟಿಕೊಂಡಿರುವ ಸ್ಥಳದವರೆಗೂ ಕರ್ತನೇ, ನೀನು ನಿನಗಾಗಿ ಸಿದ್ಧಪಡಿಸಿಕೊಂಡಿರುವ ಪವಿತ್ರ ಪರ್ವತದವರೆಗೂ ಅವರನ್ನು ಬರಮಾಡುವಿ.
Tu os introduzirás e os plantarás no monte de tua herança, No lugar de tua morada, que tu preparaste, ó SENHOR; No santuário do Senhor, que firmaram tuas mãos.
18 ೧೮ ಯೆಹೋವನೇ ಯುಗಯುಗಾಂತರಗಳಲ್ಲಿಯೂ ಅರಸನಾಗಿ ಆಳುವವನು.”
O SENHOR reinará pelos séculos dos séculos.
19 ೧೯ ಫರೋಹನ ಕುದುರೆಗಳು, ರಥಗಳೂ, ರಾಹುತರೂ ಸಮುದ್ರದೊಳಗೆ ಬಂದಾಗ ಯೆಹೋವನು ಸಮುದ್ರದ ನೀರನ್ನು ಅವರ ಮೇಲೆ ತಿರುಗಿ ಬರಮಾಡಿ ಮುಳುಗಿಸಿಬಿಟ್ಟನು. ಆದರೆ ಇಸ್ರಾಯೇಲರಾದರೋ ಸಮುದ್ರದ ಮಧ್ಯದಲ್ಲಿನ ಒಣ ನೆಲದ ಮೇಲೆ ದಾಟಿ ಹೋದರು.
Porque Faraó entrou cavalgando com seus carros e seus cavaleiros no mar, e o SENHOR voltou a trazer as águas do mar sobre eles; mas os filhos de Israel foram a seco por meio do mar.
20 ೨೦ ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ಕೈಗಳಲ್ಲಿ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯ ಹಿಂದೆ ಹೋದರು.
E Miriã a profetisa, irmã de Arão, tomou um pandeiro em sua mão, e todas as mulheres saíram atrás dela com pandeiros e danças.
21 ೨೧ ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವನಿಗೆ ಕೀರ್ತನೆ ಹಾಡಿರಿ, ಆತನು ಮಹೋನ್ನತನಾದ ದೇವರಾಗಿದ್ದಾನೆ. ಕುದುರೆಗಳನ್ನೂ, ರಾಹುತರನ್ನೂ ಸಮುದ್ರದಲ್ಲಿ ಮುಳುಗಿಸಿ ನಾಶಮಾಡಿದನು.”
E Miriã lhes respondia: Cantai ao SENHOR; porque em extremo se engrandeceu, Lançando no mar ao cavalo, e ao que nele subia.
22 ೨೨ ಆನಂತರ ಮೋಶೆಯು ಇಸ್ರಾಯೇಲರನ್ನು ಕೆಂಪುಸಮುದ್ರದ ಮೂಲಕವಾಗಿ ನಡೆಸಿದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನಗಳು ನೀರಿಲ್ಲದೆ ಪ್ರಯಾಣ ಮಾಡಿದರು.
E fez Moisés que partisse Israel do mar Vermelho, e saíram ao deserto de Sur; e andaram três dias pelo deserto sem achar água.
23 ೨೩ ತರುವಾಯ ಅವರು ಮಾರಾ ಎಂಬ ಸ್ಥಳಕ್ಕೆ ಬಂದರು. ಆದರೆ ಆ ಸ್ಥಳದ ನೀರು ಕಹಿಯಾಗಿದ್ದರಿಂದ ಅವರಿಗೆ ಅದನ್ನು ಕುಡಿಯುವುದಕ್ಕೆ ಆಗದೆ ಹೋಯಿತು. ಆದ್ದರಿಂದಲೇ ಆ ಸ್ಥಳಕ್ಕೆ ಮಾರಾ ಎಂದು ಹೆಸರಾಯಿತು.
E chegaram a Mara, e não puderam beber as águas de Mara, porque eram amargas; por isso lhe puseram o nome de Mara.
24 ೨೪ ಜನರು ಮೋಶೆಗೆ, “ನಾವೇನು ಕುಡಿಯಬೇಕು?” ಎಂದು ಅವನಿಗೆ ವಿರುದ್ಧವಾಗಿ ಗುಣಗುಟ್ಟಿದರು.
Então o povo murmurou contra Moisés, e disse: Que beberemos?
25 ೨೫ ಮೋಶೆಯು ಯೆಹೋವನಿಗೆ ಪ್ರಾರ್ಥಿಸಿದನು. ಆಗ ಯೆಹೋವನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಯಿತು. ಅಲ್ಲಿ ಯೆಹೋವನು ಇಸ್ರಾಯೇಲರಿಗಾಗಿ ಒಂದು ನಿಯಮವನ್ನು ಮಾಡಿ ಅವರನ್ನು ಪರೀಕ್ಷಿಸಿದನು.
E Moisés clamou ao SENHOR; e o SENHOR lhe mostrou uma árvore, a qual quando a meteu dentro das águas, as águas se tornaram doces. Ali lhes deu estatutos e ordenanças, e ali os provou;
26 ೨೬ ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.
E disse: Se ouvires atentamente a voz do SENHOR teu Deus, e fizeres o correto diante de seus olhos, e deres ouvido a seus mandamentos, e guardares todos os seus estatutos, nenhuma enfermidade das que enviei aos egípcios te enviarei a ti; porque eu sou o SENHOR que te sara.
27 ೨೭ ಆ ನಂತರ ಅವರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಬುಗ್ಗೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಆ ನೀರಿನ ಬಳಿಯಲ್ಲಿ ಅವರು ಇಳಿದು ಕೊಂಡರು.
E chegaram a Elim, onde havia doze fontes de águas, e setenta palmeiras; e assentaram ali junto às águas.