< ವಿಮೋಚನಕಾಂಡ 16 >

1 ಇಸ್ರಾಯೇಲರ ಸಮೂಹವೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತ ದೇಶದಿಂದ ಹೊರಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಎಲೀಮಿಗೂ ಸೀನಾಯಿ ಬೆಟ್ಟಕ್ಕೂ ನಡುವೆಯಿರುವ ಸೀನ್ ಎಂಬ ಮರುಭೂಮಿಗೆ ಬಂದರು.
পরে তারা এলীম থেকে যাত্রা করল। আর মিশর দেশ থেকে চলে যাবার পর দ্বিতীয় মাসের পনেরোতম দিনের ইস্রায়েল সন্তানদের সমস্ত মণ্ডলী সীন মরুপ্রান্তে উপস্থিত হল, তা এলীমের ও সীনয়ের মাঝখানে।
2 ಆಗ ಇಸ್ರಾಯೇಲರ ಸಮೂಹವೆಲ್ಲಾ ಮರುಭೂಮಿಯಲ್ಲಿ ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟತೊಡಗಿದರು.
তখন ইস্রায়েল সন্তানদের সমস্ত মণ্ডলী মোশির ও হারোণের বিরুদ্ধে মরুপ্রান্তে অভিযোগ করল;
3 ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು.
আর ইস্রায়েল সন্তানেরা তাঁদেরকে বলল, “হায়, হায়, আমরা মিশর দেশে সদাপ্রভুর হাতে কেন মারা যাই নি? তখন মাংসের হাঁড়ীর কাছে বসতাম, রুটি খেয়ে সন্তুষ্ট হতাম, তোমরা তো আমাদের সমস্ত গোষ্ঠীকে না খাইয়ে মারার জন্য বের করে এই মরুপ্রান্তে এনেছ।”
4 ಆಗ ಯೆಹೋವನು ಮೋಶೆಗೆ, “ನಾನು ಆಕಾಶದಿಂದ ನಿಮಗಾಗಿ ಆಹಾರವನ್ನು ಸುರಿಸುತ್ತೇನೆ. ಜನರು ಪ್ರತಿದಿನವೂ ಹೊರಗೆ ಹೋಗಿ ಆ ದಿನಕ್ಕೆ ಬೇಕಾಗುವಷ್ಟನ್ನು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಅವರು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುತ್ತೇನೆ.
তখন সদাপ্রভু মোশিকে বললেন, “দেখ, আমি তোমাদের জন্য স্বর্গ থেকে খাদ্য দ্রব্য বর্ষণ করব; লোকেরা বাইরে গিয়ে প্রতিদিন সেইদিনের র জন্য খাদ্য কুড়োবে; যেন আমি তাদের এই পরীক্ষা নিই যে, তারা আমার ব্যবস্থাতে চলবে কি না।
5 ಆರನೆಯ ದಿನದಲ್ಲಿ ಮಾತ್ರ ಅವರು ತಂದದ್ದನ್ನು ಸಿದ್ಧಮಾಡುವಾಗ ಅದು ಪ್ರತಿದಿನದಲ್ಲಿ ಕೂಡಿಸಿಕೊಂಡದ್ದಕ್ಕಿಂತಲೂ ಎರಡರಷ್ಟಾಗಿರುವುದು” ಎಂದು ಹೇಳಿದನು.
ষষ্ঠ দিনের তারা যা আনবে, সেটা রান্না করলে প্রতিদিন যা কুড়ায়, তার দ্বিগুন হবে।”
6 ಮೋಶೆ ಮತ್ತು ಆರೋನರು ಇಸ್ರಾಯೇಲರಿಗೆ, “ನಿಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾತನು ಯೆಹೋವನೇ ಎಂಬುದು ಇಂದು ಸಾಯಂಕಾಲದಲ್ಲಿ ನಿಮಗೆ ಗೊತ್ತಾಗುವುದು.
পরে মোশি ও হারোণ সমস্ত ইস্রায়েল সন্তানকে বললেন, “সন্ধ্যাবেলায় তোমরা জানবে যে, সদাপ্রভু তোমাদেরকে মিশর দেশ থেকে বের করে এনেছেন।
7 ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣುಗುಟ್ಟುವುದೇನು? ನಾವು ಎಷ್ಟು ಮಾತ್ರದವರು?” ಎಂದು ಹೇಳಿದರು.
আর সকালে তোমরা সদাপ্রভুর প্রতাপ দেখতে পাবে, কারণ সদাপ্রভুর বিরুদ্ধে যে অভিযোগ, তা তিনি শুনেছেন। আমরা কে যে, তোমরা আমাদের বিরুদ্ধে অভিযোগ কর?”
8 ಆಗ ಮೋಶೆ, “ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನಿಮ್ಮ ಗುಣುಗುಟ್ಟುವಿಕೆಯು ಯೆಹೋವನಿಗೆ ಕೇಳಿಸಿತು. ನಾನು ಮತ್ತು ಆರೋನನು ಎಷ್ಟರವರು? ನಿಮ್ಮ ಗುಣುಗುಟ್ಟುವಿಕೆ ಯೆಹೋವನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ” ಎಂದನು.
পরে মোশি বললেন, “সদাপ্রভু সন্ধ্যাবেলা খাওয়ার জন্য তোমাদেরকে মাংস দেবেন ও সকালে তৃপ্তি সহকারে রুটি দেবেন; সদাপ্রভুর বিরুদ্ধে তোমরা যে অভিযোগ করছ, তা তিনি শুনেছেন; আমরা কে? তোমরা যে অভিযোগ করছ, সেটা আমাদের বিরুদ্ধে নয়, সদাপ্রভুরই বিরুদ্ধে করছ।”
9 ಮೋಶೆಯು ಆರೋನನಿಗೆ, “ನೀನು ಇಸ್ರಾಯೇಲರ ಸಮೂಹದ ಬಳಿಗೆ ಹೋಗಿ ಅವರಿಗೆ, ‘ಯೆಹೋವನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ. ಆದುದರಿಂದ ನೀವೆಲ್ಲರೂ ಆತನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕೆಂದು ಆಜ್ಞಾಪಿಸು’” ಎಂದು ಹೇಳಿದನು.
পরে মোশি হারোণকে বললেন, “তুমি ইস্রায়েল সন্তানদের সমস্ত মণ্ডলীকে বলো, ‘তোমরা সদাপ্রভুর সামনে এস; কারণ তিনি তোমাদের অভিযোগ শুনেছেন’।”
10 ೧೦ ಆರೋನನು ಇಸ್ರಾಯೇಲರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ, ಅವರು ಮರುಭೂಮಿಯ ಕಡೆಗೆ ನೋಡಲಾಗಿ, ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.
১০পরে হারোণ যখন ইস্রায়েল সন্তানদের সমস্ত মণ্ডলীকে এটা বলছিলেন, তখন তারা মরুপ্রান্তের দিকে মুখ ফেরাল; আর দেখ, মেঘস্তম্ভের মধ্যে সদাপ্রভুর প্রতাপ দেখা গেল।
11 ೧೧ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
১১আর সদাপ্রভু মোশিকে বললেন,
12 ೧೨ “ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, ‘ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು’” ಎಂಬುದೇ.
১২“আমি ইস্রায়েল সন্তানদের অভিযোগ শুনেছি; তুমি তাদেরকে বলো, সন্ধ্যাবেলায় তোমরা মাংস খাবে ও সকালে রুটি খেয়ে তৃপ্ত হবে; তখন জানতে পারবে যে, আমি সদাপ্রভু, তোমাদের ঈশ্বর।”
13 ೧೩ ಸಾಯಂಕಾಲವಾಗುತ್ತಲೇ ಲಾವಕ್ಕಿಗಳು ಬಂದು ಅವರ ಪಾಳೆಯವನ್ನು ತುಂಬಿಕೊಂಡವು. ಅದಲ್ಲದೆ ಹೊತ್ತಾರೆಯಲ್ಲಿ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು.
১৩পরে সন্ধ্যাকালে তিতির পাখি উড়ে এসে শিবির ঢেকে দিল এবং সকালে শিবিরের চারিদিকে শিশির পড়ল।
14 ೧೪ ಆ ಮಂಜು ಕರಗಿ ಹೋದ ಮೇಲೆ ಮರುಭೂಮಿಯ ನೆಲದಲ್ಲಿ ಮಂಜಿನ ಹನಿಗಳಂತೆ ಏನೋ ಸಣ್ಣ ಸಣ್ಣ ರವೆಗಳು ಕಾಣಿಸಿದವು.
১৪যখন শিশির শুকিয়ে গেল, দেখ, মাটিতে তুষারের মত সরু বীজের মত বস্তু মরুপ্রান্তের উপরে পড়ে আছে।
15 ೧೫ ಇಸ್ರಾಯೇಲರು ಅದನ್ನು ಕಂಡು ಒಬ್ಬರಿಗೊಬ್ಬರು, “ಇದೇನಿರಬಹುದು?” ಎಂದು ಅಂದುಕೊಂಡರು. ಅದು ಏನೆಂದು ಅವರಿಗೆ ತಿಳಿಯಲಿಲ್ಲ. ಮೋಶೆ ಅವರಿಗೆ, “ಇದು ಯೆಹೋವನು ನಿಮಗಾಗಿ ತಿನ್ನುವುದಕ್ಕೆ ಕೊಟ್ಟಿರುವ ರೊಟ್ಟಿಯಾಗಿದೆ.
১৫আর সেটা দেখে ইস্রায়েল সন্তানরা একে অপরকে বলল, “এটা কি?” কারণ সেটা কি, তারা জানত না। তখন মোশি বললেন, “এটা সেই রুটি, যা সদাপ্রভু তোমাদেরকে খাবার জন্য দিয়েছেন।
16 ೧೬ ಯೆಹೋವನು ಇದರ ವಿಷಯದಲ್ಲಿ ಆಜ್ಞಾಪಿಸಿದ್ದೇನೆಂದರೆ: ಪ್ರತಿಯೊಬ್ಬನು ತನ್ನ ಕುಟುಂಬದವರ ಸಂಖ್ಯಾನುಸಾರ ತಲೆಗೆ ಮೂರು ಸೇರಿನಂತೆ ತನ್ನ ಡೇರೆಯವರಿಗಾಗಿ ಕೂಡಿಸಿಕೊಳ್ಳಲಿ. ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಾಕಾರ ನೀವು ಕೂಡಿಸಿಕೊಳ್ಳಿರಿ” ಎಂದು ಹೇಳಿದನು.
১৬এর বিষয়ে সদাপ্রভু এই আদেশ দিয়েছেন, তোমরা প্রত্যেক জন নিজেদের প্রয়োজন মত তা কুড়াও; তোমরা প্রত্যেকে নিজেদের তাঁবুতে থাকা লোকেদের সংখ্যা অনুসারে এক এক জনের জন্য এক এক ওমর পরিমাপে তা কুড়াও।”
17 ೧೭ ಇಸ್ರಾಯೇಲರು ಹಾಗೆಯೇ ಮಾಡಿದರು. ಕೆಲವರು ಹೆಚ್ಚಾಗಿ, ಕೆಲವರು ಕಡಿಮೆಯಾಗಿ ಕೂಡಿಸಿಕೊಂಡರು.
১৭তাতে ইস্রায়েল সন্তানেরা সেই রকম করল; কেউ বেশি, কেউ কম কুড়ালো।
18 ೧೮ ಅವರು ಅದನ್ನು ಸೇರಿನಿಂದ ಅಳತೆಮಾಡಿದರು. ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ. ಪ್ರತಿಯೊಬ್ಬನೂ ತನ್ನ ಭೋಜನಕ್ಕೆ ಸರಿಯಾಗುವಷ್ಟನ್ನು ಕೂಡಿಸಿಕೊಂಡಿದ್ದನು.
১৮পরে ওমরে তা মেপে দেখলে, যে বেশি সংগ্রহ করেছিল, তার অভাব হল না; তারা প্রত্যেকে নিজের নিজের প্রয়োজন অনুযায়ী কুড়িয়েছিল।
19 ೧೯ ಅದಲ್ಲದೆ ಮೋಶೆ ಅವರಿಗೆ, “ಇದನ್ನು ಯಾರೂ ಮರು ದಿನದವರೆಗೆ ಇಟ್ಟುಕೊಳ್ಳಬಾರದು” ಎಂದು ಹೇಳಿದನು.
১৯আর মোশি বললেন, “তোমরা কেউ সকালের জন্য এর কিছু রেখো না।”
20 ೨೦ ಆದಾಗ್ಯೂ ಅವರು ಮೋಶೆಯ ಮಾತನ್ನು ಕೇಳದೆ, ಅದರಲ್ಲಿ ಸ್ವಲ್ಪವನ್ನು ಮರು ದಿನದವರೆಗೆ ಇಟ್ಟುಕೊಂಡಾಗ ಅದು ಹುಳ ಬಿದ್ದು ಹೊಲಸುವಾಸನೆ ಹಿಡಿದು ಕೆಟ್ಟುಹೋಯಿತು. ಅದಕ್ಕೆ ಮೋಶೆ ಅವರ ಮೇಲೆ ಕೋಪಗೊಂಡನು.
২০তবুও কেউ কেউ মোশির কথা না মেনে সকালের জন্য কিছু কিছু রাখল, তখন তাতে পোকা জন্মালো ও দুর্গন্ধ হল; আর মোশি তাঁদের উপরে খুব রাগ করলেন।
21 ೨೧ ಜನರು ಪ್ರತಿದಿನ ಮುಂಜಾನೆಯಲ್ಲಿ ತಮ್ಮ ಭೋಜನಕ್ಕೆ ತಕ್ಕಷ್ಟು ಕೂಡಿಸಿಕೊಂಡರು. ಬಿಸಿಲು ಹೆಚ್ಚಾದಾಗ ಅದು ಕರಗಿಹೋಗುತ್ತಿತ್ತು.
২১আর প্রত্যেকদিন সকালে তারা নিজের নিজের প্রয়োজন অনুযায়ী কুড়াত, কিন্তু খুব রোদ হলে তা গলে যেত।
22 ೨೨ ಆರನೆಯ ದಿನ ಎರಡರಷ್ಟು ಆಹಾರವು, ಅಂದರೆ ಒಬ್ಬೊಬ್ಬನಿಗೆ ಎರಡೆರಡು ಸೇರಿನಂತೆ ಆರಿಸಿ ತುಂಬಿಟ್ಟುಕೊಂಡಿದ್ದರಿಂದ ಸಮೂಹದ ಅಧಿಕಾರಿಗಳೆಲ್ಲರು ಮೋಶೆಯ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದರು.
২২পরে ছয় দিনের র দিন তারা দ্বিগুন খাদ্য সংগ্রহ করত, প্রত্যেক জন দুই ওমর করে কুড়াল, আর মণ্ডলীর অধ্যক্ষেরা সবাই এসে মোশিকে জানালেন।
23 ೨೩ ಅದಕ್ಕೆ ಅವನು, “ಇದು ಯೆಹೋವನು ಹೇಳಿದ ಮಾತು, ‘ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ ದಿನವಾಗಿದೆ. ಈ ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ’” ಎಂದನು.
২৩তখন তিনি তাঁদেরকে বললেন, সদাপ্রভু তাই বলেছেন; কাল বিশ্রামপর্ব, সদাপ্রভুর উদ্দেশ্যে পবিত্র বিশ্রামবার; তোমাদের যা ভাজবার আছে তা ভাজ ও যা রান্না করবার আছে পাক কর এবং যা অতিরিক্তও, তা সকালের জন্য তুলে রাখ।
24 ೨೪ ಮೋಶೆ ಆಜ್ಞಾಪಿಸಿದಂತೆ ಅವರು ಮರು ದಿನದವರೆಗೆ ಅದನ್ನು ಇಟ್ಟುಕೊಂಡರು. ಆದರೆ ಅದು ಕೆಟ್ಟು ಹೋಗಿರಲಿಲ್ಲ, ಹುಳ ಬೀಳಲ್ಲೂ ಇಲ್ಲ.
২৪তাতে তারা মোশির আজ্ঞানুযায়ী সকাল পর্যন্ত তা রাখল, তখন তাতে দুর্গন্ধ হল না, পোকাও জন্মালো না।
25 ೨೫ ಆಗ ಮೋಶೆ ಅವರಿಗೆ, “ಈ ಹೊತ್ತು ಅದನ್ನು ಊಟ ಮಾಡಿರಿ. ಈ ದಿನವು ಯೆಹೋವನ ಸಬ್ಬತ್ ದಿನವಾಗಿರುವುದರಿಂದ ಈ ದಿನ ಅದು ಹೊಲದಲ್ಲಿ ಕಾಣಿಸಿಕೊಳ್ಳುವುದಿಲ್ಲ.
২৫পরে মোশি বললেন, আজ তোমরা এটা ভোজন কর, কারণ আজ সদাপ্রভুর বিশ্রামবার; আজ মাঠে এটা পাবে না।
26 ೨೬ ಆರು ದಿನ ಅದನ್ನು ಕೂಡಿಸಿಡಬೇಕು. ಏಳನೆಯ ದಿನ ಸಬ್ಬತ್ ದಿನವಾಗಿರುವುದರಿಂದ ಅದು ದೊರೆಯುವುದಿಲ್ಲ” ಎಂದು ಹೇಳಿದನು.
২৬তোমরা ছয় দিন তা কুড়াবে; কিন্তু সাত দিনের র দিন বিশ্রামবার, সে দিন তা পাবে না।
27 ೨೭ ಹಾಗೆಯೇ ಆಯಿತು. ಜನರಲ್ಲಿ ಕೆಲವರು ಏಳನೆಯ ದಿನದಲ್ಲಿ ಅದನ್ನು ಕೂಡಿಸಿಕೊಳ್ಳುವುದಕ್ಕೆ ಹೋದಾಗ ಅವರಿಗೆ ಏನೂ ಸಿಕ್ಕಲಿಲ್ಲ.
২৭তা সত্বেও সাত দিনের র দিনের লোকদের মধ্যে কেউ কেউ তা কুড়াবার জন্য বের হল; কিন্তু কিছুই পেল না।
28 ೨೮ ಆಗ ಯೆಹೋವನು ಮೋಶೆಗೆ, “ನೀವು ಎಲ್ಲಿಯವರೆಗೆ ನನ್ನ ಆಜ್ಞೆಗಳನ್ನೂ, ನಾನು ಮಾಡಿರುವ ನಿಯಮಗಳನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ?
২৮তখন সদাপ্রভু মোশিকে বললেন, তোমরা আমার আদেশ ও ব্যবস্থা পালন করতে কতকাল অস্বীকার করতে থাকবে?
29 ೨೯ ನೋಡಿರಿ, ಯೆಹೋವನು ನಿಮಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಅಪ್ಪಣೆಕೊಟ್ಟಿರುವುದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವ ಸ್ಥಳದಲ್ಲಿ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು” ಎಂದು ಹೇಳಿದನು.
২৯দেখ, সদাপ্রভুই তোমাদেরকে বিশ্রামবার দিয়েছেন, তাই তিনি ছয় দিনের র দিন দুই দিনের র খাদ্য তোমাদেরকে দিয়ে থাকেন; তোমরা প্রত্যেকে নিজ নিজ জায়গায় থাক; সাত দিনের র দিন কেউ নিজের জায়গা থেকে বাইরে যাবে না।
30 ೩೦ ಆದುದರಿಂದ ಏಳನೆಯ ದಿನದಲ್ಲಿ ಜನರು ಕೆಲಸವನ್ನು ಮಾಡದೆ ವಿಶ್ರಮಿಸಿಕೊಂಡರು.
৩০তাতে লোকেরা সাত দিনের র দিন বিশ্রাম করল।
31 ೩೧ ಇಸ್ರಾಯೇಲರು ಆ ಆಹಾರಕ್ಕೆ “ಮನ್ನ” ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು.
৩১আর ইস্রায়েলের বংশ ঐ খাদ্যের নাম মান্না রাখল; তা ধনে বীজের মত সাদা এবং তাঁর স্বাদ মধুমেশানো বিস্কুটের মত ছিল।
32 ೩೨ ಮೋಶೆಯು ಜನರಿಗೆ, “ಯೆಹೋವನು ಆಜ್ಞಾಪಿಸಿದ್ದು ಇದೇ, ‘ನಾನು ಐಗುಪ್ತ ದೇಶದಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗಾಗಿ ನೀವು ಒಂದು ಸೇರು ಮನ್ನವನ್ನು ತುಂಬಿಸಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು’” ಎಂದು ಹೇಳಿದನು.
৩২পরে মোশি বললেন, “সদাপ্রভু এই আদেশ করেছেন, ‘তোমরা বংশপরম্পরা অনুসারে ওর এক ওমর পরিমাণ তুলে রেখো, যেন আমি তোমাদেরকে মিশর দেশ থেকে আনার দিনের দূরের নির্জন জায়গায় যে খাবার খেতে দিতাম, তারা তা দেখতে পায়’।”
33 ೩೩ ಆದಕಾರಣ ಮೋಶೆಯು ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು, ಅದರಲ್ಲಿ ಒಂದು ಸೇರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಇಡಬೇಕು” ಎಂದು ಹೇಳಿದನು.
৩৩তখন মোশি হারোণকে বললেন, “তুমি একটা পাত্র নিয়ে পূর্ণ এক ওমর পরিমাপের সমান মান্না সদাপ্রভুর সামনে রাখ; তা তোমাদের পূর্বপুরুষদের নিয়মের জন্য রাখা যাবে।”
34 ೩೪ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ, ಆರೋನನು ಆಜ್ಞಾಶಾಸನ ಮಂಜೂಷದ ಪಕ್ಕದಲ್ಲಿ ಅದನ್ನು ಇರಿಸಿದನು.
৩৪তখন, সদাপ্রভু মোশিকে যেমন আদেশ করেছিলেন, সেইভাবে হারোণ সাক্ষ্য সিন্দুকের কাছে থাকবার জন্য তা তুলে রাখলেন।
35 ೩೫ ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.
৩৫ইস্রায়েল সন্তানেরা চল্লিশ বছর, যতক্ষণ না বসবাসকারী দেশে উপস্থিত হল, ততক্ষণ সেই মান্না খেল; কনান দেশের সীমাতে উপস্থিত না হওয়া পর্যন্ত তারা মান্না খেত।
36 ೩೬ ಓಮೆರ್ ಎಂಬುದು ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವಂಥ ಒಂದು ಅಳತೆಯ ಮಾಪನವಾಗಿದೆ.
৩৬এখন এক ওমর সমান হলো ঐফার দশমাংশ।

< ವಿಮೋಚನಕಾಂಡ 16 >