< ವಿಮೋಚನಕಾಂಡ 16 >
1 ೧ ಇಸ್ರಾಯೇಲರ ಸಮೂಹವೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತ ದೇಶದಿಂದ ಹೊರಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಎಲೀಮಿಗೂ ಸೀನಾಯಿ ಬೆಟ್ಟಕ್ಕೂ ನಡುವೆಯಿರುವ ಸೀನ್ ಎಂಬ ಮರುಭೂಮಿಗೆ ಬಂದರು.
१मग इस्राएली लोकांची मंडळी प्रवास करीत एलीम या ठिकाणाहून निघाली व मिसरमधून निघाल्यानंतर दुसऱ्या महिन्याच्या पंधराव्या दिवशी एलीम व सीनाय यांच्या दरम्यान असलेल्या सीन रानात येऊन पोहचले.
2 ೨ ಆಗ ಇಸ್ರಾಯೇಲರ ಸಮೂಹವೆಲ್ಲಾ ಮರುಭೂಮಿಯಲ್ಲಿ ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟತೊಡಗಿದರು.
२त्या रानात इस्राएल लोकांच्या मंडळीने मोशे व अहरोन यांच्यासंबंधी कुरकुर केली;
3 ೩ ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು.
३इस्राएल लोक त्यांना म्हणू लागले की, “परमेश्वराच्या हातून आम्हांला मिसर देशामध्येच मरण आले असते तर बरे झाले असते, कारण तेथे आम्हांला खावयास लागणारे सर्व प्रकारचे अन्न भरपूर होते; परंतु तुम्ही आम्हांला येथे रानात उपासाने मारावे म्हणून आणले आहे.”
4 ೪ ಆಗ ಯೆಹೋವನು ಮೋಶೆಗೆ, “ನಾನು ಆಕಾಶದಿಂದ ನಿಮಗಾಗಿ ಆಹಾರವನ್ನು ಸುರಿಸುತ್ತೇನೆ. ಜನರು ಪ್ರತಿದಿನವೂ ಹೊರಗೆ ಹೋಗಿ ಆ ದಿನಕ್ಕೆ ಬೇಕಾಗುವಷ್ಟನ್ನು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಅವರು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುತ್ತೇನೆ.
४मग परमेश्वर मोशेला म्हणाला, “तुम्हास खाण्याकरता मी आकाशातून अन्नवृष्टी करीन; प्रत्येक दिवशी या लोकांनी आपल्याला त्या दिवसास पुरेल एवढे अन्न बाहेर जाऊन गोळा करावे. यावरुन ते माझ्या नियमाप्रमाणे चालतात की नाही हे पाहण्यासाठी मी त्यांची परीक्षा पाहीन.
5 ೫ ಆರನೆಯ ದಿನದಲ್ಲಿ ಮಾತ್ರ ಅವರು ತಂದದ್ದನ್ನು ಸಿದ್ಧಮಾಡುವಾಗ ಅದು ಪ್ರತಿದಿನದಲ್ಲಿ ಕೂಡಿಸಿಕೊಂಡದ್ದಕ್ಕಿಂತಲೂ ಎರಡರಷ್ಟಾಗಿರುವುದು” ಎಂದು ಹೇಳಿದನು.
५सहाव्या दिवशी मात्र ते इतर दिवशी गोळा करतात त्याच्या दुप्पट असावे. ते जे गोळा करतील ते ते शिजवतील.”
6 ೬ ಮೋಶೆ ಮತ್ತು ಆರೋನರು ಇಸ್ರಾಯೇಲರಿಗೆ, “ನಿಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾತನು ಯೆಹೋವನೇ ಎಂಬುದು ಇಂದು ಸಾಯಂಕಾಲದಲ್ಲಿ ನಿಮಗೆ ಗೊತ್ತಾಗುವುದು.
६म्हणून मोशे व अहरोन सर्व इस्राएल लोकांस म्हणाले, “आज संध्याकाळी तुम्ही परमेश्वराचे सामर्थ्य पाहाल; तेव्हा मिसरमधून तुम्हास वाचविणारा परमेश्वर हाच आहे हे तुम्हास कळेल.
7 ೭ ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣುಗುಟ್ಟುವುದೇನು? ನಾವು ಎಷ್ಟು ಮಾತ್ರದವರು?” ಎಂದು ಹೇಳಿದರು.
७उद्या सकाळी तुम्ही परमेश्वराचे तेज पाहाल; तुम्ही परमेश्वराविरुध्द कुरकुर केली त्याने ती ऐकली आहे. आम्ही कोण की तुम्ही आम्हाविरुध्द कुरकुर करावी?”
8 ೮ ಆಗ ಮೋಶೆ, “ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನಿಮ್ಮ ಗುಣುಗುಟ್ಟುವಿಕೆಯು ಯೆಹೋವನಿಗೆ ಕೇಳಿಸಿತು. ನಾನು ಮತ್ತು ಆರೋನನು ಎಷ್ಟರವರು? ನಿಮ್ಮ ಗುಣುಗುಟ್ಟುವಿಕೆ ಯೆಹೋವನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ” ಎಂದನು.
८आणि मोशे म्हणाला, “परमेश्वर तुम्हास संध्याकाळी मांस खावयास देईल; आणि सकाळी पोटभर भाकरी देईल; कारण तुम्ही परमेश्वराविरूद्ध कुरकुर करीत आहा ती त्याने ऐकली आहे. आम्ही कोण आहो? तुमचे कुरकुरणे आमच्याविरुध्द नाही तर परमेश्वराविरुध्द आहे.”
9 ೯ ಮೋಶೆಯು ಆರೋನನಿಗೆ, “ನೀನು ಇಸ್ರಾಯೇಲರ ಸಮೂಹದ ಬಳಿಗೆ ಹೋಗಿ ಅವರಿಗೆ, ‘ಯೆಹೋವನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ. ಆದುದರಿಂದ ನೀವೆಲ್ಲರೂ ಆತನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕೆಂದು ಆಜ್ಞಾಪಿಸು’” ಎಂದು ಹೇಳಿದನು.
९मग मोशे अहरोनाला म्हणाला, “तू इस्राएल लोकांच्या मंडळीला सांग की, तुम्ही परमेश्वराकडे एकत्र या; कारण त्याने तुमच्या तक्रारी ऐकल्या आहेत.”
10 ೧೦ ಆರೋನನು ಇಸ್ರಾಯೇಲರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ, ಅವರು ಮರುಭೂಮಿಯ ಕಡೆಗೆ ನೋಡಲಾಗಿ, ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.
१०मग अहरोन सर्व इस्राएल मंडळीशी बोलत असताना सर्व लोकांनी वळून रानाकडे पाहिले; आणि त्यांना मेघात परमेश्वराचे तेज दिसले.
11 ೧೧ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
११परमेश्वर मोशेला म्हणाला,
12 ೧೨ “ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, ‘ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು’” ಎಂಬುದೇ.
१२“मी इस्राएल लोकांच्या तक्रारी ऐकल्या आहेत तेव्हा त्यांना सांग, रात्री तुम्ही मांस खाल आणि दररोज सकाळी तुम्हास पाहिजे तितक्या भाकरी खाल; मग परमेश्वर मी तुमचा देव आहे हे तुम्हास समजेल.”
13 ೧೩ ಸಾಯಂಕಾಲವಾಗುತ್ತಲೇ ಲಾವಕ್ಕಿಗಳು ಬಂದು ಅವರ ಪಾಳೆಯವನ್ನು ತುಂಬಿಕೊಂಡವು. ಅದಲ್ಲದೆ ಹೊತ್ತಾರೆಯಲ್ಲಿ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು.
१३त्या संध्याकाळच्या वेळी, तेथे लावे पक्षी येऊन छावणीभर पसरले आणि सकाळी छावणीच्या सभोवती जमिनीवर दव पडले.
14 ೧೪ ಆ ಮಂಜು ಕರಗಿ ಹೋದ ಮೇಲೆ ಮರುಭೂಮಿಯ ನೆಲದಲ್ಲಿ ಮಂಜಿನ ಹನಿಗಳಂತೆ ಏನೋ ಸಣ್ಣ ಸಣ್ಣ ರವೆಗಳು ಕಾಣಿಸಿದವು.
१४सूर्य उगवल्यावर दव विरून गेले, परंतु त्यानंतर जमिनीवर खवल्यासारखे हिमकणाएवढे सूक्ष्म कण पसरलेले दिसले.
15 ೧೫ ಇಸ್ರಾಯೇಲರು ಅದನ್ನು ಕಂಡು ಒಬ್ಬರಿಗೊಬ್ಬರು, “ಇದೇನಿರಬಹುದು?” ಎಂದು ಅಂದುಕೊಂಡರು. ಅದು ಏನೆಂದು ಅವರಿಗೆ ತಿಳಿಯಲಿಲ್ಲ. ಮೋಶೆ ಅವರಿಗೆ, “ಇದು ಯೆಹೋವನು ನಿಮಗಾಗಿ ತಿನ್ನುವುದಕ್ಕೆ ಕೊಟ್ಟಿರುವ ರೊಟ್ಟಿಯಾಗಿದೆ.
१५ते पाहून इस्राएल लोकांनी एकमेकांना विचारले, “हे काय आहे?” कारण ते काय आहे हे त्यांना माहीत नव्हते. तेव्हा मोशेने त्यांना सांगितले, “परमेश्वर हे अन्न तुम्हास खाण्याकरता देत आहे.
16 ೧೬ ಯೆಹೋವನು ಇದರ ವಿಷಯದಲ್ಲಿ ಆಜ್ಞಾಪಿಸಿದ್ದೇನೆಂದರೆ: ಪ್ರತಿಯೊಬ್ಬನು ತನ್ನ ಕುಟುಂಬದವರ ಸಂಖ್ಯಾನುಸಾರ ತಲೆಗೆ ಮೂರು ಸೇರಿನಂತೆ ತನ್ನ ಡೇರೆಯವರಿಗಾಗಿ ಕೂಡಿಸಿಕೊಳ್ಳಲಿ. ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಾಕಾರ ನೀವು ಕೂಡಿಸಿಕೊಳ್ಳಿರಿ” ಎಂದು ಹೇಳಿದನು.
१६परमेश्वराने आज्ञा केली आहे ती ही आहे की, प्रत्येकाने आपल्याला जेवढ्या अन्नाची गरज आहे तेवढेच गोळा करावे; ज्याच्या तंबूत जेवढी माणसे असतील तेवढ्यासाठी त्याच्या आहाराप्रमाणे प्रत्येकी एकएक ओमर गोळा करावे.”
17 ೧೭ ಇಸ್ರಾಯೇಲರು ಹಾಗೆಯೇ ಮಾಡಿದರು. ಕೆಲವರು ಹೆಚ್ಚಾಗಿ, ಕೆಲವರು ಕಡಿಮೆಯಾಗಿ ಕೂಡಿಸಿಕೊಂಡರು.
१७इस्राएल लोकांनी तसे केले, कोणी कमी, कोणी जास्त गोळा केले.
18 ೧೮ ಅವರು ಅದನ್ನು ಸೇರಿನಿಂದ ಅಳತೆಮಾಡಿದರು. ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ. ಪ್ರತಿಯೊಬ್ಬನೂ ತನ್ನ ಭೋಜನಕ್ಕೆ ಸರಿಯಾಗುವಷ್ಟನ್ನು ಕೂಡಿಸಿಕೊಂಡಿದ್ದನು.
१८त्यांनी ओमरच्या मापाने ते मापून पाहिले; तेव्हा ज्याने अधिक गोळा केले होते त्याचे अधिक भरले नाही. तसेच ज्याने थोडे गोळा केले होते त्याचे काही कमी भरले नाही. प्रत्येकाने आपआपल्या आहाराच्या मानाने ते गोळा केले.
19 ೧೯ ಅದಲ್ಲದೆ ಮೋಶೆ ಅವರಿಗೆ, “ಇದನ್ನು ಯಾರೂ ಮರು ದಿನದವರೆಗೆ ಇಟ್ಟುಕೊಳ್ಳಬಾರದು” ಎಂದು ಹೇಳಿದನು.
१९मोशेने लोकांस सांगितले, “कोणीही यापैकी काहीएक सकाळपर्यंत ठेवू नये.”
20 ೨೦ ಆದಾಗ್ಯೂ ಅವರು ಮೋಶೆಯ ಮಾತನ್ನು ಕೇಳದೆ, ಅದರಲ್ಲಿ ಸ್ವಲ್ಪವನ್ನು ಮರು ದಿನದವರೆಗೆ ಇಟ್ಟುಕೊಂಡಾಗ ಅದು ಹುಳ ಬಿದ್ದು ಹೊಲಸುವಾಸನೆ ಹಿಡಿದು ಕೆಟ್ಟುಹೋಯಿತು. ಅದಕ್ಕೆ ಮೋಶೆ ಅವರ ಮೇಲೆ ಕೋಪಗೊಂಡನು.
२०परंतु लोकांनी मोशेचे ऐकले नाही, काही लोकांनी त्या अन्नातून सकाळपर्यंत ठेवले त्यामध्ये किडे पडले व त्याची घाण येऊ लागली. त्यावरून मोशे त्यांच्यावर फार रागावला.
21 ೨೧ ಜನರು ಪ್ರತಿದಿನ ಮುಂಜಾನೆಯಲ್ಲಿ ತಮ್ಮ ಭೋಜನಕ್ಕೆ ತಕ್ಕಷ್ಟು ಕೂಡಿಸಿಕೊಂಡರು. ಬಿಸಿಲು ಹೆಚ್ಚಾದಾಗ ಅದು ಕರಗಿಹೋಗುತ್ತಿತ್ತು.
२१प्रत्येक दिवशी ते लोक आपल्याला पुरेसे अन्न गोळा करीत, ऊन फार वाढल्यावर ते वितळून जाई.
22 ೨೨ ಆರನೆಯ ದಿನ ಎರಡರಷ್ಟು ಆಹಾರವು, ಅಂದರೆ ಒಬ್ಬೊಬ್ಬನಿಗೆ ಎರಡೆರಡು ಸೇರಿನಂತೆ ಆರಿಸಿ ತುಂಬಿಟ್ಟುಕೊಂಡಿದ್ದರಿಂದ ಸಮೂಹದ ಅಧಿಕಾರಿಗಳೆಲ್ಲರು ಮೋಶೆಯ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದರು.
२२सहाव्या दिवशी त्यांनी दुप्पट म्हणजे प्रत्येक माणशी दोन ओमर गोळा केले. तेव्हा मंडळीचे सर्व पुढारी लोक मोशेकडे आले व त्यांनी हे त्यास कळवले.
23 ೨೩ ಅದಕ್ಕೆ ಅವನು, “ಇದು ಯೆಹೋವನು ಹೇಳಿದ ಮಾತು, ‘ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ ದಿನವಾಗಿದೆ. ಈ ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ’” ಎಂದನು.
२३तो त्यांना म्हणाला, “परमेश्वराचे सांगणे असे आहे की, उद्या विश्रामवार, परमेश्वराचा पवित्र शब्बाथ आहे. तुम्हास भाजावयाचे ते भाजा आणि शिजवायचे ते शिजवा आणि जे काही उरेल ते आपल्यासाठी सकाळपर्यंत ठेवावे.”
24 ೨೪ ಮೋಶೆ ಆಜ್ಞಾಪಿಸಿದಂತೆ ಅವರು ಮರು ದಿನದವರೆಗೆ ಅದನ್ನು ಇಟ್ಟುಕೊಂಡರು. ಆದರೆ ಅದು ಕೆಟ್ಟು ಹೋಗಿರಲಿಲ್ಲ, ಹುಳ ಬೀಳಲ್ಲೂ ಇಲ್ಲ.
२४मोशेने सांगितल्याप्रमाणे त्यांनी ते सकाळपर्यंत ठेवले. पण त्याची घाण सुटली नाही किंवा त्यामध्ये कोठेही किडे पडले नाहीत.
25 ೨೫ ಆಗ ಮೋಶೆ ಅವರಿಗೆ, “ಈ ಹೊತ್ತು ಅದನ್ನು ಊಟ ಮಾಡಿರಿ. ಈ ದಿನವು ಯೆಹೋವನ ಸಬ್ಬತ್ ದಿನವಾಗಿರುವುದರಿಂದ ಈ ದಿನ ಅದು ಹೊಲದಲ್ಲಿ ಕಾಣಿಸಿಕೊಳ್ಳುವುದಿಲ್ಲ.
२५मग मोशे म्हणाला, “ते आज खा, कारण आज परमेश्वराचा शब्बाथ आहे, आज रानात ते तुम्हास मिळावयाचे नाही.
26 ೨೬ ಆರು ದಿನ ಅದನ್ನು ಕೂಡಿಸಿಡಬೇಕು. ಏಳನೆಯ ದಿನ ಸಬ್ಬತ್ ದಿನವಾಗಿರುವುದರಿಂದ ಅದು ದೊರೆಯುವುದಿಲ್ಲ” ಎಂದು ಹೇಳಿದನು.
२६तुम्ही सहा दिवस ते गोळा करावे, परंतु आठवड्याचा सातवा दिवस हा शब्बाथ आहे. त्या दिवशी काही मिळणार नाही.”
27 ೨೭ ಹಾಗೆಯೇ ಆಯಿತು. ಜನರಲ್ಲಿ ಕೆಲವರು ಏಳನೆಯ ದಿನದಲ್ಲಿ ಅದನ್ನು ಕೂಡಿಸಿಕೊಳ್ಳುವುದಕ್ಕೆ ಹೋದಾಗ ಅವರಿಗೆ ಏನೂ ಸಿಕ್ಕಲಿಲ್ಲ.
२७तरी काही लोक सातव्या दिवशी ते गोळा करावयास बाहेर गेले, परंतु त्यांना काहीच मिळाले नाही.
28 ೨೮ ಆಗ ಯೆಹೋವನು ಮೋಶೆಗೆ, “ನೀವು ಎಲ್ಲಿಯವರೆಗೆ ನನ್ನ ಆಜ್ಞೆಗಳನ್ನೂ, ನಾನು ಮಾಡಿರುವ ನಿಯಮಗಳನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ?
२८नंतर परमेश्वर मोशेला म्हणाला, “माझ्या आज्ञा व माझे नियम पाळावयास तुम्ही कोठवर नाकारणार?
29 ೨೯ ನೋಡಿರಿ, ಯೆಹೋವನು ನಿಮಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಅಪ್ಪಣೆಕೊಟ್ಟಿರುವುದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವ ಸ್ಥಳದಲ್ಲಿ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು” ಎಂದು ಹೇಳಿದನು.
२९पाहा परमेश्वराने तुम्हास शब्बाथ दिला आहे; म्हणून सहाव्या दिवशी तो तुम्हास तो दोन दिवस पुरेल एवढे अन्न देतो, तेव्हा सातव्या दिवशी आपआपल्या ठिकाणी स्वस्थ असावे, आपले स्थान सोडून कोणीही बाहेर जाऊ नये.”
30 ೩೦ ಆದುದರಿಂದ ಏಳನೆಯ ದಿನದಲ್ಲಿ ಜನರು ಕೆಲಸವನ್ನು ಮಾಡದೆ ವಿಶ್ರಮಿಸಿಕೊಂಡರು.
३०याप्रमाणे लोकांनी सातव्या दिवशी विसावा घेतला.
31 ೩೧ ಇಸ್ರಾಯೇಲರು ಆ ಆಹಾರಕ್ಕೆ “ಮನ್ನ” ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು.
३१इस्राएल लोकांनी त्या अन्नाचे नाव मान्ना ठेवले; ते धण्यासारखे पांढरे असून त्याची चव मध घालून केलेल्या पोळीसारखी होती.
32 ೩೨ ಮೋಶೆಯು ಜನರಿಗೆ, “ಯೆಹೋವನು ಆಜ್ಞಾಪಿಸಿದ್ದು ಇದೇ, ‘ನಾನು ಐಗುಪ್ತ ದೇಶದಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗಾಗಿ ನೀವು ಒಂದು ಸೇರು ಮನ್ನವನ್ನು ತುಂಬಿಸಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು’” ಎಂದು ಹೇಳಿದನು.
३२मोशे म्हणाला, “परमेश्वराने अशी आज्ञा दिली आहे की ह्यातले एक ओमर पुढील पिढ्यांच्या लोकांसाठी राखून ठेवा. मी तुम्हास मिसर देशातून काढून नेल्यावर रानात कसे अन्न दिले हे त्यांना समजेल.”
33 ೩೩ ಆದಕಾರಣ ಮೋಶೆಯು ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು, ಅದರಲ್ಲಿ ಒಂದು ಸೇರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಇಡಬೇಕು” ಎಂದು ಹೇಳಿದನು.
३३तेव्हा मोशेने अहरोनाला सांगितले, “एक भांडे घे आणि त्यामध्ये एक ओमर मान्ना घाल. तो परमेश्वरापुढे सादर करण्यासाठी आपल्या पुढील पिढ्यांसाठी राखून ठेव.”
34 ೩೪ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ, ಆರೋನನು ಆಜ್ಞಾಶಾಸನ ಮಂಜೂಷದ ಪಕ್ಕದಲ್ಲಿ ಅದನ್ನು ಇರಿಸಿದನು.
३४मग परमेश्वराने मोशेला दिलेल्या आज्ञेप्रमाणे अहरोनाने परमेश्वराच्या आज्ञापटापुढे ते भांडे ठेवले.
35 ೩೫ ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.
३५इस्राएल लोक तो मान्ना चाळीस वर्षे, कनान देशाच्या सरहद्दीपर्यंत जाऊन पोहोचेपर्यंत खात होते.
36 ೩೬ ಓಮೆರ್ ಎಂಬುದು ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವಂಥ ಒಂದು ಅಳತೆಯ ಮಾಪನವಾಗಿದೆ.
३६एक ओमर मान्ना म्हणजे “एक एफाचा दहावा भाग” आहे.