< ವಿಮೋಚನಕಾಂಡ 17 >
1 ೧ ತರುವಾಯ ಇಸ್ರಾಯೇಲರ ಸಮೂಹವೆಲ್ಲಾ ಯೆಹೋವನ ಅಪ್ಪಣೆಯ ಮೇರೆಗೆ “ಸೀನ್” ಎಂಬ ಮರುಭೂಮಿಯಿಂದ ಹೊರಟು ಮುಂದೆ ಪ್ರಯಾಣ ಮಾಡಿ ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿಯೂ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.
၁ဣသရေလအမျိုးသားပရိသတ်အပေါင်းတို့သည်၊ ထာဝရဘုရား မိန့်တော်မူသည်အတိုင်း၊ သိန်တောထဲက ထွက်၍ ခရီးသွားသဖြင့်၊ ရေဖိဒိမ်အရပ်၌ စားခန်းချကြ၏။ ထိုအရပ်၌ လူများသောက်ဘို့ရာ ရေမရှိ။
2 ೨ ಆದಕಾರಣ ಜನರು ಮೋಶೆಯ ಮೇಲೆ ಗುಣುಗುಟ್ಟುತ್ತಾ, “ನಮಗೆ ಕುಡಿಯುವುದಕ್ಕೆ ನೀರು ದೊರಕಿಸಿಕೊಡಬೇಕು” ಎಂದು ಗದ್ದಲವೆಬ್ಬಿಸಲು, ಮೋಶೆಯು ಅವರಿಗೆ, “ನನ್ನ ಸಂಗಡ ಏಕೆ ಜಗಳವಾಡುತ್ತೀರಿ? ಯೆಹೋವನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.
၂ထိုကြောင့် လူများတို့က၊ သောက်ဘို့ရေပေးပါဟု ဆို၍ မောရှေကို ရန်တွေ့ကြ၏။ မောရှေကလည်း၊ ငါ့ကို အဘယ်ကြောင့် ရန်တွေ့ကြသနည်း။ ထာဝရဘုရားကို အဘယ်ကြောင့် စုံစမ်းကြသနည်းဟု ဆိုလေ၏။
3 ೩ ಅಲ್ಲಿ ಜನರು ಬಾಯಾರಿಕೆಯಿಂದ, ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿ, “ನೀನು ನಮ್ಮನ್ನೂ, ನಮ್ಮ ಮಕ್ಕಳನ್ನೂ, ದನಗಳನ್ನೂ ಐಗುಪ್ತ ದೇಶದಿಂದ ಇಲ್ಲಿಗೆ ಕರೆದುತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ?” ಎಂದರು.
၃လူများတို့သည် ရေငတ်၍ မောရှေကို အပြစ်တင် မြည်တမ်းလျက်၊ ငါတို့မှစ၍ သားသမီးတိရစ္ဆာန်တို့ကို အငတ်ထား၍ သတ်ခြင်းအလိုငှာ၊ အဲဂုတ္တုပြည်မှ အဘယ်ကြောင့် ဆောင်ခဲ့သနည်းဟု ဆိုကြ၏။
4 ೪ ಆಗ ಮೋಶೆ ಯೆಹೋವನಿಗೆ ಮೊರೆಯಿಟ್ಟು, “ಈ ಜನರಿಗಾಗಿ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲ” ಎಂದನು.
၄ထိုအခါ မောရှေသည် ထာဝရဘုရားအား အော်ဟစ်၍၊ ဤလူတို့အား အကျွန်ုပ်သည် အဘယ်သို့ ပြုရပါမည်နည်း။ အကျွန်ုပ်ကို ခဲနှင့် ပစ်လုကြပါပြီဟု လျှောက်လေ၏။
5 ೫ ಅದಕ್ಕೆ ಯೆಹೋವನು ಮೋಶೆಗೆ, “ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಇಸ್ರಾಯೇಲರ ಹಿರಿಯರಲ್ಲಿ ಕೆಲವರನ್ನು ಕರೆದುಕೊಂಡು ಜನರ ಮುಂದೆ ಹೊರಟು, ನಾನು ತೋರಿಸುವ ಸ್ಥಳಕ್ಕೆ ಹೋಗು.
၅ထာဝရဘုရားကလည်း၊ လူများရှေ့သို့သွား၍ ဣသရေလအမျိုး အသက်ကြီးသူတို့ကို ခေါ်လော့။ မြစ်ကို ရိုက်သော သင်၏လှံတံကို ကိုင်လျက်၊ ဟောရပ်အရပ်သို့ သွားလော့။
6 ೬ ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನಗೆದುರಾಗಿ ನಿಂತುಕೊಳ್ಳುವೆನು. ನೀನು ಆ ಬಂಡೆಯನ್ನು ಹೊಡೆದಾಗ, ಜನರು ಕುಡಿಯುವಂತೆ ನೀರು ಹೊರಗೆ ಬರುವುದು” ಎಂದನು. ಮೋಶೆ ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
၆ထိုအရပ်၌ရှိသော ကျောက်ပေါ်တွင် သင့်ရှေ့မှာ ငါရပ်နေမည်။ သင်သည် ထိုကျောက်ကို ရိုက်ရမည်။ လူများသောက်ဘို့ ထိုကျောက်ထဲက ရေထွက်လိမ့်မည်ဟု မောရှေအား မိန့်တော်မူ၏။ မောရှေသည်လည်း ဣသရေလအမျိုး အသက်ကြီးသူတို့ရှေ့မှာ ထိုသို့ပြုလေ၏။
7 ೭ ಇಸ್ರಾಯೇಲರು, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ?” ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ, ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ಗದ್ದಲ ಮಾಡಿದ್ದರಿಂದ ಅದಕ್ಕೆ ಮೆರೀಬಾ ಎಂತಲೂ ಹೆಸರಿಟ್ಟನು.
၇ဣသရေလအမျိုးသားတို့က၊ ထာဝရဘုရားသည် ငါတို့တွင် ရှိသလော မရှိလောဟု ထာဝရဘုရားကို စုံစမ်း၍ ရန်တွေ့သောအကြောင်းကြောင့်၊ ထိုအရပ်ကို မဿာနှင့် မေရိဘဟု သမုတ်သတည်း။
8 ೮ ಅಮಾಲೇಕ್ಯರು ರೆಫೀದೀಮಿನಲ್ಲಿ ಇಸ್ರಾಯೇಲರ ಸಂಗಡ ಯುದ್ಧಮಾಡಿದರು.
၈ထိုအခါ အာမလက်လူတို့သည် လာ၍၊ ရေဖိဒိမ်အရပ်၌ ဣသရေလလူတို့ကို စစ်တိုက်ကြ၏။
9 ೯ ಆಗ ಮೋಶೆಯು ಯೆಹೋಶುವನಿಗೆ, “ನೀನು ನಮ್ಮ ಜನರಲ್ಲಿ ಕೆಲವರನ್ನು ಆರಿಸಿಕೊಂಡು ಅಮಾಲೇಕ್ಯರೊಡನೆ ಯುದ್ಧಮಾಡಬೇಕು. ನಾನು ನಾಳೆ ದೇವರ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು” ಎಂದು ಹೇಳಿದನು.
၉မောရှေကလည်း၊ လူတို့ကို ရွေး၍ အာမလက်လူတို့ကို စစ်တိုက်ခြင်းငှာ ထွက်လော့။ နက်ဖြန်နေ့၌ ဘုရားသခင်၏လှံတံကို ကိုင်လျက်၊ တောင်ထိပ်ပေါ်မှာ ငါရပ်နေမည်ဟု ယောရှုအားဆို၏။
10 ೧೦ ಮೋಶೆಯ ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರೊಡನೆ ಯುದ್ಧಮಾಡಿದನು. ಮೋಶೆಯೂ, ಆರೋನನೂ ಮತ್ತು ಹೂರನು ಗುಡ್ಡದ ಮೇಲೆ ಏರಿ ಹೋದರು.
၁၀မောရှေမှာလိုက်သည်အတိုင်း ယောရှုပြု၍၊ အာမလက်လူတို့ကို စစ်တိုက်လေ၏။ မောရှေ၊ အာရုန်၊ ဟုရတို့သည် တောင်ထိပ်ပေါ်သို့ တက်ကြ၏။
11 ೧೧ ಮೋಶೆಯು ತನ್ನ ಕೈಗಳನ್ನು ಮೇಲಕ್ಕೆ ಎತ್ತಿದಾಗ ಇಸ್ರಾಯೇಲರು ಬಲಗೊಳ್ಳುವರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಬಲಗೊಳ್ಳುವರು.
၁၁မောရှေသည် လက်ကို ချီသောအခါ၊ ဣသရေလလူတို့သည် နိုင်ကြ၏။ လက်ကို ချသောအခါ၊ အာမလက်လူတို့သည် နိုင်ကြ၏။
12 ೧೨ ಮೋಶೆಯ ಕೈಗಳು ಭಾರವಾದಾಗ, ಆರೋನ ಮತ್ತು ಹೂರನು ಒಂದು ಕಲ್ಲನ್ನು ತಂದು ಇಟ್ಟರು. ಮೋಶೆಯು ಅದರ ಮೇಲೆ ಕುಳಿತುಕೊಂಡನು. ಆರೋನನು ಒಂದು ಕಡೆಯಲ್ಲಿಯೂ, ಹೂರನು ಇನ್ನೊಂದು ಕಡೆಯಲ್ಲಿಯೂ ನಿಂತುಕೊಂಡು ಮೋಶೆಯ ಕೈಗಳನ್ನು ಎತ್ತಿ ಹಿಡಿಯಲು ಸಹಾಯ ಮಾಡಿದರು. ಹೀಗೆ ಅವನ ಕೈಗಳು ಸೂರ್ಯನು ಮುಳುಗುವವರೆಗೆ ಕೆಳಗಿಳಿಸದೆ ಇದ್ದರು.
၁၂သို့ရာတွင် မောရှေ၏လက်သည် ညောင်းသောကြောင့်၊ သူတို့သည် ကျောက်ကိုယူ၍ မောရှေကို ထိုင်စေပြီးလျှင်၊ အာရုန်နှင့် ဟုရတို့သည် တယောက်တဘက်နေ၍ သူ၏လက်ကို မကြ၏။ သို့ဖြစ်၍ နေဝင်သည်တိုင်အောင် သူ၏လက်တို့သည် အမြဲနေလေ၏။
13 ೧೩ ಯೆಹೋಶುವನು ಅಮಾಲೇಕ್ಯರನ್ನು ಮತ್ತು ಅವರ ಭಟರನ್ನು ಖಡ್ಗದಿಂದ ಸೋಲಿಸಿದನು.
၁၃ယောရှုသည်လည်း အာမလက်မင်းနှင့် လူများတို့ကို ထားလက်နက်ဖြင့် လုပ်ကြံလေ၏။
14 ೧೪ ಆಗ ಯೆಹೋವನು ಮೋಶೆಗೆ, “ಇದನ್ನು ಜ್ಞಾಪಕಾರ್ಥಕವಾಗಿ ಒಂದು ಗ್ರಂಥದಲ್ಲಿ ಬರೆ. ಅದನ್ನು ಯೆಹೋಶುವನಿಗೆ ತಿಳಿಸು. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಮಿಯ ಮೇಲೆ ಇರದಂತೆ ಸಂಪೂರ್ಣವಾಗಿ ನಾಶಮಾಡಿ ಬಿಡುವೆನು” ಎಂದು ಹೇಳಿದನು.
၁၄ထာဝရဘုရားကလည်း၊ ဤအမှုကို အောက်မေ့စရာဘို့ စာရေးထား၍ ယောရှုအား ဘတ်ရွတ်လော့။ အကြောင်းမူကား၊ ကောင်းကင်အောက်၌ အာမလက်၏ အမှတ်ရှိသမျှကို ငါပယ်ရှင်းမည်ဟု မောရှေအား မိန့်တော်မူ၏။
15 ೧೫ ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಯೆಹೋವ ನಿಸ್ಸಿ” ಎಂದು ಹೆಸರಿಟ್ಟನು.
၁၅မောရှေသည်လည်း ယဇ်ပလ္လင်ကို တည်၍၊ ယေဟောဝါနိဿိဟု သမုတ်လေ၏။
16 ೧೬ ಮೋಶೆಯು, “ಅಮಾಲೇಕ್ಯರ ಕೈಯು ಯೆಹೋವನ ಸಿಂಹಾಸನಕ್ಕೆ ವಿರೋಧವಾಗಿ ಎತ್ತಲ್ಪಟ್ಟಿದ್ದರಿಂದ ಯೆಹೋವನ ಸಿಂಹಾಸನದಾಣೆಗೂ ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಗಳಲ್ಲಿ ಯುದ್ಧವಿರುವುದು” ಎಂದನು.
၁၆အကြောင်းမူကား၊ အာမလက်လူမျိုး၏ လက်သည် ထာဝရဘုရား၏ ရာဇပလ္လင်တော်၏ ရန်ဘက်ဖြစ် သောကြောင့်၊ ထာဝရဘုရားသည် ကာလအစဉ်အဆက် အာမလက်အမျိုးကို စစ်တိုက်တော်မူလိမ့်မည်ဟု ဆိုသတည်း။