< ವಿಮೋಚನಕಾಂಡ 19 >
1 ೧ ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಮರುಭೂಮಿಗೆ ಬಂದರು.
Nʼọnwa nke atọ, site nʼoge ndị Izrel hapụchara obodo Ijipt, nʼụbọchị ahụ, ha bịaruru ọzara Saịnaị.
2 ೨ ಇಸ್ರಾಯೇಲರು ರೇಫೀದೀಮನ್ನು ಬಿಟ್ಟು ಮರುಭೂಮಿಗೆ ಬಂದು ಮರುಭೂಮಿಯಲ್ಲಿ ಡೇರೆ ಹಾಕಿ ಸೀನಾಯಿ ಬೆಟ್ಟಕ್ಕೆ ಎದುರಾಗಿ ಇಳಿದುಕೊಂಡರು.
Ọ bụ site na Refidim ka ha sị bịaruo ọzara Saịnaị, mee ebe obibi ha nʼebe ahụ, nʼakụkụ ugwu Saịnaị.
3 ೩ ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಹೋದನು. ಆಗ ಯೆಹೋವನು ಬೆಟ್ಟದ ಮೇಲಿಂದ ಮೋಶೆಯನ್ನು ಕರೆದು ಅವನಿಗೆ, “ನೀನು ಯಾಕೋಬನ ಮನೆತನದವರಾದ ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿ ಹೇಳಬೇಕು.
Mosis rigooro nʼelu ugwu ahụ izute Chineke. Mgbe ahụ, Onyenwe anyị sitere nʼelu ugwu ahụ kpọ Mosis oku sị ya, “Otu a ka ị ga-esi gwa ụlọ Jekọb okwu. Ị ga-akọrọ ụmụ Izrel:
4 ೪ ‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.
‘Unu onwe unu ahụla ihe m mere ndị Ijipt, hụkwa otu m siri buru unu na nku ugo, si otu a, dọtara unu onwe m.
5 ೫ ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.
Nʼihi nke a, ọ bụrụ na unu ga-erubere m isi nke ọma ma debe ọgbụgba ndụ m, unu ga-abụ ihe onwunwe nke m dị oke ọnụahịa. Nʼezie, ụwa niile bụ nke m,
6 ೬ ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ’ ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ” ಅಂದನು.
ma unu ga-abụrụ m alaeze ndị nchụaja, na mba dị nsọ.’ Okwu ndị a ka ị ga-agwa ụmụ Izrel.”
7 ೭ ಆಗ ಮೋಶೆ ಬಂದು ಜನರ ಹಿರಿಯರನ್ನು ಒಟ್ಟಾಗಿ ಸೇರಿಸಿದನು. ಯೆಹೋವನು ಆಜ್ಞಾಪಿಸಿದ್ದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು.
Mosis gara kpọkọta ndị okenye ndị Izrel, gwa ha okwu niile nke Onyenwe anyị nyere ya nʼiwu.
8 ೮ ಜನರೆಲ್ಲರೂ ಒಗ್ಗಟ್ಟಾಗಿ, “ಯೆಹೋವನು ಹೇಳಿದಂತೆಯೇ ಮಾಡುವೆವು” ಎಂದು ಉತ್ತರಕೊಟ್ಟರು. ಮೋಶೆ ಯೆಹೋವನ ಬಳಿಗೆ ಹಿಂತಿರುಗಿ ಹೋಗಿ ಅವರು ಹೇಳಿದ ಮಾತುಗಳನ್ನು ಆತನಿಗೆ ಹೇಳಿದನು.
Ndị mmadụ niile a jikwa otu olu zaghachi ya sị, “Ihe ọbụla Onyenwe anyị kwuru ka anyị ga-eme.” Mosis gwara Onyenwe anyị ihe niile ndị Izrel kwuru.
9 ೯ ಯೆಹೋವನು ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ” ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು.
Onyenwe anyị gwara Mosis okwu sị, “Lee, agaje m izute gị nʼime igwe ojii gbara ọchịchịrị. Achọrọ m ka ụmụ Izrel niile were ntị ha nụrụ mgbe m ga-agwa gị okwu, ọzọkwa, ka ha kwerekwa na gị ruo mgbe niile.” Mosis gwara ndị Izrel niile okwu nke Onyenwe anyị gwara ya.
10 ೧೦ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,
Onyenwe anyị gwara Mosis okwu ọzọ sị, “Rịdakwuru ndị m, doo ha nsọ taa na echi. Nʼihi na nke a ga-abụ nkwado ha izute m. Ka ha saa uwe ha mmiri,
11 ೧೧ ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು.
jikerekwa nʼụbọchị nke atọ. Nʼihi na m ga-arịdata nʼelu ugwu Saịnaị nʼihu mmadụ niile.
12 ೧೨ ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಗಡಿಯನ್ನು ಮಾಡಿಸಿ ಜನರಿಗೆ, ‘ಎಚ್ಚರಿಕೆಯಾಗಿರಿ, ನೀವು ಈ ಬೆಟ್ಟವನ್ನು ಏರದಂತೆಯೂ ಅದರ ಗಡಿಯನ್ನು ಮುಟ್ಟದಂತೆಯೂ ಜಾಗ್ರತೆಯಿಂದಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತುಹೋಗುವರು.’
Ị ga-akpa oke nʼebe ha na-agaghị agafe. Nye ha iwu si ha, ‘Kpacharanụ anya ka unu ghara ịbịa ugwu ahụ nso, maọbụ metụ ala ugwu ahụ aka. Nʼihi na onye ọ bụla metụrụ ugwu ahụ aka aghaghị ịnwụ.’
13 ೧೩ ಅಂಥವನನ್ನು ಯಾರೂ ಮುಟ್ಟಬಾರದು. ಕಲ್ಲೆಸೆದು ಅಥವಾ ಬಾಣವನ್ನು ಎಸೆದು ಖಂಡಿತವಾಗಿ ಅವನನ್ನು ಕೊಲ್ಲಬೇಕು. ಮನುಷ್ಯನಾಗಲಿ, ಪಶುಗಳಾಗಲಿ ಬೆಟ್ಟವನ್ನು ಮುಟ್ಟಿದರೆ ಸಾಯಲೇಬೇಕು. ಕೊಂಬಿನ ಧ್ವನಿ ದೀರ್ಘವಾಗಿ ಕೇಳಿಸಿದಾಗ ಅವರು ಬೆಟ್ಟದ ಸಮೀಪಕ್ಕೆ ಬರಬೇಕು” ಎಂದು ಹೇಳು ಎಂದನು.
Agaghị emetụ onye mmebi iwu ahụ aka, kama, a ga-eji nkume tugbuo ya, maọbụ e were àkụ gbagbuo ya, maọbụ mmadụ maọbụ anụmanụ, ọ gaghị adị ndụ. Mmadụ ọbụla agaghị abịaru ugwu ahụ nso, ruo mgbe ha nụrụ opi nke a ga-afụ. Mgbe ahụ, ha nwere ike bịa nso ugwu ahụ.”
14 ೧೪ ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು, ಅವರನ್ನು ಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧರಾದರು.
Ya mere, Mosis si nʼugwu ahụ rịdakwuru ụmụ Izrel. O doo ndị mmadụ ahụ nsọ. Ha niile ji mmiri saa uwe ha.
15 ೧೫ ಆಗ ಮೋಶೆ ಜನರಿಗೆ, “ಮೂರನೆಯ ದಿನದಲ್ಲಿ ಸಿದ್ಧವಾಗಿರಿ. ಯಾವ ಪುರುಷನೂ ಸ್ತ್ರೀಸಂಗ ಮಾಡಬಾರದು” ಎಂದು ಹೇಳಿದನು.
Mosis dọrọ ha aka na ntị sị ha, “Jikerenụ nʼụbọchị nke atọ. Nwoke na nwanyị enwekwala mmekọrịta ọbụla.”
16 ೧೬ ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.
Mgbe o ruru nʼụtụtụ ụbọchị nke atọ ahụ, oke igwe ojii kpuchiri elu ugwu ahụ. Amụma malitere na-egbuke, egbe eluigwe malitekwara ịgba. Nʼikpeazụ, opi ike dara. Mmadụ niile tụrụ egwu, makwa jijiji.
17 ೧೭ ದೇವದರ್ಶನಕ್ಕಾಗಿ ಮೋಶೆ ಜನರನ್ನು ಪಾಳೆಯದ ಹೊರಕ್ಕೆ ಕರೆದುಕೊಂಡು ಬರಲು, ಅವರು ಬೆಟ್ಟದ ಕೆಳಗೆ ನಿಂತುಕೊಂಡರು.
Mosis duuru ndị mmadụ ahụ niile si nʼụlọ ikwu ha pụta gaa izute Chineke. Ha niile guzokwara nʼala ugwu ahụ.
18 ೧೮ ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
Mgbe ahụ, anwụrụ ọkụ kpuchiri ugwu Saịnaị. Ma lee! Onyenwe anyị rịdatara dịka ire ọkụ nʼelu ugwu ahụ. Anwụrụ ọkụ rigoro elu dịka anwụrụ ọkụ nke ọhịa na-ere ọkụ. Ala ọma jijiji dị ukwuu dakwasịkwara ugwu ahụ.
19 ೧೯ ತುತ್ತೂರಿಯ ಧ್ವನಿ ಹೆಚ್ಚಾಗುತ್ತಾ ಬಂದಾಗ, ಮೋಶೆಯು ದೇವರ ಸಂಗಡ ಮಾತನಾಡಿದನು. ಆಗ ದೇವರು ಎತ್ತರದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು.
Mgbe opi ike ahụ na-ada ike ike, Mosis malitere ịgwa Chineke okwu. Chineke zaghachiri Mosis okwu site nʼolu dara ụda dịka egbe eluigwe.
20 ೨೦ ಯೆಹೋವನು ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.
Onyenwe anyị rịdatara bịaruo nʼelu ugwu Saịnaị. Ọ gwara Mosis ka ọ rịgota bịa zute ya. Mosis rigoro nʼelu ugwu ahụ ijekwuru Chineke.
21 ೨೧ ಆಗ ಯೆಹೋವನು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಗಡಿಯನ್ನು ದಾಟಿ ಯೆಹೋವನ ಹತ್ತಿರಕ್ಕೆ ಬಂದರೆ ಅವರಲ್ಲಿ ಬಹಳ ಜನರು ನಾಶವಾಗುವರು.
Onyenwe anyị gwara Mosis okwu sị, “Rịda gaa dọọ ndị mmadụ ahụ aka na ntị ka ha ghara ịgafe oke ala ahụ bịaruo nso ịhụ Onyenwe anyị anya ka ha ghara ịla nʼiyi.
22 ೨೨ ಯೆಹೋವನ ಸನ್ನಿಧಿಗೆ ಬರುವ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳಬೇಕು. ಇಲ್ಲವಾದರೆ ಯೆಹೋವನು ಪಕ್ಕನೆ ಅವರನ್ನೂ ಸಂಹಾರಮಾಡುವನು” ಎಂದು ಹೇಳಿದನು.
Ọ bụladị ndị nchụaja ndị chọrọ ịbịaru Onyenwe anyị nso aghaghị ido onwe ha nsọ. Ma ọ bụghị otu a, Onyenwe anyị ga-eme ka ha niile nwụọ.”
23 ೨೩ ಅದಕ್ಕೆ ಮೋಶೆ ಯೆಹೋವನಿಗೆ, “ಜನರು ಸೀನಾಯಿ ಬೆಟ್ಟವನ್ನೇರುವುದಕ್ಕೆ ಆಗುವುದಿಲ್ಲ. ಯಾಕೆಂದರೆ ‘ಬೆಟ್ಟದ ಸುತ್ತಲೂ ಗಡಿಯನ್ನು ಹಾಕಿ ನಿನಗಾಗಿ ಶುದ್ಧಮಾಡು’” ಎಂದು ಆಜ್ಞಾಪಿಸಿರುವೆಯಲ್ಲಾ ಎಂದನು.
Mosis zaghachiri Onyenwe anyị sị, “Ndị mmadụ agaghị arịgota nʼugwu Saịnaị nʼihi na gị onwe gị adọọla anyị aka na ntị sị, ‘Kpaanụ oke gburugburu ugwu a, doo ya nsọ.’”
24 ೨೪ ಯೆಹೋವನು ಮೋಶೆಗೆ, “ನೀನು ಇಳಿದುಹೋಗಿ ಆರೋನನ್ನು ನಿನ್ನ ಸಂಗಡ ಕರೆದುಕೊಂಡು ಮೇಲಕ್ಕೆ ಬಾ. ಆದರೆ ಯಾಜಕರೂ, ಜನರೂ ಆ ಗಡಿಯನ್ನು ದಾಟಿ ಯೆಹೋವನ ಹತ್ತಿರ ಬರಬಾರದು. ದಾಟಿ ಬಂದರೆ ನಾನು ಅವರನ್ನು ಪಕ್ಕನೇ ಸಂಹಾರ ಮಾಡುವೆನು” ಎಂದು ಹೇಳಿದನು.
Ma Onyenwe anyị gwara Mosis okwu sị: “Gbada gaa kpọgota Erọn ka gị na ya soro rigota nʼelu ugwu a. Ma lezie anya ka ndị nchụaja na ndị Izrel ghara irigota nʼebe a ịbịakwute Onyenwe anyị, ma ọ bụghị otu a, ọ ga-eji ike laa ha nʼiyi.”
25 ೨೫ ಮೋಶೆ ಜನರ ಬಳಿಗೆ ಇಳಿದುಹೋಗಿ ಆ ಮಾತುಗಳನ್ನು ಅವರಿಗೆ ತಿಳಿಸಿದನು.
Ya mere, Mosis rịdakwuru ndị Izrel ga gwa ha.