< ವಿಮೋಚನಕಾಂಡ 20 >
1 ೧ ದೇವರು ಈ ಎಲ್ಲಾ ಆಜ್ಞಾವಿಧಿಗಳನ್ನು ಅವರಿಗೆ ಕೊಟ್ಟನು:
Ndipo Mulungu anayankhula mawu onse awa nati:
2 ೨ “ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’
“Ine ndine Yehova Mulungu wako amene ndinakutulutsa ku Igupto, mʼdziko la ukapolo.
3 ೩ ನಾನಲ್ಲದೆ ನಿಮಗೆ ಬೇರೆ ದೇವರುಗಳು ಇರಬಾರದು.
“Usakhale ndi milungu ina koma Ine ndekha.”
4 ೪ “ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.
“Usadzipangire chofanizira chinthu chilichonse chakumwamba kapena cha pa dziko lapansi kapena cha mʼmadzi a pansi pa dziko.
5 ೫ ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.
Usazigwadire kapena kuzipembedza, pakuti Ine Yehova Mulungu wako, ndine Mulungu wansanje, wolanga ana chifukwa cha tchimo la makolo awo mpaka mʼbado wachitatu ndi wachinayi wa iwo amene amadana nane.
6 ೬ ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುವೆನು.
Koma ndimaonetsa chikondi chosasinthika ku mibado miyandamiyanda ya anthu amene amandikonda, ndi kusunga malamulo anga.
7 ೭ ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.
“Usagwiritse ntchito molakwika dzina la Yehova Mulungu wako, pakuti Yehova adzamutenga kukhala wochimwa aliyense amene akugwiritsa ntchito dzina lakelo molakwika.
8 ೮ “ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು.
“Uzisunga tsiku la Sabata kuti likhale lopatulika.
9 ೯ ಆರು ದಿನಗಳು ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಿಕೊಳ್ಳಬೇಕು.
Uzigwira ntchito zako zonse masiku asanu ndi limodzi.
10 ೧೦ ಆದರೆ ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿಯ ಸಬ್ಬತ್ ದಿನವಾಗಿದೆ. ಆ ದಿನದಲ್ಲಿ ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಪಶುಪ್ರಾಣಿಗಳು ನಿನ್ನ ಊರಿನಲ್ಲಿರುವ ಅನ್ಯದೇಶದವನು ಸಹ ಯಾವ ಕೆಲಸವನ್ನೂ ಮಾಡಬಾರದು.
Koma tsiku lachisanu ndi chiwiri ndi Sabata, tsiku loperekedwa kwa Yehova Mulungu wako. Tsiku limeneli musagwire ntchito iliyonse, inuyo kapena mwana wanu wamwamuna kapena mwana wanu wamkazi, wantchito wanu wamwamuna kapena mdzakazi wanu, ziweto zanu kapena mlendo amene akukhala mʼmudzi mwanu.
11 ೧೧ ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.
Pakuti Yehova anapanga kumwamba ndi dziko lapansi, nyanja ndi zonse zimene zili mʼmenemo mʼmasiku asanu ndi limodzi. Iye anapuma pa tsiku lachisanu ndi chiwiri. Kotero Yehova anadalitsa tsiku la Sabata kuti likhale loyera.
12 ೧೨ “ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.
“Lemekeza abambo ako ndi amayi ako kuti ukhale ndi moyo wautali mʼdziko limene Yehova Mulungu wako akukupatsa.
16 ೧೬ “ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.
“Usapereke umboni womunamizira mnzako.
17 ೧೭ “ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.”
“Usasirire nyumba ya mnzako. Usasirire mkazi wa mnzako kapena wantchito wake wamwamuna kapena mdzakazi wake, ngʼombe yake kapena bulu wake, kapena chilichonse cha mnzako.”
18 ೧೮ ಆ ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು.
Pamene anthu ankamva mabingu ndi kuona ziphaliwali ndi kumvanso lipenga ndi kuona utsi umene umafuka mʼphiri, ananjenjemera ndi mantha. Ndipo iwo anayima patali.
19 ೧೯ ಅವರು ಮೋಶೆಗೆ, “ನೀನೇ ನಮ್ಮ ಸಂಗಡ ಮಾತನಾಡು, ನಾವು ಕೇಳುತ್ತೇವೆ. ದೇವರು ನಮ್ಮ ಸಂಗಡ ಮಾತನಾಡಿದರೆ ನಾವು ಸತ್ತು ಹೋಗುತ್ತೇವೆ” ಎಂದು ಹೇಳಿದರು.
Ndipo anati kwa Mose, “Iwe utiyankhule ndipo tidzamvera. Koma usalole kuti Mulungu atiyankhule, tingafe.”
20 ೨೦ ಅದಕ್ಕೆ ಮೋಶೆಯು ಜನರಿಗೆ, “ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ” ಎಂದನು.
Koma Mose anati kwa anthuwo, “Musachite mantha. Mulungu wabwera kudzakuyesani kuti mukhale ndi mtima woopa Mulungu kuti musamuchimwire.”
21 ೨೧ ಜನರು ದೂರದಲ್ಲಿ ನಿಂತಿದ್ದರು. ಮೋಶೆಯು ದೇವರಿರುವ ಆ ಕಾರ್ಗತ್ತಲಿನ ಸಮೀಪಕ್ಕೆ ಹೋದನು.
Anthu aja anayima patali koma Mose anayandikira mtambo wakuda kumene kunali Mulungu.
22 ೨೨ ಯೆಹೋವನು ಮೋಶೆಗೆ ಹೀಗೆಂದನು, “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ; ‘ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.
Ndipo Yehova anati kwa Mose, “Awuze izi Aisraeli: ‘Inu mwaona nokha kuti Ine ndakuyankhulani kuchokera kumwamba.
23 ೨೩ ನೀವು ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.
Choncho musadzipangire milungu yasiliva kapena yagolide kuti muziyipembedza pamodzi ndi Ine.’”
24 ೨೪ ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
Mundimangire guwa ladothi ndipo muziperekapo nsembe zopsereza ndi nsembe zachiyanjano, nkhosa, mbuzi ndi ngʼombe zanu. Pamalo paliponse pamene Ine ndidzakonza kuti muzinditamandirapo, ndidzabwera ndi kukudalitsani.
25 ೨೫ ನೀವು ನನಗಾಗಿ ಕಲ್ಲಿನಿಂದ ಯಜ್ಞವೇದಿಯನ್ನು ಕಟ್ಟುವುದಾದರೆ, ಅದನ್ನು ಕೆತ್ತಿರುವ ಕಲ್ಲುಗಳಿಂದ ಕಟ್ಟಬಾರದು. ಏಕೆಂದರೆ ಉಳಿ, ಮುಂತಾದುದನ್ನು ಅದರ ಮೇಲೆ ಉಪಯೋಗಿಸಿದರೆ ಅದು ಅಪವಿತ್ರವಾಗುವುದು.
Ngati mudzandimangira guwa lansembe lamiyala, musagwiritse ntchito miyala yosema, pakuti mudzalidetsa mukadzagwiritsa ntchito zida.
26 ೨೬ ಅದಲ್ಲದೆ ನನ್ನ ಯಜ್ಞವೇದಿಯನ್ನು ನಿಮ್ಮ ನಗ್ನತೆಯು ಕಾಣುವ ಹಾಗೆ ಮೆಟ್ಟಲುಗಳನ್ನು ಬಳಸಿ ಅದನ್ನು ಹತ್ತಬಾರದು’” ಎಂದು ಆಜ್ಞಾಪಿಸಿದನು.
Musamakwere pa makwerero popita pa guwa langa lansembe kuti mungaonetse maliseche anu.