< ವಿಮೋಚನಕಾಂಡ 21 >

1 “ಈಗ ನೀನು ಅವರ ಮುಂದೆ ಇಡಬೇಕಾದ ನ್ಯಾಯವಿಧಿಗಳು ಯಾವುದೆಂದರೆ;
«و این است احکامی که پیش ایشان می گذاری:۱
2 “‘ನಿಮ್ಮಲ್ಲಿ ಯಾರಾದರೂ ಇಬ್ರಿಯನೊಬ್ಬನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ, ಆ ಇಬ್ರಿಯನು ಆರು ವರ್ಷ ದಾಸನಾಗಿದ್ದು ಏಳನೆಯ ವರ್ಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.
اگر غلام عبری بخری، شش سال خدمت کند، و در هفتمین، بی‌قیمت، آزاد بیرون رود.۲
3 ಪುರುಷನು ಒಂಟಿಯಾಗಿ ಬಂದಿದ್ದರೆ ಒಂಟಿಯಾಗಿಯೇ ಹೊರಟುಹೋಗಬೇಕು. ಮದುವೆಯಾಗಿ ಬಂದಿದ್ದರೆ ಅವನ ಹೆಂಡತಿಯೂ ಅವನ ಜೊತೆ ಹೋಗಬೇಕು.
اگر تنها آمده، تنها بیرون رود. واگر صاحب زن بوده، زنش همراه او بیرون رود.۳
4 ಅವನ ಯಜಮಾನನು ಅವನಿಗೆ ಮದುವೆಮಾಡಿಸಿದ ಪಕ್ಷದಲ್ಲಿ ಆ ಹೆಂಡತಿಯಲ್ಲಿ ಗಂಡು ಇಲ್ಲವೆ ಹೆಣ್ಣುಮಕ್ಕಳು ಹುಟ್ಟಿದ್ದರೆ, ಆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನ ಸೊತ್ತಾಗುವರು. ದಾಸನು ಒಂಟಿಗನಾಗಿಯೇ ಹೊರಟುಹೋಗಬೇಕು.’”
اگر آقایش زنی بدو دهد و پسران یا دختران برایش بزاید، آنگاه زن و اولادش از آن آقایش باشند، و آن مرد تنها بیرون رود.۴
5 ಆದರೆ ದಾಸನು, “ನಾನು ನನ್ನ ಯಜಮಾನನ್ನೂ, ನನ್ನ ಹೆಂಡತಿ ಮಕ್ಕಳನ್ನು ಪ್ರೀತಿಸುತ್ತೇನೆ. ಆದುದರಿಂದ ನಾನು ಬಿಡುಗಡೆಯಾಗಿ ಹೋಗುವುದಕ್ಕೆ ನನಗೆ ಮನಸಿಲ್ಲ” ಎಂದು ಸ್ಪಷ್ಟವಾಗಿ ಹೇಳಿದರೆ,
لیکن هرگاه آن غلام بگوید که هرآینه آقایم و زن و فرزندان خودرا دوست می‌دارم و نمی خواهم که آزاد بیرون روم،۵
6 ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರೆದುಕೊಂಡು ಬಂದು ಬಾಗಿಲಿನ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಿ ಗುರುತು ಮಾಡಬೇಕು. ಆಗ ಅವನು ಶಾಶ್ವತವಾಗಿ ಅವನಿಗೆ ದಾಸನಾಗಿರುವನು.
آنگاه آقایش او را به حضور خدا بیاورد، واو را نزدیک در یا قایمه در برساند، و آقایش گوش او را با درفشی سوراخ کند، و او وی راهمیشه بندگی نماید.۶
7 ಯಾರಾದರೂ ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಬಿಡುಗಡೆಯಾಗಿ ಹೋಗುವ ಪ್ರಕಾರ ಅವಳು ಬಿಡುಗಡೆಯಾಗಿ ಹೋಗಬಾರದು.
اما اگر شخصی، دخترخود را به کنیزی بفروشد، مثل غلامان بیرون نرود.۷
8 ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಮೆಚ್ಚಿಕೆಯಾಗದೆ ಹೋದರೆ ಅವಳನ್ನು ಬಿಡಿಸಿ ಕೊಲ್ಲುವುದಕ್ಕೆ ಅವನು ಅನುಮತಿ ನೀಡಬೇಕು. ಅವನು ಕೊಟ್ಟ ಮಾತಿಗೆ ತಪ್ಪಿದವನಾದ್ದರಿಂದ ಅನ್ಯಜನರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.
هر گاه به نظر آقایش که او را برای خودنامزد کرده است ناپسند آید، بگذارد که او را فدیه دهند، اما هیچ حق ندارد که او را به قوم بیگانه بفروشد، زیرا که بدو خیانت کرده است.۸
9 ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯ ಮಾಡಿಕೊಂಡರೆ ಮಗಳಂತೆ ಆಕೆಯನ್ನು ನೋಡಿಕೊಳ್ಳಬೇಕು.
و هرگاه او را به پسر خود نامزد کند، موافق رسم دختران بااو عمل نماید.۹
10 ೧೦ ಯಜಮಾನನು ಇನ್ನೊಬ್ಬಳನ್ನು ಮದುವೆಯಾದರೆ ಮೊದಲನೆಯವಳಿಗೆ ಅನ್ನ, ವಸ್ತ್ರ, ದಾಂಪತ್ಯದ ಹಕ್ಕುಗಳನ್ನು ಕಡಿಮೆಮಾಡಬಾರದು.
اگر زنی دیگر برای خود گیرد، آنگاه خوراک و لباس و مباشرت او را کم نکند.۱۰
11 ೧೧ ಈ ಮೂರರಲ್ಲಿ ಯಾವುದನ್ನೂ ನಡೆಸದೆ ಹೋದರೆ ಅವಳು ಏನೂ ಕೊಡದೆ ಬಿಡುಗಡೆಯಾಗಿ ಹೋಗಬಹುದು.
و اگر این سه چیز را برای او نکند، آنگاه بی‌قیمت و رایگان بیرون رود.۱۱
12 ೧೨ ಮನುಷ್ಯನನ್ನು ಹೊಡೆದು ಕೊಂದವನು ಖಂಡಿತವಾಗಿ ಸಾಯಬೇಕು.
«هر‌که انسانی را بزند و او بمیرد، هر آینه کشته شود.۱۲
13 ೧೩ ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ದೇವರ ಸಂಕಲ್ಪದಿಂದ ಆ ಕೊಲೆ ನಡೆದಿದೆಯಾದರೆ, ಆ ಕೊಲೆಮಾಡಿದವನು ಓಡಿಹೋಗುವಂತೆ ಅವನಿಗೆ ನಾನು ಒಂದು ಸ್ಥಳವನ್ನು ನೇಮಿಸುವೆನು.
اما اگر قصد او نداشت، بلکه خداوی را بدستش رسانید، آنگاه مکانی برای تو معین کنم تا بدانجا فرار کند.۱۳
14 ೧೪ ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು.
لیکن اگر شخصی عمد بر همسایه خود آید، تا او را به مکر بکشد، آنگاه او را از مذبح من کشیده، به قتل برسان.۱۴
15 ೧೫ ಯಾರಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆದರೆ ಖಂಡಿತವಾಗಿ ಅವನು ಸಾಯಲೇಬೇಕು.
و هر‌که پدر یا مادر خود را زند، هرآینه کشته شود.۱۵
16 ೧೬ ಯಾರಾದರೂ ಒಬ್ಬ ಮನುಷ್ಯನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ ಅಥವಾ ಅವನು ಬಂಧಿಸಲ್ಪಟ್ಟಾಗ, ಅಪಹರಿಸಲ್ಪಟ್ಟವನು ಅವನೊಂದಿಗಿದ್ದರೆ ಅವನಿಗೆ ಮರಣಶಿಕ್ಷೆಯಾಗಬೇಕು.
وهر‌که آدمی را بدزدد و او را بفروشد یا در دستش یافت شود، هرآینه کشته شود.۱۶
17 ೧೭ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನಿಗೆ ಮರಣಶಿಕ್ಷೆಯಾಗಬೇಕು.
و هر‌که پدر یامادر خود را لعنت کند، هرآینه کشته شود.۱۷
18 ೧೮ ಇಬ್ಬರು ಜಗಳವಾಡುತ್ತಿರುವಲ್ಲಿ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ, ಮುಷ್ಠಿಯಿಂದಾಗಲೀ ಹೊಡೆದಿದ್ದರಿಂದ ಗಾಯಪಟ್ಟವನು ಸಾಯದೆ ಕೆಲವು ಕಾಲ ಹಾಸಿಗೆ ಹಿಡಿದು,
واگر دو مرد نزاع کنند، و یکی دیگری را به سنگ یابه مشت زند، و او نمیرد لیکن بستری شود،۱۸
19 ೧೯ ತರುವಾಯ ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ ಅವನನ್ನು ಹೊಡೆದವನಿಗೆ ಶಿಕ್ಷೆಯನ್ನು ವಿಧಿಸಬಾರದು. ಆದರೆ ಪೆಟ್ಟುತಿಂದ ಮನುಷ್ಯನು ಗುಣಹೊಂದುವವರೆಗೂ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು.
اگربرخیزد و با عصا بیرون رود، آنگاه زننده او بی‌گناه شمرده شود، اما عوض بیکاریش را ادا نماید، وخرج معالجه او را بدهد.۱۹
20 ೨೦ ಒಬ್ಬನು ತನ್ನ ದಾಸನನ್ನಾಗಲಿ, ದಾಸಿಯನ್ನಾಗಲಿ ಕೋಲಿನಿಂದ ಹೊಡೆದು ಸಾಯುವಂತೆ ಹೊಡೆದರೆ, ಅವನಿಗೆ ತಕ್ಕ ಶಿಕ್ಷೆಯಾಗಬೇಕು.
و اگر کسی غلام یاکنیز خود را به عصا بزند، و او زیر دست او بمیرد، هرآینه انتقام او گرفته شود.۲۰
21 ೨೧ ಆ ದಾಸನು ಆಗಲೇ ಸಾಯದೆ ಒಂದೆರಡು ದಿನ ಬದುಕಿದ್ದರೆ, ಯಜಮಾನನಿಗೆ ಶಿಕ್ಷೆಯನ್ನು ವಿಧಿಸಕೂಡದು. ಏಕೆಂದರೆ ಆ ದಾಸನು ಅವನ ಸೊತ್ತಾಗಿದ್ದಾನೆ.
لیکن اگر یک دوروز زنده بماند، از او انتقام کشیده نشود، زیرا که زرخرید اوست.۲۱
22 ೨೨ ಗಂಡಸರು ಜಗಳವಾಡುವಾಗ ಗರ್ಭಿಣಿಯಾದ ಹೆಂಗಸಿಗೆ ಏಟು ತಗಲಿದ್ದರಿಂದ ಅವಳಿಗೆ ಗರ್ಭಸ್ರಾವವಾದರೆ, ಆ ಸ್ತ್ರೀಯ ಗಂಡನು ಕೇಳಿದಷ್ಟು ಮತ್ತು ನ್ಯಾಯಾಲಯವು ವಿಧಿಸುವಷ್ಟು ದಂಡವನ್ನು ಹೊಡೆದವನು ಕೊಡಬೇಕು.
و اگر مردم جنگ کنند، و زنی حامله را بزنند، و اولاد او سقط گردد، و ضرری دیگر نشود، البته غرامتی بدهد موافق آنچه شوهرزن بدو گذارد، و به حضور داوران ادا نماید.۲۲
23 ೨೩ ಬೇರೆ ಹಾನಿಯಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಬೇಕು.
واگر اذیتی دیگر حاصل شود، آنگاه جان به عوض جان بده.۲۳
24 ೨೪ ಕಣ್ಣಿಗೆ ಕಣ್ಣನ್ನು, ಹಲ್ಲಿಗೆ ಹಲ್ಲನ್ನು, ಕೈಗೆ ಕೈಯನ್ನು, ಕಾಲಿಗೆ ಕಾಲನ್ನು,
و چشم به عوض چشم، و دندان به عوض دندان، و دست به عوض دست، و پا به عوض پا.۲۴
25 ೨೫ ಬರೆಗೆ ಬರೆಯನ್ನು, ಗಾಯಕ್ಕೆ ಗಾಯವನ್ನು, ಏಟಿಗೆ ಏಟನ್ನು ಪ್ರತಿಯಾಗಿ ಕೊಡಬೇಕು.
و داغ به عوض داغ، و زخم به عوض زخم، و لطمه به عوض لطمه.۲۵
26 ೨೬ ಯಾವನಾದರೂ ತನ್ನ ದಾಸನ ಅಥವಾ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೆ ಈಡಾಗಿ (ಬದಲಾಗಿ) ಅವರನ್ನು ಅವನು ಬಿಡುಗಡೆಮಾಡಿ ಕಳುಹಿಸಬೇಕು.
و اگر کسی چشم غلام یا چشم کنیز خود را بزند که ضایع شود، او را به عوض چشمش آزاد کند.۲۶
27 ೨೭ ಒಬ್ಬನು ದಾಸನ ಅಥವಾ ದಾಸಿಯ ಹಲ್ಲನ್ನು ಉದುರಿಸಿದರೆ ಹಲ್ಲಿಗೆ ಈಡಾಗಿ ಅವರನ್ನು ಬಿಡುಗಡೆಮಾಡಿ ಕಳುಹಿಸಬೇಕು.
و اگردندان غلام یا دندان کنیز خود را بیندازد او را به عوض دندانش آزاد کند.۲۷
28 ೨೮ ಯಾವುದಾದರೂ ಒಂದು ಎತ್ತು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ, ತಿವಿದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಬಾರದು. ಆದರೆ ಆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.
و هرگاه گاوی به شاخ خود مردی یا زنی را بزند که او بمیرد، گاو را البته سنگسار کنند، و گوشتش را نخورند و صاحب گاو بی‌گناه باشد.۲۸
29 ೨೯ ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅದು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಕೊಂದು ಹಾಕಿದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಅಲ್ಲದೆ ಅದರ ಯಜಮಾನನೂ ಮರಣದಂಡನೆಗೆ ಗುರಿಯಾಗುವನು.
و لیکن اگر گاو قبل از آن شاخ زن می‌بود، و صاحبش آگاه بود، و آن را نگاه نداشت، و او مردی یا زنی را کشت، گاو راسنگسار کنند، و صاحبش را نیز به قتل رسانند.۲۹
30 ೩೦ ಆದರೆ ಯಜಮಾನನಿಗೆ ಹಣವನ್ನು ನೇಮಿಸಿದರೆ ಅವನು ತನಗೆ ನೇಮಕವಾದ ಹಣವನ್ನು ಕೊಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಿ.
و اگر دیه بر او گذاشته شود، آنگاه برای فدیه جان خود هرآنچه بر او مقرر شود، ادا نماید.۳۰
31 ೩೧ ಆ ಎತ್ತು ಮಗನನ್ನಾಗಲಿ ಅಥವಾ ಮಗಳನ್ನಾಗಲಿ ತಿವಿದರೆ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.
خواه پسر خواه دختر را شاخ زده باشد، به حسب این حکم با او عمل کنند.۳۱
32 ೩೨ ದಾಸನನ್ನಾದರೂ ಅಥವಾ ದಾಸಿಯನ್ನಾದರೂ ಎತ್ತು ತಿವಿದರೆ ದಾಸನ ಅಥವಾ ದಾಸಿಯ ಯಜಮಾನನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
اگر گاو، غلامی یا کنیزی را بزند، سی مثقال نقره به صاحب او داده شود، و گاو سنگسار شود.۳۲
33 ೩೩ ಒಬ್ಬನು ಗುಂಡಿಯನ್ನು ಅಗೆದರೆ ಇಲ್ಲವೆ ಅಗೆದು ಅದನ್ನು ಮುಚ್ಚದೇ ಇದ್ದು ಅದರಲ್ಲಿ ಎತ್ತಾಗಲಿ, ಕತ್ತೆಯಾಗಲಿ ಆ ಗುಂಡಿಯಲ್ಲಿ ಬಿದ್ದು ಸತ್ತರೆ,
واگر کسی چاهی گشاید یا کسی چاهی حفر کند، وآن را نپوشاند، و گاوی یا الاغی در آن افتد،۳۳
34 ೩೪ ಆ ಗುಂಡಿಯನ್ನು ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡು ಕೊಡಬೇಕು. ಎತ್ತಿನ ಯಜಮಾನನಿಗೆ ತೃಪ್ತಿಯಾಗುವಷ್ಟು ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.
صاحب چاه عوض او را بدهد، و قیمتش را به صاحبش ادا نماید، و میته از آن او باشد.۳۴
35 ೩೫ ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದು ಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನೂ ಇಬ್ಬರೂ ಸಮವಾಗಿ ಹಂಚಿಕೊಳ್ಳಬೇಕು.
و اگرگاو شخصی، گاو همسایه او را بزند، و آن بمیردپس گاو زنده را بفروشند، و قیمت آن را تقسیم کنند، و میته را نیز تقسیم نمایند،۳۵
36 ೩೬ ಆದರೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ಅದರ ಯಜಮಾನನಿಗೆ ತಿಳಿದಿದ್ದರೂ ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅವನು ಎತ್ತಿಗೆ ಪ್ರತಿಯಾಗಿ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.
اما اگر معلوم بوده باشد که آن گاو قبل از آن شاخ زن می‌بود، وصاحبش آن را نگاه نداشت، البته گاو به عوض گاو بدهد و میته از آن او باشد.۳۶

< ವಿಮೋಚನಕಾಂಡ 21 >