< ವಿಮೋಚನಕಾಂಡ 22 >
1 ೧ ಒಬ್ಬನು ಎತ್ತನ್ನಾಗಲಿ, ಕುರಿಯನ್ನಾಗಲಿ ಕದ್ದುಕೊಂಡು ಕೊಯ್ದರೆ ಇಲ್ಲವೆ ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನು ಒಂದು ಕುರಿಗೆ ಬದಲಾಗಿ ನಾಲ್ಕು ಕುರಿಗಳನ್ನು ಕೊಡಬೇಕು.
১যে কেউ গরু অথবা ভেড়া চুরি করে এবং হত্যা করে অথবা বিক্রি করে, সে একটি গরুর পরিবর্তে পাঁচটি গরু, ও একটি ভেড়ার পরিবর্তে চারটি ভেড়া দেবে।
2 ೨ ಒಬ್ಬ ಕಳ್ಳನು ಕಳ್ಳತನ ಮಾಡುತ್ತಿರುವಾಗಲೇ ಕೈಗೆ ಸಿಕ್ಕಿದಾಗ ಅವನನ್ನು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಕೂಡದು.
২আর একটি চোর যদি সিঁধ কাটবার দিন ধরা পড়ে এবং যদি আহত হয় ও মরে যায়, তবে তার হত্যার জন্য কোনো দোষ হবে না।
3 ೩ ಸೂರ್ಯೋದಯವಾದ ನಂತರ ಒಬ್ಬನು ಕಳ್ಳತನಮಾಡಿ ಸಿಕ್ಕಿಬಿದ್ದಾಗ, ಅವನನ್ನು ಹೊಡೆದು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಬೇಕು. ಅವನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂತಿರುಗಿಸಬೇಕು. ಅವನಲ್ಲಿ ಕೊಡಲು ಏನೂ ಇಲ್ಲದ ಪಕ್ಷಕ್ಕೆ ಅವನು ಆ ಕಳ್ಳತನ ಮಾಡಿದ್ದರಿಂದ ಗುಲಾಮನಾಗಿ ಮಾರಲ್ಪಡಬೇಕು.
৩কিন্তু যদি তার উপরে সূর্য্য উদয় হয়, তবে হত্যার দোষ তার হবে; ক্ষতিপূরণ করা চোরের কর্তব্য; যদি তার কিছু না থাকে, তবে চুরি করার কারণে সে বিক্রীত হবে।
4 ೪ ಕಳ್ಳತನ ಮಾಡಿದ ಎತ್ತಾಗಲಿ, ಕತ್ತೆಯಾಗಲಿ, ಆಡು, ಕುರಿಯಾದರೂ ಜೀವದಿಂದಲೇ ಕದ್ದವನ ಬಳಿಯಲ್ಲಿ ಸಿಕ್ಕಿದರೆ ಅವನು ಎರಡರಷ್ಟು ಈಡು ಕೊಡಬೇಕು.
৪গরু, গাধা বা ভেড়া, চুরির কোনো পশু যদি চোরের হাতে জীবিত অবস্থায় পাওয়া যায়, তবে তাকে তার দ্বিগুন দিতে হবে।
5 ೫ ಒಬ್ಬನು ತನ್ನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ತನ್ನ ದನಗಳನ್ನು ಮೇಯಿಸಿ, ಮತ್ತೊಬ್ಬನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ಮೇಯುವಂತೆ ಮಾಡಿದರೆ, ತನ್ನ ಹೊಲದ ಅಥವಾ ದ್ರಾಕ್ಷಿತೋಟದ ಉತ್ತಮ ಭಾಗವನ್ನು ಅವನಿಗೆ ಈಡು ಕೊಡಬೇಕು.
৫কেউ যদি শস্যক্ষেত্রে অথবা আঙ্গুরক্ষেত্রে পশু চরায়, আর নিজের পশু ছেড়ে দিলে যদি তা অন্য লোকের ক্ষেত্রে চরে, তবে সেই ব্যক্তি নিজের ক্ষেত্রের ভালো শস্য অথবা নিজের আঙ্গুরক্ষেত্রের ভালো ফল দিয়ে ক্ষতিপূরণ দেবে।
6 ೬ ಒಬ್ಬನು ಹೊತ್ತಿಸಿದ ಬೆಂಕಿ ಆಕಸ್ಮಾತ್ತಾಗಿ ಮುಳ್ಳಿನ ಗಿಡಗಳಿಗೆ ಬೆಂಕಿ ಹತ್ತಿಕೊಂಡು ಮತ್ತೊಬ್ಬನ ದವಸದ ರಾಶಿಗಳಾಗಲಿ, ಬೆಳೆಯಾಗಲಿ, ಹೊಲವಾಗಲಿ ಸುಟ್ಟು ಹೋದರೆ ಬೆಂಕಿ ಹೊತ್ತಿಸಿದವನು ಅದಕ್ಕೆ ಈಡುಕೊಡಬೇಕು.
৬আগুন কাঁটাবনে লাগলে যদি কারও শস্যরাশি অথবা শস্যের ঝাড় অথবা বাগান পুড়ে যায়, তবে সেই যে আগুন লাগায় অবশ্য ক্ষতিপূরণ দেবে।
7 ೭ ಒಬ್ಬನು ಹಣವನ್ನಾಗಲಿ, ಒಡವೆಗಳನ್ನಾಗಲಿ ಕಾಪಾಡುವುದಕ್ಕೆ ಮತ್ತೊಬ್ಬನಿಗೆ ಒಪ್ಪಿಸಿದಾಗ ಅದು ಆ ಮನುಷ್ಯನ ಮನೆಯಲ್ಲಿ ಕಳ್ಳತನವಾಗಿ, ಕಳ್ಳನು ಸಿಕ್ಕಿಕೊಂಡರೆ ಎರಡರಷ್ಟು ದಂಡವನ್ನು ಕೊಡಬೇಕು.
৭কোনো ব্যক্তি টাকা অথবা জিনিসপত্র নিজের প্রতিবেশীর কাছে গচ্ছিত রাখলে যদি তার ঘর থেকে কেউ সেটা চুরি করে এবং সেই চোরটি ধরা পড়ে, তবে সেই চোরকে তার দ্বিগুন দিতে হবে।
8 ೮ ಕಳ್ಳನು ಸಿಕ್ಕದೇ ಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ದೃಢಪಡಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.
৮কিন্তু যদি চোরটি না ধরা পড়ে, তবে সেই বাড়ির মালিক প্রতিবেশীর সম্পত্তিতে হাত দিয়েছে কিনা, তা জানবার জন্য তাকে বিচারকের সামনে বিচারের জন্য আসতে হবে।
9 ೯ ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದರ ವಿಷಯದಲ್ಲಿಯೂ, ಅದು ಎತ್ತು, ಕತ್ತೆ, ಕುರಿ ಅಥವಾ ಬಟ್ಟೆಗಳ ವಿಷಯವಾದರೂ, ಕಳೆದುಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ, ಇಬ್ಬರು ಅದು ತಮ್ಮದೆಂದು ಹೇಳುವಾಗ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುತ್ತಾನೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.
৯সব প্রকার অপরাধের জন্য, অর্থাৎ গরু বা গাধা, ভেড়া, কাপড়, বা কোনো হারিয়ে যাওয়া জিনিসের বিষয়ে যদি কেউ বলে, এটি আমার জিনিস, তবে উভয় পক্ষের কথা বিচারকের কাছে নিয়ে আসতে হবে; বিচারক যাকে দোষী করবেন, তাকে নিজের প্রতিবেশীকে তার দ্বিগুন দিতে হবে।
10 ೧೦ ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾಗಲಿ, ಎತ್ತನ್ನಾಗಲಿ, ಕುರಿಯನ್ನಾಗಲಿ ಬೇರೆ ಯಾವ ಪಶುವನ್ನಾಗಲಿ ಕಾಪಾಡುವುದಕ್ಕೆ ಕೊಟ್ಟಿದ್ದು, ಅದು ಸತ್ತರೆ ಇಲ್ಲವೆ ಗಾಯಗೊಂಡರೆ ಇಲ್ಲವೆ ಯಾರೂ ತಿಳಿಯದಂತೆ ಕಳ್ಳತನವಾದರೆ,
১০যদি একজন ব্যক্তি নিজের গাধা, গরু, ভেড়া অথবা কোন পশু প্রতিবেশীর কাছে পালন করার জন্য রাখে এবং লোকের অজানায় সেই পশু মরে যায়, বা কোনো অঙ্গ ভেঙে যায় অথবা দূরে কোথাও নিয়ে যাওয়া হয়,
11 ೧೧ ಆ ಮನುಷ್ಯನು ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲ ಎಂಬುದನ್ನು ದೃಢಪಡಿಸುವುದಕ್ಕಾಗಿ ಯೆಹೋವನ ಮೇಲೆ ಪ್ರಮಾಣಮಾಡಬೇಕು. ಆಗ ಪಶುವಿನ ಒಡೆಯನು ಆ ಪ್ರಮಾಣವಾಕ್ಯವನ್ನು ನಂಬಬೇಕು. ಪ್ರಮಾಣಮಾಡಿದವನು ಅದಕ್ಕೆ ಈಡುಕೊಡಬೇಕಾದ ಅಗತ್ಯವಿರುವುದಿಲ್ಲ.
১১তবে আমি প্রতিবেশীর জিনিসে হাত দেয়নি, এই কথা বলে একজন অন্য জনের কাছে সদাপ্রভুর নামে শপথ করবে; আর পশুর মালিক সেই জিনিস গ্রহণ করবে এবং ঐ ব্যক্তিকে ক্ষতিপূরণ দিতে হবে না।
12 ೧೨ ಆದರೆ ಆ ಪಶುವು ಅವನ ಬಳಿಯಿಂದ ಕಳವಾದರೆ ಆ ವ್ಯಕ್ತಿ ಅದರ ಯಜಮಾನನಿಗೆ ಪ್ರತಿಯಾಗಿ ಈಡುಕೊಡಬೇಕು.
১২কিন্তু যদি তার কাছ থেকে সেটি চুরি হয়ে যায়, তবে সে তার মালিককে অবশ্যই ক্ষতিপূরণ দেবে।
13 ೧೩ ಕಾಡುಮೃಗವು ಆ ಪಶುವನ್ನು ಕೊಂದಿದ್ದರೆ, ಅದರ ಹೆಣವನ್ನು ಗುರುತಿಗಾಗಿ ತೋರಿಸಲಿ. ಕಾಡುಮೃಗ ಕೊಂದಿದ್ದಕ್ಕೆ ಈಡು ಕೊಡಬೇಕಾದ ಅಗತ್ಯವಿಲ್ಲ.
১৩যদি একটি পশুকে টুকরো করা হয়, তবে সে প্রমাণের জন্য তা উপস্থিত করুক; সেই টুকরো করা পশুর জন্য সে ক্ষতিপূরণ দেবে না।
14 ೧೪ ಒಬ್ಬನು ಮತ್ತೊಬ್ಬನಿಂದ ಪಶುವನ್ನು ಸ್ವಲ್ಪ ಕಾಲಕ್ಕೆ ಬಾಡಿಗೆಗೆ ತೆಗೆದುಕೊಂಡಿರಲಾಗಿ ಆ ಪಶುವಿನ ಒಡೆಯನು ಅದರ ಹತ್ತಿರವಿಲ್ಲದ ಸಮಯದಲ್ಲಿ ಅದು ಗಾಯಗೊಂಡರೆ ಇಲ್ಲವೆ ಸತ್ತುಹೋದರೆ ಸಾಲ ತೆಗೆದುಕೊಂಡವನು ಈಡುಕೊಡಬೇಕು.
১৪আর কেউ যদি নিজের প্রতিবেশীর পশু চেয়ে নেয়, ও তার মালিক তার সঙ্গে না থাকার দিনের পশুটির কোনো অঙ্গ ভেঙে যায় অথবা মরে যায়, তবে সেই অন্য ব্যক্তিকে অবশ্যই ক্ষতিপূরণ দিতে হবে।
15 ೧೫ ಯಜಮಾನನು ಅದರ ಹತ್ತಿರದಲ್ಲೇ ಇದಿದ್ದರೆ, ಅವನಿಗೆ ಈಡುಕೊಡಬೇಕಾದ ಅಗತ್ಯವಿಲ್ಲ. ಅದನ್ನು ಬಾಡಿಗೆಗೆ ತೆಗೆದುಕೊಂಡಿದ್ದರೆ ಅದಕ್ಕೆ ಉಂಟಾದ ನಷ್ಟವು ಬಾಡಿಗೆಯ ಲೆಕ್ಕಕ್ಕೆ ಎಣಿಕೆಯಾಗಬೇಕು.
১৫যদি তার মালিক তার সঙ্গে থাকে, তবে তাকে ক্ষতিপূরণ দিতে হবে না; যদি তা ভাড়া করা পশু হয়, তবে তার ভাড়াতেই শোধ হবে।
16 ೧೬ ನಿಶ್ಚಿತಾರ್ಥವಾಗದ ಹೆಣ್ಣನ್ನು ಒಬ್ಬನು ಮರುಳುಗೊಳಿಸಿ ಸಂಗಮಿಸಿದರೆ ಅವಳಿಗೋಸ್ಕರ ತಕ್ಕ ತೆರವನ್ನು ಕೊಟ್ಟು ಅವಳನ್ನು ಮದುವೆಮಾಡಿಕೊಳ್ಳಬೇಕು.
১৬আর যদি কেউ বাগদত্তা নয় এমন কুমারীকে ভুলিয়ে তার সঙ্গে শয়ন করে, তবে সে অবশ্যই মেয়েকে পণ দিয়ে তাকে বিয়ে করবে।
17 ೧೭ ಅವಳ ತಂದೆ ಅವಳನ್ನು ಅವನಿಗೆ ಕೊಡುವುದಕ್ಕೆ ಒಪ್ಪದೇ ಹೋದರೆ ಆ ಮನುಷ್ಯನು ತಕ್ಕ ಹಣವನ್ನು ದಂಡವಾಗಿ ಕೊಡಬೇಕು.
১৭যদি সেই ব্যক্তির সঙ্গে নিজের মেয়ের বিয়ে দিতে বাবা নিতান্তই রাজি না হয়, তবে কন্যার পণের ব্যবস্থানুযায়ী তাকে টাকা দিতে হবে।
18 ೧೮ ಮಾಟಗಾರ್ತಿಯನ್ನು ಜೀವದಿಂದ ಉಳಿಸಬಾರದು.
১৮তুমি জাদুকারীকে জীবিত রেখো না।
19 ೧೯ ಪಶುಸಂಗ ಮಾಡಿದವನಿಗೆ ಮರಣಶಿಕ್ಷೆಯಾಗಬೇಕು.
১৯পশুর সঙ্গে যে যৌনকর্মে লিপ্ত সেই ব্যক্তিকে অবশ্যই মৃত্যুদণ্ড দেওয়া হবে।
20 ೨೦ ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.
২০যে ব্যক্তি সদাপ্রভুর ছাড়া অন্য কোনো দেবতার কাছে বলিদান করে, সে সম্পূর্ণভাবে বিনষ্ট হবে।
21 ೨೧ ಪರದೇಶದವನಿಗೆ ಅನ್ಯಾಯ ಮಾಡಬಾರದು ಉಪದ್ರವ ಕೊಡಬಾರದು ನೀವು ಐಗುಪ್ತ ದೇಶದಲ್ಲಿ ಪರದೇಶಿಗಳಾಗಿದ್ದೀರಲ್ಲವೇ?
২১তুমি বিদেশীদের উপর কোনো অন্যায় কোরো না অথবা তার উপর নির্যাতন কোরো না, কারণ তোমরাও মিশর দেশে বিদেশী হয়ে ছিলে।
22 ೨೨ ವಿಧವೆಯರನ್ನಾಗಲಿ, ದಿಕ್ಕಿಲ್ಲದ ಮಕ್ಕಳನ್ನಾಗಲಿ, ತೊಂದರೆಪಡಿಸಬಾರದು.
২২তোমরা কোন বিধবাকে অথবা বাবা নেই এমন শিশুকে দুঃখ দিও না।
23 ೨೩ ನೀವು ಇಂಥವರನ್ನು ತೊಂದರೆಪಡಿಸಿದರೆ ಅವರು ನನಗೆ ಮೊರೆಯಿಡುವರು ಆ ಮೊರೆಗೆ ನಾನು ಕಿವಿಗೊಡುವೆನೆಂದು ತಿಳಿದುಕೊಳ್ಳಿರಿ.
২৩তাদেরকে কোন ভাবে দুঃখ দিলে যদি তারা আমার কাছে কাঁদে, তবে আমি সদাপ্রভু অবশ্যই তাদের কান্না শুনব;
24 ೨೪ ನಾನು ಕೋಪಗೊಂಡು ನಿಮ್ಮ ಶತ್ರುಗಳನ್ನು ಕತ್ತಿಯಿಂದ ಸಂಹಾರಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಯರಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.
২৪আর আমার ক্রোধ জ্বলে উঠবে এবং আমি তোমাদেরকে তরোয়াল দিয়ে হত্যা করব, তাতে তোমাদের স্ত্রীরা বিধবা হবে এবং তোমাদের সন্তানেরা পিতাহীন হবে।
25 ೨೫ ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಹಣ ಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.
২৫যদি তুমি আমার লোকদের মধ্যে তোমাদের নিজের জাতির মধ্যে এমন কাউকে টাকা ধার দাও, তবে তার কাছে তোমরা সুদ গ্রহীতার মতো হয়ো না অথবা তোমরা তার উপরে সুদ চাপিয়ে দিয়ো না।
26 ೨೬ ನೀನು ಒಬ್ಬನ ಕಂಬಳಿಯನ್ನು ಅಡವು ಇಟ್ಟುಕೊಂಡರೆ ಸೂರ್ಯನು ಮುಳುಗುವಷ್ಟರಲ್ಲಿ ಅದನ್ನು ಹಿಂದಕ್ಕೆ ಕೊಡಬೇಕು.
২৬যদি তুমি নিজের প্রতিবেশীর পোষাক বন্ধক রাখ, তবে সুর্য্য অস্ত যাওয়ার আগে তা ফিরিয়ে দিও; কারণ তা তার একমাত্র আচ্ছাদন,
27 ೨೭ ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಬೇರೆ ಯಾವುದನ್ನು ಹೊದ್ದುಕೊಂಡು ಮಲಗಬೇಕು? ಅವನು ನನಗೆ ಮೊರೆಯಿಟ್ಟರೆ ನಾನು ಕಿವಿಗೊಟ್ಟು ಕೇಳುವೆನು. ಏಕೆಂದರೆ ನಾನು ದಯಾಪರನು.
২৭এটা তার গায়ের একমাত্র পোষাক; সে আর কিসের উপর শোবে? আর যখন সে আমার কাছে কাঁদবে, আমি তার কান্না শুনব, কারণ আমি দয়ালু।
28 ೨೮ ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.
২৮তুমি আমাকে অর্থাৎ ঈশ্বরকে ধিক্কার দেবে না এবং তোমার লোকদের অধ্যক্ষকে অভিশাপ দিও না।
29 ೨೯ ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು.
২৯তোমার পাকা ফসল ও দ্রাক্ষারস অর্পণ করতে দেরী কোরো না। তোমার প্রথমজাত পুত্রদের অবশ্যই আমাকে দেবে।
30 ೩೦ ಅದರಂತೆಯೇ ನಿಮ್ಮ ಕುರಿ, ದನಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳು ದಿನಗಳ ಕಾಲ ಆ ಮರಿ ತನ್ನ ತಾಯಿಯೊಂದಿಗಿರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.
৩০তোমার গরু ও ভেড়া সমন্ধেও সেইরূপ কোরো; কারণ তা সাত দিন নিজের মায়ের সঙ্গে থাকবে, কিন্তু আট দিনের র দিন তুমি তা আমাকে দেবে।
31 ೩೧ ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದುದರಿಂದ ಕಾಡುಮೃಗ ಕೊಂದದ್ದನ್ನು ನೀವು ತಿನ್ನಬಾರದು, ಅದನ್ನು ನಾಯಿಗಳಿಗೆ ಬಿಡಬೇಕು.
৩১আর তোমরা আমার জন্য পবিত্র লোক হবে; সুতরাং ক্ষেত্রে পড়ে থাকা কোনো বিদীর্ণ মাংস খাবে না; পরিবর্তে তা কুকুরের কাছে ছুঁড়ে ফেলে দেবে।