< ವಿಮೋಚನಕಾಂಡ 23 >

1 ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.
לֹ֥א תִשָּׂ֖א שֵׁ֣מַע שָׁ֑וְא אַל־תָּ֤שֶׁת יָֽדְךָ֙ עִם־רָשָׁ֔ע לִהְיֹ֖ת עֵ֥ד חָמָֽס׃ ס
2 ದುಷ್ಟ ಕಾರ್ಯವನ್ನು ಮಾಡುವವರು ಬಹಳಮಂದಿ ಇದ್ದಾರೆ, ಆದಾಗ್ಯೂ ನೀವು ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.
לֹֽא־תִהְיֶ֥ה אַחֲרֵֽי־רַבִּ֖ים לְרָעֹ֑ת וְלֹא־תַעֲנֶ֣ה עַל־רִ֗ב לִנְטֹ֛ת אַחֲרֵ֥י רַבִּ֖ים לְהַטֹּֽת׃
3 ಇದಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು.
וְדָ֕ל לֹ֥א תֶהְדַּ֖ר בְּרִיבֹֽו׃ ס
4 ನಿನ್ನ ವೈರಿಯ ಎತ್ತಾಗಲಿ, ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗಿರಲಾಗಿ ಅದು ನಿನಗೆ ಸಿಕ್ಕಿದರೆ ಅದನ್ನು ಅವನ ಬಳಿಗೆ ಹೋಗಿ ಒಪ್ಪಿಸಬೇಕು.
כִּ֣י תִפְגַּ֞ע שֹׁ֧ור אֹֽיִבְךָ֛ אֹ֥ו חֲמֹרֹ֖ו תֹּעֶ֑ה הָשֵׁ֥ב תְּשִׁיבֶ֖נּוּ לֹֽו׃ ס
5 ನಿನ್ನನ್ನು ಹಗೆಮಾಡುವವನ ಕತ್ತೆಯ ಹೊರೆಯ ಕೆಳಗೆ ಬಿದ್ದಿರುವುದನ್ನು ಕಂಡರೆ, ಅದನ್ನು ಎಬ್ಬಿಸುವುದಕ್ಕೆ ಮನಸ್ಸಿಲ್ಲದಿದ್ದರೂ ಅವನಿಗೆ ಸಹಾಯ ಮಾಡಿ ಎಬ್ಬಿಸಲೇಬೇಕು.
כִּֽי־תִרְאֶ֞ה חֲמֹ֣ור שֹׂנַאֲךָ֗ רֹבֵץ֙ תַּ֣חַת מַשָּׂאֹ֔ו וְחָדַלְתָּ֖ מֵעֲזֹ֣ב לֹ֑ו עָזֹ֥ב תַּעֲזֹ֖ב עִמֹּֽו׃ ס
6 ನಿಮ್ಮಲ್ಲಿರುವ ಬಡವರ ನ್ಯಾಯಕೋರಿ ನಿಮ್ಮ ಬಳಿಗೆ ಬಂದಾಗ ನೀವು ಅನ್ಯಾಯವಾಗಿ ತೀರ್ಮಾನಮಾಡಬಾರದು.
לֹ֥א תַטֶּ֛ה מִשְׁפַּ֥ט אֶבְיֹנְךָ֖ בְּרִיבֹֽו׃
7 ಮೋಸದ ಕಾರ್ಯಕ್ಕೆ ದೂರವಾಗಿರಬೇಕು. ನಿರಪರಾಧಿಯೂ, ನೀತಿವಂತನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇಬಾರದು. ಅಂಥ ದುಷ್ಟನಿಗೆ ನಾನು ಶಿಕ್ಷೆಯನ್ನು ವಿಧಿಸದೇ ಬಿಡುವುದಿಲ್ಲ.
מִדְּבַר־שֶׁ֖קֶר תִּרְחָ֑ק וְנָקִ֤י וְצַדִּיק֙ אַֽל־תַּהֲרֹ֔ג כִּ֥י לֹא־אַצְדִּ֖יק רָשָֽׁע׃
8 ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.
וְשֹׁ֖חַד לֹ֣א תִקָּ֑ח כִּ֤י הַשֹּׁ֙חַד֙ יְעַוֵּ֣ר פִּקְחִ֔ים וִֽיסַלֵּ֖ף דִּבְרֵ֥י צַדִּיקִֽים׃
9 ಪರದೇಶದವನಿಗೆ ಉಪದ್ರವವನ್ನು ಕೊಡಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶದವರಾಗಿದ್ದೀರಷ್ಟೇ. ಅಂಥವರ ಮನೋವ್ಯಥೆಯನ್ನು ತಿಳಿದವರಾಗಿದ್ದೀರಿ.
וְגֵ֖ר לֹ֣א תִלְחָ֑ץ וְאַתֶּ֗ם יְדַעְתֶּם֙ אֶת־נֶ֣פֶשׁ הַגֵּ֔ר כִּֽי־גֵרִ֥ים הֱיִיתֶ֖ם בְּאֶ֥רֶץ מִצְרָֽיִם׃
10 ೧೦ ಆರು ವರ್ಷ ನಿಮ್ಮ ಹೊಲವನ್ನು ಬಿತ್ತನೆಮಾಡಿ ಅದರ ಬೆಳೆಯನ್ನು ತೆಗೆದುಕೊಳ್ಳಿರಿ.
וְשֵׁ֥שׁ שָׁנִ֖ים תִּזְרַ֣ע אֶת־אַרְצֶ֑ךָ וְאָסַפְתָּ֖ אֶת־תְּבוּאָתָֽהּ׃
11 ೧೧ ಆದರೆ ಏಳನೆಯ ವರ್ಷದಲ್ಲಿ ಆ ಭೂಮಿಯನ್ನು ಉಳದೆ ಬೀಳುಬಿಡಬೇಕು. ನಿಮ್ಮ ದೇಶದ ಬಡವರು ಅದರಲ್ಲಿ ಬೆಳೆಯುವುದನ್ನು ತಿನ್ನಲಿ. ಮಿಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳ ಮತ್ತು ಎಣ್ಣೇ ಮರಗಳ ತೋಪುಗಳ ವಿಷಯದಲ್ಲಿಯೂ ಇದೇ ರೀತಿಯಲ್ಲಿ ಮಾಡಬೇಕು.
וְהַשְּׁבִיעִ֞ת תִּשְׁמְטֶ֣נָּה וּנְטַשְׁתָּ֗הּ וְאָֽכְלוּ֙ אֶבְיֹנֵ֣י עַמֶּ֔ךָ וְיִתְרָ֕ם תֹּאכַ֖ל חַיַּ֣ת הַשָּׂדֶ֑ה כֵּֽן־תַּעֲשֶׂ֥ה לְכַרְמְךָ֖ לְזֵיתֶֽךָ׃
12 ೧೨ ಆರು ದಿನಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನು ಮಾಡದೇ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳು, ಕತ್ತೆಗಳು, ದಾಸ, ದಾಸಿಯರು, ಪರದೇಶಸ್ಥರು ವಿಶ್ರಮಿಸಿಕೊಳ್ಳಲಿ.
שֵׁ֤שֶׁת יָמִים֙ תַּעֲשֶׂ֣ה מַעֲשֶׂ֔יךָ וּבַיֹּ֥ום הַשְּׁבִיעִ֖י תִּשְׁבֹּ֑ת לְמַ֣עַן יָנ֗וּחַ שֹֽׁורְךָ֙ וַחֲמֹרֶ֔ךָ וְיִנָּפֵ֥שׁ בֶּן־אֲמָתְךָ֖ וְהַגֵּֽר׃
13 ೧೩ ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಕೊಳ್ಳಬೇಕು. ಅನ್ಯ ದೇವರುಗಳ ಹೆಸರುಗಳನ್ನು ಸ್ಮರಿಸಬಾರದು, ಅವುಗಳನ್ನು ಉಚ್ಚರಿಸಬಾರದು.
וּבְכֹ֛ל אֲשֶׁר־אָמַ֥רְתִּי אֲלֵיכֶ֖ם תִּשָּׁמֵ֑רוּ וְשֵׁ֨ם אֱלֹהִ֤ים אֲחֵרִים֙ לֹ֣א תַזְכִּ֔ירוּ לֹ֥א יִשָּׁמַ֖ע עַל־פִּֽיךָ׃
14 ೧೪ ನೀವು ವರ್ಷಕ್ಕೆ ಮೂರಾವರ್ತಿ ನನಗೆ ಹಬ್ಬಮಾಡಬೇಕು.
שָׁלֹ֣שׁ רְגָלִ֔ים תָּחֹ֥ג לִ֖י בַּשָּׁנָֽה׃
15 ೧೫ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ತಿಂಗಳಲ್ಲಿಯೇ ಐಗುಪ್ತ ದೇಶದಿಂದ ಹೊರಟು ಬಂದ ನೆನಪಿಗಾಗಿ ಇದನ್ನು ಆಚರಿಸಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಬರಿಗೈಯಲ್ಲಿ ನನ್ನ ಸನ್ನಿಧಿಗೆ ಯಾರು ಬರಬಾರದು.
אֶת־חַ֣ג הַמַּצֹּות֮ תִּשְׁמֹר֒ שִׁבְעַ֣ת יָמִים֩ תֹּאכַ֨ל מַצֹּ֜ות כּֽ͏ַאֲשֶׁ֣ר צִוִּיתִ֗ךָ לְמֹועֵד֙ חֹ֣דֶשׁ הָֽאָבִ֔יב כִּי־בֹ֖ו יָצָ֣אתָ מִמִּצְרָ֑יִם וְלֹא־יֵרָא֥וּ פָנַ֖י רֵיקָֽם׃
16 ೧೬ ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ಹೊಲ ತೋಟಗಳ ಬೆಳೆಯನ್ನೂ ಕೂಡಿಸುವಾಗ ಅಂದರೆ ವರ್ಷದ ಕೊನೆಯಲ್ಲಿ ಸುಗ್ಗಿ ಹಬ್ಬವನ್ನು ಆಚರಿಸಬೇಕು.
וְחַ֤ג הַקָּצִיר֙ בִּכּוּרֵ֣י מַעֲשֶׂ֔יךָ אֲשֶׁ֥ר תִּזְרַ֖ע בַּשָּׂדֶ֑ה וְחַ֤ג הָֽאָסִף֙ בְּצֵ֣את הַשָּׁנָ֔ה בְּאָסְפְּךָ֥ אֶֽת־מַעֲשֶׂ֖יךָ מִן־הַשָּׂדֶֽה׃
17 ೧೭ ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಕರ್ತನಾದ ಯೆಹೋವನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕು.
שָׁלֹ֥שׁ פְּעָמִ֖ים בַּשָּׁנָ֑ה יֵרָאֶה֙ כָּל־זְכ֣וּרְךָ֔ אֶל־פְּנֵ֖י הָאָדֹ֥ן ׀ יְהוָֽה׃
18 ೧೮ ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಹಬ್ಬದಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪಶುವಿನ ಕೊಬ್ಬನ್ನು ಮರುದಿನದವರೆಗೆ ಇಡಲೇಬಾರದು.
לֹֽא־תִזְבַּ֥ח עַל־חָמֵ֖ץ דַּם־זִבְחִ֑י וְלֹֽא־יָלִ֥ין חֵֽלֶב־חַגִּ֖י עַד־בֹּֽקֶר׃
19 ೧೯ ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.
רֵאשִׁ֗ית בִּכּוּרֵי֙ אַדְמָ֣תְךָ֔ תָּבִ֕יא בֵּ֖ית יְהוָ֣ה אֱלֹהֶ֑יךָ לֹֽא־תְבַשֵּׁ֥ל גְּדִ֖י בַּחֲלֵ֥ב אִמֹּֽו׃ ס
20 ೨೦ ಇಗೋ ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೂ, ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆತರುವುದಕ್ಕೂ ದೂತನನ್ನು ನಿಮ್ಮ ಮುಂದಾಗಿ ಕಳುಹಿಸಿದ್ದೇನೆ.
הִנֵּ֨ה אָנֹכִ֜י שֹׁלֵ֤חַ מַלְאָךְ֙ לְפָנֶ֔יךָ לִשְׁמָרְךָ֖ בַּדָּ֑רֶךְ וְלַהֲבִ֣יאֲךָ֔ אֶל־הַמָּקֹ֖ום אֲשֶׁ֥ר הֲכִנֹֽתִי׃
21 ೨೧ ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ವಿಧೇಯರಾಗಿರಬೇಕು. ಆತನನ್ನು ಧಿಕ್ಕರಿಸಿದರೆ ನಿಮ್ಮ ಅಪರಾಧವನ್ನು ಕ್ಷಮಿಸಲಾರನು. ನನ್ನ ನಾಮಮಹಿಮೆ ಆತನಲ್ಲಿ ಇರುವುದು.
הִשָּׁ֧מֶר מִפָּנָ֛יו וּשְׁמַ֥ע בְּקֹלֹ֖ו אַל־תַּמֵּ֣ר בֹּ֑ו כִּ֣י לֹ֤א יִשָּׂא֙ לְפִשְׁעֲכֶ֔ם כִּ֥י שְׁמִ֖י בְּקִרְבֹּֽו׃
22 ೨೨ ನೀವು ಆತನ ಮಾತುಗಳನ್ನು ಶ್ರದ್ಧೆಯಿಂದ ಆಲಿಸಿ ನನ್ನ ಆಜ್ಞೆಗಳ ಪ್ರಕಾರ ನಡೆದುಕೊಂಡರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ, ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.
כִּ֣י אִם־שָׁמֹ֤עַ תִּשְׁמַע֙ בְּקֹלֹ֔ו וְעָשִׂ֕יתָ כֹּ֖ל אֲשֶׁ֣ר אֲדַבֵּ֑ר וְאָֽיַבְתִּי֙ אֶת־אֹ֣יְבֶ֔יךָ וְצַרְתִּ֖י אֶת־צֹרְרֶֽיךָ׃
23 ೨೩ ನನ್ನ ದೂತನು ನಿಮ್ಮ ಮುಂದಾಗಿ ಹೊರಟು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು, ಯೆಬೂಸಿಯರೂ ಇರುವ ದೇಶಕ್ಕೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲಮಾಡುವೆನು.
כִּֽי־יֵלֵ֣ךְ מַלְאָכִי֮ לְפָנֶיךָ֒ וֶהֱבִֽיאֲךָ֗ אֶל־הָֽאֱמֹרִי֙ וְהַ֣חִתִּ֔י וְהַפְּרִזִּי֙ וְהַֽכְּנַעֲנִ֔י הַחִוִּ֖י וְהַיְבוּסִ֑י וְהִכְחַדְתִּֽיו׃
24 ೨೪ ಅವರ ದೇವತೆಗಳಿಗೆ ನೀವು ಅಡ್ಡಬಿದ್ದು ನಮಸ್ಕರಿಸಲೂ ಬಾರದು, ಅವರ ಆಚರಣೆಗಳನ್ನು ಅನುಸರಿಸಲೇ ಬಾರದು. ಆ ಜನಗಳನ್ನು ನಿರ್ಮೂಲಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.
לֹֽא־תִשְׁתַּחֲוֶ֤ה לֵאלֹֽהֵיהֶם֙ וְלֹ֣א תָֽעָבְדֵ֔ם וְלֹ֥א תַעֲשֶׂ֖ה כְּמַֽעֲשֵׂיהֶ֑ם כִּ֤י הָרֵס֙ תְּהָ֣רְסֵ֔ם וְשַׁבֵּ֥ר תְּשַׁבֵּ֖ר מַצֵּבֹתֵיהֶֽם׃
25 ೨೫ ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು.
וַעֲבַדְתֶּ֗ם אֵ֚ת יְהוָ֣ה אֱלֹֽהֵיכֶ֔ם וּבֵרַ֥ךְ אֶֽת־לַחְמְךָ֖ וְאֶת־מֵימֶ֑יךָ וַהֲסִרֹתִ֥י מַחֲלָ֖ה מִקִּרְבֶּֽךָ׃
26 ೨೬ ನಿಮ್ಮ ದೇಶದಲ್ಲಿ ಗರ್ಭಪಾತವಾಗಲಿ, ಬಂಜೆತನವಾಗಲಿ ಇರುವುದೇ ಇಲ್ಲ. ನಿಮಗೆ ಸಂಪೂರ್ಣವಾದ ಆಯುಷ್ಯವನ್ನು ದಯಪಾಲಿಸುವೆನು.
לֹ֥א תִהְיֶ֛ה מְשַׁכֵּלָ֥ה וַעֲקָרָ֖ה בְּאַרְצֶ֑ךָ אֶת־מִסְפַּ֥ר יָמֶ֖יךָ אֲמַלֵּֽא׃
27 ೨೭ ನೀವು ಹೋಗುವ ಎಲ್ಲಾ ಕಡೆಗಳಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನುಂಟು ಮಾಡಿ ಅವರನ್ನು ಕಳವಳಗೊಳಿಸಿ, ನಿಮ್ಮ ವಿರೋಧಿಗಳೆಲ್ಲರೂ ಓಡಿಹೋಗುವಂತೆ ಮಾಡುವೆನು.
אֶת־אֵֽימָתִי֙ אֲשַׁלַּ֣ח לְפָנֶ֔יךָ וְהַמֹּתִי֙ אֶת־כָּל־הָעָ֔ם אֲשֶׁ֥ר תָּבֹ֖א בָּהֶ֑ם וְנָתַתִּ֧י אֶת־כָּל־אֹיְבֶ֛יךָ אֵלֶ֖יךָ עֹֽרֶף׃
28 ೨೮ ಅದಲ್ಲದೆ ಕಡಜದ ಹುಳಗಳನ್ನು ನಿಮಗೆ ಮುಂಚಿತವಾಗಿ ಕಳುಹಿಸಿ ಹಿವ್ವಿಯರು, ಕಾನಾನ್ಯರು, ಹಿತ್ತಿಯರು ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವಂತೆ ಮಾಡುವೆನು.
וְשָׁלַחְתִּ֥י אֶת־הַצִּרְעָ֖ה לְפָנֶ֑יךָ וְגֵרְשָׁ֗ה אֶת־הַחִוִּ֧י אֶת־הַֽכְּנַעֲנִ֛י וְאֶת־הַחִתִּ֖י מִלְּפָנֶֽיךָ׃
29 ೨೯ ಆದರೆ ನಾನು ಒಂದೇ ವರ್ಷದೊಳಗೆ ಅವರೆಲ್ಲರನ್ನು ಅಲ್ಲಿಂದ ಹೊರಡಿಸುವುದಿಲ್ಲ. ಏಕೆಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯಾದೀತು.
לֹ֧א אֲגָרְשֶׁ֛נּוּ מִפָּנֶ֖יךָ בְּשָׁנָ֣ה אֶחָ֑ת פֶּן־תִּהְיֶ֤ה הָאָ֙רֶץ֙ שְׁמָמָ֔ה וְרַבָּ֥ה עָלֶ֖יךָ חַיַּ֥ת הַשָּׂדֶֽה׃
30 ೩೦ ನೀವು ಅಭಿವೃದ್ಧಿಯಾಗಿ ದೇಶದಲ್ಲೆಲ್ಲಾ ತುಂಬಿಕೊಳ್ಳುವ ತನಕ ಅವರನ್ನು ಸ್ವಲ್ಪ ಸ್ವಲ್ಪವಾಗಿ ಹೊರಡಿಸುವೆನು.
מְעַ֥ט מְעַ֛ט אֲגָרְשֶׁ֖נּוּ מִפָּנֶ֑יךָ עַ֚ד אֲשֶׁ֣ר תִּפְרֶ֔ה וְנָחַלְתָּ֖ אֶת־הָאָֽרֶץ׃
31 ೩೧ ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.
וְשַׁתִּ֣י אֶת־גְּבֻלְךָ֗ מִיַּם־סוּף֙ וְעַד־יָ֣ם פְּלִשְׁתִּ֔ים וּמִמִּדְבָּ֖ר עַד־הַנָּהָ֑ר כִּ֣י ׀ אֶתֵּ֣ן בְּיֶדְכֶ֗ם אֵ֚ת יֹשְׁבֵ֣י הָאָ֔רֶץ וְגֵרַשְׁתָּ֖מֹו מִפָּנֶֽיךָ׃
32 ೩೨ ನೀವು ಅವರೊಡನೆ ಅವರ ದೇವತೆಗಳೊಡನೆ ಆಗಲಿ ಯಾವುದೇ ವಿಧವಾದ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು.
לֹא־תִכְרֹ֥ת לָהֶ֛ם וְלֵאלֹֽהֵיהֶ֖ם בְּרִֽית׃
33 ೩೩ ಅವರು ನಿಮ್ಮ ದೇಶದಲ್ಲೇ ವಾಸವಾಗಿರಬಾರದು. ವಾಸವಾಗಿದ್ದರೆ ನನಗೆ ವಿರುದ್ಧವಾಗಿ ನೀವು ಪಾಪ ಮಾಡುವಂತೆ ಅವರು ಪ್ರೇರೇಪಿಸುವರು. ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವುದು.
לֹ֤א יֵשְׁבוּ֙ בְּאַרְצְךָ֔ פֶּן־יַחֲטִ֥יאוּ אֹתְךָ֖ לִ֑י כִּ֤י תַעֲבֹד֙ אֶת־אֱלֹ֣הֵיהֶ֔ם כִּֽי־יִהְיֶ֥ה לְךָ֖ לְמֹוקֵֽשׁ׃ פ

< ವಿಮೋಚನಕಾಂಡ 23 >