< ವಿಮೋಚನಕಾಂಡ 24 >
1 ೧ ಯೆಹೋವನು ಮೋಶೆಗೆ, “ನೀನು, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಯೆಹೋವನ ಬಳಿಗೆ ಬಂದು ದೂರದಲ್ಲಿ ನಿಂತು ಅಡ್ಡಬಿದ್ದು ಆರಾಧಿಸಬೇಕು.
耶和華對摩西說:「你和亞倫、拿答、亞比戶,並以色列長老中的七十人,都要上到我這裏來,遠遠地下拜。
2 ೨ ಮೋಶೆ ಒಬ್ಬನೇ ಯೆಹೋವನ ಸಮೀಪಕ್ಕೆ ಬರಬೇಕೇ ಹೊರತು ಬೇರೆ ಯಾರು ಸಮೀಪಕ್ಕೆ ಬರಬಾರದು. ಮಿಕ್ಕ ಜನರು ಬೆಟ್ಟವನ್ನು ಹತ್ತಲೇಬಾರದು” ಎಂದು ಹೇಳಿದನು.
惟獨你可以親近耶和華;他們卻不可親近;百姓也不可和你一同上來。」
3 ೩ ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, “ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು” ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು.
摩西下山,將耶和華的命令典章都述說與百姓聽。眾百姓齊聲說:「耶和華所吩咐的,我們都必遵行。」
4 ೪ ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು.
摩西將耶和華的命令都寫上。清早起來,在山下築一座壇,按以色列十二支派立十二根柱子,
5 ೫ ಇಸ್ರಾಯೇಲರ ಯೌವನಸ್ಥರಿಗೆ ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನ ಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟು ಕಳುಹಿಸಿದನು.
又打發以色列人中的少年人去獻燔祭,又向耶和華獻牛為平安祭。
6 ೬ ಅನಂತರ ಮೋಶೆ ಆ ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬಟ್ಟಲುಗಳಲ್ಲಿ ತುಂಬಿ ಅರ್ಧವನ್ನು ಯಜ್ಞವೇದಿಯ ಮೇಲೆ ಪ್ರೋಕ್ಷಿಸಿದನು.
摩西將血一半盛在盆中,一半灑在壇上;
7 ೭ ತರುವಾಯ ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ, “ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗುವೆವು” ಅಂದರು.
又將約書念給百姓聽。他們說:「耶和華所吩咐的,我們都必遵行。」
8 ೮ ಆಗ ಮೋಶೆಯು ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯ ರಕ್ತವು ಇದೇ” ಅಂದನು.
摩西將血灑在百姓身上,說:「你看!這是立約的血,是耶和華按這一切話與你們立約的憑據。」
9 ೯ ಮೋಶೆ, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಜನರು ಬೆಟ್ಟವನ್ನು ಹತ್ತಿದರು.
摩西、亞倫、拿答、亞比戶,並以色列長老中的七十人,都上了山。
10 ೧೦ ಅವರಿಗೆ ಇಸ್ರಾಯೇಲರ ದೇವರ ದರ್ಶನವಾಯಿತು. ಅವರು ದೇವರನ್ನು ನೋಡಿದರು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.
他們看見以色列的上帝,他腳下彷彿有平鋪的藍寶石,如同天色明淨。
11 ೧೧ ಆತನು ಇಸ್ರಾಯೇಲರ ಮುಖಂಡರಿಗೆ ಯಾವ ಕೇಡನ್ನೂ ಮಾಡಲಿಲ್ಲ. ಅವರು ದೇವರನ್ನು ನೋಡಿ ಅನ್ನಪಾನಗಳನ್ನು ತೆಗೆದುಕೊಂಡರು.
他的手不加害在以色列的尊者身上。他們觀看上帝;他們又吃又喝。
12 ೧೨ ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ನೀನು ಆ ಧರ್ಮಶಾಸ್ತ್ರವನ್ನೂ ಮತ್ತು ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.
耶和華對摩西說:「你上山到我這裏來,住在這裏,我要將石版並我所寫的律法和誡命賜給你,使你可以教訓百姓。」
13 ೧೩ ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಂದಿಗೆ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.
摩西和他的幫手約書亞起來,上了上帝的山。
14 ೧೪ ಇದಕ್ಕೆ ಮೊದಲು ಅವನು ಹಿರಿಯರಿಗೆ, “ನಾವು ತಿರುಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೇ ಕಾದುಕೊಂಡಿರಿ. ಆರೋನನು ಮತ್ತು ಹೂರನು ನಿಮ್ಮ ಬಳಿಯಲ್ಲಿರುವರು. ಯಾರಿಗಾದರೂ ವ್ಯಾಜ್ಯವಿದ್ದ ಪಕ್ಷಕ್ಕೆ ಅವರ ಹತ್ತಿರಕ್ಕೆ ಹೋಗಲಿ” ಎಂದು ಹೇಳಿದನು.
摩西對長老說:「你們在這裏等着,等到我們再回來,有亞倫、戶珥與你們同在。凡有爭訟的,都可以就近他們去。」
15 ೧೫ ಮೋಶೆಯು ಬೆಟ್ಟವನ್ನು ಹತ್ತಿದನು ಮತ್ತು ಮೇಘವು ಬೆಟ್ಟವನ್ನು ಆವರಿಸಿಕೊಂಡಿತು.
摩西上山,有雲彩把山遮蓋。
16 ೧೬ ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು.
耶和華的榮耀停於西奈山;雲彩遮蓋山六天,第七天他從雲中召摩西。
17 ೧೭ ಯೆಹೋವನ ತೇಜಸ್ಸು ಬೆಟ್ಟದ ತುದಿಯಲ್ಲಿ ದಹಿಸುವ ಬೆಂಕಿಯಂತೆ ಇಸ್ರಾಯೇಲರಿಗೆ ಕಾಣಿಸಿತು.
耶和華的榮耀在山頂上,在以色列人眼前,形狀如烈火。
18 ೧೮ ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು.
摩西進入雲中上山,在山上四十晝夜。