< ವಿಮೋಚನಕಾಂಡ 25 >

1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
সদাপ্রভু মোশিকে বললেন,
2 “ಇಸ್ರಾಯೇಲರು ನನಗಾಗಿ ಕಾಣಿಕೆಯನ್ನು ತರಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.
“ইস্রায়েলীদের আমার কাছে এক নৈবেদ্য আনতে বলো। আমার জন্য তোমাকে সেই প্রত্যেকজনের কাছ থেকে নৈবেদ্য গ্রহণ করতে হবে যারা আন্তরিকভাবে দান দিতে ইচ্ছুক।
3 ನೀನು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು ಯಾವುವೆಂದರೆ, ಚಿನ್ನ, ಬೆಳ್ಳಿ, ಹಾಗೂ ತಾಮ್ರ ಎಂಬ ಲೋಹಗಳು,
“এই নৈবেদ্যগুলি তোমাকে তাদের কাছ থেকে গ্রহণ করতে হবে: “সোনা, রুপো ও ব্রোঞ্জ;
4 ನೀಲಿ, ನೇರಳೆ, ರಕ್ತಗೆಂಪು ವರ್ಣಗಳುಳ್ಳ ದಾರಗಳೂ, ನಾರುಬಟ್ಟೆಗಳೂ, ಆಡು ಕೂದಲಿನ ಉಣ್ಣೆಯ ಬಟ್ಟೆಗಳೂ,
নীল, বেগুনি, ও টকটকে লাল রংয়ের সুতো এবং মিহি মসিনা; ছাগলের লোম;
5 ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳು, ಕಡಲಪ್ರಾಣಿಯ ತೊಗಲುಗಳೂ, ಜಾಲೀಮರವೂ,
লাল রং করা মেষের ছাল এবং অন্য এক ধরনের টেকসই চামড়া; বাবলা কাঠ;
6 ದೀಪಕ್ಕೆ ಬೇಕಾದ ಎಣ್ಣೆಯೂ, ಅಭಿಷೇಕ ತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳೂ,
আলোর জন্য জলপাই তেল; অভিষেক করার উপযোগী তেলের জন্য ও সুগন্ধি ধূপের জন্য মশলাপাতি;
7 ಮಹಾಯಾಜಕನ ಕವಚಕ್ಕೆ ಹಾಗೂ ಎದೆಗೆ ಧರಿಸುವ ಪದಕದ ಮೇಲೆ ಇರಿಸಲು ಬೇಕಾಗಿರುವ ಗೋಮೇಧಕರತ್ನಗಳು ಹಾಗೂ ಇತರ ರತ್ನಗಳೂ ಇವೇ.
এবং এফোদ ও বুকপাটার উপরে বসানোর জন্য স্ফটিকমণি ও অন্যান্য মণিরত্ন।
8 “ನಾನು ಅವರ ಮಧ್ಯದಲ್ಲಿ ವಾಸಮಾಡುವುದಕ್ಕೆ ನನಗೆ ಒಂದು ಗುಡಾರವನ್ನು ಕಟ್ಟಿಸಬೇಕು.
“পরে আমার জন্য এক পবিত্রস্থান তৈরি করতে তাদের দিয়ো, এবং আমি তাদের মধ্যে বসবাস করব।
9 ನಾನು ನಿನಗೆ ತೋರಿಸುವ ಮಾದರಿಯಲ್ಲಿಯೇ ಗುಡಾರವನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಮಾಡಿಸಬೇಕು.
আমি তোমাদের যে নমুনাটি দেখিয়ে দেব ঠিক সেই অনুসারেই এই সমাগম তাঁবু ও সেটির সব আসবাবপত্র তৈরি কোরো।
10 ೧೦ “ನೀನು ಜಾಲೀಮರದಿಂದ ಒಂದು ಮಂಜೂಷವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವು ಹಾಗೂ ಒಂದುವರೆ ಮೊಳ ಎತ್ತರವು ಆಗಿರಬೇಕು.
“প্রায় 1.1 মিটার লম্বা এবং 68 সেন্টিমিটার করে চওড়া ও উঁচু বাবলা কাঠের একটি সিন্দুক তাদের তৈরি করতে দিয়ো।
11 ೧೧ ಚೊಕ್ಕ ಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಹಾಗೂ ಒಳಗಡೆಯೂ ಹೊದಿಸಬೇಕು. ಅದರ ಮೇಲೆ ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು.
ভিতরে ও বাইরে, দুই দিকেই এটি খাঁটি সোনা দিয়ে মুড়ে দিয়ো, এবং এটির চারপাশে সোনার এক ছাঁচ তৈরি কোরো।
12 ೧೨ ನಾಲ್ಕು ಬಂಗಾರದ ಬಳೆಗಳನ್ನು ಅದರ ನಾಲ್ಕು ಮೂಲೆಗಳಲ್ಲಿರುವ ಒಂದೊಂದು ಕಾಲಿಗೂ ಎರಡೆರಡು ಬಳೆಗಳನ್ನು ಹಾಕಬೇಕು.
এটির জন্য সোনার চারটি কড়া ঢালাই কোরো এবং সেগুলি এটির চারটি পায়াতে আটকে দিয়ো, দুটি কড়া একদিকে ও দুটি কড়া অন্যদিকে।
13 ೧೩ ಆ ಮಂಜೂಷವನ್ನು ಹೊರುವುದಕ್ಕಾಗಿ ನೀನು ಜಾಲೀಮರದ ಕಂಬಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ,
পরে বাবলা কাঠের খুঁটিগুলি তৈরি কোরো এবং সেগুলি সোনা দিয়ে মুড়ে দিয়ো।
14 ೧೪ ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.
সিন্দুকটি বহন করার জন্য সেটির দুই পাশে থাকা কড়াগুলিতে সেই খুঁটিগুলি ঢুকিয়ে দিয়ো।
15 ೧೫ ಆ ಕಂಬಗಳನ್ನು ಮಂಜೂಷದ ಬಳೆಗಳಿಂದ ತೆಗೆಯದೇ ಅವುಗಳಲ್ಲಿಯೇ ಬಿಟ್ಟಿರಬೇಕು.
এই সিন্দুকের কড়ার মধ্যে যেন সেই খুঁটিগুলি থাকে; সেগুলি সরানো যাবে না।
16 ೧೬ ಆ ಮಂಜೂಷದಲ್ಲಿ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.
পরে সেই সিন্দুকটিতে বিধিনিয়মের সেই ফলকগুলি রেখো, যেগুলি আমি তোমাদের দেব।
17 ೧೭ ಚೊಕ್ಕ ಬಂಗಾರದ ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿರಬೇಕು.
“খাঁটি সোনা দিয়ে প্রায় 1.1 মিটার লম্বা এবং 68 সেন্টিমিটার চওড়া একটি প্রায়শ্চিত্ত-আচ্ছাদন তৈরি কোরো।
18 ೧೮ ಕೃಪಾಸನದ ಎರಡು ಕೊನೆಗಳಲ್ಲಿ ಎರಡು ಬಂಗಾರದ ಕೆರೂಬಿಗಳನ್ನು ಕೆತ್ತನೆ ಕೆಲಸದಿಂದ ಮಾಡಿಸಬೇಕು.
আর সেই আচ্ছাদনের শেষ প্রান্তের দিকে পিটানো সোনা দিয়ে দুটি করূব তৈরি কোরো।
19 ೧೯ ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿಸಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಬೇಕು.
একটি করূব এক প্রান্তে এবং দ্বিতীয়টি অন্য প্রান্তে তৈরি কোরো; দুই প্রান্তেই আবরণসহ একটি করে করূব তৈরি কোরো।
20 ೨೦ ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಮತ್ತು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿರುವಂತೆಯೂ ಇರಿಸಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುವಂತಿರಬೇಕು.
করূবেরা তাদের ডানা উপর দিকে ছড়িয়ে রেখে, সেই আবরণটির উপরে নিজেদের দেহ দিয়ে ছায়া ফেলবে। করূবেরা পরস্পরের দিকে মুখ করে, সেই আবরণের দিকে তাকিয়ে থাকবে।
21 ೨೧ ಆ ಕೃಪಾಸನವನ್ನು ಮಂಜೂಷದ ಮೇಲಿರಿಸಬೇಕು. ನಾನು ನಿನಗೆ ಕೊಡುವ ಆಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇರಿಸಬೇಕು
আবরণটি সিন্দুকের চূড়ায় রাখবে এবং সিন্দুকে সেই বিধিনিয়মের ফলকগুলি রাখবে, যেগুলি আমি তোমাদের দেব।
22 ೨೨ ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತನಾಡಿ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು.
সেখানে, সেই দুই করূবের মাঝখানে বিধিনিয়মের সিন্দুকের উপরে রাখা সেই আবরণের উপরেই আমি তোমার সঙ্গে দেখা করব ও ইস্রায়েলীদের জন্য তোমাকে আমার সমস্ত আজ্ঞা দেব।
23 ೨೩ “ನೀನು ಜಾಲೀಮರದಿಂದ ಒಂದು ಮೇಜನ್ನು ಮಾಡಿಸಬೇಕು. ಅದು ಎರಡು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯೂ, ಒಂದುವರೆ ಮೊಳ ಎತ್ತರವಾಗಿಯೂ ಇರಬೇಕು.
“বাবলা কাঠ দিয়ে প্রায় 90 সেন্টিমিটার লম্বা, 45 সেন্টিমিটার চওড়া ও 68 সেন্টিমিটার উঁচু একটি টেবিল তৈরি কোরো।
24 ೨೪ ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ, ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು.
খাঁটি সোনা দিয়ে সেটি মুড়ে দিয়ো এবং সেটির চারপাশে সোনার এক ছাঁচ তৈরি কোরো।
25 ೨೫ ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡ ಪಟ್ಟಿಯನ್ನು ಮಾಡಿಸಿ ಅದಕ್ಕೂ ಚಿನ್ನದ ತೋರಣ ಕಟ್ಟಿಸಬೇಕು.
এছাড়াও সেটির চারপাশে প্রায় 7.5 সেন্টিমিটার চওড়া চক্রবেড় তৈরি করে সেই চক্রবেড়ের উপর সোনার এক ছাঁচ রেখো।
26 ೨೬ ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಹಾಕಬೇಕು.
টেবিলের জন্য সোনার চারটি কড়া তৈরি কোরো ও যেখানে সেই চারটি পায়া আছে, সেই চার প্রান্তে সেগুলি বেঁধে দিয়ো।
27 ೨೭ ಆ ಬಳೆಗಳು ಅಡ್ಡಪಟ್ಟಿಗೆಗೆ ಅಂಟಿಕೊಂಡಿರಬೇಕು. ಮೇಜನ್ನು ಎತ್ತುವುದಕ್ಕಾಗಿ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು.
কড়াগুলি যেন সেই চক্রবেড়গুলির কাছাকাছি থাকে ও সেই টেবিলটি বহন করার উপযোগী খুঁটিগুলি যেন সেগুলি ধরে রাখতে পারে।
28 ೨೮ ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳಿಂದಲೇ ಮೇಜನ್ನು ಎತ್ತಬೇಕು.
বাবলা কাঠ দিয়ে খুঁটিগুলি তৈরি কোরো, সেগুলি সোনা দিয়ে মুড়ে দিয়ো এবং সেগুলির সাথে সাথে টেবিলটিও বহন কোরো।
29 ೨೯ ಮೇಜಿನ ಮೇಲಿಡಬೇಕಾದ ಹರಿವಾಣಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳನ್ನು ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು.
আর খাঁটি সোনা দিয়ে এটির থালা ও বাসন, এছাড়াও নৈবেদ্য ঢেলে দেওয়ার জন্য এটির কলশি ও গামলাও তৈরি কোরো।
30 ೩೦ ನೈವೇದ್ಯದ ರೊಟ್ಟಿಗಳು ಪ್ರತಿದಿನ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು.
সবসময় আমার সামনে রাখার জন্য এই টেবিলে দর্শন-রুটি সাজিয়ে রেখো।
31 ೩೧ “ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿಸಬೇಕು. ಅದರ ಕೆಳಭಾಗವನ್ನು ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳು, ಅರಳಿದ ಪುಷ್ಪಗಳು ಮೊಗ್ಗುಗಳು ಅಲಂಕಾರವಾಗಿ ಕೆತ್ತಿರಬೇಕು.
“খাঁটি সোনার এক দীপাধার তৈরি কোরো। এটির ভিত ও দণ্ড পিটিয়ে নিতে হবে, এবং সেগুলির সাথে সাথে এতে একই টুকরো দিয়ে ফুলের মতো দেখতে পানপাত্র, কুঁড়ি ও মুকুলগুলিও তৈরি কোরো।
32 ೩೨ ಕಂಬದ ಒಂದೊಂದು ಪಾರ್ಶ್ವದಲ್ಲಿಯೂ ಮೂರು ಮೂರು ಕೊಂಬೆಗಳಂತೆ ಹಾಗೆ ಆರು ಕೊಂಬೆಗಳೂ ಇರಬೇಕು.
সেই দীপাধারের পাশ থেকে ছয়টি শাখা বেরিয়ে আসবে—একদিকে তিনটি এবং অন্যদিকে তিনটি।
33 ೩೩ ಪ್ರತಿಯೊಂದು ಕೊಂಬೆಗಳಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಹೂವುಗಳೂ ಮೊಗ್ಗುಗಳೂ ಇರಬೇಕು. ದೀಪಸ್ತಂಭದಿಂದ ಬರುವ ಆರು ಕೊಂಬೆಗಳನ್ನು ಹಾಗೆಯೇ ಮಾಡಿಸಬೇಕು.
একটি শাখায় কুঁড়ি ও মুকুল সহ কাগজি বাদামের আকৃতিবিশিষ্ট তিনটি পানপাত্র থাকবে, পরবর্তী শাখাতে তিনটি, এবং সেই দীপাধার থেকে বেরিয়ে আসা ছয়টি শাখার সবকটিতে একইরকম হবে।
34 ೩೪ ದೀಪಸ್ತಂಭದ ಕಂಬದಲ್ಲಿ ಪುಷ್ಪಗುಚ್ಛಗಳೂ, ಪುಷ್ಪಗಳೂ, ಮೊಗ್ಗುಗಳು ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳೂ ಇರಬೇಕು.
আর সেই দীপাধারে কুঁড়ি ও মুকুল সহ কাগজি বাদামফুলের মতো আকৃতিবিশিষ্ট চারটি পানপাত্র থাকবে।
35 ೩೫ ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು ಇರಬೇಕು.
সেই দীপাধার থেকে বেরিয়ে আসা মোট ছয়টি শাখার মধ্যে প্রথম জোড়া শাখার নিচে একটি কুঁড়ি থাকবে, দ্বিতীয় জোড়া শাখার নিচে দ্বিতীয় একটি কুঁড়ি থাকবে, এবং তৃতীয় জোড়ার নিচে তৃতীয় একটি কুঁড়ি থাকবে।
36 ೩೬ ಪುಷ್ಪಪಾತ್ರೆಗಳೂ, ಕೊಂಬುಗಳೂ ಸಹಿತವಾದ ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕ ಬಂಗಾರದಿಂದ ನಕಾಸಿ ಕೆಲಸದಿಂದ ಮಾಡಿಸಬೇಕು.
সেই দীপাধারের সাথে একই টুকরো দিয়ে সেই কুঁড়ি ও শাখাগুলিও পিটানো খাঁটি সোনা দিয়ে তৈরি করতে হবে।
37 ೩೭ ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳ ಬೆಳಕು ಎದುರಿನಿಂದ ಬೀಳುವಂತೆ ಅವುಗಳನ್ನು ಹಚ್ಚಿರಬೇಕು.
“পরে এর সাতটি প্রদীপ তৈরি কোরো ও সেগুলি সেটির উপর এমনভাবে সাজিয়ে রেখো যেন সেগুলি সেটির সামনের দিকের প্রাঙ্গণে আলো ফেলে।
38 ೩೮ ದೀಪದ ಕುಡಿತೆಗೆಯುವ ಕತ್ತರಿಗಳೂ, ಕತ್ತರಿಸಿದ ಕುಡಿಗಳನ್ನು ಹಾಕುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು.
এর পলতে ছাঁটার যন্ত্র ও বারকোশগুলিও খাঁটি সোনার হবে।
39 ೩೯ ದೀಪಸ್ತಂಭವೂ ಅದರ ಎಲ್ಲಾ ಉಪಕರಣಗಳೂ ಒಂದು ತಲಾಂತು ಚೊಕ್ಕ ಬಂಗಾರವಾಗಿರಬೇಕು.
দীপাধার ও এইসব আনুষঙ্গিক উপকরণের জন্য এক তালন্ত খাঁটি সোনা ব্যবহার করতে হবে।
40 ೪೦ ನೋಡು, ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಲ್ಲಿಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.”
দেখো, পর্বতের উপরে তোমাকে যে নকশা দেখানো হয়েছিল, সেই অনুযায়ী সবকিছু নির্মাণ কোরো।

< ವಿಮೋಚನಕಾಂಡ 25 >