16೧೬ಆ ಮಂಜೂಷದಲ್ಲಿ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.
17೧೭ಚೊಕ್ಕ ಬಂಗಾರದ ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿರಬೇಕು.
18೧೮ಕೃಪಾಸನದ ಎರಡು ಕೊನೆಗಳಲ್ಲಿ ಎರಡು ಬಂಗಾರದ ಕೆರೂಬಿಗಳನ್ನು ಕೆತ್ತನೆ ಕೆಲಸದಿಂದ ಮಾಡಿಸಬೇಕು.
19೧೯ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿಸಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಬೇಕು.
20೨೦ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಮತ್ತು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿರುವಂತೆಯೂ ಇರಿಸಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುವಂತಿರಬೇಕು.
21೨೧ಆ ಕೃಪಾಸನವನ್ನು ಮಂಜೂಷದ ಮೇಲಿರಿಸಬೇಕು. ನಾನು ನಿನಗೆ ಕೊಡುವ ಆಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇರಿಸಬೇಕು
22೨೨ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತನಾಡಿ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು.
23೨೩“ನೀನು ಜಾಲೀಮರದಿಂದ ಒಂದು ಮೇಜನ್ನು ಮಾಡಿಸಬೇಕು. ಅದು ಎರಡು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯೂ, ಒಂದುವರೆ ಮೊಳ ಎತ್ತರವಾಗಿಯೂ ಇರಬೇಕು.
24೨೪ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ, ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು.
25೨೫ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡ ಪಟ್ಟಿಯನ್ನು ಮಾಡಿಸಿ ಅದಕ್ಕೂ ಚಿನ್ನದ ತೋರಣ ಕಟ್ಟಿಸಬೇಕು.
26೨೬ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಹಾಕಬೇಕು.
27೨೭ಆ ಬಳೆಗಳು ಅಡ್ಡಪಟ್ಟಿಗೆಗೆ ಅಂಟಿಕೊಂಡಿರಬೇಕು. ಮೇಜನ್ನು ಎತ್ತುವುದಕ್ಕಾಗಿ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು.
28೨೮ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳಿಂದಲೇ ಮೇಜನ್ನು ಎತ್ತಬೇಕು.