< ವಿಮೋಚನಕಾಂಡ 26 >

1 ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಅವು ನಯವಾಗಿ ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳನ್ನು ನೇಯ್ಗೆಯಿಂದ ಕಸೂತಿ ಹಾಕಿಸಬೇಕು.
“Ka yi tabanakul da labule goma na lilin mai laushi a naɗe shi biyu, a saƙa labulen da ulu mai ruwan shuɗi, da ulu mai ruwan shunayya, da kuma ulu mai ruwan ja. Waɗannan labule za a yi musu zānen siffofin kerubobi, aikin gwani.
2 ಪ್ರತಿಯೊಂದು ಬಟ್ಟೆಯೂ ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು.
Dukan labulen, girmansu zai zama kamu ashirin da takwas, fāɗinsu kuwa kamu huɗu. Labulen su zama daidai wa daida.
3 ಐದೈದು ಬಟ್ಟೆಯ ಪರದೆಗಳನ್ನು ಒಂದೊಂದಾಗಿ ಜೋಡಿಸಬೇಕು.
Ka haɗa labule biyar tare, ka yi haka kuma da suran biyar ɗin.
4 ಈ ಎರಡು ಜೋಡಣೆಗಳಲ್ಲಿ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿಸಬೇಕು.
Ka sa wa labulen rammuka da ulu mai ruwan shuɗin a gefen ƙarshe na labule ɗaya, a kuma yi haka a ƙarshen gefe na ɗaya kuma.
5 ಆ ಕುಣಿಕೆಗಳು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರುಬದುರಾಗಿರಬೇಕು.
Ka yi wa labulen rammuka hamsin a ɗayan labule, ka kuma yi haka a ƙarshe ɗayan labulen, rammukan su fuskanci juna.
6 ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಿ ಆ ಪರದೆಗಳನ್ನು ಒಂದಕ್ಕೊಂದು ಹೆಣೆದು ಒಂದೇ ಗುಡಾರವಾಗುವಂತೆ ಜೋಡಿಸಬೇಕು.
Sa’an nan ka yi maɗauri hamsin na zinariya don amfanin ɗaura labulen a haɗe, domin tabanakul yă zama ɗaya.
7 ಈ ಗುಡಾರದ ಮೇಲೆ ಹೊದಿಸುವುದಕ್ಕಾಗಿ ಆಡಿನ ರೋಮದಿಂದ ಹನ್ನೊಂದು ಪರದೆಗಳನ್ನು ಮಾಡಿಸಬೇಕು.
“Ka yi labule goma sha ɗaya na gashin akuya da za ka rufe tabanakul.
8 ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು.
Tsawon kowanne yă zama kamu talatin, fāɗinsa kuma yă zama kamu huɗu. Labulen za su zama daidai wa daida.
9 ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನು ಒಂದಾಗಿ ಜೋಡಿಸಿ ಆರನೆಯ ಪರದೆಯನ್ನು ಗುಡಾರದ ಮುಂಭಾಗದಲ್ಲಿ ಮಡಿಸಿ ಇರಿಸಬೇಕು.
Ka haɗa labule biyar ka ɗinka. Haka kuma za ka yi da sauran shidan. Ka naɗe shida ɗin biyu, ka yi labulen ƙofar tentin da shi.
10 ೧೦ ಹೀಗೆ ಜೋಡಿಸಿ ಹೆಣೆದ ಪರದೆಗಳ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿಸಬೇಕು.
Ka yi rammuka hamsin a ƙarshen gefen kashi ɗaya na labulen, haka kuma a ƙarshen kashi ɗayan.
11 ೧೧ ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿಸಿ ಆ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಸಮಸ್ತವು ಸೇರಿ ಒಂದೇ ಗುಡಾರವಾಗುವಂತೆ ಜೋಡಿಸಬೇಕು.
Sai ka kuma yi maɗauri hamsin da tagulla, ka ɗaura su a haɗe da tentin su zama ɗaya.
12 ೧೨ ಹೊದಿಕೆಯ ಪರದೆಗಳಲ್ಲಿ ಅರ್ಧ ಪರದೆ ಹೆಚ್ಚಾಗಿರುವುದು, ಆ ಹೆಚ್ಚಿನ ಭಾಗವು ಗುಡಾರದ ಹಿಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು.
Ragowar rabin labulen da yake a bisa tenti kuma sai a bar shi yana lilo a bayan tabanakul.
13 ೧೩ ಹೊದಿಕೆಯ ಪರದೆಗಳ ಉದ್ದದಲ್ಲಿ ಈ ಕಡೆ ಒಂದು ಮೊಳವೂ, ಆ ಕಡೆ ಒಂದು ಮೊಳವೂ ಹೆಚ್ಚಾಗಿರುವುದು. ಅದು ಒಳಗಣ ಗುಡಾರವನ್ನು ಮುಚ್ಚುವಂತೆ ಈ ಕಡೆಯೂ ಆ ಕಡೆಯೂ ತೂಗಾಡುವಂತಿರಬೇಕು.
Tsawon labulen tenti zai zama kamu ɗaya a kowane gefe, abin da ya rage kuma sai a bar shi ya yi ta lilo a kowane gefe don yă rufe tabanakul.
14 ೧೪ ಈ ಹೊದಿಕೆಗೆ ಹೊದಿಸುವುದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನು ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನು ಮಾಡಿಸಬೇಕು.
Ka yi abin rufe tentin da fatun raguna da aka rina ja, a kansa kuma ka rufe shi da fatun shanun teku.
15 ೧೫ ಗುಡಾರಕ್ಕೆ ಬೇಕಾದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿಸಬೇಕು.
“Ka yi tabanakul da katakon itacen ƙiryar da aka kakkafa a tsaye.
16 ೧೬ ಪ್ರತಿಯೊಂದು ಚೌಕಟ್ಟು ಹತ್ತು ಮೊಳ ಉದ್ದವಾಗಿಯೂ ಮತ್ತು ಒಂದೂವರೆ ಮೊಳ ಅಗಲವಾಗಿಯೂ ಇರಬೇಕು.
Tsawon kowane katako zai zama kamu goma, fāɗinsa kuma kamu ɗaya da rabi,
17 ೧೭ ಪ್ರತಿಯೊಂದು ಚೌಕಟ್ಟು ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವು ಪಟ್ಟಿಗಳುಳ್ಳದ್ದಾಗಿರಬೇಕು. ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆಯೇ ಮಾಡಿಸಬೇಕು.
ka kafa katakan suna duban juna. Ka yi da dukan katakan tabanakul haka.
18 ೧೮ ಗುಡಾರದ ದಕ್ಷಿಣದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ನಿಲ್ಲಿಸಬೇಕು.
Ka shirya katakai ashirin a gefen kudu na tabanakul,
19 ೧೯ ನಲ್ವತ್ತು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು (ಅಡಿಗಲ್ಲು) ಮಾಡಿಸಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಡಬೇಕು. ಒಂದೊಂದು ಚೌಕಟ್ಟಿನಲ್ಲಿರುವ ಎರಡು ಪಟ್ಟಿಗಳಿಗೆ ಒಂದೊಂದು ಗದ್ದಿಗೆ ಕಲ್ಲು ಇರಬೇಕು.
ka kuma yi rammuka arba’in da azurfar da za a sa wa katakan nan ashirin. Za a sa kawunan katakan da aka fiƙe a cikin rammukan.
20 ೨೦ ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿಯೂ ಇಪ್ಪತ್ತು ಚೌಕಟ್ಟುಗಳು,
Game da ɗayan gefen, gefen arewa na tabanakul, za ka kafa katakai ashirin,
21 ೨೧ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೆ ಕಲ್ಲುಗಳು ಇರಬೇಕು.
da rammukan azurfa arba’in, biyu a ƙarƙashin kowane katako.
22 ೨೨ ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ಆರು ಚೌಕಟ್ಟುಗಳನ್ನು ಮಾಡಿಸಬೇಕು.
Ka kafa katakai shida don can ƙarshen katakan, wato, a wajen yamma na ƙarshen tabanakul,
23 ೨೩ ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿಸಬೇಕು.
ka kuma kafa katakai biyu a kusurwoyi can ƙarshe.
24 ೨೪ ಅವುಗಳನ್ನು ಅಡಿಯಿಂದ ತುದಿಯವರೆಗೂ ಜೋಡಿಸಿರಬೇಕು. ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರಬೇಕು. ಹಾಗೆ ಎರಡು ಮೂಲೆಗಳಿಗೂ ಮಾಡಿಸಬೇಕು.
Za a haɗa katakan nan a kusurwa daga ƙasa zuwa sama a daure su. Haka za a yi da katakan kusurwa na biyu.
25 ೨೫ ಹೀಗೆ ಹಿಂಭಾಗದಲ್ಲಿ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಬೆಳ್ಳಿಯ ಗದ್ದಿಗೆ ಕಲ್ಲುಗಳೂ ಅಂತೂ ಹದಿನಾರು ಗದ್ದಿಗೆ ಕಲ್ಲುಗಳು ಇರಬೇಕು.
Ta haka za a sami katakai takwas da rammukansu na azurfa guda goma sha shida, kowane katako yana da rammuka biyu.
26 ೨೬ ಜಾಲೀಮರದಿಂದ ಅಗುಳಿಗಳನ್ನು ಮಾಡಿಸಬೇಕು. ಗುಡಾರದ ಎರಡು ಕಡೆಯ ಚೌಕಟ್ಟುಗಳಿಗೂ,
“Ka kuma yi sanduna da itacen ƙirya. Sanduna biyar domin katakai na gefe ɗaya na tabanakul,
27 ೨೭ ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿಸಬೇಕು.
biyar domin katakai wancan gefe, biyar kuma domin na gefe wajen yamma, can ƙarshen tabanakul.
28 ೨೮ ಚೌಕಟ್ಟುಗಳ ಮಧ್ಯದಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಲುಪುವಂತಿರಬೇಕು.
Sandan da yake tsakiyar katakan, zai bi daga wannan gefe zuwa ƙarshen wancan gefe.
29 ೨೯ ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿಸಬೇಕು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಬೇಕು.
Ka dalaye dukan katakan da zinariya, ka kuma yi zoban zinariya don su riƙe sandunan. Ka kuma dalaye sandunan da zinariya.
30 ೩೦ ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ಬಿಡಿಸಬೇಕು.
“Ka yi tabanakul bisa ga fasalin da aka nuna maka a bisa dutsen.
31 ೩೧ ನೀಲಿ, ನೆರಳೆ, ಕಡುಗೆಂಪು ವರ್ಣಗಳು ಹಾಗೂ ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಪರದೆಯನ್ನು ಮಾಡಿಸಿ, ಅದಕ್ಕೆ ಕೆರೂಬಿಗಳಿಗಾಗಿ ಕೌಶಲ್ಯಪೂರ್ಣವಾಗಿ ಕಸೂತಿ ಹಾಕಿಸಬೇಕು.
“Ka yi labule mai ruwan shuɗi, shunayya da jan zare da kuma lallausan lilin da aka tuƙa, da zānen kerubobin da mai fasaha ya yi.
32 ೩೨ ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ, ಚಿನ್ನದ ತಗಡುಗಳನ್ನು ಹೊದಿಸಿ, ನಾಲ್ಕು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ಪರದೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.
Ka rataye shi a bisa dogayen sanduna huɗun nan na itacen ƙirya, waɗanda aka dalaye da zinariya, waɗanda suke tsaya a rammuka huɗu na azurfa.
33 ೩೩ ಆ ಪರದೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ಪರದೆಯು ಪವಿತ್ರಸ್ಥಾನವೆಂಬುದನ್ನೂ ಮತ್ತು ಮಹಾಪವಿತ್ರಸ್ಥಾನವನ್ನೂ ವಿಂಗಡಿಸುವುದು.
Ka rataye labule daga maɗauri, ka sa akwatin alkawari a bayan labulen. Labulen zai raba Wurin Mai Tsarki da Wurin Mafi Tsarki.
34 ೩೪ ಮಹಾಪವಿತ್ರಸ್ಥಾನದಲ್ಲಿ ಆಜ್ಞಾಶಾಸನಗಳ ಮಂಜೂಷದ ಮೇಲೆ ಕೃಪಾಸನವನ್ನು ತಂದಿರಿಸಬೇಕು.
Ka sa murfin kafara a bisa akwatin alkawari a Wuri Mafi Tsarki.
35 ೩೫ ಪರದೆಯ ಹೊರಗಡೆಯಲ್ಲಿ ಮೇಜನ್ನೂ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ದಿಕ್ಕಿನಲ್ಲಿ ದೀಪಸ್ತಂಭವನ್ನೂ ಇರಿಸಬೇಕು. ಮೇಜು ಉತ್ತರ ಭಾಗದಲ್ಲಿರಬೇಕು.
Ka sa tebur a gaba labulen, a gefen arewa na tabanakul, ka kuma sa wurin ajiye fitilan ɗaura da shi, a wajen kudu.
36 ೩೬ ಗುಡಾರದ ಬಾಗಿಲಿಗೆ ಮರೆಯಾಗಿ ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೆರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕಸೂತಿ ಹಾಕಿಸಬೇಕು.
“Game da ƙofar shigar tenti kuwa, ka yi labule mai ruwan shuɗi, shunayya da jan zare na lallausan lilin da aka tuƙa, aikin gwani.
37 ೩೭ ಆ ಪರದೆ ತೂಗಿಸುವುದಕ್ಕಾಗಿ ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳ ಕೊಂಡಿಗಳನ್ನು ಚಿನ್ನದಿಂದ ಮಾಡಿಸಿ ಅವುಗಳಿಗಾಗಿ ಐದು ತಾಮ್ರದ ಗದ್ದಿಗೆ ಕಲ್ಲುಗಳನ್ನು ಮಾಡಿಸಬೇಕು.
Ka yi ƙugiyoyin zinariya domin wannan labule da katakai itacen ƙirya biyar, waɗanda aka dalaye da zinariya. Ka kuma yi zubi na tagulla biyar dominsu.

< ವಿಮೋಚನಕಾಂಡ 26 >