< ವಿಮೋಚನಕಾಂಡ 26 >
1 ೧ ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಅವು ನಯವಾಗಿ ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳನ್ನು ನೇಯ್ಗೆಯಿಂದ ಕಸೂತಿ ಹಾಕಿಸಬೇಕು.
Tovo’e izay le hanoa’o lamba fañefetse folo i kivohoy, am-pole leny rinorotse matify naho manga malòmavo naho mena mañabasà; vaho kerobe satam-pamahotse.
2 ೨ ಪ್ರತಿಯೊಂದು ಬಟ್ಟೆಯೂ ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು.
Sindre ho kiho roapolo-valo’ amby ty halava’ ty lamba-fañefetse le songa kiho efatse ty ampohe’e; hamban-jehe’e iaby o fañefe’eo.
3 ೩ ಐದೈದು ಬಟ್ಟೆಯ ಪರದೆಗಳನ್ನು ಒಂದೊಂದಾಗಿ ಜೋಡಿಸಬೇಕು.
Lamba-firindry lime ty hifamitrañe naho lamba-firindry lime ka ty hifamitrañe.
4 ೪ ಈ ಎರಡು ಜೋಡಣೆಗಳಲ್ಲಿ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿಸಬೇಕು.
Tseneo ravake manga ty andrira fara’ ty namitrañeñe valoha’e naho ravake manga ty andrira fara’ ty namitrañeñe faharoe.
5 ೫ ಆ ಕುಣಿಕೆಗಳು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರುಬದುರಾಗಿರಬೇಕು.
Tseneo ravake limampolo ty lamba-firindriy raike vaho tseneo ravake limampolo andrira fara’ i fiharoa’e faharoey, ampanandrifeo o ravakeo.
6 ೬ ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಿ ಆ ಪರದೆಗಳನ್ನು ಒಂದಕ್ಕೊಂದು ಹೆಣೆದು ಒಂದೇ ಗುಡಾರವಾಗುವಂತೆ ಜೋಡಿಸಬೇಕು.
Itseneo famitrañe volamena limampolo, le ampivitraño amy ravake rey i lamba-firindry rey le hifampikatoke ho raike i kivohoy.
7 ೭ ಈ ಗುಡಾರದ ಮೇಲೆ ಹೊದಿಸುವುದಕ್ಕಾಗಿ ಆಡಿನ ರೋಮದಿಂದ ಹನ್ನೊಂದು ಪರದೆಗಳನ್ನು ಮಾಡಿಸಬೇಕು.
Anjairo lamba-fikopoke am-bolon-ose ho kibohotse hakopoke i kivohoy; ano lamba-fikopoke folo raik’ amby.
8 ೮ ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು.
Sindre telopolo kiho ty halava’ ty lamba-fikopoke vaho songa efatse kiho ty ampohe’e; hindray habey i lamba-fikopoke folo-ro’amby rey.
9 ೯ ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನು ಒಂದಾಗಿ ಜೋಡಿಸಿ ಆರನೆಯ ಪರದೆಯನ್ನು ಗುಡಾರದ ಮುಂಭಾಗದಲ್ಲಿ ಮಡಿಸಿ ಇರಿಸಬೇಕು.
Ampivitraño ty lamba-fikopoke lime naho ampivitrañeñe ty lamba-fikòpoke eneñe vaho avaloño mira i fah’ eneñey an-tsarira’ i kibohotsey.
10 ೧೦ ಹೀಗೆ ಜೋಡಿಸಿ ಹೆಣೆದ ಪರದೆಗಳ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿಸಬೇಕು.
Itseneo ravake limampolo ty andrira’ i lamba-fikopoke fara’e amy fifamitrañañe raikey vaho ravake limampolo andrira’ i lamba-fañefetse fara’ i faharoey.
11 ೧೧ ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿಸಿ ಆ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಸಮಸ್ತವು ಸೇರಿ ಒಂದೇ ಗುಡಾರವಾಗುವಂತೆ ಜೋಡಿಸಬೇಕು.
Tseneo famitrañe torisìke limampolo le areketo amy ravake rey i famitrañe rey vaho hikatoke ho raike i kibohotsey.
12 ೧೨ ಹೊದಿಕೆಯ ಪರದೆಗಳಲ್ಲಿ ಅರ್ಧ ಪರದೆ ಹೆಚ್ಚಾಗಿರುವುದು, ಆ ಹೆಚ್ಚಿನ ಭಾಗವು ಗುಡಾರದ ಹಿಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು.
Ty ila’ i fikopa’ i kibohotsey milapiy, ty vaki’ i lamba-fikopoke sisay, le haraviravy amboho’ i kivohoy.
13 ೧೩ ಹೊದಿಕೆಯ ಪರದೆಗಳ ಉದ್ದದಲ್ಲಿ ಈ ಕಡೆ ಒಂದು ಮೊಳವೂ, ಆ ಕಡೆ ಒಂದು ಮೊಳವೂ ಹೆಚ್ಚಾಗಿರುವುದು. ಅದು ಒಳಗಣ ಗುಡಾರವನ್ನು ಮುಚ್ಚುವಂತೆ ಈ ಕಡೆಯೂ ಆ ಕಡೆಯೂ ತೂಗಾಡುವಂತಿರಬೇಕು.
Ty kiho’e etoy naho ty kiho’e eroy, ty sisa’ amy halava’ o lamba-fakopa’ i kibohotseio ro haraviravy andrindri’ i kivohoy etia naho aroa hañalok’ aze.
14 ೧೪ ಈ ಹೊದಿಕೆಗೆ ಹೊದಿಸುವುದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನು ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನು ಮಾಡಿಸಬೇಕು.
Tseneo rakok’ an-kolits’ añondrilahy linoko mena i kibohotsey le ano holin-trozofisoitse handrakoke ambone’e ka.
15 ೧೫ ಗುಡಾರಕ್ಕೆ ಬೇಕಾದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿಸಬೇಕು.
Mandranjia varambañe ami’ty mendoraveñe hitroatse amy kivohoy.
16 ೧೬ ಪ್ರತಿಯೊಂದು ಚೌಕಟ್ಟು ಹತ್ತು ಮೊಳ ಉದ್ದವಾಗಿಯೂ ಮತ್ತು ಒಂದೂವರೆ ಮೊಳ ಅಗಲವಾಗಿಯೂ ಇರಬೇಕು.
Folo kiho ty halava’ ty varambañe vaho kiho raike naho tampa’e ty ampohe’ ty varambañe.
17 ೧೭ ಪ್ರತಿಯೊಂದು ಚೌಕಟ್ಟು ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವು ಪಟ್ಟಿಗಳುಳ್ಳದ್ದಾಗಿರಬೇಕು. ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆಯೇ ಮಾಡಿಸಬೇಕು.
Songa aman-tsatoke roe ty varambañe hamitrañe aze amy rahavave’ey, izay ty anoañe ze hene varamba’ i kivohoy.
18 ೧೮ ಗುಡಾರದ ದಕ್ಷಿಣದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ನಿಲ್ಲಿಸಬೇಕು.
Aa le andranjio varambañe i kivohoy: varambañe roapolo ami’ty atimo mañatimo;
19 ೧೯ ನಲ್ವತ್ತು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು (ಅಡಿಗಲ್ಲು) ಮಾಡಿಸಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಡಬೇಕು. ಒಂದೊಂದು ಚೌಕಟ್ಟಿನಲ್ಲಿರುವ ಎರಡು ಪಟ್ಟಿಗಳಿಗೆ ಒಂದೊಂದು ಗದ್ದಿಗೆ ಕಲ್ಲು ಇರಬೇಕು.
le tseneo vave’e efapolo volafoty ho ambane’ i varambañe roapolo rey; vave’e roe ty ambane’ ty varambañe ho amy tsato’e roe rey vaho vave’e roe ambane’ ty varambañe ila’e ho amy tsato’e roe rey.
20 ೨೦ ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿಯೂ ಇಪ್ಪತ್ತು ಚೌಕಟ್ಟುಗಳು,
Ami’ty ila faharoe i kivohoy, i avara’ey, le ty varambañe roapolo,
21 ೨೧ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೆ ಕಲ್ಲುಗಳು ಇರಬೇಕು.
naho ty vave’e volafoty efapolo; vave’e roe ambane’ ty varambañe raike naho vave’e roe ambane’ ty varambañe ila’e.
22 ೨೨ ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ಆರು ಚೌಕಟ್ಟುಗಳನ್ನು ಮಾಡಿಸಬೇಕು.
Le tseneo varambañe eneñe ty añ’ ila’ i kivoho ahandrefañey.
23 ೨೩ ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿಸಬೇಕು.
Ranjio varambañe roe an-kotso’ i kivoho ila’e roe rey;
24 ೨೪ ಅವುಗಳನ್ನು ಅಡಿಯಿಂದ ತುದಿಯವರೆಗೂ ಜೋಡಿಸಿರಬೇಕು. ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರಬೇಕು. ಹಾಗೆ ಎರಡು ಮೂಲೆಗಳಿಗೂ ಮಾಡಿಸಬೇಕು.
le ifandreketo boak’ ambane pak’ ambone, fa hifampipiteke ami’ty ravake raike; songa anoeñe hoe izay iereo roroe; izay ty ho rafi’ i kotso’e roe rey.
25 ೨೫ ಹೀಗೆ ಹಿಂಭಾಗದಲ್ಲಿ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಬೆಳ್ಳಿಯ ಗದ್ದಿಗೆ ಕಲ್ಲುಗಳೂ ಅಂತೂ ಹದಿನಾರು ಗದ್ದಿಗೆ ಕಲ್ಲುಗಳು ಇರಬೇಕು.
Aa le valo ty varambañe naho o vave’e volafotio, vave’e folo eneñ’ amby; vave’e roe ambane’ ty varambañe valoha’e vaho vave’e roe ami’ty varambañe manonjohy.
26 ೨೬ ಜಾಲೀಮರದಿಂದ ಅಗುಳಿಗಳನ್ನು ಮಾಡಿಸಬೇಕು. ಗುಡಾರದ ಎರಡು ಕಡೆಯ ಚೌಕಟ್ಟುಗಳಿಗೂ,
Ranjio saka’e mendoraveñe lime ho amo varambañe añ’ila raike i kivohoio,
27 ೨೭ ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿಸಬೇಕು.
naho saka’e lime ty varambañe añ’ila faharoe’ i kivohoy vaho saka’e lime o varambañe amboho’ i kivohoy ahandrefañeo.
28 ೨೮ ಚೌಕಟ್ಟುಗಳ ಮಧ್ಯದಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಲುಪುವಂತಿರಬೇಕು.
Haneñateña boak’ ami’ty ila’e pak’ ami’ty ila’e ty saka’e añivo’e ao, añivo’ o varambañeo.
29 ೨೯ ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿಸಬೇಕು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಬೇಕು.
Pakoro volamena o varambañeo, le itseneo ravake volamena hiziliha’ o saka’eo vaho pakoro volamena o saka’eo.
30 ೩೦ ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ಬಿಡಿಸಬೇಕು.
Aa le hatroa’o amy lili’e nanoroañe azo ambohitse eiy i kivohoy.
31 ೩೧ ನೀಲಿ, ನೆರಳೆ, ಕಡುಗೆಂಪು ವರ್ಣಗಳು ಹಾಗೂ ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಪರದೆಯನ್ನು ಮಾಡಿಸಿ, ಅದಕ್ಕೆ ಕೆರೂಬಿಗಳಿಗಾಗಿ ಕೌಶಲ್ಯಪೂರ್ಣವಾಗಿ ಕಸೂತಿ ಹಾಕಿಸಬೇಕು.
Le trebeho lamba fañefetse am-pole leny niroroteñe matify: manga naho malòmavo naho mena mañabarà; vaho kerobe an-tsatam-pamahotse.
32 ೩೨ ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ, ಚಿನ್ನದ ತಗಡುಗಳನ್ನು ಹೊದಿಸಿ, ನಾಲ್ಕು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ಪರದೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.
Iradoradò ami’ty anakòreñe mendorave efatse pinakotse volamena; volamena o porengo’eo, mitsatoke am-bave’e volafoty efatse.
33 ೩೩ ಆ ಪರದೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ಪರದೆಯು ಪವಿತ್ರಸ್ಥಾನವೆಂಬುದನ್ನೂ ಮತ್ತು ಮಹಾಪವಿತ್ರಸ್ಥಾನವನ್ನೂ ವಿಂಗಡಿಸುವುದು.
Aradoradò amo porengo’eo i lamba fañefetsey naho aziliho an-kalo’ i lambay i vatam-pañinay, le ho fahera’ i lambay ho anahareo i toe-miavakey amy masi-do’ey.
34 ೩೪ ಮಹಾಪವಿತ್ರಸ್ಥಾನದಲ್ಲಿ ಆಜ್ಞಾಶಾಸನಗಳ ಮಂಜೂಷದ ಮೇಲೆ ಕೃಪಾಸನವನ್ನು ತಂದಿರಿಸಬೇಕು.
Le hakape’o amy vatam-pañinay i toem-pijebañañey amy masi-do’ey.
35 ೩೫ ಪರದೆಯ ಹೊರಗಡೆಯಲ್ಲಿ ಮೇಜನ್ನೂ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ದಿಕ್ಕಿನಲ್ಲಿ ದೀಪಸ್ತಂಭವನ್ನೂ ಇರಿಸಬೇಕು. ಮೇಜು ಉತ್ತರ ಭಾಗದಲ್ಲಿರಬೇಕು.
Apoho alafe’ i lambay i rairaiy vaho tandrife i rairaiy i fitàn-jiroy ami’ty ila atimo’ i kivohoy le hapo’o ami’ty ila’e avaratse i rairaiy.
36 ೩೬ ಗುಡಾರದ ಬಾಗಿಲಿಗೆ ಮರೆಯಾಗಿ ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೆರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕಸೂತಿ ಹಾಕಿಸಬೇಕು.
Le tseneo lala-miradorado i kibohotsey ami’ty manga naho malòmavo naho mena mañabasà am-pole leny rinorotse matify nivahorem-pitrebeke.
37 ೩೭ ಆ ಪರದೆ ತೂಗಿಸುವುದಕ್ಕಾಗಿ ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳ ಕೊಂಡಿಗಳನ್ನು ಚಿನ್ನದಿಂದ ಮಾಡಿಸಿ ಅವುಗಳಿಗಾಗಿ ಐದು ತಾಮ್ರದ ಗದ್ದಿಗೆ ಕಲ್ಲುಗಳನ್ನು ಮಾಡಿಸಬೇಕು.
Le ranjio anakòreñe mendoraveñe lime i miradoradoy, ipakoro volamena, ho volamena ka o fiporengo’eo; vaho ampitranaho vave’e lime torisìke.