< ವಿಮೋಚನಕಾಂಡ 27 >
1 ೧ ಯಜ್ಞವೇದಿಯನ್ನು ಜಾಲೀಮರದಿಂದ ಐದು ಮೊಳ ಉದ್ದವಾಗಿಯೂ, ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿ ಮಾಡಿಸಬೇಕು. ಅದರ ಎತ್ತರವು ಮೂರು ಮೊಳವಿರಬೇಕು.
“Orala sie loang ke sak acacia. Oru in maspang, fit itkosr tafu lusa, ac fit itkosr tafu sralap, ac in tufah fit akosr tafu fulata.
2 ೨ ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಆ ಕೊಂಬುಗಳು ಯಜ್ಞವೇದಿಯಿಂದಲೇ ಬಂದವುಗಳಾಗಿರಬೇಕು. ಆ ಯಜ್ಞವೇದಿಗೆ ತಾಮ್ರದ ತಗಡುಗಳನ್ನು ಹೊದಿಸಬೇಕು.
Orala koac in tuyak fin sruwasrik akosr ah. Koac inge in orekla ke sak se na ma sang orala loang uh, ac ma inge nukewa in nukumyukla ke osra bronze.
3 ೩ ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ತಟ್ಟೆಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ, ಮುಳ್ಳುಚಮಚಗಳನ್ನೂ, ಹಾಗೂ ಅಗ್ಗಿಷ್ಟಿಕೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.
Orala pan mwe nein apat mosroal, ac orala saful, pesin, fork, ac pan in neinyuk mulut firir. Kufwa inge nukewa in orekla ke bronze.
4 ೪ ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಬೇಕು, ಆ ಜಾಲರಿಯ ನಾಲ್ಕು ಮೂಲೆಗಳಿಗೆ ತಾಮ್ರದ ಬಳೆಗಳನ್ನು ಹಾಕಿಸಬೇಕು.
Orala sie mwe liklik ke bronze, ac sang akosr ring in utuk, ma orekla pac ke bronze, ac oakiya ke sruwasrik akosr ah.
5 ೫ ಆ ಜಾಲರಿಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗಿನವರೆಗೆ ಇದ್ದು ಯಜ್ಞವೇದಿಯ ಅಡಿಯಿಂದ ನಡುವಿನ ತನಕ ಇರುವಂತೆ ಹಾಕಿಸಬೇಕು.
Filiya mwe liklik sac in oan loac tafunyen ten ke loang uh.
6 ೬ ಯಜ್ಞವೇದಿಯನ್ನು ಹೊರುವ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ, ತಾಮ್ರದ ತಗಡುಗಳನ್ನು ಹೊದಿಸಬೇಕು.
Orala srenenu ke sak acacia, ac nokomla ke bronze,
7 ೭ ಆ ಕೋಲುಗಳನ್ನು ಆ ಬಳೆಗಳಲ್ಲಿ ಸೇರಿಸಿದಾಗ ಅವು ಯಜ್ಞವೇದಿಯನ್ನು ಹೊರುವುದಕ್ಕಾಗಿ ಅದರ ಎರಡೂ ಕಡೆಗಳಲ್ಲಿ ಇರಬೇಕು.
ac isongang nu in ring siska lac lac ke loang uh ke pacl ac utuk uh.
8 ೮ ಆ ಯಜ್ಞವೇದಿಯನ್ನು ಹಲಗೆಗಳಿಂದ ಟೊಳ್ಳಾದ ಪೆಟ್ಟಿಗೆಯಂತೆ ಮಾಡಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿದಂತೆ ಅದನ್ನು ಮಾಡಿಸಬೇಕು.
Orala loang uh ke ipinsak, ac acn loac in oalal, fal nu ke lemlem nga akkalemye nu sum fineol uh.
9 ೯ ಪರಿಶುದ್ಧ ಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ಆ ದಕ್ಷಿಣ ಭಾಗದ ಅಂಗಳಕ್ಕೆ ಪರದೆಗಳು ಇರಬೇಕು. ಆ ಪರದೆಗಳನ್ನು ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಬಟ್ಟೆಯಿಂದ ಮಾಡಿಸಬೇಕು. ಅವು ನೂರು ಮೊಳ ಉದ್ದವಾಗಿರಬೇಕು.
“Nu ke Lohm Nuknuk Mutal sik, orala sie kalkal in lisrlisr ke nuknuk linen srik eoa. Mwe lisrlisr nu ke layen nu eir in tufah yact lumngaul lusa,
10 ೧೦ ಆ ಕಡೆಯಲ್ಲಿ ಇಪ್ಪತ್ತು ಕಂಬಗಳು. ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳೂ ಪಟ್ಟಿಗಳೂ ಇರಬೇಕು.
sikulyukyak ke sru bronze longoul, ma tuyak luin kapin sru bronze longoul, wi mwe sruh ac osra orekla ke silver.
11 ೧೧ ಅದೇ ರೀತಿಯಲ್ಲಿ ಉತ್ತರ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ಪರದೆಗಳೂ, ಇಪ್ಪತ್ತು ಕಂಬಗಳು, ಇಪ್ಪತ್ತು ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು ಕಂಬಗಳ ಕೊಂಡಿಗಳೂ, ಪಟ್ಟಿಗಳೂ ಬೆಳ್ಳಿಯವಾಗಿರಬೇಕು.
Oru oapana nu ke layen epang ke kalkal uh.
12 ೧೨ ಪಶ್ಚಿಮ ಕಡೆಯಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದವಾದ ಪರದೆಗಳೂ ಹತ್ತು ಕಂಬಗಳೂ, ಹತ್ತು ಗದ್ದಿಗೆ ಕಲ್ಲುಗಳೂ ಇರಬೇಕು.
Layen nu roto in oasr mwe lisrlisr yact longoul limekosr lusa, wi sru singoul ac kapin sru singoul.
13 ೧೩ ಪೂರ್ವದ ದಿಕ್ಕಿನಲ್ಲಿಯೂ ಅಂಗಳದ ಅಗಲವು ಐವತ್ತು ಮೊಳವಿರಬೇಕು.
Layen nu kutulap, su nien utyak uh oan we, kalkal we in oayapa yact longoul limekosr lusa.
14 ೧೪ ಒಂದು ಕಡೆಯಲ್ಲಿ ಹದಿನೈದು ಮೊಳ ಉದ್ದವಾದ ಪರದೆಗಳಿದ್ದು ಅವುಗಳಿಗೆ ಮೂರು ಸ್ತಂಭಗಳೂ, ಮೂರು ಗದ್ದಿಗೆ ಕಲ್ಲುಗಳು ಇರಬೇಕು.
Mwe lisrlisr ke la sisken nien utyak uh in tufah yact itkosr tafu, wi sru tolkwe ac kapin sru tolu.
15 ೧೫ ಮತ್ತೊಂದು ಕಡೆಯಲ್ಲಿ ಹದಿನೈದು ಮೊಳ ಉದ್ದವಾದ ಪರದೆಗಳಿದ್ದು ಅವುಗಳಿಗೆ ಮೂರು ಸ್ತಂಭಗಳೂ, ಮೂರು ಗದ್ದಿಗೆ ಕಲ್ಲುಗಳು ಇರಬೇಕು
Ac layen ngia in oapana, yact itkosr tafu ke lisrlisr, wi sru tolkwe ac kapin sru tolu.
16 ೧೬ ಅಂಗಳದ ಬಾಗಿಲಲ್ಲೇ ಇಪ್ಪತ್ತು ಮೊಳದ ಪರದೆಯೂ ಇರಬೇಕು. ಅದನ್ನು ನಯವಾಗಿ ಹೊಸೆದ ನಾರಿನ ನೂಲು, ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ಗದ್ದಿಗೆ ಕಲ್ಲುಗಳು ಇರಬೇಕು.
Nu ke acn in utyak an sifacna, in tufah sie lisrlisr yact singoul lusa orekla ke linen srik eoa, otwotla ke unen sheep ngosla folfol, sroninmutuk ac srusra, ac in naweyukla ke mwe akul. In tufah sripsripyak ke sru akosr luin kapin sru akosr.
17 ೧೭ ಅಂಗಳದ ಸುತ್ತಲಿರುವ ಎಲ್ಲಾ ಕಂಬಗಳಿಗೂ, ಬೆಳ್ಳಿಯ ಪಟ್ಟಿಗಳೂ, ಬೆಳ್ಳಿಯ ಕೊಂಡಿಗಳೂ, ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು.
Sru nukewa ke kalkal uh in fah kupasreni ke osra silver, ac mwe sruh kac fah orekla ke silver, ac kapin sru nu kac orekla ke bronze.
18 ೧೮ ಅಂಗಳವು ನೂರು ಮೊಳ ಉದ್ದವಾಗಿಯೂ ಸುತ್ತಲೂ ಐವತ್ತು ಮೊಳ ಅಗಲವಾಗಿಯೂ ಇರಬೇಕು. ಅದರ ಸುತ್ತಲಿರುವ ಪರದೆಯು ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಬಟ್ಟೆಯಿಂದ ಮಾಡಿದ್ದು ಅದಕ್ಕೆ ಐದು ಮೊಳ ಎತ್ತರವಿರಬೇಕು. ಅದಕ್ಕೆ ತಾಮ್ರದ ಗದ್ದಿಗೆ ಕಲ್ಲುಗಳಿರಬೇಕು.
Kalkal uh fah yact lumngaul lusa, ac yact longoul limekosr sralapa, ac yact luo tafu fulata. Mwe lisrlisr in tufah orek ke linen srik eoa, ac kapin sru uh in orek ke bronze.
19 ೧೯ ಗುಡಾರದ ಸಕಲವಿಧವಾದ ಕೆಲಸಕ್ಕೆ ಬೇಕಾದ ಉಪಕರಣಗಳೂ, ಗುಡಾರದ ಗೂಟಗಳೂ, ಅಂಗಳದ ಗೂಟಗಳೂ ತಾಮ್ರದವುಗಳಾಗಿರಬೇಕು.
Kufwen mwe orekma nukewa ma orekmakinyuk nu ke Lohm Nuknuk Mutal, ac kwi nukewa nu ke Lohm Nuknuk ac nu ke kalkal ma rauneak, in tufah orekla ke bronze.
20 ೨೦ ದೀಪವು ಯಾವಾಗಲೂ ಉರಿಯುವಂತೆ ಇಸ್ರಾಯೇಲ್ಯರು ಒಲಿವ್ ಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಒಲಿವ್ ಎಣ್ಣೆಯನ್ನು ತೆಗೆದುಕೊಂಡು ಬರುವಂತೆ ಅವರಿಗೆ ಅಪ್ಪಣೆಕೊಡಬೇಕು.
“Sapkin nu sin mwet Israel in use nu yurum oil in olive wo ma aknasnasyeyukla tari, tuh lam uh in ku in firir ke fong nukewa.
21 ೨೧ ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.
Aaron ac wen natul pa in akoela lam uh in Lohm Nuknuk sik likin mwe lisrlisr su oan mutun Tuptup in Wuleang. Lam uh in firir ye mutuk ke eku nwe ke lotutang. Ma sap se inge ac tufah karinginyuk nwe tok sin mwet Israel ac fwilin tulik natulos.