< ವಿಮೋಚನಕಾಂಡ 27 >

1 ಯಜ್ಞವೇದಿಯನ್ನು ಜಾಲೀಮರದಿಂದ ಐದು ಮೊಳ ಉದ್ದವಾಗಿಯೂ, ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿ ಮಾಡಿಸಬೇಕು. ಅದರ ಎತ್ತರವು ಮೂರು ಮೊಳವಿರಬೇಕು.
И начини олтар од дрвета ситима, пет лаката у дужину и пет лаката у ширину, четвороугласт да буде олтар, три лакта висок.
2 ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಆ ಕೊಂಬುಗಳು ಯಜ್ಞವೇದಿಯಿಂದಲೇ ಬಂದವುಗಳಾಗಿರಬೇಕು. ಆ ಯಜ್ಞವೇದಿಗೆ ತಾಮ್ರದ ತಗಡುಗಳನ್ನು ಹೊದಿಸಬೇಕು.
И на четири угла начини му рогове, из њега да излазе рогови, и оковаћеш га у бронзу.
3 ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ತಟ್ಟೆಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ, ಮುಳ್ಳುಚಮಚಗಳನ್ನೂ, ಹಾಗೂ ಅಗ್ಗಿಷ್ಟಿಕೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.
И начинићеш му лонце за пепео и лопатице и котлиће и виљушке и машице; све му посуђе начини од бронзе.
4 ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಬೇಕು, ಆ ಜಾಲರಿಯ ನಾಲ್ಕು ಮೂಲೆಗಳಿಗೆ ತಾಮ್ರದ ಬಳೆಗಳನ್ನು ಹಾಕಿಸಬೇಕು.
И начини му решетку од бронзе као мрежу, и начини у решетке четири биочуга од бронзе на четири угла њена.
5 ಆ ಜಾಲರಿಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗಿನವರೆಗೆ ಇದ್ದು ಯಜ್ಞವೇದಿಯ ಅಡಿಯಿಂದ ನಡುವಿನ ತನಕ ಇರುವಂತೆ ಹಾಕಿಸಬೇಕು.
И метни је испод олтара унаоколо, да буде решетка до средине олтара.
6 ಯಜ್ಞವೇದಿಯನ್ನು ಹೊರುವ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ, ತಾಮ್ರದ ತಗಡುಗಳನ್ನು ಹೊದಿಸಬೇಕು.
Начини и полуге олтару, полуге од дрвета ситима, и окуј их у бронзу.
7 ಆ ಕೋಲುಗಳನ್ನು ಆ ಬಳೆಗಳಲ್ಲಿ ಸೇರಿಸಿದಾಗ ಅವು ಯಜ್ಞವೇದಿಯನ್ನು ಹೊರುವುದಕ್ಕಾಗಿ ಅದರ ಎರಡೂ ಕಡೆಗಳಲ್ಲಿ ಇರಬೇಕು.
И полуге да се провуку кроз биочуге, да буду полуге с две стране олтару, кад се носи.
8 ಆ ಯಜ್ಞವೇದಿಯನ್ನು ಹಲಗೆಗಳಿಂದ ಟೊಳ್ಳಾದ ಪೆಟ್ಟಿಗೆಯಂತೆ ಮಾಡಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿದಂತೆ ಅದನ್ನು ಮಾಡಿಸಬೇಕು.
Начинићеш га од дасака да буде изнутра шупаљ; као што ти је показано на гори тако нека начине.
9 ಪರಿಶುದ್ಧ ಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ಆ ದಕ್ಷಿಣ ಭಾಗದ ಅಂಗಳಕ್ಕೆ ಪರದೆಗಳು ಇರಬೇಕು. ಆ ಪರದೆಗಳನ್ನು ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಬಟ್ಟೆಯಿಂದ ಮಾಡಿಸಬೇಕು. ಅವು ನೂರು ಮೊಳ ಉದ್ದವಾಗಿರಬೇಕು.
И начинићеш трем шатору на јужној страни; завеси трему да буду од танког платна узведеног, сто лаката у дужину на једној страни.
10 ೧೦ ಆ ಕಡೆಯಲ್ಲಿ ಇಪ್ಪತ್ತು ಕಂಬಗಳು. ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳೂ ಪಟ್ಟಿಗಳೂ ಇರಬೇಕು.
И двадесет ступова и под њих двадесет стопица од бронзе, а куке на ступовима и пасови њихови од сребра.
11 ೧೧ ಅದೇ ರೀತಿಯಲ್ಲಿ ಉತ್ತರ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ಪರದೆಗಳೂ, ಇಪ್ಪತ್ತು ಕಂಬಗಳು, ಇಪ್ಪತ್ತು ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು ಕಂಬಗಳ ಕೊಂಡಿಗಳೂ, ಪಟ್ಟಿಗಳೂ ಬೆಳ್ಳಿಯವಾಗಿರಬೇಕು.
Тако и са западне стране да буду завеси сто лаката дуги, и двадесет ступова и двадесет стопица од бронзе, на ступовима куке и њихови пасови од сребра.
12 ೧೨ ಪಶ್ಚಿಮ ಕಡೆಯಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದವಾದ ಪರದೆಗಳೂ ಹತ್ತು ಕಂಬಗಳೂ, ಹತ್ತು ಗದ್ದಿಗೆ ಕಲ್ಲುಗಳೂ ಇರಬೇಕು.
А ширина ће трему имати са западне стране завесе од педесет лаката, десет ступова за њих и десет стопица под њих.
13 ೧೩ ಪೂರ್ವದ ದಿಕ್ಕಿನಲ್ಲಿಯೂ ಅಂಗಳದ ಅಗಲವು ಐವತ್ತು ಮೊಳವಿರಬೇಕು.
А на предњој страни према истоку биће трем широк педесет лаката.
14 ೧೪ ಒಂದು ಕಡೆಯಲ್ಲಿ ಹದಿನೈದು ಮೊಳ ಉದ್ದವಾದ ಪರದೆಗಳಿದ್ದು ಅವುಗಳಿಗೆ ಮೂರು ಸ್ತಂಭಗಳೂ, ಮೂರು ಗದ್ದಿಗೆ ಕಲ್ಲುಗಳು ಇರಬೇಕು.
Од петнаест лаката нека буду завеси на једној страни, и за њих три ступа и три стопице под њих;
15 ೧೫ ಮತ್ತೊಂದು ಕಡೆಯಲ್ಲಿ ಹದಿನೈದು ಮೊಳ ಉದ್ದವಾದ ಪರದೆಗಳಿದ್ದು ಅವುಗಳಿಗೆ ಮೂರು ಸ್ತಂಭಗಳೂ, ಮೂರು ಗದ್ದಿಗೆ ಕಲ್ಲುಗಳು ಇರಬೇಕು
На другој страни завеси од петнаест лаката, и три ступа за њих и три стопице под њих.
16 ೧೬ ಅಂಗಳದ ಬಾಗಿಲಲ್ಲೇ ಇಪ್ಪತ್ತು ಮೊಳದ ಪರದೆಯೂ ಇರಬೇಕು. ಅದನ್ನು ನಯವಾಗಿ ಹೊಸೆದ ನಾರಿನ ನೂಲು, ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ಗದ್ದಿಗೆ ಕಲ್ಲುಗಳು ಇರಬೇಕು.
А над вратима од трема завес од двадесет лаката од порфире и од скерлета и од црвца и од танког платна узведеног, везен, и четири ступа за њ, и под њих четири стопице.
17 ೧೭ ಅಂಗಳದ ಸುತ್ತಲಿರುವ ಎಲ್ಲಾ ಕಂಬಗಳಿಗೂ, ಬೆಳ್ಳಿಯ ಪಟ್ಟಿಗಳೂ, ಬೆಳ್ಳಿಯ ಕೊಂಡಿಗಳೂ, ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು.
Сви ступови у трему унаоколо да буду опасани сребром, и куке да су им сребрне а стопице од бронзе.
18 ೧೮ ಅಂಗಳವು ನೂರು ಮೊಳ ಉದ್ದವಾಗಿಯೂ ಸುತ್ತಲೂ ಐವತ್ತು ಮೊಳ ಅಗಲವಾಗಿಯೂ ಇರಬೇಕು. ಅದರ ಸುತ್ತಲಿರುವ ಪರದೆಯು ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಬಟ್ಟೆಯಿಂದ ಮಾಡಿದ್ದು ಅದಕ್ಕೆ ಐದು ಮೊಳ ಎತ್ತರವಿರಬೇಕು. ಅದಕ್ಕೆ ತಾಮ್ರದ ಗದ್ದಿಗೆ ಕಲ್ಲುಗಳಿರಬೇಕು.
У дужину ће трем имати сто лаката, у ширину педесет свуда, а у висину пет лаката, да буде од танког платна узведеног, а стопице од бронзе.
19 ೧೯ ಗುಡಾರದ ಸಕಲವಿಧವಾದ ಕೆಲಸಕ್ಕೆ ಬೇಕಾದ ಉಪಕರಣಗಳೂ, ಗುಡಾರದ ಗೂಟಗಳೂ, ಅಂಗಳದ ಗೂಟಗಳೂ ತಾಮ್ರದವುಗಳಾಗಿರಬೇಕು.
Све посуђе у шатору за сваку службу, и све коље у њему и све коље у трему да буде од бронзе.
20 ೨೦ ದೀಪವು ಯಾವಾಗಲೂ ಉರಿಯುವಂತೆ ಇಸ್ರಾಯೇಲ್ಯರು ಒಲಿವ್ ಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಒಲಿವ್ ಎಣ್ಣೆಯನ್ನು ತೆಗೆದುಕೊಂಡು ಬರುವಂತೆ ಅವರಿಗೆ ಅಪ್ಪಣೆಕೊಡಬೇಕು.
И ти заповеди синовима Израиљевим да ти донесу уља маслиновог чистог цеђеног за видело, да би жишци горели свагда.
21 ೨೧ ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.
У шатору од састанка пред завесом, који ће заклањати сведочанство, нека их Арон и синови његови спремају да горе од вечера до јутра пред Господом. То нека је уредба вечна коленима њиховим међу синовима Израиљевим.

< ವಿಮೋಚನಕಾಂಡ 27 >