< ವಿಮೋಚನಕಾಂಡ 3 >
1 ೧ ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, “ಹೋರೇಬ್” ಎಂಬ ದೇವರ ಬೆಟ್ಟಕ್ಕೆ ಬಂದನು.
Ita, agpaspastor pay laeng ni Moises kadagiti arban ni Jetro a katuganganna, ti padi ti Midian. Inturong ni Moises dagiti arban iti labes ti let-ang ket nakadanon idiay Horeb, ti bantay ti Dios.
2 ೨ ಆಗ ಯೆಹೋವನ ದೂತನು ಮುಳ್ಳಿನ ಪೊದೆಯೊಳಗಿನಿಂದ ಉರಿಯುವ ಬೆಂಕಿ ಜ್ವಾಲೆಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ಕಣ್ಣೆತ್ತಿ ನೋಡಿದಾಗ, ಆ ಮುಳ್ಳಿನ ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು; ಆದರೆ ಅದು ಸುಟ್ಟು ಹೋಗಲಿಲ್ಲ.
Nagparang kenkuana ti anghel ni Yahweh sadiay a iti maysa a gil-ayab ti apuy iti bassit a kayo. Kimmita ni Moises, ket adtoy, sumsumged, ngem saan a mapupuoran ti bassit a kayo.
3 ೩ ಆಗ ಮೋಶೆ, “ಇದೇನು ಆಶ್ಚರ್ಯ! ಪೊದೆಯು ಸುಟ್ಟು ಹೋಗುತ್ತಿಲ್ಲವಲ್ಲಾ! ಇದನ್ನು ಹತ್ತಿರಕ್ಕೆ ಹೋಗಿ ನೋಡುವೆನು” ಅಂದುಕೊಂಡನು.
Kinuna ni Moises, “Umasidegak ket kitaek daytoy nakaskasdaaw a banag, apay a saan a mapupuoran ti kayo.”
4 ೪ ಅವನು ಅದನ್ನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವನು ಕಂಡನು. ಆಗ ದೇವರು ಆ ಪೊದೆಯೊಳಗಿಂದ “ಮೋಶೆಯೇ, ಮೋಶೆಯೇ” ಎಂದು ಅವನನ್ನು ಕರೆದನು. ಅದಕ್ಕೆ ಮೋಶೆ, “ಇಗೋ ಇದ್ದೇನೆ” ಅಂದನು.
Idi nakita ni Yahweh nga umasideg isuna tapno kitaenna daytoy, inawagan ti Dios isuna manipud iti kayo ket kinunana, “Moises, Moises.” Kinuna ni Moises, “Adtoyak.”
5 ೫ ದೇವರು ಅವನಿಗೆ, “ನೀನು ಪೊದೆಯ ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಯಾಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಸ್ಥಳವಾಗಿದೆ” ಎಂದು ಹೇಳಿದನು.
Kinuna ti Dios, “Saankan nga umas-asideg! Ikkatem ti sapatosmo, ta ti pagtaktakderam a lugar ket daga a naidaton kaniak.”
6 ೬ ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.
Innayonna, “Siak ti Dios ti amam, ti Dios ni Abraham, ti Dios ni Isaac ken ti Dios ni Jacob. Ket inabbongan ni Moises ti rupana, ta mabuteng isuna a kumita iti Dios.
7 ೭ ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.
Kinuna ni Yahweh, “Awan duadua a nakitak ti panagsagsagaba dagiti tattaok nga adda idiay Egipto. Nangngegko dagiti pukkawda gapu kadagiti kapatasda, ta ammok dagiti pannakaparigatda.
8 ೮ ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.
Bimmabaak tapno wayawayaak ida manipud iti pannakabalin dagiti Egipcio ken ipanawko ida manipud iti dayta a daga ket ipanko ida iti nadam-eg ken nalawa a daga, iti maysa a daga nga agay-ayus ti gatas ken diro; iti rehion dagiti Cananeo, Heteo, Amorreo, Perezeo, Heveo ken Jebuseo.
9 ೯ ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.
Ket ita, nakadanon kaniak dagiti pukkaw dagiti tattao ti Israel. Maysa pay, nakitak ti pannakaparparigatda nga inaramid dagiti Egipcio.
10 ೧೦ ಆದುದರಿಂದ ಈಗ ಬಾ, ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡುವುದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ” ಅಂದನು.
Ita ngarud, ibaonka kenni Faraon tapno mairuarmo dagiti tattaok, dagiti Israelita, manipud idiay Egipto.”
11 ೧೧ ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗುವುದಕ್ಕೂ ಮತ್ತು ಇಸ್ರಾಯೇಲರನ್ನು ಐಗುಪ್ತದೇಶದಿಂದ ಕರೆದುಕೊಂಡು ಬರುವುದಕ್ಕೂ ನಾನು ಎಷ್ಟರವನು?” ಎಂದು ಹೇಳಿದನು.
Ngem kinuna ni Moises iti Dios, “Siasinoak, a rumbeng a mapanak kenni Faraon ken iruar dagiti Israelita manipud idiay Egipto?”
12 ೧೨ ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.
Simmungbat ti Dios, “Awan duadua nga addaakto kenka. Daytoyto ti pagilasinan nga imbaonka. Inton mairuarmo dagiti tattao manipud iti Egipto, dayawendakto iti daytoy a bantay.”
13 ೧೩ ಅದಕ್ಕೆ ಮೋಶೆಯು ದೇವರಿಗೆ, “ನಾನು ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಆತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು” ಎಂದನು.
Kinuna ni Moises iti Dios, “No mapanak kadagiti Israelita ket ibagak kadakuada, 'Imbaonnak ti Dios dagiti kapuonanyo kadakayo,' ket no kunada kaniak, 'Ania ti naganna?' Ania ti rumbeng nga ibagak kadakuada?”
14 ೧೪ ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ” ಎಂದು ಹೇಳಿದನು. “ಮತ್ತು ನೀನು ಇಸ್ರಾಯೇಲರಿಗೆ, ಇರುವಾತನೆಂಬುವವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು” ಅಂದನು.
Kinuna ti Dios kenni Moises, “SIAK TI SIAK.” Kinuna ti Dios. “Masapul nga ibagam kadagiti Israelita, 'Imbaonnak ni SIAK kadakayo.”'
15 ೧೫ ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, “ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.
Kinuna pay ti Dios kenni Moises, “Masapul nga ibagam kadagiti Israelita, 'Imbaonnak ni Yahweh, ti Dios dagiti kapuonanyo, ti Dios ni Abraham, ti Dios ni Isaac ken ti Dios ni Jacob kadakayo. Daytoy ti naganko iti agnanayon, ken kastoyto ti pananglagip kaniak dagiti amin a henerasion.'
16 ೧೬ ಆತನು, ನೀನು ಹೋಗಿ ಇಸ್ರಾಯೇಲರ ಹಿರಿಯರನ್ನು ಒಟ್ಟಾಗಿ ಸೇರಿಸಿ ಅವರಿಗೆ, “ನಿಮ್ಮ ಪೂರ್ವಿಕರ ದೇವರು ಅಂದರೆ ಅಬ್ರಹಾಮ್, ಇಸಾಕ್, ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮನ್ನು ಕಟಾಕ್ಷಿಸಿ ಐಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ನಿಶ್ಚಯವಾಗಿ ನಾನು ನೋಡಿದ್ದೇನೆ.
Mapanka ket ummongem dagiti panglakayen ti Israel. Ibagam kadakuada, 'Ni Yahweh, ti Dios dagiti kapuonanyo, ti Dios ni Abraham, ni Isaac kenni Jacob ket nagparang kaniak ket kinunana, “Pudno a napaliiwko ken nakitak ti napasamak kadakayo idiay Egipto.
17 ೧೭ ಐಗುಪ್ತ ದೇಶದಲ್ಲಿ ನಿಮಗುಂಟಾದ ದುರವಸ್ಥೆಯಿಂದ ನಿಮ್ಮನ್ನು ಬಿಡಿಸಿ, ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಹಿವ್ವಿಯರೂ, ಯೆಬೂಸಿಯರೂ, ವಾಸವಾಗಿರುವ ದೇಶಕ್ಕೆ ಬರಮಾಡಬೇಕೆಂದು ನಿರ್ಣಯಿಸಿದ್ದೇನೆ” ಎಂಬುದಾಗಿ ಅವರಿಗೆ ಹೇಳು.
Inkarik nga ipanawkayo manipud iti pannakaparigatyo idiay Egipto ket ipankayo iti daga dagiti Cananeo, Heteo, Amorreo, Perezeo, Heveo ken Jebuseo, maysa a daga nga agay-ayus ti gatas ken diro.”'
18 ೧೮ ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಳ್ಳಿರಿ.
Dumngegdanto kenka. Masapul a mapankayo iti ari ti Egipto, Sika ken dagiti panglakayen ti Israel, ket masapul nga ibagam kenkuana, 'Ni Yahweh, ti Dios dagiti Hebreo, ket nakisinnarak kadakami. Isu nga ita, palubosannakami nga agdaliasat iti tallo nga aldaw a mapan idiay let-ang, tapno makaidatonkami kenni Yahweh, a Diosmi.'
19 ೧೯ ಆ ಐಗುಪ್ತದ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ನನಗೆ ತಿಳಿದಿದೆ.
Ngem ammok a saannakayonto a palubosan ti ari ti Egipto, malaksid no mapilit a matignay ti imana.
20 ೨೦ ಆದಕಾರಣ ನಾನು ನನ್ನ ಕೈಯನ್ನು ಚಾಚಿ ಐಗುಪ್ತ ದೇಶದಲ್ಲಿ ಮಹತ್ಕಾರ್ಯಗಳನ್ನು ಮಾಡಿ ಅದನ್ನು ನಾನಾ ವಿಧವಾಗಿ ಬಾಧಿಸುವೆನು. ಅನಂತರ ಅರಸನು ನಿಮ್ಮನ್ನು ಕಳುಹಿಸಿಕೊಡುವನು.
Iyunnatkonto dagiti imak ket dusaekto dagiti Egipcio babaen kadagiti amin a milagro nga aramidekto kadakuada. Kalpasan dayta, palubosannakayonto.
21 ೨೧ “ಇದಲ್ಲದೆ ಈ ನನ್ನ ಜನರ ಮೇಲೆ ಐಗುಪ್ತ್ಯರಿಗೆ ದಯೆಯುಂಟಾಗುವಂತೆ ಮಾಡುವೆನು. ಆದ್ದರಿಂದ ನೀವು ಹೊರಡುವಾಗ ಬರಿಗೈಯಲ್ಲಿ ಬರಬೇಕಾಗುವುದಿಲ್ಲ.
Ikkakto dagiti tattao iti pabor manipud kadagiti Egipcio, isu nga inton pumanawkayo, saankayo a mapan nga ima-ima.
22 ೨೨ ನಿಮ್ಮಲ್ಲಿನ ಪ್ರತಿಯೊಬ್ಬ ಸ್ತ್ರೀಯು ನೆರೆಹೊರೆಯ ಹೆಂಗಸರಿಂದಲೂ, ನಿಮ್ಮ ಮನೆಗಳ ಅತಿಥಿಗಳಾಗಿ ತಂಗಿರುವ ಹೆಂಗಸರಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ, ಬಟ್ಟೆಗಳನ್ನೂ ಕೇಳಿಕೊಳ್ಳಲಿ. ನೀವು ಅವುಗಳನ್ನು ನಿಮ್ಮ ಗಂಡು ಹೆಣ್ಣು ಮಕ್ಕಳಿಗೆ ತೊಡಿಸಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲಿಗೆ ಮಾಡಿಹೊರಟು ಬರುವಿರಿ” ಅಂದನು.
Dumawatto ti tunggal babai iti pirak ken balitok nga alahas ken pagan-anay kadagiti kaarrubana nga Egipcio ken iti siasinoman a babai nga agnanaed iti balay ti kaarrubana. Ikabilyonto dagitoy kadagiti annakyo a lallaki ken babbai. Iti daytoy a wagas, alaenyonto amin a kinabaknang dagiti Egipcio.”