< ವಿಮೋಚನಕಾಂಡ 3 >

1 ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, “ಹೋರೇಬ್” ಎಂಬ ದೇವರ ಬೆಟ್ಟಕ್ಕೆ ಬಂದನು.
Agora Moisés estava mantendo o rebanho de Jetro, seu sogro, o sacerdote de Midian, e conduziu o rebanho para o fundo do deserto, e veio para a montanha de Deus, para Horebe.
2 ಆಗ ಯೆಹೋವನ ದೂತನು ಮುಳ್ಳಿನ ಪೊದೆಯೊಳಗಿನಿಂದ ಉರಿಯುವ ಬೆಂಕಿ ಜ್ವಾಲೆಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ಕಣ್ಣೆತ್ತಿ ನೋಡಿದಾಗ, ಆ ಮುಳ್ಳಿನ ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು; ಆದರೆ ಅದು ಸುಟ್ಟು ಹೋಗಲಿಲ್ಲ.
O anjo de Javé apareceu-lhe em uma chama de fogo do meio de um arbusto. Ele olhou, e eis que o arbusto ardeu com fogo, e o arbusto não foi consumido.
3 ಆಗ ಮೋಶೆ, “ಇದೇನು ಆಶ್ಚರ್ಯ! ಪೊದೆಯು ಸುಟ್ಟು ಹೋಗುತ್ತಿಲ್ಲವಲ್ಲಾ! ಇದನ್ನು ಹತ್ತಿರಕ್ಕೆ ಹೋಗಿ ನೋಡುವೆನು” ಅಂದುಕೊಂಡನು.
Moisés disse: “Eu vou agora, e verei esta grande visão, porque o arbusto não está queimado”.
4 ಅವನು ಅದನ್ನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವನು ಕಂಡನು. ಆಗ ದೇವರು ಆ ಪೊದೆಯೊಳಗಿಂದ “ಮೋಶೆಯೇ, ಮೋಶೆಯೇ” ಎಂದು ಅವನನ್ನು ಕರೆದನು. ಅದಕ್ಕೆ ಮೋಶೆ, “ಇಗೋ ಇದ್ದೇನೆ” ಅಂದನು.
Quando Javé viu que ele veio ver, Deus o chamou do meio do mato e disse: “Moisés! Moisés!”. Ele disse: “Aqui estou eu”.
5 ದೇವರು ಅವನಿಗೆ, “ನೀನು ಪೊದೆಯ ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಯಾಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಸ್ಥಳವಾಗಿದೆ” ಎಂದು ಹೇಳಿದನು.
Ele disse: “Não chegue perto. Tire suas sandálias, pois o lugar em que você está de pé é terra sagrada”.
6 ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.
Moreover ele disse: “Eu sou o Deus de seu pai, o Deus de Abraão, o Deus de Isaac, e o Deus de Jacó”. Moisés escondeu seu rosto porque tinha medo de olhar para Deus.
7 ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.
Yahweh disse: “Eu certamente vi a aflição de meu povo que está no Egito, e ouvi seu grito por causa de seus mestres, pois eu conheço suas tristezas.
8 ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.
Desci para libertá-los da mão dos egípcios, e para trazê-los para fora daquela terra para uma terra boa e grande, para uma terra que flui com leite e mel; para o lugar do cananeu, do hitita, do amorreu, do perizeu, do hivita, e do jebuseu.
9 ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.
Agora, eis que o grito dos filhos de Israel chegou até mim. Além disso, vi a opressão com que os egípcios os oprimem.
10 ೧೦ ಆದುದರಿಂದ ಈಗ ಬಾ, ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡುವುದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ” ಅಂದನು.
Vinde agora, portanto, e eu vos enviarei ao Faraó, para que tireis meu povo, os filhos de Israel, do Egito”.
11 ೧೧ ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗುವುದಕ್ಕೂ ಮತ್ತು ಇಸ್ರಾಯೇಲರನ್ನು ಐಗುಪ್ತದೇಶದಿಂದ ಕರೆದುಕೊಂಡು ಬರುವುದಕ್ಕೂ ನಾನು ಎಷ್ಟರವನು?” ಎಂದು ಹೇಳಿದನು.
Moisés disse a Deus: “Quem sou eu, que devo ir ao Faraó, e que devo tirar os filhos de Israel do Egito”?
12 ೧೨ ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.
Ele disse: “Certamente eu estarei com você”. Este será o sinal para você, que eu lhe enviei: quando você tiver trazido o povo para fora do Egito, você servirá a Deus nesta montanha”.
13 ೧೩ ಅದಕ್ಕೆ ಮೋಶೆಯು ದೇವರಿಗೆ, “ನಾನು ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಆತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು” ಎಂದನು.
Moisés disse a Deus: “Eis que, quando eu for ter com os filhos de Israel e lhes disser: 'O Deus de vossos pais me enviou a vós', e eles me perguntarem: 'Qual é o seu nome?' o que devo dizer-lhes?
14 ೧೪ ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ” ಎಂದು ಹೇಳಿದನು. “ಮತ್ತು ನೀನು ಇಸ್ರಾಯೇಲರಿಗೆ, ಇರುವಾತನೆಂಬುವವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು” ಅಂದನು.
Deus disse a Moisés: “EU SOU QUEM SOU”, e ele disse: “Diga isto aos filhos de Israel”: EU SOU me enviou a vocês””.
15 ೧೫ ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, “ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.
Deus disse ainda mais a Moisés: “Dirás isto aos filhos de Israel: 'Javé, o Deus de teus pais, o Deus de Abraão, o Deus de Isaac e o Deus de Jacó, me enviou a ti'. Este é meu nome para sempre, e este é o meu memorial para todas as gerações.
16 ೧೬ ಆತನು, ನೀನು ಹೋಗಿ ಇಸ್ರಾಯೇಲರ ಹಿರಿಯರನ್ನು ಒಟ್ಟಾಗಿ ಸೇರಿಸಿ ಅವರಿಗೆ, “ನಿಮ್ಮ ಪೂರ್ವಿಕರ ದೇವರು ಅಂದರೆ ಅಬ್ರಹಾಮ್, ಇಸಾಕ್, ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮನ್ನು ಕಟಾಕ್ಷಿಸಿ ಐಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ನಿಶ್ಚಯವಾಗಿ ನಾನು ನೋಡಿದ್ದೇನೆ.
Ide reunir os anciãos de Israel e dizei-lhes: 'Javé, o Deus de vossos pais, o Deus de Abraão, de Isaac e de Jacó, me apareceu, dizendo: “Certamente vos visitei e vi o que vos foi feito no Egito.
17 ೧೭ ಐಗುಪ್ತ ದೇಶದಲ್ಲಿ ನಿಮಗುಂಟಾದ ದುರವಸ್ಥೆಯಿಂದ ನಿಮ್ಮನ್ನು ಬಿಡಿಸಿ, ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಹಿವ್ವಿಯರೂ, ಯೆಬೂಸಿಯರೂ, ವಾಸವಾಗಿರುವ ದೇಶಕ್ಕೆ ಬರಮಾಡಬೇಕೆಂದು ನಿರ್ಣಯಿಸಿದ್ದೇನೆ” ಎಂಬುದಾಗಿ ಅವರಿಗೆ ಹೇಳು.
Eu disse: “Eu vos tirarei da aflição do Egito para a terra do cananeu, do hitita, do amorreu, do perizeu, do hivita e do jebuseu, para uma terra que flui com leite e mel””.
18 ೧೮ ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಳ್ಳಿರಿ.
Eles ouvirão a sua voz. Virão, você e os anciãos de Israel, ao rei do Egito, e lhe dirão: 'Javé, o Deus dos hebreus, se encontrou conosco'. Agora, por favor, deixe-nos ir três dias de viagem ao deserto, para que possamos sacrificar a Javé, nosso Deus”.
19 ೧೯ ಆ ಐಗುಪ್ತದ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ನನಗೆ ತಿಳಿದಿದೆ.
Eu sei que o rei do Egito não lhe dará permissão para ir, não, não por uma mão poderosa.
20 ೨೦ ಆದಕಾರಣ ನಾನು ನನ್ನ ಕೈಯನ್ನು ಚಾಚಿ ಐಗುಪ್ತ ದೇಶದಲ್ಲಿ ಮಹತ್ಕಾರ್ಯಗಳನ್ನು ಮಾಡಿ ಅದನ್ನು ನಾನಾ ವಿಧವಾಗಿ ಬಾಧಿಸುವೆನು. ಅನಂತರ ಅರಸನು ನಿಮ್ಮನ್ನು ಕಳುಹಿಸಿಕೊಡುವನು.
Estenderei minha mão e atingirei o Egito com todas as minhas maravilhas que farei entre eles, e depois disso ele o deixará ir.
21 ೨೧ “ಇದಲ್ಲದೆ ಈ ನನ್ನ ಜನರ ಮೇಲೆ ಐಗುಪ್ತ್ಯರಿಗೆ ದಯೆಯುಂಟಾಗುವಂತೆ ಮಾಡುವೆನು. ಆದ್ದರಿಂದ ನೀವು ಹೊರಡುವಾಗ ಬರಿಗೈಯಲ್ಲಿ ಬರಬೇಕಾಗುವುದಿಲ್ಲ.
Darei a este povo um favor aos olhos dos egípcios, e acontecerá que quando você for, não irá de mãos vazias.
22 ೨೨ ನಿಮ್ಮಲ್ಲಿನ ಪ್ರತಿಯೊಬ್ಬ ಸ್ತ್ರೀಯು ನೆರೆಹೊರೆಯ ಹೆಂಗಸರಿಂದಲೂ, ನಿಮ್ಮ ಮನೆಗಳ ಅತಿಥಿಗಳಾಗಿ ತಂಗಿರುವ ಹೆಂಗಸರಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ, ಬಟ್ಟೆಗಳನ್ನೂ ಕೇಳಿಕೊಳ್ಳಲಿ. ನೀವು ಅವುಗಳನ್ನು ನಿಮ್ಮ ಗಂಡು ಹೆಣ್ಣು ಮಕ್ಕಳಿಗೆ ತೊಡಿಸಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲಿಗೆ ಮಾಡಿಹೊರಟು ಬರುವಿರಿ” ಅಂದನು.
Mas toda mulher deverá pedir ao seu próximo, e àquele que visitar sua casa, jóias de prata, jóias de ouro e roupas. Você as colocará em seus filhos, e em suas filhas. Pilhareis os egípcios”.

< ವಿಮೋಚನಕಾಂಡ 3 >