< ವಿಮೋಚನಕಾಂಡ 30 >
1 ೧ “ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು.
TUHAN berkata kepada Musa, “Buatlah sebuah mezbah dari kayu akasia untuk membakar dupa.
2 ೨ ಅದು ಒಂದು ಮೊಳ ಉದ್ದವಾಗಿಯು, ಒಂದು ಮೊಳ ಅಗಲವಾಗಿಯೂ ಇದ್ದು ಚಚ್ಚೌಕವಾಗಿರಬೇಕು. ಅದರ ಎತ್ತರವು ಎರಡು ಮೊಳವಾಗಿರಬೇಕು. ಅದರ ಕೊಂಬುಗಳು ಅದರಿಂದಲೇ ಆಗಿರಬೇಕು.
Mezbah ini berbentuk persegi, dengan panjang setiap sisinya 45 sentimeter. Tingginya 90 sentimeter. Di setiap sudut atas, buatlah bentuk seperti tanduk sapi yang dipahat sekaligus dengan kayu mezbah itu.
3 ೩ ಅದರ ಮೇಲ್ಭಾಗಕ್ಕೆ, ನಾಲ್ಕು ಬದಿಗಳಿಗೆ ಹಾಗೂ ಕೊಂಬುಗಳಿಗೆ, ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲೂ ಚಿನ್ನದ ಅರುಗನ್ನು (ಅಂಚು) ಕಟ್ಟಿಸಬೇಕು.
Lapisilah seluruhnya dengan emas murni, termasuk bagian atas mezbah, keempat sisinya, dan tanduk-tanduknya. Buatlah juga bingkai emas di sekelilingnya.
4 ೪ ಅದರ ತೋರಣದ ಕೆಳಗೆ ಯಜ್ಞವೇದಿಯ ಎರಡು ಪಾರ್ಶ್ವಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಮೂಲೆಗಳಲ್ಲಿಯೇ ಹಾಕಿಸಬೇಕು. ಯಜ್ಞವೇದಿಯನ್ನು ಹೊರುವುದಕ್ಕೆ ಕಂಬಗಳನ್ನು ಅವುಗಳಲ್ಲಿ ಸೇರಿಸಬೇಕು.
Untuk mengusung, buatlah dua buah gelang emas dan pasangkan di bawah bingkainya, di tengah-tengah dua sisi yang berseberangan. Tongkat pengusung akan dimasukkan ke dalam gelang-gelang itu.
5 ೫ ಆ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು.
Tongkat pengusung itu juga harus dibuat dari kayu akasia dan dilapisi dengan emas.
6 ೬ ಆಜ್ಞಾಶಾಸನವಿರುವ ಮಂಜೂಷದ ಮುಂದಣ ಪರದೆಗೆ ಎದುರಾಗಿ, ಅಂದರೆ ಆಜ್ಞಾಶಾಸನವಿರುವ ಮಂಜೂಷದ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇಡಬೇಕು.
Letakkan mezbah dupa itu di luar tirai yang menutupi ruang mahakudus. Ruang mahakudus adalah tempat Aku akan bertemu denganmu atau imam besar, ketika dia melayani-Ku di depan Takhta Pendamaian.
7 ೭ “ಆರೋನನು ಪ್ರತಿನಿತ್ಯ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ
“Haruslah Harun membakar dupa yang harum di mezbah itu setiap pagi, saat dia membereskan sumbu pelita-pelita,
8 ೮ ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯವರಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿರಂತರವಾದ ಧೂಪ ಸಮರ್ಪಣೆಯು ನಡೆಯುತ್ತಿರಬೇಕು.
dan setiap sore, saat dia menyalakan pelita-pelita. Lakukanlah persembahan dupa ini di hadapan TUHAN secara rutin dan turun temurun.
9 ೯ ಆ ಯಜ್ಞವೇದಿಯ ಮೇಲೆ ಬೇರೆ ಯಾವ ಧೂಪವನ್ನೂ ಹಾಕಬಾರದು. ಅದರ ಮೇಲೆ ಇತರೆ ಹೋಮವನ್ನಾಗಲಿ, ಭೋಜನದ್ರವ್ಯವನ್ನಾಗಲಿ ಹಾಗೂ ಪಾನದ್ರವ್ಯವನ್ನಾಗಲಿ ಸಮರ್ಪಿಸಕೂಡದು.
Dupa yang dipersembahkan di mezbah itu haruslah yang dibuat khusus untuk keperluan kemah-Ku. Jangan menggunakan mezbah itu untuk mempersembahkan hal lain, termasuk kurban sembelihan, gandum-ganduman, maupun air anggur.
10 ೧೦ ಆರೋನನು ಅವನ ಸಂತತಿಯವರೂ ವರ್ಷಕ್ಕೆ ಒಂದು ಸಾರಿ ದೋಷಪರಿಹಾರಕ ಯಜ್ಞದ ಪಶುವಿನ ರಕ್ತವನ್ನು ಆ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಅದರ ಕುರಿತಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿ ಪರಿಶುದ್ಧವಾಗಿದೆ.”
“Setahun sekali, pada hari kurban pendamaian diadakan bagi seluruh umat Israel, Harun harus mengoleskan sedikit darah kurban itu pada tanduk-tanduk mezbah dupa. Upacara ini harus dilakukan secara turun temurun, karena dengan cara demikian mezbah ini dikuduskan untuk pelayanan bagi-Ku.”
11 ೧೧ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
TUHAN berkata kepada Musa,
12 ೧೨ “ನೀನು ಇಸ್ರಾಯೇಲ್ಯರ ಜನಗಣತಿ ಮಾಡಿಸಿ ಅವರನ್ನು ಲೆಕ್ಕಿಸುವಾಗ ಅವರಿಗೆ ಬಾಧೆಯುಂಟಾಗಿ ವ್ಯಾಧಿ ಸಂಭವಿಸದಂತೆ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣಕ್ಕಾಗಿ ವಿಮೋಚನ ಕ್ರಯವನ್ನು ಯೆಹೋವನಿಗೆ ಕೊಡಬೇಕು.
“Waktu kamu mengadakan sensus untuk menghitung jumlah umat Israel, saat penghitungan dilakukan, setiap laki-laki harus membayar uang pendamaian untuk menebus hidupnya di mata-Ku. Dengan tebusan itu, Aku tidak akan menghukum umat-Ku dengan wabah penyakit karena sensus tersebut.
13 ೧೩ ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ.
Setiap laki-laki yang ikut dihitung pada sensus itu harus membayar enam gram perak sebagai persembahan kepada TUHAN. Pembayaran ini ditimbang sesuai ukuran berat resmi, yaitu syikal yang tersimpan di kemah TUHAN. Satu syikal sama dengan 12 gram.
14 ೧೪ ಲೆಕ್ಕ ಮಾಡಿದವರಲ್ಲಿ ಇಪ್ಪತ್ತು ವರ್ಷದವರೂ ಹಾಗೂ ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರೂ ಆ ಕಾಣಿಕೆಯನ್ನು ಯೆಹೋವನಿಗೆ ಕೊಡಬೇಕು.
Setiap laki-laki yang berumur 20 tahun ke atas harus dihitung dalam sensus dan harus membayar persembahan ini kepada TUHAN.
15 ೧೫ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಕಾಣಿಕೆಯನ್ನು ಯೆಹೋವನಿಗೆ ಕೊಡುವುದರಲ್ಲಿ ಐಶ್ವರ್ಯವಂತರಾದರೂ ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವರು ಕಡಿಮೆ ಕೊಡಬಾರದು.
Baik orang kaya maupun orang miskin harus membayar jumlah yang sama, untuk mengadakan pendamaian bagi hidup mereka di mata-Ku.
16 ೧೬ ನೀನು ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ಅದನ್ನು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲರ ಪ್ರಾಣಗಳನ್ನು ಉಳಿಸಬೇಕೆಂಬುದಾಗಿ ಆ ಕಾಣಿಕೆಯು ಯೆಹೋವನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕವಾಗಿರುವುದು.”
Musa, kamu akan menerima uang pendamaian yang dibayar oleh bangsa Israel. Gunakanlah dalam pelayanan di kemah-Ku. Dengan demikian, Aku akan berkenan kepada umat Israel dan menganggap setiap orang sudah berdamai dengan-Ku.”
17 ೧೭ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
Lalu TUHAN berkata kepada Musa,
18 ೧೮ “ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರು ತುಂಬಿಸಬೇಕು.
“Buatlah bejana air untuk pembasuhan lengkap dengan tumpuannya. Keduanya harus dibuat dari perunggu. Letakkan bejana ini di antara mezbah dan kemah-Ku.
19 ೧೯ ಆರೋನನೂ ಅವನ ಮಕ್ಕಳೂ ಅದರಿಂದ ಕೈಕಾಲುಗಳನ್ನು ತೊಳೆದುಕೊಳ್ಳಬೇಕು.
Harun serta anak-anaknya akan membasuh tangan dan kaki mereka dengan air itu.
20 ೨೦ ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗ ಹಾಗೂ ದೇವರ ಸೇವೆಯನ್ನು ಮಾಡುವವರಾಗಿ ಯೆಹೋವನಿಗೆ ಹೋಮವನ್ನು ಸಮರ್ಪಿಸುವುದಕ್ಕಾಗಿ ಯಜ್ಞವೇದಿಯ ಬಳಿಗೆ ಬರುವಾಗ ಜೀವದಿಂದಿರಲು ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು.
Mereka harus membasuh tangan dan kaki dengan air itu ketika hendak memasuki kemah-Ku, atau ketika mendekati mezbah untuk membakar persembahan bagi-Ku. Pembasuhan ini adalah kewajiban bagi mereka, agar mereka tidak mati saat melaksanakan tugas. Hal ini menjadi ketetapan bagi Harun dan keturunannya secara turun temurun sampai selamanya.”
21 ೨೧ ತೊಳೆದುಕೊಳ್ಳದೆ ಬಂದರೆ ಮರಣ ಶಿಕ್ಷೆಯಾಗುವುದು. ಇದು ಅವನಿಗೂ ಮತ್ತು ಅವನ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು.”
22 ೨೨ ಇದಲ್ಲದೆ ಯೆಹೋವನು ಮೋಶೆಗೆ ಪುನಃ ಹೇಳಿದ್ದೇನೆಂದರೆ,
TUHAN berkata kepada Musa,
23 ೨೩ “ನೀನು ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಐನೂರು ಶೆಕೆಲ್ ಅಚ್ಚರಕ್ತಬೋಳ, ಅದರರ್ಧ ಅಂದರೆ ಇನ್ನೂರೈವತ್ತು ಶೆಕೆಲ್ ಶ್ರೇಷ್ಠವಾದ ಲವಂಗ,
“Buatlah minyak pengurapan dari wangi-wangian yang terbaik berupa: minyak mur sebanyak 6 kilogram kayu manis sebanyak 3 kilogram, batang serai sebanyak 3 kilogram,
24 ೨೪ ಐನೂರು ಸುಗಂಧವಾದ ಚೆಕ್ಕೆ, ಮತ್ತು ಒಂದು ಹೀನ್ ಒಲೀವ್ ಎಣ್ಣೆ ಇವುಗಳನ್ನೆಲ್ಲಾ ತೆಗೆದುಕೊಂಡು,
minyak zaitun sebanyak 4 liter, kayu teja sebanyak 6 kilogram. Semua itu ditimbang sesuai ukuran berat resmi yang tersimpan di kemah-Ku.
25 ೨೫ ಸುಗಂಧ ದ್ರವ್ಯಕಾರರ ಪದ್ದತಿಯ ಮೇರೆಗೆ ಮಿಶ್ರಮಾಡಿ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡಿಸಬೇಕು. ಇದು ಪರಿಶುದ್ಧವಾದ ಅಭಿಷೇಕ ತೈಲವಾಗಿರುವುದು.
Dari bahan-bahan itu, buatlah minyak pengurapan dengan cara seperti yang dilakukan oleh ahli pembuat minyak wangi. Minyak ini suci dan hanya boleh digunakan dalam pelayanan bagi-Ku.
26 ೨೬ ಆದುದರಿಂದ ದೇವದರ್ಶನದ ಗುಡಾರ, ಆಜ್ಞಾಶಾಸನಗಳ ಮಂಜೂಷ, ಮೇಜು, ಮೇಜಿನ ಉಪಕರಣಗಳು,
Dengan minyak inilah kamu akan mengurapi kemah-Ku, peti perjanjian,
27 ೨೭ ದೀಪಸ್ತಂಭ, ದೀಪಸ್ತಂಭದ ಉಪಕರಣಗಳು,
meja dengan segala peralatannya, tiang pelita dengan segala peralatannya, mezbah dupa,
28 ೨೮ ಧೂಪವೇದಿ, ಯಜ್ಞವೇದಿ, ಯಜ್ಞವೇದಿಯ ಉಪಕರಣಗಳು ಹಾಗು ನೀರಿನ ತೊಟ್ಟಿ ಅದರ ಪೀಠ ಇವುಗಳನ್ನೆಲ್ಲಾ ಅಭಿಷೇಕಿಸಬೇಕು.
mezbah kurban dengan segala peralatannya, dan bejana pembasuhan dari perunggu serta tumpuannya.
29 ೨೯ ಅವು ಅತಿ ಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧೀಕರಿಸಬೇಕು. ಅವುಗಳನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.
Urapilah semuanya itu agar menjadi kudus, sehingga apa pun yang menyentuhnya juga dikuduskan untuk pelayanan bagi-Ku.
30 ೩೦ ಅದಲ್ಲದೆ ಆರೋನನೂ ಅವನ ಮಕ್ಕಳೂ ನನಗೆ ಯಾಜಕರಾಗುವಂತೆ ಅವರನ್ನು ಅಭಿಷೇಕಿಸಿ ಶುದ್ಧೀಕರಿಸಬೇಕು.”
“Urapilah Harun dan anak-anaknya dengan minyak itu, agar mereka dikhususkan untuk melayani sebagai imam.
31 ೩೧ ನೀನು ಇಸ್ರಾಯೇಲರಿಗೆ ಆಜ್ಞಾಪಿಸತಕ್ಕದ್ದೇನೆಂದರೆ, “ನೀವೂ ನಿಮ್ಮ ಸಂತತಿಯವರೂ ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಪರಿಶುದ್ಧ ಅಭಿಷೇಕ ತೈಲವೆಂದು ತಿಳಿದುಕೊಳ್ಳಬೇಕು.
Kamu harus mengatakan kepada umat Israel, ‘Sesuai perintah TUHAN, kita akan senantiasa menganggap minyak pengurapan ini sangat kudus dan hanya digunakan untuk pelayanan bagi TUHAN.
32 ೩೨ ಜನರು ಮೈಗೆ ಹಚ್ಚಿಕೊಳ್ಳುವುದಕ್ಕೆ ಇದನ್ನು ಉಪಯೋಗಿಸಬಾರದು. ಈ ವಿಧಾನದ ಮೇರೆಗೆ ಬೇರೆ ಕೆಲಸಕ್ಕಾಗಿ ತೈಲವನ್ನು ಮಾಡಲೇಬಾರದು. ಇದು ದೇವರ ವಸ್ತು. ಇದು ಪರಿಶುದ್ಧವಾದದ್ದು ಎಂದು ನೀವು ತಿಳಿದುಕೊಳ್ಳಬೇಕು.
Minyak ini tidak boleh dioleskan pada tubuh orang biasa, dan kalian tidak boleh membuat minyak yang campurannya serupa dengan minyak ini. Minyak ini khusus untuk pelayanan bagi TUHAN, dan kalian harus memperlakukannya sebagai sesuatu yang kudus.
33 ೩೩ ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.”
Siapa pun yang membuat minyak dengan campuran serupa, atau mengoleskannya kepada seseorang yang bukan imam, dia harus disingkirkan dari antara umat Israel.’”
34 ೩೪ ಅದಲ್ಲದೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಹಾಲುಮಡ್ಡಿ, ಗುಗ್ಗುಲ ಹಾಗೂ ಗಂಧದ ಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಸ್ವಚ್ಛವಾದ ಧೂಪವನ್ನೂ ಸಮಭಾಗವಾಗಿ ತೆಗೆದುಕೊಂಡು,
TUHAN berkata kepada Musa, “Buatlah dupa dengan wangi-wangian berikut ini: getah damar, kulit lokan, getah rasamala, kemenyan murni, masing-masing dengan jumlah yang sama.
35 ೩೫ ಸುಗಂಧ ದ್ರವ್ಯ ತಯಾರಿಸುವವರ ಕೌಶಲ್ಯಕ್ಕೆ ತಕ್ಕಂತೆ ಕಲಿಸಿ ಉಪ್ಪು ಹಾಕಿ ದೇವರ ಸೇವೆಗೆ ಪವಿತ್ರವಾದ ಧೂಪದ್ರವ್ಯವನ್ನು ಮಾಡಿಸಬೇಕು.
Campurkan semua itu menjadi dupa, seperti buatan seorang ahli pencampur dupa. Dupa itu harus dicampur dengan garam. Biarlah campuran ini selalu murni dan dianggap kudus.
36 ೩೬ ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿ ಪರಿಶುದ್ಧವಾದದ್ದೆಂದು ನೀವು ಭಾವಿಸಬೇಕು.
Tumbuklah sedikit dari dupa itu sampai sangat halus dan letakkan di depan peti perjanjian. Itulah tempat di mana Aku akan bertemu denganmu atau imam besar yang bertugas di dalam kemah-Ku. Dupa itu harus selalu dianggap kudus dan hanya boleh dipakai untuk pelayanan bagi-Ku.
37 ೩೭ ನೀವು ಆ ಧೂಪದ್ರವ್ಯದ ವಿಧಾನದ ಮೇರೆಗೆ ನಿಮ್ಮ ಸ್ವಂತಕ್ಕೋಸ್ಕರ ಧೂಪದ್ರವ್ಯವನ್ನು ಮಾಡಿಸಿಕೊಳ್ಳಬಾರದು. ಅದು ಯೆಹೋವನ ಸೇವೆಗೆ ಮಾತ್ರ ಉಪಯೋಗಿಸಬೇಕಾದ ಮೀಸಲಾದ ಪವಿತ್ರ ಪದಾರ್ಥವೆಂದು ಭಾವಿಸಬೇಕು.
Kalian tidak boleh membuat campuran dupa yang sama untuk diri sendiri. Dupa ini dikhususkan bagi penyembahan-Ku, dan kalian harus memperlakukannya sebagai sesuatu yang kudus.
38 ೩೮ ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ಬಹಿಷ್ಕಾರಕ್ಕೆ ಗುರಿಯಾಗುವನು.”
Siapa pun yang membuat dupa yang serupa dengan itu bagi dirinya sendiri dan untuk menikmati wanginya, dia harus disingkirkan dari antara umat Israel.”