1೧“ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು.
This chapter is missing in the source text.
2೨ಅದು ಒಂದು ಮೊಳ ಉದ್ದವಾಗಿಯು, ಒಂದು ಮೊಳ ಅಗಲವಾಗಿಯೂ ಇದ್ದು ಚಚ್ಚೌಕವಾಗಿರಬೇಕು. ಅದರ ಎತ್ತರವು ಎರಡು ಮೊಳವಾಗಿರಬೇಕು. ಅದರ ಕೊಂಬುಗಳು ಅದರಿಂದಲೇ ಆಗಿರಬೇಕು.
3೩ಅದರ ಮೇಲ್ಭಾಗಕ್ಕೆ, ನಾಲ್ಕು ಬದಿಗಳಿಗೆ ಹಾಗೂ ಕೊಂಬುಗಳಿಗೆ, ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲೂ ಚಿನ್ನದ ಅರುಗನ್ನು (ಅಂಚು) ಕಟ್ಟಿಸಬೇಕು.
4೪ಅದರ ತೋರಣದ ಕೆಳಗೆ ಯಜ್ಞವೇದಿಯ ಎರಡು ಪಾರ್ಶ್ವಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಮೂಲೆಗಳಲ್ಲಿಯೇ ಹಾಕಿಸಬೇಕು. ಯಜ್ಞವೇದಿಯನ್ನು ಹೊರುವುದಕ್ಕೆ ಕಂಬಗಳನ್ನು ಅವುಗಳಲ್ಲಿ ಸೇರಿಸಬೇಕು.
5೫ಆ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು.
6೬ಆಜ್ಞಾಶಾಸನವಿರುವ ಮಂಜೂಷದ ಮುಂದಣ ಪರದೆಗೆ ಎದುರಾಗಿ, ಅಂದರೆ ಆಜ್ಞಾಶಾಸನವಿರುವ ಮಂಜೂಷದ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇಡಬೇಕು.
8೮ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯವರಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿರಂತರವಾದ ಧೂಪ ಸಮರ್ಪಣೆಯು ನಡೆಯುತ್ತಿರಬೇಕು.
9೯ಆ ಯಜ್ಞವೇದಿಯ ಮೇಲೆ ಬೇರೆ ಯಾವ ಧೂಪವನ್ನೂ ಹಾಕಬಾರದು. ಅದರ ಮೇಲೆ ಇತರೆ ಹೋಮವನ್ನಾಗಲಿ, ಭೋಜನದ್ರವ್ಯವನ್ನಾಗಲಿ ಹಾಗೂ ಪಾನದ್ರವ್ಯವನ್ನಾಗಲಿ ಸಮರ್ಪಿಸಕೂಡದು.
10೧೦ಆರೋನನು ಅವನ ಸಂತತಿಯವರೂ ವರ್ಷಕ್ಕೆ ಒಂದು ಸಾರಿ ದೋಷಪರಿಹಾರಕ ಯಜ್ಞದ ಪಶುವಿನ ರಕ್ತವನ್ನು ಆ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಅದರ ಕುರಿತಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿ ಪರಿಶುದ್ಧವಾಗಿದೆ.”
12೧೨“ನೀನು ಇಸ್ರಾಯೇಲ್ಯರ ಜನಗಣತಿ ಮಾಡಿಸಿ ಅವರನ್ನು ಲೆಕ್ಕಿಸುವಾಗ ಅವರಿಗೆ ಬಾಧೆಯುಂಟಾಗಿ ವ್ಯಾಧಿ ಸಂಭವಿಸದಂತೆ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣಕ್ಕಾಗಿ ವಿಮೋಚನ ಕ್ರಯವನ್ನು ಯೆಹೋವನಿಗೆ ಕೊಡಬೇಕು.
13೧೩ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ.
14೧೪ಲೆಕ್ಕ ಮಾಡಿದವರಲ್ಲಿ ಇಪ್ಪತ್ತು ವರ್ಷದವರೂ ಹಾಗೂ ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರೂ ಆ ಕಾಣಿಕೆಯನ್ನು ಯೆಹೋವನಿಗೆ ಕೊಡಬೇಕು.
15೧೫ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಕಾಣಿಕೆಯನ್ನು ಯೆಹೋವನಿಗೆ ಕೊಡುವುದರಲ್ಲಿ ಐಶ್ವರ್ಯವಂತರಾದರೂ ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವರು ಕಡಿಮೆ ಕೊಡಬಾರದು.
16೧೬ನೀನು ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ಅದನ್ನು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲರ ಪ್ರಾಣಗಳನ್ನು ಉಳಿಸಬೇಕೆಂಬುದಾಗಿ ಆ ಕಾಣಿಕೆಯು ಯೆಹೋವನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕವಾಗಿರುವುದು.”
28೨೮ಧೂಪವೇದಿ, ಯಜ್ಞವೇದಿ, ಯಜ್ಞವೇದಿಯ ಉಪಕರಣಗಳು ಹಾಗು ನೀರಿನ ತೊಟ್ಟಿ ಅದರ ಪೀಠ ಇವುಗಳನ್ನೆಲ್ಲಾ ಅಭಿಷೇಕಿಸಬೇಕು.
29೨೯ಅವು ಅತಿ ಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧೀಕರಿಸಬೇಕು. ಅವುಗಳನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.
30೩೦ಅದಲ್ಲದೆ ಆರೋನನೂ ಅವನ ಮಕ್ಕಳೂ ನನಗೆ ಯಾಜಕರಾಗುವಂತೆ ಅವರನ್ನು ಅಭಿಷೇಕಿಸಿ ಶುದ್ಧೀಕರಿಸಬೇಕು.”
31೩೧ನೀನು ಇಸ್ರಾಯೇಲರಿಗೆ ಆಜ್ಞಾಪಿಸತಕ್ಕದ್ದೇನೆಂದರೆ, “ನೀವೂ ನಿಮ್ಮ ಸಂತತಿಯವರೂ ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಪರಿಶುದ್ಧ ಅಭಿಷೇಕ ತೈಲವೆಂದು ತಿಳಿದುಕೊಳ್ಳಬೇಕು.
32೩೨ಜನರು ಮೈಗೆ ಹಚ್ಚಿಕೊಳ್ಳುವುದಕ್ಕೆ ಇದನ್ನು ಉಪಯೋಗಿಸಬಾರದು. ಈ ವಿಧಾನದ ಮೇರೆಗೆ ಬೇರೆ ಕೆಲಸಕ್ಕಾಗಿ ತೈಲವನ್ನು ಮಾಡಲೇಬಾರದು. ಇದು ದೇವರ ವಸ್ತು. ಇದು ಪರಿಶುದ್ಧವಾದದ್ದು ಎಂದು ನೀವು ತಿಳಿದುಕೊಳ್ಳಬೇಕು.
33೩೩ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.”
34೩೪ಅದಲ್ಲದೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಹಾಲುಮಡ್ಡಿ, ಗುಗ್ಗುಲ ಹಾಗೂ ಗಂಧದ ಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಸ್ವಚ್ಛವಾದ ಧೂಪವನ್ನೂ ಸಮಭಾಗವಾಗಿ ತೆಗೆದುಕೊಂಡು,
35೩೫ಸುಗಂಧ ದ್ರವ್ಯ ತಯಾರಿಸುವವರ ಕೌಶಲ್ಯಕ್ಕೆ ತಕ್ಕಂತೆ ಕಲಿಸಿ ಉಪ್ಪು ಹಾಕಿ ದೇವರ ಸೇವೆಗೆ ಪವಿತ್ರವಾದ ಧೂಪದ್ರವ್ಯವನ್ನು ಮಾಡಿಸಬೇಕು.
36೩೬ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿ ಪರಿಶುದ್ಧವಾದದ್ದೆಂದು ನೀವು ಭಾವಿಸಬೇಕು.
37೩೭ನೀವು ಆ ಧೂಪದ್ರವ್ಯದ ವಿಧಾನದ ಮೇರೆಗೆ ನಿಮ್ಮ ಸ್ವಂತಕ್ಕೋಸ್ಕರ ಧೂಪದ್ರವ್ಯವನ್ನು ಮಾಡಿಸಿಕೊಳ್ಳಬಾರದು. ಅದು ಯೆಹೋವನ ಸೇವೆಗೆ ಮಾತ್ರ ಉಪಯೋಗಿಸಬೇಕಾದ ಮೀಸಲಾದ ಪವಿತ್ರ ಪದಾರ್ಥವೆಂದು ಭಾವಿಸಬೇಕು.
38೩೮ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ಬಹಿಷ್ಕಾರಕ್ಕೆ ಗುರಿಯಾಗುವನು.”