< ವಿಮೋಚನಕಾಂಡ 31 >

1 ಯೆಹೋವನು ಮೋಶೆಗೆ ಹೀಗೆಂದನು,
וַיְדַבֵּ֥ר יְהוָ֖ה אֶל־מֹשֶׁ֥ה לֵּאמֹֽר׃
2 “ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯನ ಮಗನೂ ಆಗಿರುವ ಬೆಚಲೇಲನೆಂಬುವನನ್ನು ಹೆಸರು ಹಿಡಿದು ಕರೆದಿದ್ದೇನೆ.
רְאֵ֖ה קָרָ֣אתִֽי בְשֵׁ֑ם בְּצַלְאֵ֛ל בֶּן־אוּרִ֥י בֶן־ח֖וּר לְמַטֵּ֥ה יְהוּדָֽה׃
3 ಕಲಾತ್ಮಕವಾದ ವಿನ್ಯಾಸಗಳನ್ನು ಮಾಡುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,
וָאֲמַלֵּ֥א אֹת֖וֹ ר֣וּחַ אֱלֹהִ֑ים בְּחָכְמָ֛ה וּבִתְבוּנָ֥ה וּבְדַ֖עַת וּבְכָל־מְלָאכָֽה׃
4 ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ಕೆತ್ತನೇ ಕೆಲಸಗಳನ್ನು ಮಾಡುವುದಕ್ಕೂ,
לַחְשֹׁ֖ב מַחֲשָׁבֹ֑ת לַעֲשׂ֛וֹת בַּזָּהָ֥ב וּבַכֶּ֖סֶף וּבַנְּחֹֽשֶׁת׃
5 ಅವನಿಗೆ ದೇವರಾತ್ಮವನ್ನು ದಯಪಾಲಿಸಿ, ಅದಕ್ಕೆ ಬೇಕಾದ ಜ್ಞಾನ, ವಿದ್ಯೆ, ವಿವೇಕಗಳನ್ನೂ ಸಕಲ ಶಿಲ್ಪ ಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ.
וּבַחֲרֹ֥שֶׁת אֶ֛בֶן לְמַלֹּ֖את וּבַחֲרֹ֣שֶׁת עֵ֑ץ לַעֲשׂ֖וֹת בְּכָל־מְלָאכָֽה׃
6 ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲೀಯಾಬನನ್ನೂ ನೇಮಿಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನೂ ಮಾಡುವುದಕ್ಕೆ ಜ್ಞಾನಿಗಳಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ.
וַאֲנִ֞י הִנֵּ֧ה נָתַ֣תִּי אִתּ֗וֹ אֵ֣ת אָהֳלִיאָ֞ב בֶּן־אֲחִֽיסָמָךְ֙ לְמַטֵּה־דָ֔ן וּבְלֵ֥ב כָּל־חֲכַם־לֵ֖ב נָתַ֣תִּי חָכְמָ֑ה וְעָשׂ֕וּ אֵ֖ת כָּל־אֲשֶׁ֥ר צִוִּיתִֽךָ׃
7 ದೇವದರ್ಶನದ ಗುಡಾರ, ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷ ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು,
אֵ֣ת ׀ אֹ֣הֶל מוֹעֵ֗ד וְאֶת־הָֽאָרֹן֙ לָֽעֵדֻ֔ת וְאֶת־הַכַּפֹּ֖רֶת אֲשֶׁ֣ר עָלָ֑יו וְאֵ֖ת כָּל־כְּלֵ֥י הָאֹֽהֶל׃
8 ಮೇಜು ಅದರ ಉಪಕರಣಗಳು, ಚೊಕ್ಕ ಬಂಗಾರದ ದೀಪಸ್ತಂಭ ಅದರ ಉಪಕರಣಗಳು,
וְאֶת־הַשֻּׁלְחָן֙ וְאֶת־כֵּלָ֔יו וְאֶת־הַמְּנֹרָ֥ה הַטְּהֹרָ֖ה וְאֶת־כָּל־כֵּלֶ֑יהָ וְאֵ֖ת מִזְבַּ֥ח הַקְּטֹֽרֶת׃
9 ಧೂಪವೇದಿ, ಯಜ್ಞವೇದಿ ಅದರ ಉಪಕರಣಗಳು, ನೀರಿನ ತೊಟ್ಟಿ ಅದರ ಪೀಠ,
וְאֶת־מִזְבַּ֥ח הָעֹלָ֖ה וְאֶת־כָּל־כֵּלָ֑יו וְאֶת־הַכִּיּ֖וֹר וְאֶת־כַּנּֽוֹ׃
10 ೧೦ ಅಲಂಕಾರವಾದ ದೀಕ್ಷಾವಸ್ತ್ರಗಳು ಅಂದರೆ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಪವಿತ್ರ ಯಾಜಕವಸ್ತ್ರಗಳು,
וְאֵ֖ת בִּגְדֵ֣י הַשְּׂרָ֑ד וְאֶת־בִּגְדֵ֤י הַקֹּ֙דֶשׁ֙ לְאַהֲרֹ֣ן הַכֹּהֵ֔ן וְאֶת־בִּגְדֵ֥י בָנָ֖יו לְכַהֵֽן׃
11 ೧೧ ಅಭಿಷೇಕತೈಲ ಮತ್ತು ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.”
וְאֵ֨ת שֶׁ֧מֶן הַמִּשְׁחָ֛ה וְאֶת־קְטֹ֥רֶת הַסַּמִּ֖ים לַקֹּ֑דֶשׁ כְּכֹ֥ל אֲשֶׁר־צִוִּיתִ֖ךָ יַעֲשֽׂוּ׃ פ
12 ೧೨ ಯೆಹೋವನು ಮತ್ತೆ ಮೋಶೆಗೆ ಹೀಗೆಂದನು,
וַיֹּ֥אמֶר יְהוָ֖ה אֶל־מֹשֶׁ֥ה לֵּאמֹֽר׃
13 ೧೩ “ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ: ನಾನು ನೇಮಿಸಿದ ಪವಿತ್ರ ಸಬ್ಬತ್ ದಿನಗಳನ್ನು ನೀವು ತಪ್ಪದೇ ಆಚರಿಸಬೇಕು. ನಿಮ್ಮನ್ನು ಶುದ್ಧಿಪಡಿಸುವ ಯೆಹೋವನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರ ಮಧ್ಯ ಇರುವ ಗುರುತು.
וְאַתָּ֞ה דַּבֵּ֨ר אֶל־בְּנֵ֤י יִשְׂרָאֵל֙ לֵאמֹ֔ר אַ֥ךְ אֶת־שַׁבְּתֹתַ֖י תִּשְׁמֹ֑רוּ כִּי֩ א֨וֹת הִ֜וא בֵּינִ֤י וּבֵֽינֵיכֶם֙ לְדֹרֹ֣תֵיכֶ֔ם לָדַ֕עַת כִּ֛י אֲנִ֥י יְהוָ֖ה מְקַדִּשְׁכֶֽם׃
14 ೧೪ ಆದಕಾರಣ ನೀವು ಸಬ್ಬತ್ ದಿನವನ್ನು ಪರಿಶುದ್ಧವಾದ ದಿನವೆಂದು ಎಣಿಸಿ ಆಚರಿಸಬೇಕು. ಅದನ್ನು ಅಶುದ್ಧಪಡಿಸುವ ಪ್ರತಿಯೊಬ್ಬನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಯಾವನಾದರೂ ಕೆಲಸವನ್ನು ಮಾಡಿದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.
וּשְׁמַרְתֶּם֙ אֶת־הַשַּׁבָּ֔ת כִּ֛י קֹ֥דֶשׁ הִ֖וא לָכֶ֑ם מְחַֽלְלֶ֙יהָ֙ מ֣וֹת יוּמָ֔ת כִּ֗י כָּל־הָעֹשֶׂ֥ה בָהּ֙ מְלָאכָ֔ה וְנִכְרְתָ֛ה הַנֶּ֥פֶשׁ הַהִ֖וא מִקֶּ֥רֶב עַמֶּֽיהָ׃
15 ೧೫ ಆರು ದಿನಗಳು ಕೆಲಸ ಮಾಡಬೇಕು. ಏಳನೆಯ ದಿನ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿದೆ. ಅದು ಯೆಹೋವನಿಗೆ ಪರಿಶುದ್ಧವಾದ ದಿನ. ಇಂಥ ಸಬ್ಬತ್ ದಿನದಲ್ಲಿ ಕೆಲಸವೇನಾದರೂ ಮಾಡುವವನಿಗೆ ಮರಣಶಿಕ್ಷೆಯಾಗಬೇಕು.
שֵׁ֣שֶׁת יָמִים֮ יֵעָשֶׂ֣ה מְלָאכָה֒ וּבַיּ֣וֹם הַשְּׁבִיעִ֗י שַׁבַּ֧ת שַׁבָּת֛וֹן קֹ֖דֶשׁ לַיהוָ֑ה כָּל־הָעֹשֶׂ֧ה מְלָאכָ֛ה בְּי֥וֹם הַשַּׁבָּ֖ת מ֥וֹת יוּמָֽת׃
16 ೧೬ ಆದುದರಿಂದ ಇಸ್ರಾಯೇಲರು ಸಬ್ಬತ್ ದಿನವನ್ನು ಆಚರಿಸಬೇಕು. ಈ ಆಚರಣೆಯು ಅವರಿಗೂ, ಅವರ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ.
וְשָׁמְר֥וּ בְנֵֽי־יִשְׂרָאֵ֖ל אֶת־הַשַּׁבָּ֑ת לַעֲשׂ֧וֹת אֶת־הַשַּׁבָּ֛ת לְדֹרֹתָ֖ם בְּרִ֥ית עוֹלָֽם׃
17 ೧೭ ಇದು ನನಗೂ ಇಸ್ರಾಯೇಲರಿಗೂ ನಡುವೆಯಿರುವ ಸದಾಕಾಲದ ಗುರುತು. ಏಕೆಂದರೆ ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೇ ವಿಶ್ರಮಿಸಿಕೊಂಡನಲ್ಲವೇ?”
בֵּינִ֗י וּבֵין֙ בְּנֵ֣י יִשְׂרָאֵ֔ל א֥וֹת הִ֖וא לְעֹלָ֑ם כִּי־שֵׁ֣שֶׁת יָמִ֗ים עָשָׂ֤ה יְהוָה֙ אֶת־הַשָּׁמַ֣יִם וְאֶת־הָאָ֔רֶץ וּבַיּוֹם֙ הַשְּׁבִיעִ֔י שָׁבַ֖ת וַיִּנָּפַֽשׁ׃ ס
18 ೧೮ ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.
וַיִּתֵּ֣ן אֶל־מֹשֶׁ֗ה כְּכַלֹּתוֹ֙ לְדַבֵּ֤ר אִתּוֹ֙ בְּהַ֣ר סִינַ֔י שְׁנֵ֖י לֻחֹ֣ת הָעֵדֻ֑ת לֻחֹ֣ת אֶ֔בֶן כְּתֻבִ֖ים בְּאֶצְבַּ֥ע אֱלֹהִֽים׃

< ವಿಮೋಚನಕಾಂಡ 31 >