< ವಿಮೋಚನಕಾಂಡ 31 >
1 ೧ ಯೆಹೋವನು ಮೋಶೆಗೆ ಹೀಗೆಂದನು,
၁တဖန် ထာဝရဘုရားသည်၊ မောရှေအား မိန့်တော်မူပြန်သည်ကား၊
2 ೨ “ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯನ ಮಗನೂ ಆಗಿರುವ ಬೆಚಲೇಲನೆಂಬುವನನ್ನು ಹೆಸರು ಹಿಡಿದು ಕರೆದಿದ್ದೇನೆ.
၂နားထောင်လော့၊ ငါသည် ယုဒအမျိုးသား ဟုရ၏သားဖြစ်သော ဥရိ၏သား ဗေဇလေလကို အမည်ဖြင့် ခန့်ထား၏။
3 ೩ ಕಲಾತ್ಮಕವಾದ ವಿನ್ಯಾಸಗಳನ್ನು ಮಾಡುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,
၃သူသည် ရွှေငွေကြေးဝါကို လုပ်သော အတတ်၊ ကျောက်ကို သွေး၍ စီသောအတတ်၊
4 ೪ ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ಕೆತ್ತನೇ ಕೆಲಸಗಳನ್ನು ಮಾಡುವುದಕ್ಕೂ,
၄သစ်သားကို ထုလုပ်သော အတတ်နှင့် အမျိုးမျိုးသော အလုပ်ကို ထူးဆန်းစွာ လုပ်တတ်မည်အကြောင်း၊
5 ೫ ಅವನಿಗೆ ದೇವರಾತ್ಮವನ್ನು ದಯಪಾಲಿಸಿ, ಅದಕ್ಕೆ ಬೇಕಾದ ಜ್ಞಾನ, ವಿದ್ಯೆ, ವಿವೇಕಗಳನ್ನೂ ಸಕಲ ಶಿಲ್ಪ ಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ.
၅ဉာဏ်ပညာနှင့်တကွ သိပ္ပံအတတ်အမျိုးမျိုးတို့ကို ငါပေး၍ ဘုရားသခင်၏ ဝိညာဉ်တော်နှင့် ပြည့်စုံစေ၏။
6 ೬ ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲೀಯಾಬನನ್ನೂ ನೇಮಿಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನೂ ಮಾಡುವುದಕ್ಕೆ ಜ್ಞಾನಿಗಳಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ.
၆သူနှင့်အတူ ဒန်အမျိုးသား အဟိသမက်၏သား၊ အဟောလျဘကိုလည်း ငါခန့်ထား၏။ ငါသည် သင့်အား မှာထားသမျှတို့ကို လိမ္မာသောသူအပေါင်းတို့သည် လုပ်တတ်မည်အကြောင်း၊ သူတို့နှလုံးထဲသို့ ဉာဏ်ပညာကို ငါသွင်းထားပြီ။
7 ೭ ದೇವದರ್ಶನದ ಗುಡಾರ, ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷ ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು,
၇ထိုသူတို့သည် ပရိသတ်စည်းဝေးရာ တဲတော်၊ သက်သေခံချက်သေတ္တာ၊ သေတ္တာအပေါ်မှာ တင်သော သေတ္တာအဖုံး၊ တဲတော်တန်ဆာရှိသမျှကို၎င်း၊
8 ೮ ಮೇಜು ಅದರ ಉಪಕರಣಗಳು, ಚೊಕ್ಕ ಬಂಗಾರದ ದೀಪಸ್ತಂಭ ಅದರ ಉಪಕರಣಗಳು,
၈စားပွဲနှင့် စားပွဲတန်ဆာကို၎င်း၊ စင်ကြယ်သော မီးခုံနှင့် မီးခုံတန်ဆာရှိသမျှကို၎င်း၊ နံ့သာပေါင်း ရှို့သော ပလ္လင်၊
9 ೯ ಧೂಪವೇದಿ, ಯಜ್ಞವೇದಿ ಅದರ ಉಪಕರಣಗಳು, ನೀರಿನ ತೊಟ್ಟಿ ಅದರ ಪೀಠ,
၉မီးရှို့ရာယဇ်ပူဇော်သော ပလ္လင်တန်ဆာရှိသမျှကို၎င်း၊
10 ೧೦ ಅಲಂಕಾರವಾದ ದೀಕ್ಷಾವಸ್ತ್ರಗಳು ಅಂದರೆ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಪವಿತ್ರ ಯಾಜಕವಸ್ತ್ರಗಳು,
၁၀အမှုတော်ကို ထမ်းစရာအဝတ်၊ ယဇ်ပုရောဟိတ်အမှုကို ဆောင်သောအခါ၊ ယဇ်ပုရောဟိတ်အာရုန် နှင့် သူ၏သားဝတ်ဘို့ သန့်ရှင်းသောအဝတ်ကို၎င်း၊
11 ೧೧ ಅಭಿಷೇಕತೈಲ ಮತ್ತು ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.”
၁၁လိမ်းစရာဆီနှင့် သန့်ရှင်းရာဌာန၌ သုံးဘို့ နံ့သာပေါင်းမွှေးကို၎င်း၊ ငါမှာထားသမျှအတိုင်း လုပ်ရကြ မည်ဟု မိန့်တော်မူ၏။
12 ೧೨ ಯೆಹೋವನು ಮತ್ತೆ ಮೋಶೆಗೆ ಹೀಗೆಂದನು,
၁၂တဖန်ထာဝရဘုရားက၊ သင်သည် ဣသရေလအမျိုးသားတို့အား ဆင့်ဆိုရမည်မှာ၊
13 ೧೩ “ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ: ನಾನು ನೇಮಿಸಿದ ಪವಿತ್ರ ಸಬ್ಬತ್ ದಿನಗಳನ್ನು ನೀವು ತಪ್ಪದೇ ಆಚರಿಸಬೇಕು. ನಿಮ್ಮನ್ನು ಶುದ್ಧಿಪಡಿಸುವ ಯೆಹೋವನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರ ಮಧ್ಯ ಇರುವ ಗುರುತು.
၁၃ငါသည် သင်တို့ကို သန့်ရှင်းစေသော ထာဝရဘုရားဖြစ်ကြောင်းကို သင်တို့သိစေခြင်းငှါ၊ ငါနှင့်သင်တို့၏ သားစဉ်မြေးဆက် စပ်ကြား၌ လက္ခဏာသက်သေဖြစ်ဘို့ရာ၊ ငါ့ဥပုသ်နေ့ကို စင်စစ်စောင့်ရ ကြမည်။
14 ೧೪ ಆದಕಾರಣ ನೀವು ಸಬ್ಬತ್ ದಿನವನ್ನು ಪರಿಶುದ್ಧವಾದ ದಿನವೆಂದು ಎಣಿಸಿ ಆಚರಿಸಬೇಕು. ಅದನ್ನು ಅಶುದ್ಧಪಡಿಸುವ ಪ್ರತಿಯೊಬ್ಬನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಯಾವನಾದರೂ ಕೆಲಸವನ್ನು ಮಾಡಿದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.
၁၄ဥပုသ်နေ့သည် သင်တို့အား သန့်ရှင်းသောကြောင့် ထိုနေ့ကို စောင့်ရကြမည်။ ဥပုသ်နေ့ကို ဖျက်သောသူတိုင်း အသေခံရမည်။ ထိုနေ့၌ အလုပ်လုပ်သော သူမည်သည်ကား၊ မိမိအမျိုးမှ ပယ်ရှင်းခြင်းကို ခံရမည်။
15 ೧೫ ಆರು ದಿನಗಳು ಕೆಲಸ ಮಾಡಬೇಕು. ಏಳನೆಯ ದಿನ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿದೆ. ಅದು ಯೆಹೋವನಿಗೆ ಪರಿಶುದ್ಧವಾದ ದಿನ. ಇಂಥ ಸಬ್ಬತ್ ದಿನದಲ್ಲಿ ಕೆಲಸವೇನಾದರೂ ಮಾಡುವವನಿಗೆ ಮರಣಶಿಕ್ಷೆಯಾಗಬೇಕು.
၁၅ခြောက်ရက်ပတ်လုံး အလုပ်လုပ်ရမည်။ သတ္တမနေ့သည် ထာဝရဘုရားအား သန့်ရှင်း၍ ငြိမ်ရသော ဥပုသ်နေ့ဖြစ်၏။ ဥပုသ်နေ့၌ အလုပ်လုပ်သောသူမည်သည်ကား၊ ဧကန်အမှန် အသေခံရမည်။
16 ೧೬ ಆದುದರಿಂದ ಇಸ್ರಾಯೇಲರು ಸಬ್ಬತ್ ದಿನವನ್ನು ಆಚರಿಸಬೇಕು. ಈ ಆಚರಣೆಯು ಅವರಿಗೂ, ಅವರ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ.
၁၆သို့ဖြစ်၍ ဣသရေလအမျိုးသားအစဉ်အဆက်တို့သည်၊ ထာဝရပဋိညာဉ် ဖြစ်စေခြင်းငှါ၊ ဥပုသ်နေ့ရက် အစဉ်အတိုင်း ဥပုသ်စောင့်ရကြမည်။
17 ೧೭ ಇದು ನನಗೂ ಇಸ್ರಾಯೇಲರಿಗೂ ನಡುವೆಯಿರುವ ಸದಾಕಾಲದ ಗುರುತು. ಏಕೆಂದರೆ ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೇ ವಿಶ್ರಮಿಸಿಕೊಂಡನಲ್ಲವೇ?”
၁၇ထိုသို့ စောင့်လျှင်၊ ငါနှင့် ဣသရေလအမျိုးသားစပ်ကြား၌ ထာဝရလက္ခဏာသက်သေဖြစ်လိမ့်မည်။ အကြောင်းမူကား၊ ထာဝရဘုရားသည် မိုဃ်းကောင်းကင်နှင့် မြေကြီးကို၊ ခြောက်ရက်တွင် ဖန်ဆင်း၍၊ သတ္တမနေ့ရက်၌ ငြိမ်ဝပ်စွာ နေလျက် အားဖြည့်တော်မူသည်ဟု မောရှေအား မိန့်တော်မူ၏။
18 ೧೮ ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.
၁၈ထိုသို့ ဘုရားသခင်သည် သိနာတောင်ပေါ်မှာ မောရှေနှင့် နှုတ်ဆက်တော်မူသည်အဆုံး၌၊ လက်ညှိုးတော်နှင့် အက္ခရာတင်သော သက်သေခံချက်၊ ကျောက်ပြားနှစ်ပြားကို ပေးတော်မူ၏။