< ವಿಮೋಚನಕಾಂಡ 32 >

1 ಮೋಶೆಯು ಬೆಟ್ಟದಿಂದ ಇಳಿದು ಬರುವುದರಲ್ಲಿ ತಡವಾದುದನ್ನು ಇಸ್ರಾಯೇಲರು ನೋಡಿ, ಆರೋನನ ಬಳಿಗೆ ಒಟ್ಟಾಗಿ ಸೇರಿ ಬಂದು ಆತನಿಗೆ, “ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ನಮಗೊಬ್ಬ ದೇವರನ್ನು ಮಾಡಿಕೊಡು ಏಕೆಂದರೆ ಐಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ” ಎಂದು ಹೇಳಿದರು.
وقتی بازگشت موسی از کوه سینا به طول انجامید، مردم نزد هارون جمع شده، گفتند: «برخیز و برای ما خدایی بساز تا ما را هدایت کند، چون نمی‌دانیم بر سر موسی که ما را از مصر بیرون آورد، چه آمده است.»
2 ಅದಕ್ಕೆ ಆರೋನನು ಅವರಿಗೆ, “ನಿಮ್ಮ ಹೆಂಡತಿಯರ ಹಾಗು ಗಂಡುಹೆಣ್ಣು ಮಕ್ಕಳ ಕಿವಿಯಲ್ಲಿ ಹಾಕಿಕೊಂಡಿರುವ ಚಿನ್ನದ ಓಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ” ಎಂದು ಹೇಳಿದನು.
هارون در پاسخ گفت: «گوشواره‌های طلا را که در گوش زنان و دختران و پسران شماست، درآورده، نزد من بیاورید.»
3 ಅವರೆಲ್ಲರೂ ತಮ್ಮ ಕಿವಿಗಳಲ್ಲಿದ್ದ ಚಿನ್ನದ ಓಲೆಗಳನ್ನು ಬಿಚ್ಚಿ ಆರೋನನ ಬಳಿಗೆ ತಂದು ಕೊಟ್ಟರು.
بنابراین، قوم گوشواره‌های طلای خود را که در گوشهای ایشان بود، به هارون دادند.
4 ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು “ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು” ಎಂದು ಹೇಳಿದರು.
هارون نیز گوشواره‌های طلا را گرفت و آنها را ذوب کرده، در قالبی که ساخته بود، ریخت و مجسمه‌ای به شکل گوساله ساخت. قوم اسرائیل وقتی گوساله را دیدند فریاد برآوردند: «ای بنی‌اسرائیل، این همان خدایی است که شما را از مصر بیرون آورد.»
5 ಆರೋನನು ಅದನ್ನು ನೋಡಿದಾಗ ಹೋರಿಕರುವಿಗೆ ಎದುರಾಗಿ ಒಂದು ಯಜ್ಞವೇದಿಯನ್ನು ಕಟ್ಟಿಸಿ, “ನಾಳೆ ಯೆಹೋವನಿಗೆ ಹಬ್ಬವಾಗಬೇಕು” ಎಂದು ಪ್ರಕಟಿಸಿದನು.
هارون با دیدن این صحنه، یک مذبح نیز جلوی آن گوساله ساخت و گفت: «فردا برای خداوند جشن می‌گیریم.»
6 ಆದುದರಿಂದ ಮರುದಿನದಲ್ಲಿ ಜನರು ಬೆಳಿಗ್ಗೆ ಎದ್ದು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಆನಂತರ ಜನರು ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಆಮೇಲೆ ಕುಣಿದಾಡಲು ಎದ್ದರು.
روز بعد، صبح زود، وقتی مردم برخاستند، پیش آن گوساله قربانیهای سوختنی و قربانیهای سلامتی تقدیم نمودند. آنگاه قوم برای خوردن و نوشیدن نشستند، و برای لهو و لَعِب به پا خاستند.
7 ಹೀಗಿರಲಾಗಿ ಯೆಹೋವನು ಮೋಶೆಗೆ, “ನೀನು ಬೆಟ್ಟದಿಂದ ಇಳಿದುಹೋಗು ಐಗುಪ್ತದೇಶದಿಂದ ನೀನು ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು.
خداوند به موسی فرمود: «بی‌درنگ به پایین برو، چون قومت که تو آنها را از مصر بیرون آوردی، فاسد شده‌اند.
8 ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು.
آنها به همین زودی احکام مرا فراموش کرده و منحرف گشته‌اند و برای خود گوساله‌ای ساخته، آن را پرستش می‌کنند و برایش قربانی کرده، می‌گویند: ای بنی‌اسرائیل، این همان خدایی است که تو را از مصر بیرون آورد.»
9 ಅದಲ್ಲದೆ ಯೆಹೋವನು ಮೋಶೆಗೆ, “ಈ ಜನರ ಸ್ವಭಾವವನ್ನು ನಾನು ನೋಡಿದ್ದೇನೆ. ಇವರು ಮೊಂಡುತನವುಳ್ಳ ಜನರಾಗಿದ್ದಾರೆ
خداوند به موسی فرمود: «من دیده‌ام که این قوم چقدر سرکشند.
10 ೧೦ ಆದಕಾರಣ ನೀನು ನನ್ನನ್ನು ತಡೆಯಬೇಡ. ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡಿಬಿಡುವೆನು. ತರುವಾಯ ನಿನ್ನಿಂದಲೇ ಒಂದು ಮಹಾ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.
بگذار آتش خشم خود را بر ایشان شعله‌ور ساخته، همه را هلاک کنم. به جای آنها از تو قوم عظیمی به وجود خواهم آورد.»
11 ೧೧ ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು, “ಯೆಹೋವನೇ ನೀನು ಮಹಾ ಶಕ್ತಿಯಿಂದಲೂ, ಭುಜಬಲದಿಂದಲೂ ಐಗುಪ್ತ ದೇಶದಿಂದ ಹೊರಗೆ ಕರೆತಂದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವುದೇತಕೆ?
ولی موسی از خداوند، خدای خود خواهش کرد که آنها را هلاک نکند و گفت: «خداوندا چرا بر قوم خود این گونه خشمگین شده‌ای؟ مگر با قدرت و معجزات عظیم خود آنها را از مصر بیرون نیاوردی؟
12 ೧೨ ಐಗುಪ್ತ್ಯರು ನಿನ್ನ ವಿಷಯದಲ್ಲಿ, ‘ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?’ ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ.
آیا می‌خواهی مصری‌ها بگویند:”خدا ایشان را فریب داده، از اینجا بیرون برد تا آنها را در کوهها بکشد و از روی زمین محو کند؟“از تو خواهش می‌کنم از خشم خود برگردی و از مجازات قوم خود درگذری.
13 ೧೩ ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’” ಅಂದನು.
به یاد آور قولی را که به خدمتگزاران خود ابراهیم، اسحاق و یعقوب داده‌ای. به یاد آور چگونه برای ایشان به ذات خود قسم خورده، فرمودی:”فرزندان شما را مثل ستارگان آسمان بی‌شمار می‌گردانم و سرزمینی را که دربارهٔ آن سخن گفته‌ام به نسلهای شما می‌دهم تا همیشه در آن زندگی کنند.“»
14 ೧೪ ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು.
بنابراین، خداوند از تصمیم خود منصرف شد.
15 ೧೫ ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಯು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದು ಬಂದನು. ಆ ಹಲಿಗೆಗಳ ಎರಡು ಪಕ್ಕಗಳಲ್ಲಿಯೂ ಅಕ್ಷರಗಳು ಬರೆದಿದ್ದವು. ಈ ಕಡೆಯೂ ಆ ಕಡೆಯೂ ಬರಹವಿತ್ತು.
آنگاه موسی از کوه پایین آمد، در حالی که دو لوح سنگی در دست داشت که بر دو طرف آن لوحها ده فرمان خدا نوشته شده بود.
16 ೧೬ ಆ ಶಿಲಾಶಾಸನಗಳು ದೇವರ ಕೆಲಸವೇ ಆಗಿದ್ದು, ಅವುಗಳಲ್ಲಿ ಕೆತ್ತಿದ ಅಕ್ಷರಗಳು ದೇವರೇ ಬರೆದದ್ದಾಗಿತ್ತು.
(آن ده فرمان را خدا روی لوحهای سنگی نوشته بود.)
17 ೧೭ ಇಸ್ರಾಯೇಲರು ಉತ್ಸಾಹದಿಂದ ಕೂಗಾಡುತ್ತಾ ಇರಲಾಗಿ ಯೆಹೋಶುವನು ಆ ಶಬ್ದವನ್ನು ಕೇಳಿ, “ಪಾಳೆಯದ ಕಡೆಯಿಂದ ಯುದ್ಧಧ್ವನಿ ಕೇಳಿಸುತ್ತದೆ” ಎಂದು ಮೋಶೆಗೆ ಹೇಳಿದನು.
یوشع که همراه موسی بود، وقتی صدای داد و فریاد و خروش قوم را که از دامنهٔ کوه برمی‌خاست شنید، به موسی گفت: «از اردوگاه صدای جنگ به گوش می‌رسد.»
18 ೧೮ ಅದಕ್ಕವನು, “ನನಗೆ ಕೇಳಿಸುವುದು ಜಯ ಧ್ವನಿಯೂ ಅಲ್ಲ, ವಿಜಯಗೀತೆಯೂ ಅಲ್ಲ ಸೋತು ಗೋಳಾಡುವವರ ಧ್ವನಿಯೂ ಅಲ್ಲ, ಗಾನಮಾಡುವವರ ಉಲ್ಲಾಸದ ಧ್ವನಿಯೇ ಆಗಿದೆ” ಅಂದನು.
ولی موسی گفت: «این صدا، فریاد پیروزی یا شکست نیست، بلکه صدای ساز و آواز است.»
19 ೧೯ ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಮತ್ತು ಜನರು ಕುಣಿದಾಡುವುದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ತಗ್ಗಿನಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.
وقتی به اردوگاه نزدیک شدند، موسی چشمش به گوسالهٔ طلایی افتاد که مردم در برابرش می‌رقصیدند و شادی می‌کردند. پس موسی آنچنان خشمگین شد که لوحها را به پایین کوه پرت کرد و لوحها تکه‌تکه شد.
20 ೨೦ ಜನರು ಮಾಡಿಸಿಕೊಂಡಿದ್ದ ಹೋರಿಕರುವನ್ನು ಅವನು ಬೆಂಕಿಯಿಂದ ಸುಟ್ಟು ಅರೆದು ಪುಡಿ ಪುಡಿ ಮಾಡಿ ನೀರಿನಲ್ಲಿ ಕಲಸಿ ಇಸ್ರಾಯೇಲರಿಗೆ ಆ ನೀರನ್ನು ಕುಡಿಸಿದನು.
سپس گوسالهٔ طلایی را گرفت و در آتش انداخته آن را ذوب کرد. سپس آن را کوبید و خُرد کرد و به صورت گَرد درآورد و روی آب پاشید و به بنی‌اسرائیل نوشانید.
21 ೨೧ ಆಗ ಮೋಶೆ ಆರೋನನನ್ನು ಕುರಿತು, “ನೀನು ಈ ಜನರಿಂದ ಮಹಾ ಅಪರಾಧವನ್ನು ಮಾಡಿಸಿದಿಯಲ್ಲಾ ಹೀಗೆ ಮಾಡಿಸುವುದಕ್ಕೆ ಇವರು ನಿನಗೇನು ಮಾಡಿದರು?” ಎಂದು ವಿಚಾರಿಸಲು,
آنگاه موسی به هارون گفت: «این قوم به تو چه بدی کرده بودند که ایشان را به چنین گناه بزرگی آلوده ساختی؟»
22 ೨೨ ಆರೋನನು, “ಸ್ವಾಮಿಯವರು, ರೋಷಗೊಳ್ಳಬಾರದು ಈ ಜನರು ದುಷ್ಟಸ್ವಭಾದವರು, ಹಠಮಾರಿಗಳು ಎಂಬುದು ನಿನಗೆ ಗೊತ್ತಿಲ್ಲವೇ?
هارون گفت: «بر من خشم مگیر. تو خود این قوم را خوب می‌شناسی که چقدر فاسدند.
23 ೨೩ ಅವರು ನನ್ನ ಬಳಿಗೆ ಬಂದು, ‘ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ಒಬ್ಬ ದೇವರನ್ನು ಮಾಡಿಸಿಕೊಡು, ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಮೋಶೆಗೆ ಏನಾಯಿತೋ ಗೊತ್ತಿಲ್ಲ’ ಅಂದರು.
آنها به من گفتند:”خدایی برای ما بساز تا ما را هدایت کند، چون نمی‌دانیم بر سر موسی که ما را از مصر بیرون آورد، چه آمده است.“
24 ೨೪ ಅದಕ್ಕೆ ನಾನು ‘ಯಾರಲ್ಲಿ ಚಿನ್ನದ ಒಡವೆಯಿದೆಯೋ ಅವರೆಲ್ಲರೂ ಅದನ್ನು ಬಿಚ್ಚಿ ನನಗೆ ಕೊಡಬೇಕು’ ಅಂದೆನು. ಅವರು ಹಾಗೆ ಕೊಡಲಾಗಿ ನಾನು ಆ ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಈ ಹೋರಿಕರುವಿನ ರೂಪವು ಉಂಟಾಯಿತು” ಅಂದನು.
من هم گفتم که گوشواره‌های طلای خود را پیش من بیاورند. گوشواره‌های طلا را در آتش ریختم و این گوساله از آن ساخته شد.»
25 ೨೫ ಮೋಶೆಯು ಜನರು ಅಂಕೆ ತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಸಡಿಲವಾಗಿ ಬಿಟ್ಟಿದ್ದರಿಂದ ಅವನ ವಿರೋಧಿಗಳು ಅಪಹಾಸ್ಯಮಾಡುವುದಕ್ಕೆ ಆಸ್ಪದವಾಯಿತು,
وقتی موسی دید که قوم افسار گسیخته شده‌اند و هارون آنها را واگذاشته تا از خود بیخود شده، خود را نزد دشمنان بی‌آبرو کنند،
26 ೨೬ ಅವರು ಕ್ರಮವಿಲ್ಲದೆ ಸ್ವೇಚ್ಛೆಯಾಗಿ ನಡೆದುಕೊಳ್ಳುವುದನ್ನು ನೋಡಿ ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವನ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರೂ ಅವನ ಬಳಿಗೆ ಸೇರಿ ಬಂದರು.
کنار دروازهٔ اردوگاه ایستاد و با صدای بلند گفت: «هر که طرف خداوند است پیش من بیاید.» تمام طایفهٔ لاوی دور او جمع شدند.
27 ೨೭ ಮೋಶೆ ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಿಮ್ಮಲ್ಲಿ ಪ್ರತಿಯೊಬ್ಬನೂ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿನ ವರೆಗೂ ಹೋಗುತ್ತಾ ಬರುತ್ತಾ ತಮ್ಮತಮ್ಮ ಸಹೋದರ, ಗೆಳೆಯ ಮತ್ತು ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು’” ಎಂದು ಹೇಳಿದನು.
موسی به ایشان گفت: «خداوند، خدای بنی‌اسرائیل می‌فرماید: شمشیر به کمر ببندید و از این سوی اردوگاه تا آن سویش بروید و برادر و دوست و همسایهٔ خود را بکشید.»
28 ೨೮ ಲೇವಿಯ ಕುಲದವರು ಮೋಶೆಯ ಆಜ್ಞೆಯ ಪ್ರಕಾರವೇ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಹತರಾದರು.
لاویان اطاعت کردند و در آن روز در حدود سه هزار نفر از قوم اسرائیل کشته شدند.
29 ೨೯ ಮೋಶೆಯು ಲೇವಿಯರಿಗೆ, “ಈ ಹೊತ್ತು ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಸಹೋದರರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೇ ನಿಮ್ಮನ್ನು ಯೆಹೋವನ ಸೇವೆಗೆ ಪ್ರತಿಷ್ಠಿಸಿಕೊಂಡಿದ್ದೀರಿ. ಆದುದರಿಂದ ಆತನು ಈ ದಿನ ನಿಮ್ಮನ್ನು ಆಶೀರ್ವದಿಸುವನು” ಎಂದು ಹೇಳಿದನು.
موسی به لاویان گفت: «امروز خود را وقف کردید تا خداوند را خدمت کنید. با اینکه می‌دانستید که اطاعت شما به قیمت جان پسران و برادرانتان تمام می‌شود، از فرمان خدا سرپیچی نکردید؛ پس خدا به شما برکت خواهد داد.»
30 ೩೦ ಮರುದಿನದಲ್ಲಿ ಮೋಶೆಯು ಜನರಿಗೆ, “ನೀವು ಮಹಾ ಪಾಪವನ್ನು ಮಾಡಿರುವಿರಿ. ಆದರೂ ನಾನು ಬೆಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು. ಒಂದು ವೇಳೆ ನೀವು ಮಾಡಿದ ಪಾಪಕೃತ್ಯಕ್ಕೆ ಪ್ರಾಯಶ್ಚಿತ್ತವನ್ನು ನಾನು ಮಾಡಬಹುದೇನೋ” ಎಂದು ಹೇಳಿದನು.
روز بعد موسی به قوم گفت: «شما مرتکب گناه بزرگی شده‌اید. حال، من به بالای کوه می‌روم تا در حضور خداوند برای شما شفاعت کنم. شاید خدا از گناهان شما درگذرد.»
31 ೩೧ ಆಗ ಮೋಶೆ ಯೆಹೋವನ ಬಳಿಗೆ ತಿರುಗಿ ಹೋಗಿ, “ಅಯ್ಯೋ! ಈ ಜನರು ಮಹಾ ಪಾಪವನ್ನು ಮಾಡಿದ್ದಾರೆ. ಚಿನ್ನದ ಹೋರಿಕರುವನ್ನು ಮಾಡಿ ದೇವರೆಂದುಕೊಂಡಿದ್ದಾರೆ.
پس موسی به حضور خداوند بازگشت و چنین دعا کرد: «آه ای خداوند، این قوم مرتکب گناه بزرگی شده، برای خود بُتی از طلا ساختند.
32 ೩೨ ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.
تمنا می‌کنم گناه آنها را ببخش و گرنه اسم مرا از دفترت محو کن.»
33 ೩೩ ಅದಕ್ಕೆ ಯೆಹೋವನು ಮೋಶೆಗೆ, “ಯಾರು ನನ್ನ ಮಾತನ್ನು ಮೀರಿ ಪಾಪಮಾಡಿದರೋ ಅವರ ಹೆಸರುಗಳನ್ನೇ ನನ್ನ ಬಳಿಯಲ್ಲಿರುವ ಪುಸ್ತಕದಿಂದ ನಾನು ಅಳಿಸಿಬಿಡುವೆನು.
خداوند به موسی فرمود: «چرا اسم تو را محو کنم؟ هر که نسبت به من گناه کرده است، اسم او را محو خواهم کرد.
34 ೩೪ ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.”
حال بازگرد و قوم را به جایی که گفته‌ام راهنمایی کن و فرشتهٔ من پیشاپیش تو حرکت خواهد کرد. ولی من به موقع، قوم را به خاطر این گناه مجازات خواهم کرد.»
35 ೩೫ ಇಸ್ರಾಯೇಲರು ಆರೋನನ ಕೈಯಿಂದ ಆ ಹೋರಿಕರುವನ್ನು ಮಾಡಿಸಿಕೊಂಡಿದ್ದರಿಂದ ಯೆಹೋವನು ಅವರನ್ನು ದಂಡಿಸಿದನು.
خداوند به خاطر پرستش بُتی که هارون ساخته بود، بلای هولناکی بر بنی‌اسرائیل نازل کرد.

< ವಿಮೋಚನಕಾಂಡ 32 >