< ವಿಮೋಚನಕಾಂಡ 33 >
1 ೧ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಐಗುಪ್ತ ದೇಶದಿಂದ ಕರೆದುತಂದ ಈ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳವನ್ನು ಬಿಟ್ಟು, ‘ನಾನು ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ಮತ್ತು ನಿಮ್ಮ ಸಂತತಿಯವರಿಗೆ ಕೊಡುವೆನೆಂದು’ ಪ್ರಮಾಣ ಮಾಡಿದ ದೇಶಕ್ಕೆ ಹೊರಟುಹೋಗು.
To pacoengah Angraeng mah Mosi khaeah, Hae ahmuen hae caehtaak ah loe, Abraham, Issak hoi Jakob khaeah, Na caanawk khaeah ka paek han, tiah lokkam ih, prae thungah Izip prae thung hoi na zaehhoih ih kaminawk hoi nawnto caeh oh;
2 ೨ ನಾನು, ನಿನಗಿಂತ ಮುಂದಾಗಿ ಒಬ್ಬ ದೂತನನ್ನು ಕಳುಹಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ಹೊರದೂಡುವೆನು.
kai ih van kami to na hmaa ah ka patoeh han, anih mah Kannaan, Amor, Hit, Periz, Hiv hoi Jebus kaminawk to haek boih tih.
3 ೩ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ನೀನು ಹೋಗು. ಆದರೆ ನಾನು ನಿಮ್ಮ ಸಂಗಡ ಬರುವುದಿಲ್ಲ, ಏಕೆಂದರೆ ನೀವು ಮೊಂಡುತನದ ಜನರು. ನಾನು ದಾರಿಯಲ್ಲಿ ನಿಮ್ಮನ್ನು ಸಂಹರಿಸಿಬಿಟ್ಟೇನು” ಅಂದನು.
Khoitui hoi tahnutui longhaih prae ah caeh oh; toe kai loe nangcae salakah ka caeh mak ai; palungthah kami ah na oh o pongah, loklam ah kam rosak boih moeng tih, tiah a naa.
4 ೪ ಇಸ್ರಾಯೇಲ್ ಜನರು ದೋಷಾರೋಪಣೆಯ ಈ ವಾಕ್ಯವನ್ನು ಕೇಳಿದಾಗ ದುಃಖಪಟ್ಟರು. ಅವರಲ್ಲಿ ಒಬ್ಬರೂ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.
Kaminawk mah to baktih tamthang kasae to thaih o naah, palungset o moe, mi doeh amthoephaih khukbuen to angkhuk o ai.
5 ೫ ಯೆಹೋವನು ಮೋಶೆಗೆ ಹೀಗೆಂದನು. “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಮೊಂಡುತನವುಳ್ಳ ಜನರು, ನಾನು ಒಂದು ಕ್ಷಣ ಮಾತ್ರ ನಿಮ್ಮ ಮಧ್ಯದಲ್ಲಿ ಬರುವುದಾದರೆ, ನಾನು ನಿಮ್ಮನ್ನು ನಿರ್ಮೂಲ ಮಾಡಿಬಿಡುವೆನು. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ. ನಿಮಗೆ ನಾನು ಏನು ಮಾಡಬೇಕೆಂಬುದನ್ನು ಆಲೋಚಿಸಿಕೊಳ್ಳುವೆನು’” ಅಂದನು.
Angraeng mah Mosi khaeah, Israel kaminawk khaeah hae tiah thui paeh; nangcae loe palungthah kami ah na oh o; nangcae hae nawnetta thung kang caeh haih nahaeloe, kam rosak boih moeng tih; nangcae to kawbang maw kang sak han, tiah ka panoek hanah, nam thoep o haih hmuennawk to angkhring oh, tiah a thuih, tiah a naa.
6 ೬ ಅದರಂತೆಯೇ ಇಸ್ರಾಯೇಲ್ಯರು ಹೋರೇಬ್ ಬೆಟ್ಟದಿಂದ ಮುಂದೆ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.
To pongah Israel kaminawk mah Horeb mae ah amthoephaih hmuennawk to angkhring o boih.
7 ೭ ಮೋಶೆಯು ಗುಡಾರವನ್ನು ಪಾಳೆಯದ ಹೊರಗೆ ದೂರವಾಗಿ ಹಾಕಿದ್ದನು. ಅದಕ್ಕೆ ದೇವದರ್ಶನದ ಗುಡಾರ ಎಂದು ಹೆಸರಿಟ್ಟನು. ಯೆಹೋವನ ಉತ್ತರವನ್ನು ಬಯಸಿದವರೆಲ್ಲರೂ ಪಾಳೆಯದ ಹೊರಗಿದ್ದ ದೇವದರ್ಶನದ ಗುಡಾರಕ್ಕೆ ಹೋಗುತ್ತಿದ್ದರು.
Mosi mah ataihaih ahmuen tasa bang, kangthla kue ahmuen ah, kahni im to sak moe, kaminawk amkhuenghaih kahni im, tiah a kawk. Angraeng pakrong han koeh kami boih loe, ataihaih ahmuen tasa bangah sak ih kaminawk amkhuenghaih kahni im ah caeh o nasoe.
8 ೮ ಮೋಶೆಯು ಆ ಗುಡಾರಕ್ಕೆ ಹೋಗುವಾಗಲೆಲ್ಲಾ ಜನರೆಲ್ಲರೂ ಎದ್ದು ತಮ್ಮ ತಮ್ಮ ಡೇರೆಗಳ ಬಾಗಿಲಲ್ಲಿ ನಿಂತು, ಮೋಶೆಯು ಆ ಗುಡಾರದೊಳಕ್ಕೆ ಹೋಗುವ ತನಕ ಅವನನ್ನು ನೋಡುತ್ತಿದ್ದರು.
Mosi kahni im ah caeh naah, kaminawk boih angthawk o moe, angmacae kahni im thok taengah angdoet o; Mosi kahni imthung ah akun ai karoek to a khet o.
9 ೯ ಮೋಶೆಯು ಆ ಗುಡಾರದೊಳಕ್ಕೆ ಹೋದಕೂಡಲೆ ಮೇಘಸ್ತಂಭವು ಇಳಿದು ಆ ಗುಡಾರದ ಬಾಗಿಲಲ್ಲಿ ನಿಲ್ಲುತ್ತಿತ್ತು ಹಾಗು ಯೆಹೋವನು ಮೋಶೆಯ ಸಂಗಡ ಮಾತನಾಡುತ್ತಿದ್ದನು.
Mosi kahni imthung ah akun naah, tamai tung loe kahni im akunhaih thok taengah krak tathuk; to naah Mosi hoi Angraeng to lok apaeh hoi.
10 ೧೦ ಆ ಮೇಘಸ್ತಂಭವು ಗುಡಾರದ ಬಾಗಿಲಲ್ಲಿ ನಿಂತಿದ್ದನ್ನು ಜನರೆಲ್ಲರೂ ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲಲ್ಲೇ ಅಡ್ಡಬೀಳುತ್ತಿದ್ದರು.
Kaminawk boih mah, kahni imthung akunhaih thok taengah angdoe tamai tung to hnuk o naah, kaminawk boih angmacae ih kahni im thok taengah angdoet o moe, a bok o.
11 ೧೧ ಮನುಷ್ಯರೊಳಗೆ ಒಬ್ಬನೂ ತನ್ನ ಸ್ನೇಹಿತನೊಡನೆ ಹೇಗೆ ಮಾತನಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. ಆನಂತರ ಮೋಶೆಯು ಪಾಳೆಯಕ್ಕೆ ಹಿಂತಿರುಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಯೌವನಸ್ಥನಾದ ಅವನ ಶಿಷ್ಯನು ಆ ಗುಡಾರದಲ್ಲಿಯೇ ಇರುತ್ತಿದ್ದನು, ಅದರ ಬಳಿಯಿಂದ ದೂರ ಸರಿಯುತ್ತಿರಲಿಲ್ಲ.
Kami mah angmah ih ampui hoi lok apaeh baktih toengah, Angraeng hoi Mosi doeh mikhmai kangtong ah lok apaeh hoi; to pacoengah Mosi loe a ohhaih ahmuen ah amlaem let; toe anih bomkung, thendoeng, Nun capa Joshua loe kahni im to caehtaak ai.
12 ೧೨ ಮೋಶೆಯು ಯೆಹೋವನಿಗೆ ಹೇಳಿದ್ದೇನೆಂದರೆ, “‘ಈ ಜನರನ್ನು ಆ ಸೀಮೆಗೆ ನಡೆಸಿಕೊಂಡು ಹೋಗಬೇಕೆಂದು’ ನೀನು ನನಗೆ ಆಜ್ಞಾಪಿಸಿದಿಯಷ್ಟೇ. ನನ್ನ ಸಂಗಡ ಯಾರನ್ನು ಕಳುಹಿಸಿ ಕೊಡುವೆಯೆಂಬುದನ್ನು ನನಗೆ ತಿಳಿಸಲಿಲ್ಲವಲ್ಲಾ. ‘ಆದರೆ ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಿನಗೆ ನನ್ನ ದಯೆ ದೊರಕಿತೆಂದೂ’ ನೀನು ನನಗೆ ಹೇಳಿರುವೆಯಲ್ಲಾ.
Mosi mah Angraeng khaeah, Khenah, Nang mah ih hae kaminawk to zaehhoih hanah nang thuih; toe kai abomh han kaminawk to nang panoeksak ai; na hmin to ka panoek moe, nang loe ka mikhnuk naakrak ah na oh, tiah nang naa.
13 ೧೩ ನನ್ನ ಮೇಲೆ ದಯೆಯಿರುವುದಾದರೆ ನಿನ್ನ ಮಾರ್ಗವನ್ನು ನನಗೆ ತೋರಿಸು ನಾನು ನಿನ್ನನ್ನು ಅರಿತುಕೊಳ್ಳುವಂತೆ ನಿನ್ನ ಕೃಪೆಯನ್ನು ನನಗೆ ದಯಪಾಲಿಸು ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿಯುವುದು. ಈ ಜನಾಂಗವು ನಿನ್ನ ಪ್ರಜೆಯೆಂಬುದನ್ನು ನೆನಪುಮಾಡಿಕೋ” ಎಂದು ಅರಿಕೆಮಾಡಿದನು.
To pongah ka nuiah palung nang hoe nahaeloe, kai nang tahmen, tito ka panoek thai hanah, na loklam to na patuek ah; hae acaengnawk loe nang ih kami ni, tiah panoek poe ah, tiah a hnik.
14 ೧೪ ಅದಕ್ಕೆ ಯೆಹೋವನು, “ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು” ಅಂದನು.
Angraeng mah kang caeh o haih poe moe, anghakhaih kang paek o han, tiah a naa.
15 ೧೫ ಮೋಶೆಯು ಆತನಿಗೆ, “ನಿನ್ನ ಪ್ರಸನ್ನತೆಯು ನಮ್ಮ ಸಂಗಡ ಬಾರದೇ ಹೋದರೆ ನಮ್ಮನ್ನು ಇಲ್ಲಿಂದ ಹೋಗಗೊಡಿಸಬೇಡ.
To naah Mosi mah anih khaeah, Kai nang caeh haih ai nahaeloe, kaicae hae ahmuen hoiah na patoeh hmah.
16 ೧೬ ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ದಯೆಯು ದೊರಕಿತೆಂಬುದು ನೀನು ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದುಬರುವುದು? ಇದರಿಂದ ನಾನೂ ಮತ್ತು ನಿನ್ನ ಪ್ರಜೆಗಳಾದ ಇವರೂ ಭೂಮಿಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷತೆಯುಳ್ಳವರೆಂಬುದು ಗೊತ್ತಾಗುವುದು” ಅಂದನು.
Kai hoi nang ih kaminawk loe, na hmaa ah mikcuk naakrak ah ni kho a sak o, tito kawbang maw panoek thai tih? Kaicae hoi nawnto na caeh naah na ai maw amtueng tih? To tiah ni kai hoi nang ih kaminawk loe long nuiah kaom kaminawk boih thung hoiah kalah ta kami ah om o tih, tiah a naa.
17 ೧೭ ಯೆಹೋವನು ಮೋಶೆಗೆ, “ನಿನಗೆ ನನ್ನ ದಯೆಯು ದೊರಕಿರುವುದರಿಂದಲೂ, ನಾನು ನಿನ್ನ ಹೆಸರನ್ನು ಬಲ್ಲವನಾಗಿರುವುದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು” ಎಂದು ಹೇಳಿದನು.
To naah Angraeng mah Mosi khaeah, Na thuih ih lok baktih toengah ka sak han; nang loe ka mikcuk naakrak ah na oh; nang loe nangmah ih ahmin hoiah ni kang panoek boeh, tiah a naa.
18 ೧೮ ಅದಕ್ಕೆ ಮೋಶೆಯು, “ನಿನ್ನ ಮಹಿಮೆಯನ್ನು ದಯಮಾಡಿ ನನಗೆ ತೋರಿಸು” ಎಂದು ಕೇಳಿದನು.
Mosi mah anih khaeah, Vaihi na lensawkhaih amtuengsak ah, tiah a naa.
19 ೧೯ ಸರ್ವೋತ್ತಮತ್ವವನ್ನು ಅದಕ್ಕೆ ಆತನು, “ನಾನು ನನ್ನ ಮಹಿಮೆಯನ್ನು ಪೂರ್ಣವಾಗಿ ನಿನ್ನೆದುರಿಗೆ ಬರುವಂತೆ ಮಾಡುವೆನು. ಯೆಹೋವನೆಂಬ ನನ್ನ ನಾಮದ ಪೂರ್ಣ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ನಾನು ಯಾರ ಮೇಲೆ ದಯೆತೋರಿಸಬೇಕೆಂದಿರುವೆನೋ ಅವನ ಮೇಲೆ ದಯೆ ತೋರಿಸುವೆನು, ಯಾರನ್ನು ಕರುಣಿಸಬೇಕೆಂದಿರುವೆನೋ ಅವನನ್ನು ಕರುಣಿಸುವೆನು” ಅಂದನು.
Angraeng mah, Na hmaa ah Kaih ih hoihaihnawk boih to ka caehsak moe, Angraeng ih ahmin to na hmaa ah ka taphong han; tahmenhaih ka tawnh ih kaminawk nuiah tahmenhaih ka tawnh moe, tahmenhaih kam tuengsak ih kaminawk nuiah tahmenhaih to kam tuengsak han.
20 ೨೦ ಆದರೆ ಆತನು ಅವನಿಗೆ, “ನೀನು ನನ್ನ ಮುಖವನ್ನು ನೋಡುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ಮನುಷ್ಯರಲ್ಲಿ ಯಾರೂ ನನ್ನನ್ನು ನೋಡಿ ಬದುಕಿರಲಾರನು” ಎಂದು ಹೇಳಿದನು.
Toe ka mikhmai loe na hnu mak ai; ka mikhmai hnu kami loe, hing mak ai, tiah a naa.
21 ೨೧ ಮತ್ತು ಯೆಹೋವನು ಅವನಿಗೆ, “ನೋಡು, ಇಲ್ಲಿ ನನ್ನ ಸಮೀಪದಲ್ಲೇ ಒಂದು ಸ್ಥಳವಿದೆ. ನೀನು ಈ ಬಂಡೆಯ ಮೇಲೆಯೇ ನಿಂತುಕೊಂಡಿರು.
To pacoengah Angraeng mah, Khenah, ka taengah ahmuen maeto oh; nang loe lungsong nuiah angdoe tih;
22 ೨೨ ನನ್ನ ಮಹಿಮೆಯು ನಿನ್ನೆದುರಿಗೆ ದಾಟಿಹೋಗುವಾಗ ನಾನು ಈ ಬಂಡೆಯ ಸಂದಿನಲ್ಲಿ ನಿನ್ನನ್ನು ಇರಿಸಿ ನನ್ನ ಮುಂದೆ ದಾಟಿ ಹೋಗುವ ತನಕ ನಿನ್ನನ್ನು ಕೈಯಿಂದ ಮರೆಮಾಡುವೆನು.
ka lensawkhaih amtueng naah, nang loe kakoi lungsong thungah kang suek moe, Ka laem ai karoek to, ka ban hoiah kang tamuep han.
23 ೨೩ ತರುವಾಯ ನಾನು ನನ್ನ ಕೈಯನ್ನು ತೆಗೆದಾಗ ನೀನು ನನ್ನ ಹಿಂಭಾಗವನ್ನು ನೋಡುವಿಯೇ ಹೊರತು ನನ್ನ ಮುಖವು ನಿನಗೆ ಕಾಣಿಸುವುದಿಲ್ಲ” ಎಂದು ಯೆಹೋವನು ಆಜ್ಞಾಪಿಸಿದನು.
Ka ban to ka zuh naah loe, ka hnukbang to na hnu tih; toe ka mikhmai loe na hnu mak ai, tiah a naa.