< ವಿಮೋಚನಕಾಂಡ 33 >

1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಐಗುಪ್ತ ದೇಶದಿಂದ ಕರೆದುತಂದ ಈ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳವನ್ನು ಬಿಟ್ಟು, ‘ನಾನು ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ಮತ್ತು ನಿಮ್ಮ ಸಂತತಿಯವರಿಗೆ ಕೊಡುವೆನೆಂದು’ ಪ್ರಮಾಣ ಮಾಡಿದ ದೇಶಕ್ಕೆ ಹೊರಟುಹೋಗು.
Sa’an nan Ubangiji ya ce wa Musa, “Ka bar wannan wuri, kai da mutanen da ka fito da su daga Masar, ka haura zuwa ƙasar da na alkawarta da rantsuwa wa Ibrahim, Ishaku da Yaƙub cewa, ‘Zan ba zuriyarka.’
2 ನಾನು, ನಿನಗಿಂತ ಮುಂದಾಗಿ ಒಬ್ಬ ದೂತನನ್ನು ಕಳುಹಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ಹೊರದೂಡುವೆನು.
Zan aika da mala’ika a gabanka in kuma kori Kan’aniyawa, Amoriyawa, Hittiyawa, Ferizziyawa, Hiwiyawa da Yebusiyawa.
3 ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ನೀನು ಹೋಗು. ಆದರೆ ನಾನು ನಿಮ್ಮ ಸಂಗಡ ಬರುವುದಿಲ್ಲ, ಏಕೆಂದರೆ ನೀವು ಮೊಂಡುತನದ ಜನರು. ನಾನು ದಾರಿಯಲ್ಲಿ ನಿಮ್ಮನ್ನು ಸಂಹರಿಸಿಬಿಟ್ಟೇನು” ಅಂದನು.
Ka haura zuwa ƙasar da take zub da madara da zuma. Amma ba zan tafi tare da ku ba, saboda ku mutane ne masu taurinkai domin mai yiwuwa in hallaka ku a hanya.”
4 ಇಸ್ರಾಯೇಲ್ ಜನರು ದೋಷಾರೋಪಣೆಯ ಈ ವಾಕ್ಯವನ್ನು ಕೇಳಿದಾಗ ದುಃಖಪಟ್ಟರು. ಅವರಲ್ಲಿ ಒಬ್ಬರೂ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.
Da mutane suka ji wannan mugun magana, sai suka fara makoki. Ba kuma wanda ya sa kayan ado.
5 ಯೆಹೋವನು ಮೋಶೆಗೆ ಹೀಗೆಂದನು. “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಮೊಂಡುತನವುಳ್ಳ ಜನರು, ನಾನು ಒಂದು ಕ್ಷಣ ಮಾತ್ರ ನಿಮ್ಮ ಮಧ್ಯದಲ್ಲಿ ಬರುವುದಾದರೆ, ನಾನು ನಿಮ್ಮನ್ನು ನಿರ್ಮೂಲ ಮಾಡಿಬಿಡುವೆನು. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ. ನಿಮಗೆ ನಾನು ಏನು ಮಾಡಬೇಕೆಂಬುದನ್ನು ಆಲೋಚಿಸಿಕೊಳ್ಳುವೆನು’” ಅಂದನು.
Gama Ubangiji ya riga ya ce wa Musa, “Ka faɗa wa Isra’ilawa, ‘Ku mutane ne masu taurinkai. In na yi tafiya da ku ko na ɗan lokaci, mai yiwuwa in hallaka ku. Yanzu sai ku tuɓe kayan adonku, zan kuwa yanke shawara a kan abin da zan yi da ku.’”
6 ಅದರಂತೆಯೇ ಇಸ್ರಾಯೇಲ್ಯರು ಹೋರೇಬ್ ಬೆಟ್ಟದಿಂದ ಮುಂದೆ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.
Saboda haka Isra’ilawa suka tuttuɓe kayan adonsu a Dutsen Horeb.
7 ಮೋಶೆಯು ಗುಡಾರವನ್ನು ಪಾಳೆಯದ ಹೊರಗೆ ದೂರವಾಗಿ ಹಾಕಿದ್ದನು. ಅದಕ್ಕೆ ದೇವದರ್ಶನದ ಗುಡಾರ ಎಂದು ಹೆಸರಿಟ್ಟನು. ಯೆಹೋವನ ಉತ್ತರವನ್ನು ಬಯಸಿದವರೆಲ್ಲರೂ ಪಾಳೆಯದ ಹೊರಗಿದ್ದ ದೇವದರ್ಶನದ ಗುಡಾರಕ್ಕೆ ಹೋಗುತ್ತಿದ್ದರು.
Musa fa ya saba ɗaukan tenti yă kafa shi a bayan sansani da ɗan nisa, yana kiransa “Tentin Sujada.” Duk wanda yake neman wani abu daga wurin Ubangiji sai yă tafi Tentin Sujada a bayan sansani.
8 ಮೋಶೆಯು ಆ ಗುಡಾರಕ್ಕೆ ಹೋಗುವಾಗಲೆಲ್ಲಾ ಜನರೆಲ್ಲರೂ ಎದ್ದು ತಮ್ಮ ತಮ್ಮ ಡೇರೆಗಳ ಬಾಗಿಲಲ್ಲಿ ನಿಂತು, ಮೋಶೆಯು ಆ ಗುಡಾರದೊಳಕ್ಕೆ ಹೋಗುವ ತನಕ ಅವನನ್ನು ನೋಡುತ್ತಿದ್ದರು.
A sa’ad da kuma Musa ya fita zuwa Tentin, dukan mutanen sukan tashi su tsaya a ƙofofin tentinsu, suna kallon Musa, sai ya shiga tentin.
9 ಮೋಶೆಯು ಆ ಗುಡಾರದೊಳಕ್ಕೆ ಹೋದಕೂಡಲೆ ಮೇಘಸ್ತಂಭವು ಇಳಿದು ಆ ಗುಡಾರದ ಬಾಗಿಲಲ್ಲಿ ನಿಲ್ಲುತ್ತಿತ್ತು ಹಾಗು ಯೆಹೋವನು ಮೋಶೆಯ ಸಂಗಡ ಮಾತನಾಡುತ್ತಿದ್ದನು.
Yayinda Musa ya shiga cikin tentin, sai al’amudin girgije yă sauko, yă tsaya a ƙofar yayinda Ubangiji yana magana da Musa.
10 ೧೦ ಆ ಮೇಘಸ್ತಂಭವು ಗುಡಾರದ ಬಾಗಿಲಲ್ಲಿ ನಿಂತಿದ್ದನ್ನು ಜನರೆಲ್ಲರೂ ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲಲ್ಲೇ ಅಡ್ಡಬೀಳುತ್ತಿದ್ದರು.
Lokacin da mutane suka ga al’amudin girgije a tsaye a ƙofar tentin, sai duk su miƙe tsaye su yi sujada, kowa a ƙofar tentinsa.
11 ೧೧ ಮನುಷ್ಯರೊಳಗೆ ಒಬ್ಬನೂ ತನ್ನ ಸ್ನೇಹಿತನೊಡನೆ ಹೇಗೆ ಮಾತನಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. ಆನಂತರ ಮೋಶೆಯು ಪಾಳೆಯಕ್ಕೆ ಹಿಂತಿರುಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಯೌವನಸ್ಥನಾದ ಅವನ ಶಿಷ್ಯನು ಆ ಗುಡಾರದಲ್ಲಿಯೇ ಇರುತ್ತಿದ್ದನು, ಅದರ ಬಳಿಯಿಂದ ದೂರ ಸರಿಯುತ್ತಿರಲಿಲ್ಲ.
Ubangiji yakan yi magana da Musa fuska da fuska, kamar yadda mutum yake magana da abokinsa. Sa’an nan Musa yă koma sansani, amma saurayin nan Yoshuwa ɗan Nun mai taimakonsa ba ya barin tentin.
12 ೧೨ ಮೋಶೆಯು ಯೆಹೋವನಿಗೆ ಹೇಳಿದ್ದೇನೆಂದರೆ, “‘ಈ ಜನರನ್ನು ಆ ಸೀಮೆಗೆ ನಡೆಸಿಕೊಂಡು ಹೋಗಬೇಕೆಂದು’ ನೀನು ನನಗೆ ಆಜ್ಞಾಪಿಸಿದಿಯಷ್ಟೇ. ನನ್ನ ಸಂಗಡ ಯಾರನ್ನು ಕಳುಹಿಸಿ ಕೊಡುವೆಯೆಂಬುದನ್ನು ನನಗೆ ತಿಳಿಸಲಿಲ್ಲವಲ್ಲಾ. ‘ಆದರೆ ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಿನಗೆ ನನ್ನ ದಯೆ ದೊರಕಿತೆಂದೂ’ ನೀನು ನನಗೆ ಹೇಳಿರುವೆಯಲ್ಲಾ.
Musa ya ce wa Ubangiji, “Kana ta faɗa mini cewa, ‘Ka jagoranci mutane nan,’ amma ba ka faɗa mini wanda zai tafi tare da ni ba. Ga shi ka ƙara ce mini, ‘Na san ka, na san sunanka, ka kuma sami tagomashi a wurina.’
13 ೧೩ ನನ್ನ ಮೇಲೆ ದಯೆಯಿರುವುದಾದರೆ ನಿನ್ನ ಮಾರ್ಗವನ್ನು ನನಗೆ ತೋರಿಸು ನಾನು ನಿನ್ನನ್ನು ಅರಿತುಕೊಳ್ಳುವಂತೆ ನಿನ್ನ ಕೃಪೆಯನ್ನು ನನಗೆ ದಯಪಾಲಿಸು ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿಯುವುದು. ಈ ಜನಾಂಗವು ನಿನ್ನ ಪ್ರಜೆಯೆಂಬುದನ್ನು ನೆನಪುಮಾಡಿಕೋ” ಎಂದು ಅರಿಕೆಮಾಡಿದನು.
In ka ji daɗina, ka koya mini hanyarka don in san ka, in kuma ci gaba da samun tagomashi daga gare ka. Ka tuna cewa wannan al’umma mutanenka ne.”
14 ೧೪ ಅದಕ್ಕೆ ಯೆಹೋವನು, “ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು” ಅಂದನು.
Ubangiji ya amsa ya ce, “Zan tafi tare da kai, zan kuma rage maka nauyin kaya.”
15 ೧೫ ಮೋಶೆಯು ಆತನಿಗೆ, “ನಿನ್ನ ಪ್ರಸನ್ನತೆಯು ನಮ್ಮ ಸಂಗಡ ಬಾರದೇ ಹೋದರೆ ನಮ್ಮನ್ನು ಇಲ್ಲಿಂದ ಹೋಗಗೊಡಿಸಬೇಡ.
Musa kuwa ya ce masa, “In ba za tă tafi tare da mu ba, to, kada ka ɗaga mu daga nan.
16 ೧೬ ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ದಯೆಯು ದೊರಕಿತೆಂಬುದು ನೀನು ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದುಬರುವುದು? ಇದರಿಂದ ನಾನೂ ಮತ್ತು ನಿನ್ನ ಪ್ರಜೆಗಳಾದ ಇವರೂ ಭೂಮಿಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷತೆಯುಳ್ಳವರೆಂಬುದು ಗೊತ್ತಾಗುವುದು” ಅಂದನು.
Yaya wani zai sani ko ka ji daɗina da kuma mutanenka, in ba ka tafi tare da mu ba? Mene ne kuma zai bambanta ni da mutanenka daga sauran jama’ar da suke a duniya?”
17 ೧೭ ಯೆಹೋವನು ಮೋಶೆಗೆ, “ನಿನಗೆ ನನ್ನ ದಯೆಯು ದೊರಕಿರುವುದರಿಂದಲೂ, ನಾನು ನಿನ್ನ ಹೆಸರನ್ನು ಬಲ್ಲವನಾಗಿರುವುದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು” ಎಂದು ಹೇಳಿದನು.
Sai Ubangiji ya ce wa Musa, “Zan yi yadda ka faɗa, gama ka sami tagomashi a wurina, na san ka, na kuma san sunanka.”
18 ೧೮ ಅದಕ್ಕೆ ಮೋಶೆಯು, “ನಿನ್ನ ಮಹಿಮೆಯನ್ನು ದಯಮಾಡಿ ನನಗೆ ತೋರಿಸು” ಎಂದು ಕೇಳಿದನು.
Musa kuwa ya ce, “To, ka nuna mini ɗaukakarka.”
19 ೧೯ ಸರ್ವೋತ್ತಮತ್ವವನ್ನು ಅದಕ್ಕೆ ಆತನು, “ನಾನು ನನ್ನ ಮಹಿಮೆಯನ್ನು ಪೂರ್ಣವಾಗಿ ನಿನ್ನೆದುರಿಗೆ ಬರುವಂತೆ ಮಾಡುವೆನು. ಯೆಹೋವನೆಂಬ ನನ್ನ ನಾಮದ ಪೂರ್ಣ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ನಾನು ಯಾರ ಮೇಲೆ ದಯೆತೋರಿಸಬೇಕೆಂದಿರುವೆನೋ ಅವನ ಮೇಲೆ ದಯೆ ತೋರಿಸುವೆನು, ಯಾರನ್ನು ಕರುಣಿಸಬೇಕೆಂದಿರುವೆನೋ ಅವನನ್ನು ಕರುಣಿಸುವೆನು” ಅಂದನು.
Sai Ubangiji ya ce, “Zan wuce a gabanka, Ni Ubangiji zan yi shelar sunana a gabanka. Zan yi alheri ga duk wanda na so in yi masa alheri, zan nuna jinƙai ga duk wanda na so in yi masa jinƙai.
20 ೨೦ ಆದರೆ ಆತನು ಅವನಿಗೆ, “ನೀನು ನನ್ನ ಮುಖವನ್ನು ನೋಡುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ಮನುಷ್ಯರಲ್ಲಿ ಯಾರೂ ನನ್ನನ್ನು ನೋಡಿ ಬದುಕಿರಲಾರನು” ಎಂದು ಹೇಳಿದನು.
Amma ya ce, ba za ka ga fuskata ba, don ba mutumin da zai gan ni yă rayu.”
21 ೨೧ ಮತ್ತು ಯೆಹೋವನು ಅವನಿಗೆ, “ನೋಡು, ಇಲ್ಲಿ ನನ್ನ ಸಮೀಪದಲ್ಲೇ ಒಂದು ಸ್ಥಳವಿದೆ. ನೀನು ಈ ಬಂಡೆಯ ಮೇಲೆಯೇ ನಿಂತುಕೊಂಡಿರು.
Sa’an nan Ubangiji ya ce, “Ga wani wuri kusa da ni inda za ka tsaya bisa dutsen.
22 ೨೨ ನನ್ನ ಮಹಿಮೆಯು ನಿನ್ನೆದುರಿಗೆ ದಾಟಿಹೋಗುವಾಗ ನಾನು ಈ ಬಂಡೆಯ ಸಂದಿನಲ್ಲಿ ನಿನ್ನನ್ನು ಇರಿಸಿ ನನ್ನ ಮುಂದೆ ದಾಟಿ ಹೋಗುವ ತನಕ ನಿನ್ನನ್ನು ಕೈಯಿಂದ ಮರೆಮಾಡುವೆನು.
A sa’ad da ɗaukakata tana wucewa, zan sa ka a cikin tsaguwar dutsen, in rufe ka da hannuna har sai na wuce.
23 ೨೩ ತರುವಾಯ ನಾನು ನನ್ನ ಕೈಯನ್ನು ತೆಗೆದಾಗ ನೀನು ನನ್ನ ಹಿಂಭಾಗವನ್ನು ನೋಡುವಿಯೇ ಹೊರತು ನನ್ನ ಮುಖವು ನಿನಗೆ ಕಾಣಿಸುವುದಿಲ್ಲ” ಎಂದು ಯೆಹೋವನು ಆಜ್ಞಾಪಿಸಿದನು.
Sa’an nan zan ɗauke hannuna, ka kuwa ga bayana; amma fuskata, ba za ka gani ba.”

< ವಿಮೋಚನಕಾಂಡ 33 >