< ವಿಮೋಚನಕಾಂಡ 34 >

1 ಯೆಹೋವನು ಮೋಶೆಗೆ, “ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನೂ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.
ثُمَّ قَالَ ٱلرَّبُّ لِمُوسَى: «ٱنْحَتْ لَكَ لَوْحَيْنِ مِنْ حَجَرٍ مِثْلَ ٱلْأَوَّلَيْنِ، فَأَكْتُبَ أَنَا عَلَى ٱللَّوْحَيْنِ ٱلْكَلِمَاتِ ٱلَّتِي كَانَتْ عَلَى ٱللَّوْحَيْنِ ٱلْأَوَّلَيْنِ ٱللَّذَيْنِ كَسَرْتَهُمَا.١
2 ಬೆಳಿಗ್ಗೆ ನೀನು ಸಿದ್ಧನಾಗಿ, ಸೀನಾಯಿ ಬೆಟ್ಟವನ್ನು ಹತ್ತಿ ಅಲ್ಲಿ ಬೆಟ್ಟದ ತುದಿಯ ಮೇಲೆ ನನ್ನ ಸನ್ನಿಧಿಯಲ್ಲಿ ನಿಂತಿರಬೇಕು.
وَكُنْ مُسْتَعِدًّا لِلصَّبَاحِ. وَٱصْعَدْ فِي ٱلصَّبَاحِ إِلَى جَبَلِ سِينَاءَ، وَقِفْ عِنْدِي هُنَاكَ عَلَى رَأْسِ ٱلْجَبَلِ.٢
3 ಯಾರೂ ನಿನ್ನ ಜೊತೆಯಲ್ಲಿ ಬೆಟ್ಟದ ಮೇಲಕ್ಕೆ ಬರಬಾರದು. ಈ ಬೆಟ್ಟದ ಮೇಲೆ ಯಾರೂ ಎಲ್ಲಿಯೂ ಕಾಣಿಸಕೂಡದು; ಕುರಿದನಗಳೂ ಬೆಟ್ಟದ ಬಳಿಯಲ್ಲಿ ಮೇಯಬಾರದು” ಎಂದು ಹೇಳಿದನು.
وَلَا يَصْعَدْ أَحَدٌ مَعَكَ، وَأَيْضًا لَا يُرَ أَحَدٌ فِي كُلِّ ٱلْجَبَلِ. ٱلْغَنَمُ أَيْضًا وَٱلْبَقَرُ لَا تَرْعَ إِلَى جِهَةِ ذَلِكَ ٱلْجَبَلِ».٣
4 ಆದಕಾರಣ ಮೋಶೆಯು ಮೊದಲಿದ್ದ ಹಲಗೆಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೊಂಡು, ಯೆಹೋವನ ಅಪ್ಪಣೆಯ ಮೇರೆಗೆ ಬೆಳಗ್ಗೆ ಎದ್ದು ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿಬೆಟ್ಟವನ್ನು ಹತ್ತಿದನು.
فَنَحَتَ لَوْحَيْنِ مِنْ حَجَرٍ كَٱلْأَوَّلَيْنِ. وَبَكَّرَ مُوسَى فِي ٱلصَّبَاحِ وَصَعِدَ إِلَى جَبَلِ سِينَاءَ كَمَا أَمَرَهُ ٱلرَّبُّ، وَأَخَذَ فِي يَدِهِ لَوْحَيِ ٱلْحَجَرِ.٤
5 ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು.
فَنَزَلَ ٱلرَّبُّ فِي ٱلسَّحَابِ، فَوَقَفَ عِنْدَهُ هُنَاكَ وَنَادَى بِٱسْمِ ٱلرَّبِّ.٥
6 ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;
فَٱجْتَازَ ٱلرَّبُّ قُدَّامَهُ، وَنَادَى ٱلرَّبُّ: «ٱلرَّبُّ إِلَهٌ رَحِيمٌ وَرَؤُوفٌ، بَطِيءُ ٱلْغَضَبِ وَكَثِيرُ ٱلْإِحْسَانِ وَٱلْوَفَاءِ.٦
7 ಸಾವಿರಾರು ತಲೆಮಾರುಗಳವರೆಗೂ ದಯೆತೋರಿಸುವವನು; ದೋಷಾಪರಾಧ ಪಾಪಗಳನ್ನು ಕ್ಷಮಿಸುವವನು; ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡುವುದಿಲ್ಲ; ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಮಾರುಗಳವರೆಗೆ ಬರಮಾಡುವವನು ಆಗಿದ್ದಾನೆ” ಎಂಬುದೇ.
حَافِظُ ٱلْإِحْسَانِ إِلَى أُلُوفٍ. غَافِرُ ٱلْإِثْمِ وَٱلْمَعْصِيَةِ وَٱلْخَطِيَّةِ. وَلَكِنَّهُ لَنْ يُبْرِئَ إِبْرَاءً. مُفْتَقِدٌ إِثْمَ ٱلْآبَاءِ فِي ٱلْأَبْنَاءِ، وَفِي أَبْنَاءِ ٱلْأَبْنَاءِ، فِي ٱلْجِيلِ ٱلثَّالِثِ وَٱلرَّابِعِ».٧
8 ಮೋಶೆ ತ್ವರೆಪಟ್ಟು ನೆಲಕ್ಕೆ ಬಾಗಿ ನಮಸ್ಕರಿಸಿ,
فَأَسْرَعَ مُوسَى وَخَرَّ إِلَى ٱلْأَرْضِ وَسَجَدَ.٨
9 “ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು.
وَقَالَ: «إِنْ وَجَدْتُ نِعْمَةً فِي عَيْنَيْكَ أَيُّهَا ٱلسَّيِّدُ فَلْيَسِرِ ٱلسَّيِّدُ فِي وَسَطِنَا، فَإِنَّهُ شَعْبٌ صُلْبُ ٱلرَّقَبَةِ. وَٱغْفِرْ إِثْمَنَا وَخَطِيَّتَنَا وَٱتَّخِذْنَا مُلْكًا».٩
10 ೧೦ ಯೆಹೋವನು ಹೇಳಿದ್ದೇನೆಂದರೆ, “ಕೇಳು, ನಾನು ಒಂದು ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ, ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಭಯಂಕರವಾದದ್ದಾಗಿದೆ.
فَقَالَ: «هَا أَنَا قَاطِعٌ عَهْدًا. قُدَّامَ جَمِيعِ شَعْبِكَ أَفْعَلُ عَجَائِبَ لَمْ تُخْلَقْ فِي كُلِّ ٱلْأَرْضِ وَفِي جَمِيعِ ٱلْأُمَمِ، فَيَرَى جَمِيعُ ٱلشَّعْبِ ٱلَّذِي أَنْتَ فِي وَسَطِهِ فِعْلَ ٱلرَّبِّ. إِنَّ ٱلَّذِي أَنَا فَاعِلُهُ مَعَكَ رَهِيبٌ.١٠
11 ೧೧ ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುವೆನು.
«اِحْفَظْ مَا أَنَا مُوصِيكَ ٱلْيَوْمَ. هَا أَنَا طَارِدٌ مِنْ قُدَّامِكَ ٱلْأَمُورِيِّينَ وَٱلْكَنْعَانِيِّينَ وَٱلْحِثِّيِّينَ وَٱلْفِرِزِّيِّينَ وَٱلْحِوِّيِّينَ وَٱلْيَبُوسِيِّينَ.١١
12 ೧೨ ನೀವು ಹೋಗಿ ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಹಾಗೆ ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವುದು.
اِحْتَرِزْ مِنْ أَنْ تَقْطَعَ عَهْدًا مَعَ سُكَّانِ ٱلْأَرْضِ ٱلَّتِي أَنْتَ آتٍ إِلَيْهَا لِئَلَّا يَصِيرُوا فَخًّا فِي وَسَطِكَ،١٢
13 ೧೩ ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.
بَلْ تَهْدِمُونَ مَذَابِحَهُمْ، وَتُكَسِّرُونَ أَنْصَابَهُمْ، وَتَقْطَعُونَ سَوَارِيَهُمْ.١٣
14 ೧೪ ಏಕೆಂದರೆ ತೀಕ್ಷ್ಣತೆಯುಳ್ಳವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡಬೀಳಬಾರದು.
فَإِنَّكَ لَا تَسْجُدُ لِإِلَهٍ آخَرَ، لِأَنَّ ٱلرَّبَّ ٱسْمُهُ غَيُورٌ. إِلَهٌ غَيُورٌ هُوَ.١٤
15 ೧೫ ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,
اِحْتَرِزْ مِنْ أَنْ تَقْطَعَ عَهْدًا مَعَ سُكَّانِ ٱلْأَرْضِ، فَيَزْنُونَ وَرَاءَ آلِهَتِهِمْ وَيَذْبَحُونَ لِآلِهَتِهِمْ، فَتُدْعَى وَتَأْكُلُ مِنْ ذَبِيحَتِهِمْ،١٥
16 ೧೬ ಅದಲ್ಲದೆ ನೀವು ನಿಮ್ಮ ಪುತ್ರರಿಗಾಗಿ ಅವರಲ್ಲಿ ಪುತ್ರಿಯರನ್ನು ತೆಗೆದುಕೊಳ್ಳುವುದಕ್ಕೆ ಅದು ಮಾರ್ಗವಾಗುವುದು; ತರುವಾಯ ಆ ಸೊಸೆಯರು ತವರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.
وَتَأْخُذُ مِنْ بَنَاتِهِمْ لِبَنِيكَ، فَتَزْنِي بَنَاتُهُمْ وَرَاءَ آلِهَتِهِنَّ، وَيَجْعَلْنَ بَنِيكَ يَزْنُونَ وَرَاءَ آلِهَتِهِنَّ.١٦
17 ೧೭ ಎರಕದ ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು.
«لَا تَصْنَعْ لِنَفْسِكَ آلِهَةً مَسْبُوكَةً.١٧
18 ೧೮ “ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನಗಳ ಕಾಲ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲವೇ?
تَحْفَظُ عِيدَ ٱلْفَطِيرِ. سَبْعَةَ أَيَّامٍ تَأْكُلُ فَطِيرًا كَمَا أَمَرْتُكَ فِي وَقْتِ شَهْرِ أَبِيبَ، لِأَنَّكَ فِي شَهْرِ أَبِيبَ خَرَجْتَ مِنْ مِصْرَ.١٨
19 ೧೯ “ಪ್ರಥಮ ಗರ್ಭಫಲವೆಲ್ಲಾ ಅಂದರೆ ನಿಮ್ಮ ದನ ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಮರಿಗಳೆಲ್ಲಾ ಗಂಡಾದ ಪಕ್ಷಕ್ಕೆ ನನ್ನದೇ.
لِي كُلُّ فَاتِحِ رَحِمٍ، وَكُلُّ مَا يُولَدُ ذَكَرًا مِنْ مَوَاشِيكَ بِكْرًا مِنْ ثَوْرٍ وَشَاةٍ.١٩
20 ೨೦ ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಬದಲು ಕೊಟ್ಟು ಬಿಡಿಸಿಕೊಳ್ಳಲೇ ಬೇಕು. ಒಬ್ಬರೂ ಬರಿಗೈಯಲ್ಲಿ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.
وَأَمَّا بِكْرُ ٱلْحِمَارِ فَتَفْدِيهِ بِشَاةٍ، وَإِنْ لَمْ تَفْدِهِ تَكْسِرُ عُنُقَهُ. كُلُّ بِكْرٍ مِنْ بَنِيكَ تَفْدِيهِ، وَلَا يَظْهَرُوا أَمَامِي فَارِغِينَ.٢٠
21 ೨೧ “ಆರು ದಿನಗಳು ನಿಮ್ಮ ಕೆಲಸವನ್ನು ಮಾಡಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಸ್ವಸ್ಥರಾಗಿರಬೇಕು. ಉಳುವ ಕಾಲದಲ್ಲಿಯೂ, ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು.
سِتَّةَ أَيَّامٍ تَعْمَلُ، وَأَمَّا ٱلْيَوْمُ ٱلسَّابِعُ فَتَسْتَرِيحُ فِيهِ. فِي ٱلْفَلَاحَةِ وَفِي ٱلْحَصَادِ تَسْتَرِيحُ.٢١
22 ೨೨ “ಗೋದಿ ಬೆಳೆಯ ಪ್ರಥಮ ಫಲದ ಸಮರ್ಪಣೆಯನ್ನು ಪಸ್ಕಹಬ್ಬವಾಗಿ ಏಳು ವಾರಗಳ ನಂತರ ಸುಗ್ಗಿ ಹಬ್ಬವನ್ನು ಆಚರಿಸುವಾಗ ಸಮರ್ಪಿಸಬೇಕು. ವರ್ಷದ ಅಂತ್ಯದಲ್ಲಿ ಫಲಸಂಗ್ರಹದ ಹಬ್ಬವನ್ನೂ ಆಚರಿಸಬೇಕು.
وَتَصْنَعُ لِنَفْسِكَ عِيدَ ٱلْأَسَابِيعِ أَبْكَارِ حِصَادِ ٱلْحِنْطَةِ. وَعِيدَ ٱلْجَمْعِ فِي آخِرِ ٱلسَّنَةِ.٢٢
23 ೨೩ ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಇಸ್ರಾಯೇಲರ ದೇವರಾಗಿರುವ ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಬರಬೇಕು.
ثَلَاثَ مَرَّاتٍ فِي ٱلسَّنَةِ يَظْهَرُ جَمِيعُ ذُكُورِكَ أَمَامَ ٱلسَّيِّدِ ٱلرَّبِّ إِلَهِ إِسْرَائِيلَ.٢٣
24 ೨೪ ನಾನು ನಿಮ್ಮ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿ ನಿಮ್ಮ ದೇಶವನ್ನು ವಿಸ್ತರಿಸುವೆನು. ನೀವು ವರ್ಷಕ್ಕೆ ಮೂರಾವರ್ತಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಾಗ ಯಾರೂ ನಿಮ್ಮ ಭೂಮಿಯನ್ನು ಆಶೆಪಟ್ಟು ಅಪಹರಿಸುವುದಿಲ್ಲ.
فَإِنِّي أَطْرُدُ ٱلْأُمَمَ مِنْ قُدَّامِكَ وَأُوَسِّعُ تُخُومَكَ، وَلَا يَشْتَهِي أَحَدٌ أَرْضَكَ حِينَ تَصْعَدُ لِتَظْهَرَ أَمَامَ ٱلرَّبِّ إِلَهِكَ ثَلَاثَ مَرَّاتٍ فِي ٱلسَّنَةِ.٢٤
25 ೨೫ “ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸಿದ ಯಜ್ಞಮಾಂಸವನ್ನು ಮರುದಿನದ ಸೂರ್ಯೋದಯದವರೆಗೂ ಉಳಿಸಿಕೊಳ್ಳಬಾರದು.
لَا تَذْبَحْ عَلَى خَمِيرٍ دَمَ ذَبِيحَتِي، وَلَا تَبِتْ إِلَى ٱلْغَدِ ذَبِيحَةُ عِيدِ ٱلْفِصْحِ.٢٥
26 ೨೬ ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”
أَوَّلُ أَبْكَارِ أَرْضِكَ تُحْضِرُهُ إِلَى بَيْتِ ٱلرَّبِّ إِلَهِكَ. لَا تَطْبُخْ جَدْيًا بِلَبَنِ أُمِّهِ».٢٦
27 ೨೭ ಯೆಹೋವನು ಮೋಶೆಗೆ, “ನೀನು ಈ ವಾಕ್ಯಗಳನ್ನು ಬರೆ, ಏಕೆಂದರೆ ಈ ವಾಕ್ಯಗಳ ಮೇರೆಗೆ ನಿನ್ನ ಸಂಗಡಲೂ ಇಸ್ರಾಯೇಲರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿದ್ದೇನೆ” ಎಂದು ಅಜ್ಞಾಪಿಸಿದನು.
وَقَالَ ٱلرَّبُّ لِمُوسَى: «ٱكْتُبْ لِنَفْسِكَ هَذِهِ ٱلْكَلِمَاتِ، لِأَنَّنِي بِحَسَبِ هَذِهِ ٱلْكَلِمَاتِ قَطَعْتُ عَهْدًا مَعَكَ وَمَعَ إِسْرَائِيلَ».٢٧
28 ೨೮ ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.
وَكَانَ هُنَاكَ عِنْدَ ٱلرَّبِّ أَرْبَعِينَ نَهَارًا وَأَرْبَعِينَ لَيْلَةً، لَمْ يَأْكُلْ خُبْزًا وَلَمْ يَشْرَبْ مَاءً. فَكَتَبَ عَلَى ٱللَّوْحَيْنِ كَلِمَاتِ ٱلْعَهْدِ، ٱلْكَلِمَاتِ ٱلْعَشَرَ.٢٨
29 ೨೯ ಮೋಶೆಯು ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದುಬಂದಾಗ ಅವನು ಯೆಹೋವನ ಸನ್ನಿಧಿಯಲ್ಲಿ ಇದ್ದು ಆತನ ಸಂಗಡ ಸಂಭಾಷಿಸಿದ್ದರಿಂದ ಅವನ ಮುಖವು ಪ್ರಕಾಶಮಾನವಾಗಿತ್ತು; ಆದರೆ ಅ ಪ್ರಭಾವವು ಅವನಿಗೆ ತಿಳಿದಿರಲಿಲ್ಲ.
وَكَانَ لَمَّا نَزَلَ مُوسَى مِنْ جَبَلِ سِينَاءَ وَلَوْحَا ٱلشَّهَادَةِ فِي يَدِ مُوسَى، عِنْدَ نُزُولِهِ مِنَ ٱلْجَبَلِ، أَنَّ مُوسَى لَمْ يَعْلَمْ أَنَّ جِلْدَ وَجْهِهِ صَارَ يَلْمَعُ فِي كَلَامِهِ مَعَهُ.٢٩
30 ೩೦ ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಆರೋನನೂ ಇಸ್ರಾಯೇಲರೆಲ್ಲರೂ ನೋಡಿ ಅವನ ಹತ್ತಿರಕ್ಕೆ ಬರುವುದಕ್ಕೆ ಭಯಪಟ್ಟರು.
فَنَظَرَ هَارُونُ وَجَمِيعُ بَنِي إِسْرَائِيلَ مُوسَى وَإِذَا جِلْدُ وَجْهِهِ يَلْمَعُ، فَخَافُوا أَنْ يَقْتَرِبُوا إِلَيْهِ.٣٠
31 ೩೧ ಆದರೆ ಮೋಶೆಯು ಅವರನ್ನು ಕರೆಯಲು ಆರೋನನೂ ಸಮೂಹದ ನಾಯಕರೆಲ್ಲರೂ ಅವನ ಬಳಿಗೆ ಬಂದರು; ಮೋಶೆ ಅವರ ಸಂಗಡ ಮಾತನಾಡಿದನು.
فَدَعَاهُمْ مُوسَى. فَرَجَعَ إِلَيْهِ هَارُونُ وَجَمِيعُ ٱلرُّؤَسَاءِ فِي ٱلْجَمَاعَةِ، فَكَلَّمَهُمْ مُوسَى.٣١
32 ೩೨ ತರುವಾಯ ಇಸ್ರಾಯೇಲರೆಲ್ಲರೂ ಹತ್ತಿರಕ್ಕೆ ಬಂದರು. ಮೋಶೆಯು ತಾನು ಸೀನಾಯಿಬೆಟ್ಟದಲ್ಲಿ ಯೆಹೋವನಿಂದ ಹೊಂದಿದ ಆಜ್ಞೆಗಳನ್ನೆಲ್ಲಾ ಅವರಿಗೆ ತಿಳಿಸಿದನು.
وَبَعْدَ ذَلِكَ ٱقْتَرَبَ جَمِيعُ بَنِي إِسْرَائِيلَ، فَأَوْصَاهُمْ بِكُلِّ مَا تَكَلَّمَ بِهِ ٱلرَّبُّ مَعَهُ فِي جَبَلِ سِينَاءَ.٣٢
33 ೩೩ ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸಿದ ನಂತರ ತನ್ನ ಮುಖದ ಮೇಲೆ ಮುಸುಕುಹಾಕಿಕೊಂಡನು.
وَلَمَّا فَرَغَ مُوسَى مِنَ ٱلْكَلَامِ مَعَهُمْ، جَعَلَ عَلَى وَجْهِهِ بُرْقُعًا.٣٣
34 ೩೪ ಮೋಶೆಯು ಯೆಹೋವನ ಸಂಗಡ ಮಾತನಾಡಬೇಕೆಂದು ಆತನ ಸನ್ನಿಧಿಗೆ ಹೋಗುವಾಗಲೆಲ್ಲಾ ಈ ಮುಸುಕನ್ನು ಹಾಕಿಕೊಳ್ಳುತ್ತಿದ್ದನು. ಹೊರಗೆ ಬಂದಾಗ ಆ ಮುಸುಕನ್ನು ತೆಗೆದಿಡುತ್ತಿದ್ದನು. ಅವನು ಹೊರಗೆ ಬಂದಾಗ ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸುತ್ತಿದ್ದನು.
وَكَانَ مُوسَى عِنْدَ دُخُولِهِ أَمَامَ ٱلرَّبِّ لِيَتَكَلَّمَ مَعَهُ يَنْزِعُ ٱلْبُرْقُعَ حَتَّى يَخْرُجَ، ثُمَّ يَخْرُجُ وَيُكَلِّمُ بَنِي إِسْرَائِيلَ بِمَا يُوصَى.٣٤
35 ೩೫ ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಇಸ್ರಾಯೇಲರು ನೋಡುತ್ತಿದ್ದರು. ಆದಕಾರಣ ಅವನು ಯೆಹೋವನ ಸಂಗಡ ಮಾತನಾಡುವುದಕ್ಕೆ ಹೋಗುವವರೆಗೆ ತನ್ನ ಮುಖದ ಮೇಲೆ ಆ ಮುಸುಕನ್ನು ಪುನಃ ಹಾಕಿಕೊಂಡಿರುತ್ತಿದ್ದನು.
فَإِذَا رَأَى بَنُو إِسْرَائِيلَ وَجْهَ مُوسَى أَنَّ جِلْدَهُ يَلْمَعُ كَانَ مُوسَى يَرُدُّ ٱلْبُرْقُعَ عَلَى وَجْهِهِ حَتَّى يَدْخُلَ لِيَتَكَلَّمَ مَعَهُ.٣٥

< ವಿಮೋಚನಕಾಂಡ 34 >