< ವಿಮೋಚನಕಾಂಡ 34 >
1 ೧ ಯೆಹೋವನು ಮೋಶೆಗೆ, “ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನೂ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.
Toen zeide de HEERE tot Mozes: Houw u twee stenen tafelen, gelijk de eerste waren, zo zal Ik op de tafelen schrijven dezelfde woorden, die op de eerste tafelen geweest zijn, die gij gebroken hebt.
2 ೨ ಬೆಳಿಗ್ಗೆ ನೀನು ಸಿದ್ಧನಾಗಿ, ಸೀನಾಯಿ ಬೆಟ್ಟವನ್ನು ಹತ್ತಿ ಅಲ್ಲಿ ಬೆಟ್ಟದ ತುದಿಯ ಮೇಲೆ ನನ್ನ ಸನ್ನಿಧಿಯಲ್ಲಿ ನಿಂತಿರಬೇಕು.
En wees bereid tegen den morgenstond; dat gij in den morgenstond op den berg Sinai klimt, en stel u aldaar voor Mij, op den top des bergs.
3 ೩ ಯಾರೂ ನಿನ್ನ ಜೊತೆಯಲ್ಲಿ ಬೆಟ್ಟದ ಮೇಲಕ್ಕೆ ಬರಬಾರದು. ಈ ಬೆಟ್ಟದ ಮೇಲೆ ಯಾರೂ ಎಲ್ಲಿಯೂ ಕಾಣಿಸಕೂಡದು; ಕುರಿದನಗಳೂ ಬೆಟ್ಟದ ಬಳಿಯಲ್ಲಿ ಮೇಯಬಾರದು” ಎಂದು ಹೇಳಿದನು.
En niemand zal met u opklimmen; dat er ook niemand gezien worde op den gansen berg; ook het kleine vee, noch runderen zullen tegenover dezen berg niet weiden.
4 ೪ ಆದಕಾರಣ ಮೋಶೆಯು ಮೊದಲಿದ್ದ ಹಲಗೆಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೊಂಡು, ಯೆಹೋವನ ಅಪ್ಪಣೆಯ ಮೇರೆಗೆ ಬೆಳಗ್ಗೆ ಎದ್ದು ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿಬೆಟ್ಟವನ್ನು ಹತ್ತಿದನು.
Toen hieuw hij twee stenen tafelen, gelijk de eerste; en Mozes stond des morgens vroeg op, en klom op den berg Sinai, gelijk als hem de HEERE geboden had; en hij nam de twee stenen tafelen in zijn hand.
5 ೫ ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು.
De HEERE nu kwam nederwaarts in een wolk, en stelde Zich aldaar bij hem; en Hij riep uit den Naam des HEEREN.
6 ೬ ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;
Als nu de HEERE voor zijn aangezicht voorbijging, zo riep Hij: HEERE, HEERE, God, barmhartig en genadig, lankmoedig en groot van weldadigheid en waarheid.
7 ೭ ಸಾವಿರಾರು ತಲೆಮಾರುಗಳವರೆಗೂ ದಯೆತೋರಿಸುವವನು; ದೋಷಾಪರಾಧ ಪಾಪಗಳನ್ನು ಕ್ಷಮಿಸುವವನು; ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡುವುದಿಲ್ಲ; ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಮಾರುಗಳವರೆಗೆ ಬರಮಾಡುವವನು ಆಗಿದ್ದಾನೆ” ಎಂಬುದೇ.
Die de weldadigheid bewaart aan vele duizenden, Die de ongerechtigheid, en overtreding, en zonde vergeeft; Die den schuldige geenszins onschuldig houdt, bezoekende de ongerechtigheid der vaderen aan de kinderen, en aan de kindskinderen, in het derde en vierde lid.
8 ೮ ಮೋಶೆ ತ್ವರೆಪಟ್ಟು ನೆಲಕ್ಕೆ ಬಾಗಿ ನಮಸ್ಕರಿಸಿ,
Mozes nu haastte zich en neigde het hoofd ter aarde, en hij boog zich.
9 ೯ “ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು.
En hij zeide: Heere! indien ik nu genade gevonden heb in Uw ogen, zo ga nu de Heere in het midden van ons, want dit is een hardnekkig volk; doch vergeef onze ongerechtigheid en onze zonde, en neem ons aan tot een erfdeel!
10 ೧೦ ಯೆಹೋವನು ಹೇಳಿದ್ದೇನೆಂದರೆ, “ಕೇಳು, ನಾನು ಒಂದು ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ, ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಭಯಂಕರವಾದದ್ದಾಗಿದೆ.
Toen zeide Hij: Zie, Ik maak een verbond; voor uw ganse volk zal Ik wonderen doen, die niet geschapen zijn op de ganse aarde, noch onder enige volken; alzo dat dit ganse volk, in welks midden gij zijt, des HEEREN werk zien zal, dat het schrikkelijk is, hetwelk Ik met u doe.
11 ೧೧ ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುವೆನು.
Onderhoudt gij hetgeen Ik u heden gebiede! zie, Ik zal voor uw aangezicht uitdrijven de Amorieten, en de Kanaanieten, en de Hethieten, en de Ferezieten, en de Hevieten, en de Jebusieten.
12 ೧೨ ನೀವು ಹೋಗಿ ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಹಾಗೆ ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವುದು.
Wacht u, dat gij toch geen verbond maakt met den inwoners des lands, waarin gij komen zult; dat hij misschien niet tot een strik worde in het midden van u.
13 ೧೩ ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.
Maar hun altaren zult gijlieden omwerpen, en hun opgerichte beelden zult gij verbreken, en hun bossen zult gij afhouwen.
14 ೧೪ ಏಕೆಂದರೆ ತೀಕ್ಷ್ಣತೆಯುಳ್ಳವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡಬೀಳಬಾರದು.
(Want gij zult u niet buigen voor een anderen god; want des HEEREN Naam is Ijveraar! een ijverig God is Hij!)
15 ೧೫ ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,
Opdat gij misschien geen verbond maakt met den inwoner van dat land; en zij hun goden niet nahoereren, noch hun goden offerande doen, en hij u nodigende, gij van hun offerande etet.
16 ೧೬ ಅದಲ್ಲದೆ ನೀವು ನಿಮ್ಮ ಪುತ್ರರಿಗಾಗಿ ಅವರಲ್ಲಿ ಪುತ್ರಿಯರನ್ನು ತೆಗೆದುಕೊಳ್ಳುವುದಕ್ಕೆ ಅದು ಮಾರ್ಗವಾಗುವುದು; ತರುವಾಯ ಆ ಸೊಸೆಯರು ತವರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.
En gij voor uw zonen vrouwen neemt van hun dochteren; en hun dochteren, haar goden nahoererende, maken, dat ook uw zonen haar goden nahoereren.
17 ೧೭ ಎರಕದ ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು.
Gij zult u geen gegoten goden maken.
18 ೧೮ “ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನಗಳ ಕಾಲ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲವೇ?
Het feest der ongezuurde broden zult gij houden; zeven dagen zult gij ongezuurde broden eten, gelijk Ik u geboden heb, ter gezetter tijd der maand Abib; want in de maand Abib zijt gij uit Egypte uitgegaan.
19 ೧೯ “ಪ್ರಥಮ ಗರ್ಭಫಲವೆಲ್ಲಾ ಅಂದರೆ ನಿಮ್ಮ ದನ ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಮರಿಗಳೆಲ್ಲಾ ಗಂಡಾದ ಪಕ್ಷಕ್ಕೆ ನನ್ನದೇ.
Al wat de baarmoeder opent, is Mijn; ja, al uw vee, dat mannelijk zal geboren worden, openende de baarmoeder van het grote en kleine vee.
20 ೨೦ ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಬದಲು ಕೊಟ್ಟು ಬಿಡಿಸಿಕೊಳ್ಳಲೇ ಬೇಕು. ಒಬ್ಬರೂ ಬರಿಗೈಯಲ್ಲಿ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.
Doch den ezel, die de baarmoeder opent, zult gij met een stuk klein vee lossen; maar indien gij hem niet zult lossen, zo zult gij hem den nek breken. Al de eerstgeborenen uwer zonen zult gij lossen, en men zal voor Mijn aangezicht niet ledig verschijnen.
21 ೨೧ “ಆರು ದಿನಗಳು ನಿಮ್ಮ ಕೆಲಸವನ್ನು ಮಾಡಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಸ್ವಸ್ಥರಾಗಿರಬೇಕು. ಉಳುವ ಕಾಲದಲ್ಲಿಯೂ, ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು.
Zes dagen zult gij arbeiden, maar op den zevenden dag zult gij rusten; in den ploegtijd en in den oogst zult gij rusten.
22 ೨೨ “ಗೋದಿ ಬೆಳೆಯ ಪ್ರಥಮ ಫಲದ ಸಮರ್ಪಣೆಯನ್ನು ಪಸ್ಕಹಬ್ಬವಾಗಿ ಏಳು ವಾರಗಳ ನಂತರ ಸುಗ್ಗಿ ಹಬ್ಬವನ್ನು ಆಚರಿಸುವಾಗ ಸಮರ್ಪಿಸಬೇಕು. ವರ್ಷದ ಅಂತ್ಯದಲ್ಲಿ ಫಲಸಂಗ್ರಹದ ಹಬ್ಬವನ್ನೂ ಆಚರಿಸಬೇಕು.
Het feest der weken zult gij ook houden, zijnde het feest der eerstelingen van den tarweoogst, en het feest der inzameling, als het jaar om is.
23 ೨೩ ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಇಸ್ರಾಯೇಲರ ದೇವರಾಗಿರುವ ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಬರಬೇಕು.
Al wat mannelijk is onder u zal driemaal in het jaar verschijnen voor het aangezicht des Heeren HEEREN, den God van Israel.
24 ೨೪ ನಾನು ನಿಮ್ಮ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿ ನಿಮ್ಮ ದೇಶವನ್ನು ವಿಸ್ತರಿಸುವೆನು. ನೀವು ವರ್ಷಕ್ಕೆ ಮೂರಾವರ್ತಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಾಗ ಯಾರೂ ನಿಮ್ಮ ಭೂಮಿಯನ್ನು ಆಶೆಪಟ್ಟು ಅಪಹರಿಸುವುದಿಲ್ಲ.
Wanneer Ik de volken voor uw aangezicht uit de bezitting zal verdrijven, en uw landpalen verwijden, dan zal niemand uw land begeren, terwijl gij henen opgaan zult, om te verschijnen voor het aangezicht des HEEREN uws Gods, driemaal in het jaar.
25 ೨೫ “ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸಿದ ಯಜ್ಞಮಾಂಸವನ್ನು ಮರುದಿನದ ಸೂರ್ಯೋದಯದವರೆಗೂ ಉಳಿಸಿಕೊಳ್ಳಬಾರದು.
Gij zult het bloed van Mijn slachtoffer niet offeren met gedesemd brood; het slachtoffer van het paasfeest zal ook niet vernachten tot den morgen.
26 ೨೬ ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”
De eerstelingen van de eerste vruchten uws lands zult gij in het huis des HEEREN uws Gods brengen. Gij zult het bokje in de melk zijner moeder niet koken.
27 ೨೭ ಯೆಹೋವನು ಮೋಶೆಗೆ, “ನೀನು ಈ ವಾಕ್ಯಗಳನ್ನು ಬರೆ, ಏಕೆಂದರೆ ಈ ವಾಕ್ಯಗಳ ಮೇರೆಗೆ ನಿನ್ನ ಸಂಗಡಲೂ ಇಸ್ರಾಯೇಲರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿದ್ದೇನೆ” ಎಂದು ಅಜ್ಞಾಪಿಸಿದನು.
Verder zeide de HEERE tot Mozes: Schrijf u deze woorden; want naar luid dezer woorden heb Ik een verbond met u en met Israel gemaakt.
28 ೨೮ ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.
En hij was aldaar met den HEERE, veertig dagen en veertig nachten; hij at geen brood, en hij dronk geen water; en Hij schreef op de tafelen de woorden des verbonds, de tien woorden.
29 ೨೯ ಮೋಶೆಯು ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದುಬಂದಾಗ ಅವನು ಯೆಹೋವನ ಸನ್ನಿಧಿಯಲ್ಲಿ ಇದ್ದು ಆತನ ಸಂಗಡ ಸಂಭಾಷಿಸಿದ್ದರಿಂದ ಅವನ ಮುಖವು ಪ್ರಕಾಶಮಾನವಾಗಿತ್ತು; ಆದರೆ ಅ ಪ್ರಭಾವವು ಅವನಿಗೆ ತಿಳಿದಿರಲಿಲ್ಲ.
En het geschiedde, toen Mozes van den berg Sinai afging (de twee tafelen der getuigenis nu waren in de hand van Mozes, als hij van den berg afging), zo wist Mozes niet, dat het vel zijns aangezichts glinsterde, toen Hij met hem sprak.
30 ೩೦ ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಆರೋನನೂ ಇಸ್ರಾಯೇಲರೆಲ್ಲರೂ ನೋಡಿ ಅವನ ಹತ್ತಿರಕ್ಕೆ ಬರುವುದಕ್ಕೆ ಭಯಪಟ್ಟರು.
Als nu Aaron en al de kinderen Israels Mozes aanzagen, ziet, zo glinsterde het vel zijns aangezichts; daarom vreesden zij tot hem toe te treden.
31 ೩೧ ಆದರೆ ಮೋಶೆಯು ಅವರನ್ನು ಕರೆಯಲು ಆರೋನನೂ ಸಮೂಹದ ನಾಯಕರೆಲ್ಲರೂ ಅವನ ಬಳಿಗೆ ಬಂದರು; ಮೋಶೆ ಅವರ ಸಂಗಡ ಮಾತನಾಡಿದನು.
Toen riep Mozes hen; en Aaron, en al de oversten in de vergadering keerden weder tot hem; en Mozes sprak tot hen.
32 ೩೨ ತರುವಾಯ ಇಸ್ರಾಯೇಲರೆಲ್ಲರೂ ಹತ್ತಿರಕ್ಕೆ ಬಂದರು. ಮೋಶೆಯು ತಾನು ಸೀನಾಯಿಬೆಟ್ಟದಲ್ಲಿ ಯೆಹೋವನಿಂದ ಹೊಂದಿದ ಆಜ್ಞೆಗಳನ್ನೆಲ್ಲಾ ಅವರಿಗೆ ತಿಳಿಸಿದನು.
En daarna traden al de kinderen Israels toe; en hij gebood hun al wat de HEERE met hem gesproken had op den berg Sinai.
33 ೩೩ ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸಿದ ನಂತರ ತನ್ನ ಮುಖದ ಮೇಲೆ ಮುಸುಕುಹಾಕಿಕೊಂಡನು.
Alzo eindigde Mozes met hen te spreken, en hij had een deksel op zijn aangezicht gelegd.
34 ೩೪ ಮೋಶೆಯು ಯೆಹೋವನ ಸಂಗಡ ಮಾತನಾಡಬೇಕೆಂದು ಆತನ ಸನ್ನಿಧಿಗೆ ಹೋಗುವಾಗಲೆಲ್ಲಾ ಈ ಮುಸುಕನ್ನು ಹಾಕಿಕೊಳ್ಳುತ್ತಿದ್ದನು. ಹೊರಗೆ ಬಂದಾಗ ಆ ಮುಸುಕನ್ನು ತೆಗೆದಿಡುತ್ತಿದ್ದನು. ಅವನು ಹೊರಗೆ ಬಂದಾಗ ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸುತ್ತಿದ್ದನು.
Doch als Mozes voor het aangezicht des HEEREN kwam, om met Hem te spreken, zo nam hij het deksel af, totdat hij uitging; en nadat hij uitgegaan was, zo sprak hij tot de kinderen Israels, wat hem geboden was.
35 ೩೫ ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಇಸ್ರಾಯೇಲರು ನೋಡುತ್ತಿದ್ದರು. ಆದಕಾರಣ ಅವನು ಯೆಹೋವನ ಸಂಗಡ ಮಾತನಾಡುವುದಕ್ಕೆ ಹೋಗುವವರೆಗೆ ತನ್ನ ಮುಖದ ಮೇಲೆ ಆ ಮುಸುಕನ್ನು ಪುನಃ ಹಾಕಿಕೊಂಡಿರುತ್ತಿದ್ದನು.
Zo zagen dan de kinderen Israels het aangezicht van Mozes, dat het vel van het aangezicht van Mozes glinsterde; derhalve deed Mozes het deksel weder op zijn aangezicht, totdat hij inging om met Hem te spreken.