< ವಿಮೋಚನಕಾಂಡ 35 >
1 ೧ ಮೋಶೆ ಇಸ್ರಾಯೇಲರ ಸಮೂಹವನ್ನೆಲ್ಲಾ ಸೇರಿಸಿ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಹೀಗೆ ಅಪ್ಪಣೆ ಮಾಡಿದ್ದಾನೆ.
Natonto’ i Mosè i valobohò’ Israele iabiy vaho nanoa’e ty hoe, Hoe ty tsara linili’ Iehovà hanoe’ areo.
2 ೨ ಆರು ದಿನಗಳು ನೀವು ಕೆಲಸ ಮಾಡಬೇಕು; ಏಳನೆಯ ದಿನವು ಪರಿಶುದ್ಧವಾದ ದಿನ; ಅದು ಯೆಹೋವನಿಗೆ ಮೀಸಲಾದ ಸಬ್ಬತ್ ದಿನವಾಗಿರುವುದರಿಂದ ಅಂದು ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಿಬಿಡಬೇಕು; ಆ ದಿನದಲ್ಲಿ ಕೆಲಸಮಾಡುವವನಿಗೆ ಮರಣದಂಡನೆಯಾಗಬೇಕು;
Eneñ’ andro ty fitoloñan-draha, fe andro havahe’ areo ty andro fahafito, i Sabatam-pitofà am’ Iehovày. Hakoromake ze ondaty mifanehak’ ama’e.
3 ೩ ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು” ಹೇಳಿದನು.
Ko mamiañe afo ndra aia’aia amo kivoho’ areoo ami’ty andro Sabotse.
4 ೪ ಮೋಶೆಯು ಇಸ್ರಾಯೇಲ್ಯರ ಸರ್ವಸಮೂಹಕ್ಕೆ ಹೀಗೆಂದನು: “ಯೆಹೋವನು ಆಜ್ಞಾಪಿಸಿದ್ದೇನೆಂದರೆ,
Le nisaontsie’ i Mosè i hene valobohò’ Israeley: Inao ty nandilia’ Iehovà:
5 ೫ ನೀವು ನಿಮ್ಮ ನಿಮ್ಮೊಳಗೆ ಯೆಹೋವನಿಗಾಗಿ ಕಾಣಿಕೆಯನ್ನು ತೆಗೆದುಕೊಡಬೇಕು; ಒಳ್ಳೆಯ ಮನಸ್ಸಿರುವವರೆಲ್ಲರೂ ಕಾಣಿಕೆಯನ್ನು ತಂದುಕೊಡಬೇಕು. ಯೆಹೋವನಿಗೆ ತರಬೇಕಾದ ಆ ಕಾಣಿಕೆಯು ಎಂಥದಾಗಿರಬೇಕೆಂದರೆ; ಚಿನ್ನ, ಬೆಳ್ಳಿ, ತಾಮ್ರ ಎಂಬ ಲೋಹಗಳು,
Aneseo boak’ ama’ areo ao, le ibanabanao am’ Iehovà; ze mirearea an-troke ro hañenga am’ Iehovà: ty volamena naho volafoty vaho torisìke;
6 ೬ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಬಟ್ಟೆಗಳು, ಉಣ್ಣೆಯ ಬಟ್ಟೆಗಳು,
naho manga naho malòmavo naho mena mañabarà naho leny marerarera vaho volon’ ose;
7 ೭ ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳು, ಕಡಲಪ್ರಾಣಿಯ ತೊಗಲುಗಳು, ಜಾಲೀಮರವು, ದೀಪಕ್ಕೆ ಬೇಕಾದ ಎಣ್ಣೆಯು,
le holi’ añondrilahy linoko mena naho holin-trozofisoitse naho mendorave;
8 ೮ ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳು,
naho solike ho ami’ty hazavañe naho hafiriañe ho ami’ty menake fañorizañe naho ho ami’ ty emboke mandrifondrifoñe;
9 ೯ ಏಫೋದ್ ಕವಚಕ್ಕೆ ಬೇಕಾಗಿರುವ ರತ್ನಗಳು ಹಾಗು ಎದೆಪದಕದಲ್ಲಿ ಹಚ್ಚಬೇಕಾದ ನಾನಾ ರತ್ನಗಳು ಇವೇ.
naho vato sohàme naho vatosoa ho reketeñe amy kitambey naho amy takon’ arañañey.
10 ೧೦ “ನಿಮ್ಮಲ್ಲಿರುವ ಜ್ಞಾನಿಗಳಾದ ಶಿಲ್ಪಿಗಳು ಬಂದು ಯೆಹೋವನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಬೇಕು.
Le homb’etoañ’ iaby ze mahihi-tro hitsene o raha linili’ Iehovà iabio:
11 ೧೧ ಅವರು ಮಾಡಬೇಕಾದವುಗಳು ಯಾವುವೆಂದರೆ; ದೇವದರ್ಶನದ ಗುಡಾರ, ಅದರ ಮೇಲ್ಹೊದಿಕೆಗಳು, ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು,
i kivohoy, i kibohotsey naho i rako’ey, o vitra’eo naho o varambañeo, o saka’eo, o ana-kòre’eo naho o vave’eo;
12 ೧೨ ಆಜ್ಞಾಶಾಸನಗಳ ಮಂಜೂಷ, ಅದನ್ನು ಹೊರುವ ಕಂಬಗಳು, ಕೃಪಾಸನ, ಅದನ್ನು ಮರೆಮಾಡುವ ಪರದೆ,
i vatam-pañinay naho o bao-pitakona’eo, i toem-pijebañañey naho i lamba fañefetsey;
13 ೧೩ ಮೇಜು, ಅದರ ಕಂಬಗಳು, ಅದರ ಉಪಕರಣಗಳು, ಅದರ ಮೇಲೆ ಇಡತಕ್ಕ ನೈವೇದ್ಯದ ರೊಟ್ಟಿಗಳು,
i rairaiy naho o bao’eo naho o harao’eo naho o mofo-miatrekeo;
14 ೧೪ ದೀಪಸ್ತಂಭ, ಅದರ ಉಪಕರಣಗಳು, ಹಣತೆಗಳು, ದೀಪಕ್ಕೆ ಬೇಕಾದ ಎಣ್ಣೆ,
le i fitàn-jiroy ho amy hazavàñey naho o harao’eo naho o jiro’eo naho ty mena’ i hazavàñey;
15 ೧೫ ಧೂಪವೇದಿ, ಅದರ ಕಂಬಗಳು, ಅಭಿಷೇಕ ತೈಲ, ಪರಿಮಳಧೂಪದ್ರವ್ಯ, ಗುಡಾರದ ಬಾಗಿಲಿನ ಪರದೆ,
naho i kitrelim-pañembohañey naho o bao’eo naho i mena-pañorizañey naho i menake mañitsey naho i lamba fañefe’ i lala-pizilihañe amy kivohoiy;
16 ೧೬ ಯಜ್ಞವೇದಿ, ಅದರ ತಾಮ್ರದ ಜಾಳಿಗೆ, ಕಂಬಗಳು, ಉಪಕರಣಗಳು, ಬೋಗುಣಿ, ಅದರ ಪೀಠ,
ty kitrely fisoroñañe rekets’ i tsingarakara’e torisìkey, o bao’eo naho o hene fanakeo, i fanasàñey rekets’ i foto’ey;
17 ೧೭ ಅಂಗಳದ ತೆರೆಗಳು, ಕಂಬಗಳು, ಗದ್ದಿಗೆಕಲ್ಲುಗಳು, ಅಂಗಳದ ಬಾಗಿಲಿನ ಪರದೆ,
o firadoradoañe an-kiririsao, o anakòre’eo naho o vave’eo naho ty lamba fañefe’ i lalambein-kiririsay;
18 ೧೮ ಗುಡಾರದ ಗೂಟಗಳು, ಅಂಗಳದ ಗೂಟಗಳು, ಇವುಗಳ ಹಗ್ಗಗಳು,
o tsato’ i kivohoio naho o tsato’ i kiririsaio vaho o tali’ iareoo;
19 ೧೯ ಪವಿತ್ರಸ್ಥಾನದ ಸೇವೆಗೆ ಬೇಕಾದ ಸುಂದರವಾದ ದೀಕ್ಷಾವಸ್ತ್ರಗಳು ಅಂದರೆ ಮಹಾಯಾಜಕನಾದ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಪವಿತ್ರ ಯಾಜಕವಸ್ತ್ರಗಳು ಇವೇ” ಅಂದನು.
o fisiky hitoloñañe amy toe-miavakeio: o saro-miava’ i Aharone mpisoroñeo; ty fisaro’ o ana’eo hitoloña’ iareo ho mpisoroñeo.
20 ೨೦ ಇಸ್ರಾಯೇಲರು ಮತ್ತು ಸಮೂಹದವರೆಲ್ಲರೂ ಮೋಶೆಯ ಎದುರಿನಿಂದ ಹೊರಟು ಹೋದರು.
Aa le nienga boak’ aolo’ i Mosè o ana’ Israele iabio.
21 ೨೧ ಯಾರನ್ನು ಹೃದಯವು ಪ್ರೇರೇಪಿಸಿತೋ, ಯಾರ ಮನಸ್ಸು ಸಿದ್ಧವಾಗಿತ್ತೋ ಅವರೆಲ್ಲರೂ ಬಂದು ದೇವದರ್ಶನದ ಗುಡಾರದ ಕೆಲಸಕ್ಕಾಗಿಯೂ ಅದರ ಸಮಸ್ತ ಸೇವೆಗಳಿಗಾಗಿಯೂ, ಪವಿತ್ರ ವಸ್ತ್ರಗಳಿಗಾಗಿಯೂ ಯೆಹೋವನಿಗೆ ಕಾಣಿಕೆಗಳನ್ನು ತಂದರು.
Le nimb’eo ze hene niroroten-troke naho ze nampirearean-arofo, nanese banabana am’ Iehovà ho ami’ty fitoloñañe i kibohom-pamantañañey naho ho amy ze hene fitoroñañe ama’e vaho amo saro-miavakeo.
22 ೨೨ ಸಿದ್ಧಚಿತ್ತರಾದ ಗಂಡಸರೂ, ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯುಂಗರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.
Songa nimb’eo an-joton-troke ty lahilahy naho ampela, ninday ravake naho kiviron-oroñe naho kiviron-tsofy, bange fitomboke naho hareañe, ze bijim-bolamena iaby; vaho ze nanokañe engam-bolamena am’ Iehovà.
23 ೨೩ ಯಾರಲ್ಲಿ ನೀಲಿ, ನೇರಳೆ ಹಾಗು ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಬಟ್ಟೆಯು, ಉಣ್ಣೆ ಬಟ್ಟೆಯು, ಹದಮಾಡಿದ ಕೆಂಪುಬಣ್ಣದ ಟಗರಿನ ತೊಗಲುಗಳು ಹಾಗು ಕಡಲಪ್ರಾಣಿಯ ತೊಗಲುಗಳು ಇದ್ದವೋ ಅವರು ಅವುಗಳನ್ನು ತಂದುಕೊಟ್ಟರು.
Ze ondaty amam-pole manga ndra malòmavo ndra mena mañabarà ndra fole leny matify ndra volon’ ose ndra holin’ añondrilahy linoko mena ndra holin-trozofisoitse, le sambe ninday.
24 ೨೪ ಯಾರಲ್ಲಿ ಬೆಳ್ಳಿ ಇಲ್ಲವೇ ತಾಮ್ರ ಇತ್ತೋ ಅವರು ಅವುಗಳನ್ನೇ ತಂದು ಯೆಹೋವನಿಗೆ ಸಮರ್ಪಿಸಿದರು. ಯಾರ ಬಳಿಯಲ್ಲಿ ಗುಡಾರದ ಕೆಲಸಕ್ಕೆ ಬೇಕಾದ ಜಾಲೀಮರವಿತ್ತೋ ಅವರು ಅದನ್ನು ತಂದುಕೊಟ್ಟರು.
Ze ondaty nañenga volafoty ndra torisìke songa nibanabana aze am’ Iehovà; naho ze nahatendrehañe mendoraveñe ho amy fitoloñañe i asaiy, sindre ninday.
25 ೨೫ ನಿಪುಣೆಯರಾದ ಸ್ತ್ರೀಯರು ತಮ್ಮ ಕೈಗಳಿಂದ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲನ್ನೂ, ಹತ್ತಿಯ ನೂಲನ್ನೂ ನೇಯ್ದು ಆ ನೂಲನ್ನು ತಂದುಕೊಟ್ಟರು.
Nandrorotse fole am-pità’e ze rakemba nahihi-tro, le nendese’e i nirorote’ey, ty manga naho ty malòmavo naho ty mena mañabarà vaho ty leny matify.
26 ೨೬ ಬುದ್ಧಿವಂತೆಯರಾದ ಬೇರೆ ಸ್ತ್ರೀಯರು ಆಡಿನ ಕೂದಲುಗಳನ್ನು ನೇಯ್ದು ತಂದುಕೊಟ್ಟರು.
Le nandrorotse volon-ose ze rakemba nonjone’ ty tro’e an-kihitse.
27 ೨೭ ಅಧಿಪತಿಗಳು ಏಫೋದ್ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳನ್ನು, ಎದೆಪದಕದಲ್ಲಿ ಇಡಬೇಕಾದ ರತ್ನಗಳನ್ನು,
O mpifeheo ninday vato sohàme naho vato soa harekets’ amy kitambey naho amy kalan’ arañañey;
28 ೨೮ ದೀಪಕ್ಕೆ ಬೇಕಾದ ಎಣ್ಣೆಯನ್ನು ಹಾಗು ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳನ್ನು ತಂದುಕೊಟ್ಟರು.
ty emboke; naho ty menake ho amy hazavàñey, ho amy mena-pañorizañey vaho ho amy emboke mañitsey.
29 ೨೯ ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಕಾರ್ಯಗಳಿಗಾಗಿ ಆತನಿಗೆ ಕಾಣಿಕೆಗಳನ್ನು ತಂದುಕೊಡುವುದಕ್ಕೆ ಹೃದಯದಿಂದ ಪ್ರೇರೇಪಿತರಾಗಿ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ತಂದುಕೊಟ್ಟರು.
Nibanabana enga an-tsatrin’ arofo am’ Iehovà ze hene ana’ Israele ndra lahilahy ndra rakemba nihavàtse añ’ arofo, hanolora’e amo tolon-draha linili’ Iehovà hanoeñe am-pità’ i Mosèo.
30 ೩೦ ಮೋಶೆಯು ಇಸ್ರಾಯೇಲ್ಯರಿಗೆ ಹೀಗೆಂದನು, “ನೋಡಿರಿ, ಯೆಹೋವನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯ ಮಗನೂ ಆಗಿರುವ ಬೆಚಲೇಲನೆಂಬವನನ್ನು ಹೆಸರು ಹಿಡಿದು ಕರೆದಿದ್ದಾನೆ.
Le hoe t’i Mosè amo ana’ Israeleo: Ingo te kinanji’ Iehovà ami’ty tahina’e t’i Betsalale, ana’i Orý, ana’ i Kore, fifokoa’ Iehodà;
31 ೩೧ ಕಲಾತ್ಮಕವಾದ ವಿನ್ಯಾಸಗಳನ್ನು ಕಲ್ಪಿಸುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,
naho nilifore’e ami’ty Arofon’ Añahare an-kihitse naho faharendrehañe, an-kilala naho amy ze satam-pitoloñañe iaby,
32 ೩೨ ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ಕೆತ್ತನೇ ಕೆಲಸವನ್ನು ಮಾಡುವುದಕ್ಕೂ,
hisafiry naho hamoroñe, hitoloñe am-bolamena naho volafoty vaho torisìke
33 ೩೩ ಅವನಿಗೆ ದೇವರಾತ್ಮವನ್ನು ಕೊಟ್ಟು ಅವನಿಗೆ ಬೇಕಾದ ಜ್ಞಾನ, ವಿದ್ಯೆ, ವಿವೇಕಗಳನ್ನೂ ಸಕಲ ಶಿಲ್ಪಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ.
naho hampisilake vatosoa ho reketeñe naho hanokitse an-katae vaho hitoloñe amy ze hene karaza satam-pitàñe.
34 ೩೪ ಅದಲ್ಲದೆ ಮತ್ತೊಬ್ಬರಿಗೆ ಕಲಿಸಿಕೊಡುವುದಕ್ಕೆ ಸಹ ಅವನಿಗೂ ಮತ್ತು ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನಿಗೂ ವರಕೊಟ್ಟಿದ್ದೇನೆ.
Le napo’e añ’arofo’e ao ty hañòke, ie naho i Oholiabe ana’ i Ahisamake, fifokoa’ i Dane.
35 ೩೫ ಕಸೂತಿ ಕೆಲಸ ಕಲ್ಪಿಸುವವರು, ನೀಲಿ, ನೇರಳೆ ಕಡುಗೆಂಪು ವರ್ಣದ ದಾರದಿಂದಲೂ, ಹತ್ತಿಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ಮಾಡುವ ಕೆಲಸಗಳನ್ನು ಕಸಿಮಾಡುವುದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.”
Ie songa lilifore’e hihitse añ’arofo hanoa’e ze satam-panokitse naho mpamoroñe, le hamahotse am-pole manga naho malò mavo naho mena mañabarà naho leny matify hitoloñe am-panenoñañe; hitoloñe amy ze hene tolon-draha vaho hamoroñe o nisafirieñeo.