1೧ಮೋಶೆ ಇಸ್ರಾಯೇಲರ ಸಮೂಹವನ್ನೆಲ್ಲಾ ಸೇರಿಸಿ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಹೀಗೆ ಅಪ್ಪಣೆ ಮಾಡಿದ್ದಾನೆ.
This chapter is missing in the source text.
2೨ಆರು ದಿನಗಳು ನೀವು ಕೆಲಸ ಮಾಡಬೇಕು; ಏಳನೆಯ ದಿನವು ಪರಿಶುದ್ಧವಾದ ದಿನ; ಅದು ಯೆಹೋವನಿಗೆ ಮೀಸಲಾದ ಸಬ್ಬತ್ ದಿನವಾಗಿರುವುದರಿಂದ ಅಂದು ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಿಬಿಡಬೇಕು; ಆ ದಿನದಲ್ಲಿ ಕೆಲಸಮಾಡುವವನಿಗೆ ಮರಣದಂಡನೆಯಾಗಬೇಕು;
3೩ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು” ಹೇಳಿದನು.
5೫ನೀವು ನಿಮ್ಮ ನಿಮ್ಮೊಳಗೆ ಯೆಹೋವನಿಗಾಗಿ ಕಾಣಿಕೆಯನ್ನು ತೆಗೆದುಕೊಡಬೇಕು; ಒಳ್ಳೆಯ ಮನಸ್ಸಿರುವವರೆಲ್ಲರೂ ಕಾಣಿಕೆಯನ್ನು ತಂದುಕೊಡಬೇಕು. ಯೆಹೋವನಿಗೆ ತರಬೇಕಾದ ಆ ಕಾಣಿಕೆಯು ಎಂಥದಾಗಿರಬೇಕೆಂದರೆ; ಚಿನ್ನ, ಬೆಳ್ಳಿ, ತಾಮ್ರ ಎಂಬ ಲೋಹಗಳು,
19೧೯ಪವಿತ್ರಸ್ಥಾನದ ಸೇವೆಗೆ ಬೇಕಾದ ಸುಂದರವಾದ ದೀಕ್ಷಾವಸ್ತ್ರಗಳು ಅಂದರೆ ಮಹಾಯಾಜಕನಾದ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಪವಿತ್ರ ಯಾಜಕವಸ್ತ್ರಗಳು ಇವೇ” ಅಂದನು.
20೨೦ಇಸ್ರಾಯೇಲರು ಮತ್ತು ಸಮೂಹದವರೆಲ್ಲರೂ ಮೋಶೆಯ ಎದುರಿನಿಂದ ಹೊರಟು ಹೋದರು.
21೨೧ಯಾರನ್ನು ಹೃದಯವು ಪ್ರೇರೇಪಿಸಿತೋ, ಯಾರ ಮನಸ್ಸು ಸಿದ್ಧವಾಗಿತ್ತೋ ಅವರೆಲ್ಲರೂ ಬಂದು ದೇವದರ್ಶನದ ಗುಡಾರದ ಕೆಲಸಕ್ಕಾಗಿಯೂ ಅದರ ಸಮಸ್ತ ಸೇವೆಗಳಿಗಾಗಿಯೂ, ಪವಿತ್ರ ವಸ್ತ್ರಗಳಿಗಾಗಿಯೂ ಯೆಹೋವನಿಗೆ ಕಾಣಿಕೆಗಳನ್ನು ತಂದರು.
22೨೨ಸಿದ್ಧಚಿತ್ತರಾದ ಗಂಡಸರೂ, ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯುಂಗರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.
23೨೩ಯಾರಲ್ಲಿ ನೀಲಿ, ನೇರಳೆ ಹಾಗು ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಬಟ್ಟೆಯು, ಉಣ್ಣೆ ಬಟ್ಟೆಯು, ಹದಮಾಡಿದ ಕೆಂಪುಬಣ್ಣದ ಟಗರಿನ ತೊಗಲುಗಳು ಹಾಗು ಕಡಲಪ್ರಾಣಿಯ ತೊಗಲುಗಳು ಇದ್ದವೋ ಅವರು ಅವುಗಳನ್ನು ತಂದುಕೊಟ್ಟರು.
24೨೪ಯಾರಲ್ಲಿ ಬೆಳ್ಳಿ ಇಲ್ಲವೇ ತಾಮ್ರ ಇತ್ತೋ ಅವರು ಅವುಗಳನ್ನೇ ತಂದು ಯೆಹೋವನಿಗೆ ಸಮರ್ಪಿಸಿದರು. ಯಾರ ಬಳಿಯಲ್ಲಿ ಗುಡಾರದ ಕೆಲಸಕ್ಕೆ ಬೇಕಾದ ಜಾಲೀಮರವಿತ್ತೋ ಅವರು ಅದನ್ನು ತಂದುಕೊಟ್ಟರು.
25೨೫ನಿಪುಣೆಯರಾದ ಸ್ತ್ರೀಯರು ತಮ್ಮ ಕೈಗಳಿಂದ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲನ್ನೂ, ಹತ್ತಿಯ ನೂಲನ್ನೂ ನೇಯ್ದು ಆ ನೂಲನ್ನು ತಂದುಕೊಟ್ಟರು.
26೨೬ಬುದ್ಧಿವಂತೆಯರಾದ ಬೇರೆ ಸ್ತ್ರೀಯರು ಆಡಿನ ಕೂದಲುಗಳನ್ನು ನೇಯ್ದು ತಂದುಕೊಟ್ಟರು.
27೨೭ಅಧಿಪತಿಗಳು ಏಫೋದ್ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳನ್ನು, ಎದೆಪದಕದಲ್ಲಿ ಇಡಬೇಕಾದ ರತ್ನಗಳನ್ನು,
28೨೮ದೀಪಕ್ಕೆ ಬೇಕಾದ ಎಣ್ಣೆಯನ್ನು ಹಾಗು ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳನ್ನು ತಂದುಕೊಟ್ಟರು.
29೨೯ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಕಾರ್ಯಗಳಿಗಾಗಿ ಆತನಿಗೆ ಕಾಣಿಕೆಗಳನ್ನು ತಂದುಕೊಡುವುದಕ್ಕೆ ಹೃದಯದಿಂದ ಪ್ರೇರೇಪಿತರಾಗಿ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ತಂದುಕೊಟ್ಟರು.
30೩೦ಮೋಶೆಯು ಇಸ್ರಾಯೇಲ್ಯರಿಗೆ ಹೀಗೆಂದನು, “ನೋಡಿರಿ, ಯೆಹೋವನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯ ಮಗನೂ ಆಗಿರುವ ಬೆಚಲೇಲನೆಂಬವನನ್ನು ಹೆಸರು ಹಿಡಿದು ಕರೆದಿದ್ದಾನೆ.
31೩೧ಕಲಾತ್ಮಕವಾದ ವಿನ್ಯಾಸಗಳನ್ನು ಕಲ್ಪಿಸುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,
32೩೨ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ಕೆತ್ತನೇ ಕೆಲಸವನ್ನು ಮಾಡುವುದಕ್ಕೂ,
33೩೩ಅವನಿಗೆ ದೇವರಾತ್ಮವನ್ನು ಕೊಟ್ಟು ಅವನಿಗೆ ಬೇಕಾದ ಜ್ಞಾನ, ವಿದ್ಯೆ, ವಿವೇಕಗಳನ್ನೂ ಸಕಲ ಶಿಲ್ಪಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ.
34೩೪ಅದಲ್ಲದೆ ಮತ್ತೊಬ್ಬರಿಗೆ ಕಲಿಸಿಕೊಡುವುದಕ್ಕೆ ಸಹ ಅವನಿಗೂ ಮತ್ತು ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನಿಗೂ ವರಕೊಟ್ಟಿದ್ದೇನೆ.
35೩೫ಕಸೂತಿ ಕೆಲಸ ಕಲ್ಪಿಸುವವರು, ನೀಲಿ, ನೇರಳೆ ಕಡುಗೆಂಪು ವರ್ಣದ ದಾರದಿಂದಲೂ, ಹತ್ತಿಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ಮಾಡುವ ಕೆಲಸಗಳನ್ನು ಕಸಿಮಾಡುವುದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.”