< ವಿಮೋಚನಕಾಂಡ 36 >

1 “ಬೆಚಲೇಲನು ಹಾಗೂ ಒಹೋಲೀಯಾಬನು ಮತ್ತು ಬೇರೆ ಜ್ಞಾನಿಗಳೆಲ್ಲರು ಅಂದರೆ ಯೆಹೋವನಿಂದ ಜ್ಞಾನವಿವೇಕಗಳನ್ನು ಹೊಂದಿ ಪವಿತ್ರ ದೇವಮಂದಿರವನ್ನು ನಿರ್ಮಾಣ ಮಾಡುವ ಕೆಲಸಕ್ಕಾಗಿ ಬೇಕಾದ ಸಕಲವಿಧವಾದ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನೂ ಮಾಡುವರು” ಅಂದನು.
וְעָשָׂה֩ בְצַלְאֵ֨ל וְאָהֳלִיאָ֜ב וְכֹ֣ל ׀ אִ֣ישׁ חֲכַם־לֵ֗ב אֲשֶׁר֩ נָתַ֨ן יְהוָ֜ה חָכְמָ֤ה וּתְבוּנָה֙ בָּהֵ֔מָּה לָדַ֣עַת לַעֲשֹׂ֔ת אֶֽת־כָּל־מְלֶ֖אכֶת עֲבֹדַ֣ת הַקֹּ֑דֶשׁ לְכֹ֥ל אֲשֶׁר־צִוָּ֖ה יְהוָֽה׃
2 ಬೆಚಲೇಲನನ್ನೂ ಒಹೋಲೀಯಾಬನನ್ನೂ ಮತ್ತು ಯಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಕೊಟ್ಟಿದ್ದನೋ, ಯಾರಾರಿಗೆ ಈ ಕೆಲಸಮಾಡುವುದಕ್ಕೆ ಹೃದಯದಲ್ಲಿ ಪ್ರೇರಣೆಯಾಯಿತೋ ಅಂಥ ಜ್ಞಾನಿಗಳೆಲ್ಲರನ್ನೂ ಮೋಶೆಯು ತನ್ನ ಹತ್ತಿರಕ್ಕೆ ಕರೆಯಿಸಿದನು.
וַיִּקְרָ֣א מֹשֶׁ֗ה אֶל־בְּצַלְאֵ֘ל וְאֶל־אָֽהֳלִיאָב֒ וְאֶל֙ כָּל־אִ֣ישׁ חֲכַם־לֵ֔ב אֲשֶׁ֨ר נָתַ֧ן יְהוָ֛ה חָכְמָ֖ה בְּלִבּ֑וֹ כֹּ֚ל אֲשֶׁ֣ר נְשָׂא֣וֹ לִבּ֔וֹ לְקָרְבָ֥ה אֶל־הַמְּלָאכָ֖ה לַעֲשֹׂ֥ת אֹתָֽהּ׃
3 ಅವರು ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಇಸ್ರಾಯೇಲ್ಯರು ತಂದಿದ್ದ ಕಾಣಿಕೆಗಳನ್ನೆಲ್ಲಾ ಮೋಶೆಯಿಂದ ಪಡೆದುಕೊಂಡರು. ಇಸ್ರಾಯೇಲರು ಪ್ರತಿದಿನ ಹೊತ್ತಾರೆಯಲ್ಲಿ ಮೋಶೆಯ ಬಳಿಗೆ ಬಂದು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.
וַיִּקְח֞וּ מִלִּפְנֵ֣י מֹשֶׁ֗ה אֵ֤ת כָּל־הַתְּרוּמָה֙ אֲשֶׁ֨ר הֵבִ֜יאוּ בְּנֵ֣י יִשְׂרָאֵ֗ל לִמְלֶ֛אכֶת עֲבֹדַ֥ת הַקֹּ֖דֶשׁ לַעֲשֹׂ֣ת אֹתָ֑הּ וְ֠הֵם הֵבִ֨יאוּ אֵלָ֥יו ע֛וֹד נְדָבָ֖ה בַּבֹּ֥קֶר בַּבֹּֽקֶר׃
4 ಆಗ ದೇವಮಂದಿರದ ಕೆಲಸವನ್ನು ಮಾಡುತ್ತಿದ್ದ ಆ ಜ್ಞಾನಿಗಳೆಲ್ಲರು,
וַיָּבֹ֙אוּ֙ כָּל־הַ֣חֲכָמִ֔ים הָעֹשִׂ֕ים אֵ֖ת כָּל־מְלֶ֣אכֶת הַקֹּ֑דֶשׁ אִֽישׁ־אִ֥ישׁ מִמְּלַאכְתּ֖וֹ אֲשֶׁר־הֵ֥מָּה עֹשִֽׂים׃
5 ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು ಅವನಿಗೆ, “ಯೆಹೋವನು ಆಜ್ಞಾಪಿಸಿದ ಕೆಲಸಕ್ಕೆ ಬೇಕಾಗಿರುವುದಕ್ಕಿಂತಲೂ ಬಹಳ ಹೆಚ್ಚಾಗಿ ಜನರು ಕಾಣಿಕೆಗಳನ್ನು ತರುತ್ತಿದ್ದಾರೆ ಎಂದು” ಹೇಳಿದರು.
וַיֹּאמְרוּ֙ אֶל־מֹשֶׁ֣ה לֵּאמֹ֔ר מַרְבִּ֥ים הָעָ֖ם לְהָבִ֑יא מִדֵּ֤י הָֽעֲבֹדָה֙ לַמְּלָאכָ֔ה אֲשֶׁר־צִוָּ֥ה יְהוָ֖ה לַעֲשֹׂ֥ת אֹתָֽהּ׃
6 ಆಗ ಮೋಶೆಯು ಇದನ್ನು ಗಮನಿಸಿ, “ದೇವಮಂದಿರದ ಕೆಲಸಕ್ಕಾಗಿ ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಇನ್ನು ಮುಂದೆ ಕಾರ್ಯಗಳನ್ನೂ ಮಾಡಬಾರದು” ಎಂದು ಅಪ್ಪಣೆಮಾಡಿ ಅದನ್ನು ಪಾಳೆಯದಲ್ಲಿ ಪ್ರಕಟಿಸಿದನು. ಜನರು ಕಾಣಿಕೆಗಳನ್ನು ತರುವುದನ್ನು ನಿಲ್ಲಿಸಿಬಿಟ್ಟರು.
וַיְצַ֣ו מֹשֶׁ֗ה וַיַּעֲבִ֨ירוּ ק֥וֹל בַּֽמַּחֲנֶה֮ לֵאמֹר֒ אִ֣ישׁ וְאִשָּׁ֗ה אַל־יַעֲשׂוּ־ע֛וֹד מְלָאכָ֖ה לִתְרוּמַ֣ת הַקֹּ֑דֶשׁ וַיִּכָּלֵ֥א הָעָ֖ם מֵהָבִֽיא׃
7 ಏಕೆಂದರೆ ಕೆಲಸವನ್ನೆಲ್ಲಾ ಮಾಡುವುದಕ್ಕೆ ಸಾಕಾಗುವುದಕ್ಕಿಂತಲೂ ಹೆಚ್ಚು ಸಾಮಗ್ರಿಗಳಿದ್ದವು.
וְהַמְּלָאכָ֗ה הָיְתָ֥ה דַיָּ֛ם לְכָל־הַמְּלָאכָ֖ה לַעֲשׂ֣וֹת אֹתָ֑הּ וְהוֹתֵֽר׃ ס
8 ಆ ಕೆಲಸ ಮಾಡುತ್ತಿದ್ದ ಜ್ಞಾನಿಗಳೆಲ್ಲರು ಹೊಸೆದ ನಾರಿನ ಹತ್ತು ಪರದೆಗಳಿಂದ ಗುಡಾರವನ್ನು ಮಾಡಿ ಆ ಪರದೆಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರಗಳಿಂದ ನೇಯ್ಗೆಯವರಂತೆ ಕೆರೂಬಿಗಳನ್ನು ಮಾಡಿ ಅದಕ್ಕೆ ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು.
וַיַּעֲשׂ֨וּ כָל־חֲכַם־לֵ֜ב בְּעֹשֵׂ֧י הַמְּלָאכָ֛ה אֶת־הַמִּשְׁכָּ֖ן עֶ֣שֶׂר יְרִיעֹ֑ת שֵׁ֣שׁ מָשְׁזָ֗ר וּתְכֵ֤לֶת וְאַרְגָּמָן֙ וְתוֹלַ֣עַת שָׁנִ֔י כְּרֻבִ֛ים מַעֲשֵׂ֥ה חֹשֵׁ֖ב עָשָׂ֥ה אֹתָֽם׃
9 ಪ್ರತಿಯೊಂದು ಪರದೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು. ಎಲ್ಲಾ ಪರದೆಗಳು ಸಮಾನ ಅಳತೆಯಲ್ಲಿದ್ದವು.
אֹ֜רֶךְ הַיְרִיעָ֣ה הָֽאַחַ֗ת שְׁמֹנֶ֤ה וְעֶשְׂרִים֙ בָּֽאַמָּ֔ה וְרֹ֙חַב֙ אַרְבַּ֣ע בָּֽאַמָּ֔ה הַיְרִיעָ֖ה הָאֶחָ֑ת מִדָּ֥ה אַחַ֖ת לְכָל־הַיְרִיעֹֽת׃
10 ೧೦ ಐದೈದು ಪರದೆಗಳನ್ನು ಒಂದೊಂದಾಗಿ ಜೋಡಿಸಿದರು.
וַיְחַבֵּר֙ אֶת־חֲמֵ֣שׁ הַיְרִיעֹ֔ת אַחַ֖ת אֶל־אֶחָ֑ת וְחָמֵ֤שׁ יְרִיעֹת֙ חִבַּ֔ר אַחַ֖ת אֶל־אֶחָֽת׃
11 ೧೧ ಈ ಎರಡು ಜೋಡಣೆಗಳಲ್ಲಿ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ
וַיַּ֜עַשׂ לֻֽלְאֹ֣ת תְּכֵ֗לֶת עַ֣ל שְׂפַ֤ת הַיְרִיעָה֙ הָֽאֶחָ֔ת מִקָּצָ֖ה בַּמַּחְבָּ֑רֶת כֵּ֤ן עָשָׂה֙ בִּשְׂפַ֣ת הַיְרִיעָ֔ה הַקִּ֣יצוֹנָ֔ה בַּמַּחְבֶּ֖רֶת הַשֵּׁנִֽית׃
12 ೧೨ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿದರು; ಆ ಕುಣಿಕೆಗಳನ್ನು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರಾಗಿ ಇರಿಸಿದರು.
חֲמִשִּׁ֣ים לֻלָאֹ֗ת עָשָׂה֮ בַּיְרִיעָ֣ה הָאֶחָת֒ וַחֲמִשִּׁ֣ים לֻלָאֹ֗ת עָשָׂה֙ בִּקְצֵ֣ה הַיְרִיעָ֔ה אֲשֶׁ֖ר בַּמַּחְבֶּ֣רֶת הַשֵּׁנִ֑ית מַקְבִּילֹת֙ הַלֻּ֣לָאֹ֔ת אַחַ֖ת אֶל־אֶחָֽת׃
13 ೧೩ ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿ ಆ ಪರದೆಗಳನ್ನು ಒಂದಕ್ಕೊಂದು ಜೋಡಿಸಿದರು; ಹೀಗೆ ಅದು ಒಂದೇ ಗುಡಾರ ಆಯಿತು.
וַיַּ֕עַשׂ חֲמִשִּׁ֖ים קַרְסֵ֣י זָהָ֑ב וַיְחַבֵּ֨ר אֶת־הַיְרִעֹ֜ת אַחַ֤ת אֶל־אַחַת֙ בַּקְּרָסִ֔ים וַֽיְהִ֥י הַמִּשְׁכָּ֖ן אֶחָֽד׃ ס
14 ೧೪ ಬೆಚಲೇಲನು ಗುಡಾರದ ಮೇಲೆ ಹೊದಿಸುವುದಕ್ಕಾಗಿ ಉಣ್ಣೆಯ ಹನ್ನೊಂದು ಪರದೆಗಳಿಂದ ಆ ಗುಡಾರಕ್ಕೆ ಮೇಲಣ ಡೇರೆಯನ್ನು ಮಾಡಿದನು.
וַיַּ֙עַשׂ֙ יְרִיעֹ֣ת עִזִּ֔ים לְאֹ֖הֶל עַל־הַמִּשְׁכָּ֑ן עַשְׁתֵּֽי־עֶשְׂרֵ֥ה יְרִיעֹ֖ת עָשָׂ֥ה אֹתָֽם׃
15 ೧೫ ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು; ಎಲ್ಲಾ ಪರದೆಗಳೂ ಒಂದೇ ಅಳತೆಯಾಗಿದ್ದವು.
אֹ֜רֶךְ הַיְרִיעָ֣ה הָאַחַ֗ת שְׁלֹשִׁים֙ בָּֽאַמָּ֔ה וְאַרְבַּ֣ע אַמּ֔וֹת רֹ֖חַב הַיְרִיעָ֣ה הָאֶחָ֑ת מִדָּ֣ה אַחַ֔ת לְעַשְׁתֵּ֥י עֶשְׂרֵ֖ה יְרִיעֹֽת׃
16 ೧೬ ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನೂ ಒಂದಾಗಿ ಜೋಡಿಸಿದರು.
וַיְחַבֵּ֛ר אֶת־חֲמֵ֥שׁ הַיְרִיעֹ֖ת לְבָ֑ד וְאֶת־שֵׁ֥שׁ הַיְרִיעֹ֖ת לְבָֽד׃
17 ೧೭ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿದರು.
וַיַּ֜עַשׂ לֻֽלָאֹ֣ת חֲמִשִּׁ֗ים עַ֚ל שְׂפַ֣ת הַיְרִיעָ֔ה הַקִּיצֹנָ֖ה בַּמַּחְבָּ֑רֶת וַחֲמִשִּׁ֣ים לֻלָאֹ֗ת עָשָׂה֙ עַל־שְׂפַ֣ת הַיְרִיעָ֔ה הַחֹבֶ֖רֶת הַשֵּׁנִֽית׃
18 ೧೮ ಒಂದೇ ಡೇರೆಯಾಗುವಂತೆ ಸಮಸ್ತವನ್ನು ಜೋಡಿಸುವುದಕ್ಕಾಗಿ ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿದರು.
וַיַּ֛עַשׂ קַרְסֵ֥י נְחֹ֖שֶׁת חֲמִשִּׁ֑ים לְחַבֵּ֥ר אֶת־הָאֹ֖הֶל לִֽהְיֹ֥ת אֶחָֽד׃
19 ೧೯ ಅದಲ್ಲದೆ ಹದಮಾಡಿರುವ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ, ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿದರು.
וַיַּ֤עַשׂ מִכְסֶה֙ לָאֹ֔הֶל עֹרֹ֥ת אֵלִ֖ים מְאָדָּמִ֑ים וּמִכְסֵ֛ה עֹרֹ֥ת תְּחָשִׁ֖ים מִלְמָֽעְלָה׃ ס
20 ೨೦ ಗುಡಾರಕ್ಕೆ ಜಾಲೀಮರದಿಂದ ನೆಟ್ಟಗೆ ನಿಂತಿರುವ ಹಲಗೆಗಳಿಂದ ಚೌಕಟ್ಟುಗಳನ್ನು ಮಾಡಿದರು.
וַיַּ֥עַשׂ אֶת־הַקְּרָשִׁ֖ים לַמִּשְׁכָּ֑ן עֲצֵ֥י שִׁטִּ֖ים עֹמְדִֽים׃
21 ೨೧ ಪ್ರತಿಯೊಂದು ಚೌಕಟ್ಟೂ ಹತ್ತು ಮೊಳ ಉದ್ದವಾಗಿಯೂ ಒಂದುವರೆ ಮೊಳ ಅಗಲವಾಗಿಯೂ ಇತ್ತು;
עֶ֥שֶׂר אַמֹּ֖ות אֹ֣רֶךְ הַקָּ֑רֶשׁ וְאַמָּה֙ וַחֲצִ֣י הָֽאַמָּ֔ה רֹ֖חַב הַקֶּ֥רֶשׁ הָאֶחָֽד׃
22 ೨೨ ಪ್ರತಿಯೊಂದು ಚೌಕಟ್ಟೂ ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವುಪಟ್ಟಿಗಳುಳ್ಳದ್ದಾಗಿತ್ತು; ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆ ಮಾಡಿಸಿದರು.
שְׁתֵּ֣י יָדֹ֗ת לַקֶּ֙רֶשׁ֙ הָֽאֶחָ֔ד מְשֻׁלָּבֹ֔ת אַחַ֖ת אֶל־אֶחָ֑ת כֵּ֣ן עָשָׂ֔ה לְכֹ֖ל קַרְשֵׁ֥י הַמִּשְׁכָּֽן׃
23 ೨೩ ಗುಡಾರದ ದಕ್ಷಿಣದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು;
וַיַּ֥עַשׂ אֶת־הַקְּרָשִׁ֖ים לַמִּשְׁכָּ֑ן עֶשְׂרִ֣ים קְרָשִׁ֔ים לִפְאַ֖ת נֶ֥גֶב תֵּימָֽנָה׃
24 ೨೪ ನಲ್ವತ್ತು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಮಾಡಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಟ್ಟರು; ಒಂದೊಂದು ಚೌಕಟ್ಟಿನಲ್ಲಿರುವ ಎರಡು ನಿಲುವುಪಟ್ಟಿಗಳ ಕೆಳಗೆ ಒಂದೊಂದು ಗದ್ದಿಗೆಕಲ್ಲನ್ನು ಇಟ್ಟರು.
וְאַרְבָּעִים֙ אַדְנֵי־כֶ֔סֶף עָשָׂ֕ה תַּ֖חַת עֶשְׂרִ֣ים הַקְּרָשִׁ֑ים שְׁנֵ֨י אֲדָנִ֜ים תַּֽחַת־הַקֶּ֤רֶשׁ הָאֶחָד֙ לִשְׁתֵּ֣י יְדֹתָ֔יו וּשְׁנֵ֧י אֲדָנִ֛ים תַּֽחַת־הַקֶּ֥רֶשׁ הָאֶחָ֖ד לִשְׁתֵּ֥י יְדֹתָֽיו׃
25 ೨೫ ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು
וּלְצֶ֧לַע הַמִּשְׁכָּ֛ן הַשֵּׁנִ֖ית לִפְאַ֣ת צָפ֑וֹן עָשָׂ֖ה עֶשְׂרִ֥ים קְרָשִֽׁים׃
26 ೨೬ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಗದ್ದಿಗೆಕಲ್ಲುಗಳ ಮೇರೆಗೆ ನಲ್ವತ್ತು ಬೆಳ್ಳಿಯ ಗದ್ದಿಗೆಕಲ್ಲಗಳನ್ನು ಮಾಡಿದರು.
וְאַרְבָּעִ֥ים אַדְנֵיהֶ֖ם כָּ֑סֶף שְׁנֵ֣י אֲדָנִ֗ים תַּ֚חַת הַקֶּ֣רֶשׁ הָאֶחָ֔ד וּשְׁנֵ֣י אֲדָנִ֔ים תַּ֖חַת הַקֶּ֥רֶשׁ הָאֶחָֽד׃
27 ೨೭ ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮದಿಕ್ಕಿನಲ್ಲಿ ಆರು ಚೌಕಟ್ಟುಗಳನ್ನು ಮಾಡಿದರು.
וּֽלְיַרְכְּתֵ֥י הַמִּשְׁכָּ֖ן יָ֑מָּה עָשָׂ֖ה שִׁשָּׁ֥ה קְרָשִֽׁים׃
28 ೨೮ ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿದರು.
וּשְׁנֵ֤י קְרָשִׁים֙ עָשָׂ֔ה לִמְקֻצְעֹ֖ת הַמִּשְׁכָּ֑ן בַּיַּרְכָתָֽיִם׃
29 ೨೯ ಅವು ಬುಡದಿಂದ ತುದಿಯವರೆಗೂ ಅಂದರೆ ಮೊದಲನೆಯ ಬಳೆಯವರೆಗೂ ಜೋಡಿಸಿದ್ದವು; ಹಾಗೆ ಎರಡು ಮೂಲೆಗಳಿಗೂ ಮಾಡಿದರು.
וְהָי֣וּ תוֹאֲמִם֮ מִלְּמַטָּה֒ וְיַחְדָּ֗ו יִהְי֤וּ תַמִּים֙ אֶל־רֹאשׁ֔וֹ אֶל־הַטַּבַּ֖עַת הָאֶחָ֑ת כֵּ֚ן עָשָׂ֣ה לִשְׁנֵיהֶ֔ם לִשְׁנֵ֖י הַמִּקְצֹעֹֽת׃
30 ೩೦ ಹೀಗೆ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೆಕಲ್ಲುಗಳೂ ಒಟ್ಟು ಹದಿನಾರು ಗದ್ದಿಗೆಕಲ್ಲುಗಳಿದ್ದವು.
וְהָיוּ֙ שְׁמֹנָ֣ה קְרָשִׁ֔ים וְאַדְנֵיהֶ֣ם כֶּ֔סֶף שִׁשָּׁ֥ה עָשָׂ֖ר אֲדָנִ֑ים שְׁנֵ֤י אֲדָנִים֙ שְׁנֵ֣י אֲדָנִ֔ים תַּ֖חַת הַקֶּ֥רֶשׁ הָאֶחָֽד׃
31 ೩೧ ಜಾಲೀಮರದಿಂದ ಅಗುಳಿಗಳನ್ನು ಮಾಡಿದರು.
וַיַּ֥עַשׂ בְּרִיחֵ֖י עֲצֵ֣י שִׁטִּ֑ים חֲמִשָּׁ֕ה לְקַרְשֵׁ֥י צֶֽלַע־הַמִּשְׁכָּ֖ן הָאֶחָֽת׃
32 ೩೨ ಗುಡಾರದ ಎರಡು ಕಡೆಗಳ ಚೌಕಟ್ಟುಗಳಿಗೂ ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿದರು.
וַחֲמִשָּׁ֣ה בְרִיחִ֔ם לְקַרְשֵׁ֥י צֶֽלַע־הַמִּשְׁכָּ֖ן הַשֵּׁנִ֑ית וַחֲמִשָּׁ֤ה בְרִיחִם֙ לְקַרְשֵׁ֣י הַמִּשְׁכָּ֔ן לַיַּרְכָתַ֖יִם יָֽמָּה׃
33 ೩೩ ಚೌಕಟ್ಟುಗಳ ನಟ್ಟನಡುವೆಯಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ಮುಟ್ಟುವಂತೆ ಮಾಡಿದರು.
וַיַּ֖עַשׂ אֶת־הַבְּרִ֣יחַ הַתִּיכֹ֑ן לִבְרֹ֙חַ֙ בְּת֣וֹךְ הַקְּרָשִׁ֔ים מִן־הַקָּצֶ֖ה אֶל־הַקָּצֶֽה׃
34 ೩೪ ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿದರು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಿದರು.
וְֽאֶת־הַקְּרָשִׁ֞ים צִפָּ֣ה זָהָ֗ב וְאֶת־טַבְּעֹתָם֙ עָשָׂ֣ה זָהָ֔ב בָּתִּ֖ים לַבְּרִיחִ֑ם וַיְצַ֥ף אֶת־הַבְּרִיחִ֖ם זָהָֽב׃
35 ೩೫ ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕೆರೂಬಿಗಳಿಗೆ ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿದರು.
וַיַּ֙עַשׂ֙ אֶת־הַפָּרֹ֔כֶת תְּכֵ֧לֶת וְאַרְגָּמָ֛ן וְתוֹלַ֥עַת שָׁנִ֖י וְשֵׁ֣שׁ מָשְׁזָ֑ר מַעֲשֵׂ֥ה חֹשֵׁ֛ב עָשָׂ֥ה אֹתָ֖הּ כְּרֻבִֽים׃
36 ೩೬ ಅದಕ್ಕೆ ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿ ಚಿನ್ನದ ತಗಡುಗಳನ್ನು ಹೊದಿಸಿದರು; ಅವುಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿ ನಾಲ್ಕು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಎರಕಹೊಯಿಸಿದರು.
וַיַּ֣עַשׂ לָ֗הּ אַרְבָּעָה֙ עַמּוּדֵ֣י שִׁטִּ֔ים וַיְצַפֵּ֣ם זָהָ֔ב וָוֵיהֶ֖ם זָהָ֑ב וַיִּצֹ֣ק לָהֶ֔ם אַרְבָּעָ֖ה אַדְנֵי־כָֽסֶף׃
37 ೩೭ ಡೇರೆಯ ಬಾಗಿಲಿಗೆ ಹುರಿ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿಹಾಕಿ ಪರದೆಯನ್ನು ಮಾಡಿದರು.
וַיַּ֤עַשׂ מָסָךְ֙ לְפֶ֣תַח הָאֹ֔הֶל תְּכֵ֧לֶת וְאַרְגָּמָ֛ן וְתוֹלַ֥עַת שָׁנִ֖י וְשֵׁ֣שׁ מָשְׁזָ֑ר מַעֲשֵׂ֖ה רֹקֵֽם׃
38 ೩೮ ಆ ಪರದೆಯನ್ನು ತೂಗು ಹಾಕುವುದಕ್ಕಾಗಿ ಐದು ಕಂಬಗಳನ್ನೂ ಅವುಗಳ ಕೊಂಡಿಗಳನ್ನೂ ಮಾಡಿ ಅವುಗಳ ಸುತ್ತಲ ಮೆಟ್ಟಿಲುಗಳಿಗೂ, ಕಟ್ಟುಗಳಿಗೂ ಚಿನ್ನದ ತಗಡುಗಳನ್ನು ಹೊದಿಸಿದರು. ಅವುಗಳ ಐದು ತಳಭಾಗಗಳನ್ನು ತಾಮ್ರದಿಂದ ಮಾಡಿದರು.
וְאֶת־עַמּוּדָ֤יו חֲמִשָּׁה֙ וְאֶת־וָ֣וֵיהֶ֔ם וְצִפָּ֧ה רָאשֵׁיהֶ֛ם וַחֲשֻׁקֵיהֶ֖ם זָהָ֑ב וְאַדְנֵיהֶ֥ם חֲמִשָּׁ֖ה נְחֹֽשֶׁת׃ פ

< ವಿಮೋಚನಕಾಂಡ 36 >