< ವಿಮೋಚನಕಾಂಡ 38 >

1 ಅವನು ದಹನ ಬಲಿಯ ಯಜ್ಞವೇದಿಯನ್ನು ಜಾಲೀಮರದಿಂದ ಕಟ್ಟಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.
וַיַּעַשׂ אֶת־מִזְבַּח הָעֹלָה עֲצֵי שִׁטִּים חָמֵשׁ אַמּוֹת אׇרְכּוֹ וְחָֽמֵשׁ־אַמּוֹת רׇחְבּוֹ רָבוּעַ וְשָׁלֹשׁ אַמּוֹת קֹמָתֽוֹ׃
2 ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿದನು; ಅವು ಯಜ್ಞವೇದಿಯಿಂದಲೇ ಮಾಡಲ್ಪಟ್ಟಿದ್ದವು. ಆ ವೇದಿಗೆ ತಾಮ್ರದ ತಗಡುಗಳನ್ನು ಹೊದಿಸಿದನು.
וַיַּעַשׂ קַרְנֹתָיו עַל אַרְבַּע פִּנֹּתָיו מִמֶּנּוּ הָיוּ קַרְנֹתָיו וַיְצַף אֹתוֹ נְחֹֽשֶׁת׃
3 ಯಜ್ಞವೇದಿಯ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ತೊಟ್ಟಿಗಳು, ಮುಳ್ಳುಚಮಚಗಳು, ಅಗ್ಗಿಷ್ಟಿಕೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು.
וַיַּעַשׂ אֶֽת־כׇּל־כְּלֵי הַמִּזְבֵּחַ אֶת־הַסִּירֹת וְאֶת־הַיָּעִים וְאֶת־הַמִּזְרָקֹת אֶת־הַמִּזְלָגֹת וְאֶת־הַמַּחְתֹּת כׇּל־כֵּלָיו עָשָׂה נְחֹֽשֶׁת׃
4 ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಿದನು. ಅದು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರುವಂತೆ ಹಾಕಿದನು.
וַיַּעַשׂ לַמִּזְבֵּחַ מִכְבָּר מַעֲשֵׂה רֶשֶׁת נְחֹשֶׁת תַּחַת כַּרְכֻּבּוֹ מִלְּמַטָּה עַד־חֶצְיֽוֹ׃
5 ಯಜ್ಞವೇದಿಯನ್ನು ಎತ್ತಿ ಹಿಡಿಯುವ ಕಂಬಗಳನ್ನು ಸೇರಿಸುವುದಕ್ಕಾಗಿ ತಾಮ್ರದ ಜಾಲರಿಯ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳೆಗಳನ್ನು ಎರಕಹೊಯಿಸಿದನು.
וַיִּצֹק אַרְבַּע טַבָּעֹת בְּאַרְבַּע הַקְּצָוֺת לְמִכְבַּר הַנְּחֹשֶׁת בָּתִּים לַבַּדִּֽים׃
6 ಯಜ್ಞವೇದಿಯನ್ನು ಹೊರುವ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ತಾಮ್ರದ ತಗಡುಗಳನ್ನು ಹೊದಿಸಿದನು.
וַיַּעַשׂ אֶת־הַבַּדִּים עֲצֵי שִׁטִּים וַיְצַף אֹתָם נְחֹֽשֶׁת׃
7 ಎರಡು ಬದಿಗಳಲ್ಲಿರುವ ಬಳೆಗಳಲ್ಲಿ ಅವುಗಳನ್ನು ಸೇರಿಸಿದನು. ಆ ಯಜ್ಞವೇದಿಯನ್ನು ಹಲಗೆಗಳಿಂದ ಬರಿದಾಗಿರುವ ಒಂದು ಪೆಟ್ಟಿಗೆಯಂತೆ ಮಾಡಿಸಿದನು.
וַיָּבֵא אֶת־הַבַּדִּים בַּטַּבָּעֹת עַל צַלְעֹת הַמִּזְבֵּחַ לָשֵׂאת אֹתוֹ בָּהֶם נְבוּב לֻחֹת עָשָׂה אֹתֽוֹ׃
8 ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ದರ್ಪಣಗಳಿಂದ ತಾಮ್ರದ ತೊಟ್ಟಿಯನ್ನೂ, ಅದರ ಪೀಠವನ್ನೂ ಮಾಡಿಸಿದನು.
וַיַּעַשׂ אֵת הַכִּיּוֹר נְחֹשֶׁת וְאֵת כַּנּוֹ נְחֹשֶׁת בְּמַרְאֹת הַצֹּבְאֹת אֲשֶׁר צָֽבְאוּ פֶּתַח אֹהֶל מוֹעֵֽד׃
9 ಗುಡಾರಕ್ಕೆ ಅಂಗಳವನ್ನು ಮಾಡಿಸಿದನು. ಆ ಅಂಗಳದ ದಕ್ಷಿಣದಿಕ್ಕಿನಲ್ಲಿ ಇದ್ದ ಪರದೆಗಳು ನಯವಾದ ನಾರಿನ ಬಟ್ಟೆಯಿಂದ ಮಾಡಲಾಗಿತ್ತು, ನೂರುಮೊಳ ಉದ್ದವಾಗಿದ್ದವು.
וַיַּעַשׂ אֶת־הֶחָצֵר לִפְאַת ׀ נֶגֶב תֵּימָנָה קַלְעֵי הֶֽחָצֵר שֵׁשׁ מׇשְׁזָר מֵאָה בָּאַמָּֽה׃
10 ೧೦ ಅವುಗಳಿಗೆ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಹಾಗೂ ಕಟ್ಟುಗಳೂ ಬೆಳ್ಳಿಯವುಗಳಾಗಿದ್ದವು.
עַמּוּדֵיהֶם עֶשְׂרִים וְאַדְנֵיהֶם עֶשְׂרִים נְחֹשֶׁת וָוֵי הָעַמּוּדִים וַחֲשֻׁקֵיהֶם כָּֽסֶף׃
11 ೧೧ ಉತ್ತರದ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ಪರದೆಗಳಿದ್ದವು ಅವುಗಳಿಗೆ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವುಗಳಾಗಿದ್ದವು.
וְלִפְאַת צָפוֹן מֵאָה בָֽאַמָּה עַמּוּדֵיהֶם עֶשְׂרִים וְאַדְנֵיהֶם עֶשְׂרִים נְחֹשֶׁת וָוֵי הָֽעַמּוּדִים וַחֲשֻׁקֵיהֶם כָּֽסֶף׃
12 ೧೨ ಪಶ್ಚಿಮ ಕಡೆಯಲ್ಲಿ ಐವತ್ತು ಮೊಳ ಉದ್ದವಾದ ತೆರೆಗಳಿದ್ದವು ಅವುಗಳಿಗೆ ಹತ್ತು ಕಂಬಗಳೂ ಹತ್ತು ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವಾಗಿದ್ದವು.
וְלִפְאַת־יָם קְלָעִים חֲמִשִּׁים בָּֽאַמָּה עַמּוּדֵיהֶם עֲשָׂרָה וְאַדְנֵיהֶם עֲשָׂרָה וָוֵי הָעַמֻּדִים וַחֲשׁוּקֵיהֶם כָּֽסֶף׃
13 ೧೩ ಪೂರ್ವದಿಕ್ಕಿನಲ್ಲಿಯೂ ಅಂಗಳದ ಅಗಲವು ಐವತ್ತು ಮೊಳವಾಗಿತ್ತು.
וְלִפְאַת קֵדְמָה מִזְרָחָה חֲמִשִּׁים אַמָּֽה׃
14 ೧೪ ಅಲ್ಲಿ ಬಾಗಿಲಿನ ಎರಡೂ ಕಡೆಗಳಲ್ಲಿಯೂ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು ಅವುಗಳಿಗೆ ಮೂರು ಮೂರು ಕಂಬಗಳೂ ಮೂರು ಮೂರು ಗದ್ದಿಗೆಕಲ್ಲುಗಳೂ ಇದ್ದವು.
קְלָעִים חֲמֵשׁ־עֶשְׂרֵה אַמָּה אֶל־הַכָּתֵף עַמּוּדֵיהֶם שְׁלֹשָׁה וְאַדְנֵיהֶם שְׁלֹשָֽׁה׃
15 ೧೫
וְלַכָּתֵף הַשֵּׁנִית מִזֶּה וּמִזֶּה לְשַׁעַר הֶֽחָצֵר קְלָעִים חֲמֵשׁ עֶשְׂרֵה אַמָּה עַמֻּדֵיהֶם שְׁלֹשָׁה וְאַדְנֵיהֶם שְׁלֹשָֽׁה׃
16 ೧೬ ಅಂಗಳದ ಸುತ್ತಲಿರುವ ಪರದೆಗಳೆಲ್ಲವು ನಯವಾಗಿ ಹೆಣೆದ ಹತ್ತಿಯ ಬಟ್ಟೆಯಿಂದ ಮಾಡಲ್ಪಟ್ಟಿದ್ದವು;
כׇּל־קַלְעֵי הֶחָצֵר סָבִיב שֵׁשׁ מׇשְׁזָֽר׃
17 ೧೭ ಕಂಬಗಳ ಗದ್ದಿಗೆಕಲ್ಲುಗಳು ತಾಮ್ರದವುಗಳು; ಕಂಬಗಳ ಕೊಂಡಿಗಳೂ, ಕಟ್ಟುಗಳೂ ಬೆಳ್ಳಿಯವು; ಅವುಗಳ ಬೋದಿಗೆಗಳು ಬೆಳ್ಳಿಯ ತಗಡುಗಳಿಂದ ಹೊದಿಸಲ್ಪಟ್ಟವು. ಅಂಗಳದ ಎಲ್ಲಾ ಕಂಬಗಳಿಗೂ ಬೆಳ್ಳಿಯ ಕಟ್ಟುಗಳಿದ್ದವು.
וְהָאֲדָנִים לָֽעַמֻּדִים נְחֹשֶׁת וָוֵי הָֽעַמּוּדִים וַחֲשׁוּקֵיהֶם כֶּסֶף וְצִפּוּי רָאשֵׁיהֶם כָּסֶף וְהֵם מְחֻשָּׁקִים כֶּסֶף כֹּל עַמֻּדֵי הֶחָצֵֽר׃
18 ೧೮ ಅಂಗಳದ ಬಾಗಿಲಲ್ಲಿದ್ದ ಪರದೆಯು ನಯವಾದ ಹತ್ತಿಯ ಬಟ್ಟೆಯಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ಕಸೂತಿ ಕೆಲಸದವರ ಕೈಯಿಂದ ಮಾಡಿದ ಹಾಗೆಯೇ ಮಾಡಲ್ಪಟ್ಟಿದ್ದವು. ಅದರ ಉದ್ದವು ಇಪ್ಪತ್ತು ಮೊಳವಾಗಿತ್ತು; ಅದರ ಅಗಲವು ಅಂಗಳದ ಮಿಕ್ಕ ಪರದೆಗಳಂತೆ ಐದು ಮೊಳ.
וּמָסַךְ שַׁעַר הֶחָצֵר מַעֲשֵׂה רֹקֵם תְּכֵלֶת וְאַרְגָּמָן וְתוֹלַעַת שָׁנִי וְשֵׁשׁ מׇשְׁזָר וְעֶשְׂרִים אַמָּה אֹרֶךְ וְקוֹמָה בְרֹחַב חָמֵשׁ אַמּוֹת לְעֻמַּת קַלְעֵי הֶחָצֵֽר׃
19 ೧೯ ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳಿಗೆ, ಕಟ್ಟುಗಳಿಗೆ ಹಾಗು ಬೋದಿಗೆಗಳಿಗೆ ಹೊದಿಸಲ್ಪಟ್ಟ ತಗಡುಗಳು ಬೆಳ್ಳಿಯವಾಗಿದ್ದವು.
וְעַמֻּֽדֵיהֶם אַרְבָּעָה וְאַדְנֵיהֶם אַרְבָּעָה נְחֹשֶׁת וָוֵיהֶם כֶּסֶף וְצִפּוּי רָאשֵׁיהֶם וַחֲשֻׁקֵיהֶם כָּֽסֶף׃
20 ೨೦ ಗುಡಾರದ ಗೂಟಗಳೂ ಅಂಗಳದ ಗೂಟಗಳೂ ತಾಮ್ರದವುಗಳಾಗಿದ್ದವು.
וְֽכׇל־הַיְתֵדֹת לַמִּשְׁכָּן וְלֶחָצֵר סָבִיב נְחֹֽשֶׁת׃
21 ೨೧ ದೇವದರ್ಶನದ ಗುಡಾರವನ್ನು ಅಂದರೆ ಒಡಂಬಡಿಕೆಯ ನಿಯಮದ ಗುಡಾರವನ್ನು ಮಾಡುವುದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕಾಚಾರ: ಮೋಶೆಯ ಅಪ್ಪಣೆಯ ಪ್ರಕಾರ ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಲೇವಿಯರ ಕೈಯಿಂದ ಲೆಕ್ಕಮಾಡಿಸಿದ ದೇವದರ್ಶನದ ಗುಡಾರದ ಖರ್ಚು ವೆಚ್ಚಗಳು.
אֵלֶּה פְקוּדֵי הַמִּשְׁכָּן מִשְׁכַּן הָעֵדֻת אֲשֶׁר פֻּקַּד עַל־פִּי מֹשֶׁה עֲבֹדַת הַלְוִיִּם בְּיַד אִֽיתָמָר בֶּֽן־אַהֲרֹן הַכֹּהֵֽן׃
22 ೨೨ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನೇ ಮಾಡಿದನು.
וּבְצַלְאֵל בֶּן־אוּרִי בֶן־חוּר לְמַטֵּה יְהוּדָה עָשָׂה אֵת כׇּל־אֲשֶׁר־צִוָּה יְהֹוָה אֶת־מֹשֶֽׁה׃
23 ೨೩ ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಸೇರಿದ್ದನು; ಇವನು ಶಿಲ್ಪವಿದ್ಯೆಬಲ್ಲವನಾಗಿದ್ದನು, ಕಲಾತ್ಮಕ ಕೆಲಸವನ್ನು ಮಾಡಿಸುವವನು ಹಾಗು ಹತ್ತಿಯ ಬಟ್ಟೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸ ಮಾಡುವವನು ಆಗಿದ್ದನು.
וְאִתּוֹ אׇהֳלִיאָב בֶּן־אֲחִיסָמָךְ לְמַטֵּה־דָן חָרָשׁ וְחֹשֵׁב וְרֹקֵם בַּתְּכֵלֶת וּבָֽאַרְגָּמָן וּבְתוֹלַעַת הַשָּׁנִי וּבַשֵּֽׁשׁ׃
24 ೨೪ ದೇವಮಂದಿರದ ಸಕಲವಿಧವಾದ ಕೆಲಸಗಳಲ್ಲಿ ಉಪಯೋಗಿಸಿದ ಕಾಣಿಕೆಯ ಬಂಗಾರವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಇಪ್ಪತ್ತೊಂಬತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲ್.
כׇּל־הַזָּהָב הֶֽעָשׂוּי לַמְּלָאכָה בְּכֹל מְלֶאכֶת הַקֹּדֶשׁ וַיְהִי ׀ זְהַב הַתְּנוּפָה תֵּשַׁע וְעֶשְׂרִים כִּכָּר וּשְׁבַע מֵאוֹת וּשְׁלֹשִׁים שֶׁקֶל בְּשֶׁקֶל הַקֹּֽדֶשׁ׃
25 ೨೫ ಸಮೂಹದ ಜನಗಣತಿಯಲ್ಲಿ ದಾಖಲಿಸಿದ ಜನರಿಂದ ದೇವರ ಸೇವೆಗೆಂದು ಸಂಗ್ರಹಿಸಿದ ಬೆಳ್ಳಿಯ ತೂಕವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ನೂರು ತಲಾಂತು ಹಾಗು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲ್.
וְכֶסֶף פְּקוּדֵי הָעֵדָה מְאַת כִּכָּר וְאֶלֶף וּשְׁבַע מֵאוֹת וַחֲמִשָּׁה וְשִׁבְעִים שֶׁקֶל בְּשֶׁקֶל הַקֹּֽדֶשׁ׃
26 ೨೬ ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಒಂದೊಂದು “ಬೆಕಾ” ಅಂದರೆ ಅರ್ಧ ಶೆಕೆಲ್ ಆಗಿತ್ತು. ಜನಗಣತಿಯಲ್ಲಿ ಎಣಿಸಲ್ಪಟ್ಟವರಲ್ಲಿ ಇಪ್ಪತ್ತು ವರ್ಷದವರು ಹಾಗೂ ಅದಕ್ಕೂ ಮೇಲ್ಪಟ್ಟ ವಯಸ್ಸುಳ್ಳವರ ಲೆಕ್ಕ ಆರು ಲಕ್ಷದ ಮೂರು ಸಾವಿರದ ಐನೂರ ಐವತ್ತು ಮಂದಿಯಾಗಿತ್ತು.
בֶּקַע לַגֻּלְגֹּלֶת מַחֲצִית הַשֶּׁקֶל בְּשֶׁקֶל הַקֹּדֶשׁ לְכֹל הָעֹבֵר עַל־הַפְּקֻדִים מִבֶּן עֶשְׂרִים שָׁנָה וָמַעְלָה לְשֵׁשׁ־מֵאוֹת אֶלֶף וּשְׁלֹשֶׁת אֲלָפִים וַחֲמֵשׁ מֵאוֹת וַחֲמִשִּֽׁים׃
27 ೨೭ ದೇವಮಂದಿರದ ಗದ್ದಿಗೆಕಲ್ಲುಗಳನ್ನೂ ಪರದೆಯ ಕಂಬಗಳ ಮೆಟ್ಟುವಕಲ್ಲುಗಳನ್ನೂ ಎರಕಹೊಯ್ಯುವುದರಲ್ಲಿ ಒಂದೊಂದು ಗದ್ದಿಗೆಕಲ್ಲಿಗೆ ಒಂದೊಂದು ತಲಾಂತಿನ ಮೇರೆಗೆ ನೂರು ತಲಾಂತು ಬೆಳ್ಳಿಯು ಉಪಯೋಗಿಸಲಾಯಿತು.
וַיְהִי מְאַת כִּכַּר הַכֶּסֶף לָצֶקֶת אֵת אַדְנֵי הַקֹּדֶשׁ וְאֵת אַדְנֵי הַפָּרֹכֶת מְאַת אֲדָנִים לִמְאַת הַכִּכָּר כִּכָּר לָאָֽדֶן׃
28 ೨೮ ಮಿಕ್ಕ ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಕಂಬಗಳಿಗೆ ಕೊಂಡಿಗಳನ್ನೂ ಕಟ್ಟುಗಳನ್ನೂ ಮಾಡಿ ಅವುಗಳ ಅಗುಳಿಗಳಿಗೆ ತಗಡುಗಳನ್ನು ಹೊದಿಸಿದರು.
וְאֶת־הָאֶלֶף וּשְׁבַע הַמֵּאוֹת וַחֲמִשָּׁה וְשִׁבְעִים עָשָׂה וָוִים לָעַמּוּדִים וְצִפָּה רָאשֵׁיהֶם וְחִשַּׁק אֹתָֽם׃
29 ೨೯ ಜನರು ಕಾಣಿಕೆಯಾಗಿ ಕೊಟ್ಟ ತಾಮ್ರದ ಲೆಕ್ಕವು ಎಪ್ಪತ್ತು ತಲಾಂತು ಮತ್ತು ಎರಡು ಸಾವಿರದ ನಾನೂರು ಶೆಕೆಲ್ ಗಳಾಗಿತ್ತು.
וּנְחֹשֶׁת הַתְּנוּפָה שִׁבְעִים כִּכָּר וְאַלְפַּיִם וְאַרְבַּע־מֵאוֹת שָֽׁקֶל׃
30 ೩೦ ಅವುಗಳಿಂದ ದೇವದರ್ಶನದ ಗುಡಾರದ ಬಾಗಿಲಿನ ಮೆಟ್ಟುವಕಲ್ಲುಗಳನ್ನು, ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಯಜ್ಞವೇದಿಯ ಎಲ್ಲಾ ಉಪಕರಣಗಳನ್ನು,
וַיַּעַשׂ בָּהּ אֶת־אַדְנֵי פֶּתַח אֹהֶל מוֹעֵד וְאֵת מִזְבַּח הַנְּחֹשֶׁת וְאֶת־מִכְבַּר הַנְּחֹשֶׁת אֲשֶׁר־לוֹ וְאֵת כׇּל־כְּלֵי הַמִּזְבֵּֽחַ׃
31 ೩೧ ಅಂಗಳದ ಗದ್ದಿಗೆಕಲ್ಲುಗಳನ್ನು, ಅಂಗಳದ ಬಾಗಿಲಿನ ಮೆಟ್ಟುವ ಕಲ್ಲುಗಳನ್ನು ಹಾಗು ಗುಡಾರದ ಮತ್ತು ಅಂಗಳದ ಎಲ್ಲಾ ಗೂಟಗಳನ್ನು ಮಾಡಿದನು.
וְאֶת־אַדְנֵי הֶֽחָצֵר סָבִיב וְאֶת־אַדְנֵי שַׁעַר הֶחָצֵר וְאֵת כׇּל־יִתְדֹת הַמִּשְׁכָּן וְאֶת־כׇּל־יִתְדֹת הֶחָצֵר סָבִֽיב׃

< ವಿಮೋಚನಕಾಂಡ 38 >