< ವಿಮೋಚನಕಾಂಡ 38 >
1 ೧ ಅವನು ದಹನ ಬಲಿಯ ಯಜ್ಞವೇದಿಯನ್ನು ಜಾಲೀಮರದಿಂದ ಕಟ್ಟಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.
और बसलेल ने बबूल की लकड़ी से होमबलि के लिए चौकोर वेदी बनाई. यह दो मीटर पच्चीस सेंटीमीटर लंबी तथा इतनी ही चौड़ी थी. इसकी ऊंचाई एक मीटर सैंतीस सेंटीमीटर थी.
2 ೨ ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿದನು; ಅವು ಯಜ್ಞವೇದಿಯಿಂದಲೇ ಮಾಡಲ್ಪಟ್ಟಿದ್ದವು. ಆ ವೇದಿಗೆ ತಾಮ್ರದ ತಗಡುಗಳನ್ನು ಹೊದಿಸಿದನು.
और इसके चारों कोनों पर एक-एक सींग बनाया, जो वेदी के साथ एक ही टुकड़े में कांसे से बनाये गये.
3 ೩ ಯಜ್ಞವೇದಿಯ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ತೊಟ್ಟಿಗಳು, ಮುಳ್ಳುಚಮಚಗಳು, ಅಗ್ಗಿಷ್ಟಿಕೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು.
डोल, बेलचे, छिड़काव कटोरे, कांटे तथा तवे जैसी वेदी में काम आनेवाली सभी चीज़ों को कांसे से बनाया.
4 ೪ ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಿದನು. ಅದು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರುವಂತೆ ಹಾಕಿದನು.
वेदी के लिए कांसे की जाली की एक झंझरी बनाई, जो वेदी की आधी ऊंचाई पर लगाई गई थी.
5 ೫ ಯಜ್ಞವೇದಿಯನ್ನು ಎತ್ತಿ ಹಿಡಿಯುವ ಕಂಬಗಳನ್ನು ಸೇರಿಸುವುದಕ್ಕಾಗಿ ತಾಮ್ರದ ಜಾಲರಿಯ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳೆಗಳನ್ನು ಎರಕಹೊಯಿಸಿದನು.
कांसे की झंझरी के चारों कोनों पर चार कड़े लगाए, ताकि इनके बीच से डंडों को लगा सकें.
6 ೬ ಯಜ್ಞವೇದಿಯನ್ನು ಹೊರುವ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ತಾಮ್ರದ ತಗಡುಗಳನ್ನು ಹೊದಿಸಿದನು.
डंडे बबूल की लकड़ी से बनाकर उस पर कांसे लगवा दी.
7 ೭ ಎರಡು ಬದಿಗಳಲ್ಲಿರುವ ಬಳೆಗಳಲ್ಲಿ ಅವುಗಳನ್ನು ಸೇರಿಸಿದನು. ಆ ಯಜ್ಞವೇದಿಯನ್ನು ಹಲಗೆಗಳಿಂದ ಬರಿದಾಗಿರುವ ಒಂದು ಪೆಟ್ಟಿಗೆಯಂತೆ ಮಾಡಿಸಿದನು.
उसने उन डंडों को उन कड़ों में डाल दिया ताकि वेदी को उठाया जा सके. वेदी भीतर से खोखली थी और तख्ते जोड़कर बनाई गई थी.
8 ೮ ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ದರ್ಪಣಗಳಿಂದ ತಾಮ್ರದ ತೊಟ್ಟಿಯನ್ನೂ, ಅದರ ಪೀಠವನ್ನೂ ಮಾಡಿಸಿದನು.
इसकी हौदी और पाये दोनों कांसे के बनाए. इसे उन स्त्रियों के दर्पणों से बनाया, जो मिलनवाले तंबू के द्वार पर सेवा करती थीं.
9 ೯ ಗುಡಾರಕ್ಕೆ ಅಂಗಳವನ್ನು ಮಾಡಿಸಿದನು. ಆ ಅಂಗಳದ ದಕ್ಷಿಣದಿಕ್ಕಿನಲ್ಲಿ ಇದ್ದ ಪರದೆಗಳು ನಯವಾದ ನಾರಿನ ಬಟ್ಟೆಯಿಂದ ಮಾಡಲಾಗಿತ್ತು, ನೂರುಮೊಳ ಉದ್ದವಾಗಿದ್ದವು.
फिर पवित्र स्थान के आंगन को बनाया. आंगन के दक्षिण हिस्से में बंटी हुई बारिक सनी के कपड़े का पर्दा था, जिसकी लंबाई पैंतालीस मीटर थी,
10 ೧೦ ಅವುಗಳಿಗೆ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಹಾಗೂ ಕಟ್ಟುಗಳೂ ಬೆಳ್ಳಿಯವುಗಳಾಗಿದ್ದವು.
तथा बीस खंभे और कांसे की बीस कुर्सियां बनवाईं. खंभों के कुण्डे और पट्टियां चांदी की थी.
11 ೧೧ ಉತ್ತರದ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ಪರದೆಗಳಿದ್ದವು ಅವುಗಳಿಗೆ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವುಗಳಾಗಿದ್ದವು.
आंगन के उत्तरी दिशा के लिए भी पैंतालीस मीटर लंबे पर्दे बनाए गए और इसके लिए कांसे के बीस खंभे और बीस कुर्सियां बनाई गईं. मीनारों की कड़ियां तथा उसकी पट्टियां चांदी की थीं.
12 ೧೨ ಪಶ್ಚಿಮ ಕಡೆಯಲ್ಲಿ ಐವತ್ತು ಮೊಳ ಉದ್ದವಾದ ತೆರೆಗಳಿದ್ದವು ಅವುಗಳಿಗೆ ಹತ್ತು ಕಂಬಗಳೂ ಹತ್ತು ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವಾಗಿದ್ದವು.
पश्चिम दिशा के पर्दे साढ़े बाईस मीटर लंबे थे, तथा इसके लिए दस खंभे एवं दस कुर्सियां बनाई गई थी. मीनारों की कड़ियां तथा पट्टियां चांदी की थी.
13 ೧೩ ಪೂರ್ವದಿಕ್ಕಿನಲ್ಲಿಯೂ ಅಂಗಳದ ಅಗಲವು ಐವತ್ತು ಮೊಳವಾಗಿತ್ತು.
पूर्वी दिशा के पर्दे भी साढ़े बाईस मीटर लंबे थे.
14 ೧೪ ಅಲ್ಲಿ ಬಾಗಿಲಿನ ಎರಡೂ ಕಡೆಗಳಲ್ಲಿಯೂ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು ಅವುಗಳಿಗೆ ಮೂರು ಮೂರು ಕಂಬಗಳೂ ಮೂರು ಮೂರು ಗದ್ದಿಗೆಕಲ್ಲುಗಳೂ ಇದ್ದವು.
द्वार के एक तरफ के पर्दे छः मीटर पचहत्तर सेंटीमीटर के थे, और तीन खंभे और तीन कुर्सियां बनाई गयीं.
आंगन के प्रवेश द्वार की दूसरी ओर के पर्दे छः मीटर पचहत्तर सेंटीमीटर के थे, तथा और तीन खंभे और तीन कुर्सियां बनाई गयीं.
16 ೧೬ ಅಂಗಳದ ಸುತ್ತಲಿರುವ ಪರದೆಗಳೆಲ್ಲವು ನಯವಾಗಿ ಹೆಣೆದ ಹತ್ತಿಯ ಬಟ್ಟೆಯಿಂದ ಮಾಡಲ್ಪಟ್ಟಿದ್ದವು;
आंगन के चारों ओर के पर्दे सूक्ष्म बंटी हुई सन के थे.
17 ೧೭ ಕಂಬಗಳ ಗದ್ದಿಗೆಕಲ್ಲುಗಳು ತಾಮ್ರದವುಗಳು; ಕಂಬಗಳ ಕೊಂಡಿಗಳೂ, ಕಟ್ಟುಗಳೂ ಬೆಳ್ಳಿಯವು; ಅವುಗಳ ಬೋದಿಗೆಗಳು ಬೆಳ್ಳಿಯ ತಗಡುಗಳಿಂದ ಹೊದಿಸಲ್ಪಟ್ಟವು. ಅಂಗಳದ ಎಲ್ಲಾ ಕಂಬಗಳಿಗೂ ಬೆಳ್ಳಿಯ ಕಟ್ಟುಗಳಿದ್ದವು.
मीनारों की कुर्सियां कांसे की बनाई गई थी, मीनारों की कड़ियां तथा उनकी पट्टियां चांदी की थीं. उनका ऊपरी हिस्सा चांदी का था तथा आंगन के सभी मीनारों पर चांदी की पट्टियां लगाई गई थीं.
18 ೧೮ ಅಂಗಳದ ಬಾಗಿಲಲ್ಲಿದ್ದ ಪರದೆಯು ನಯವಾದ ಹತ್ತಿಯ ಬಟ್ಟೆಯಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ಕಸೂತಿ ಕೆಲಸದವರ ಕೈಯಿಂದ ಮಾಡಿದ ಹಾಗೆಯೇ ಮಾಡಲ್ಪಟ್ಟಿದ್ದವು. ಅದರ ಉದ್ದವು ಇಪ್ಪತ್ತು ಮೊಳವಾಗಿತ್ತು; ಅದರ ಅಗಲವು ಅಂಗಳದ ಮಿಕ್ಕ ಪರದೆಗಳಂತೆ ಐದು ಮೊಳ.
आंगन के प्रवेश द्वार के पर्दे सन के उत्तम रेशों के नीले, बैंगनी तथा लाल कपड़े के बने थे. इस पर कढ़ाई कढ़ी हुई थी. इसकी लंबाई नौ मीटर तथा ऊंचाई सवा दो मीटर थी, जो आंगन के दूसरे पर्दे के बराबर थी.
19 ೧೯ ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳಿಗೆ, ಕಟ್ಟುಗಳಿಗೆ ಹಾಗು ಬೋದಿಗೆಗಳಿಗೆ ಹೊದಿಸಲ್ಪಟ್ಟ ತಗಡುಗಳು ಬೆಳ್ಳಿಯವಾಗಿದ್ದವು.
इनके चारों खंभे तथा उनकी चारों कुर्सियां कांसे की थीं. इनकी कड़ियां तथा ऊपरी हिस्सा तथा उनकी पट्टियां चांदी की थीं.
20 ೨೦ ಗುಡಾರದ ಗೂಟಗಳೂ ಅಂಗಳದ ಗೂಟಗಳೂ ತಾಮ್ರದವುಗಳಾಗಿದ್ದವು.
पवित्र स्थान और उसके चारों ओर के आंगन की सभी खूंटियां कांसे की थीं.
21 ೨೧ ದೇವದರ್ಶನದ ಗುಡಾರವನ್ನು ಅಂದರೆ ಒಡಂಬಡಿಕೆಯ ನಿಯಮದ ಗುಡಾರವನ್ನು ಮಾಡುವುದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕಾಚಾರ: ಮೋಶೆಯ ಅಪ್ಪಣೆಯ ಪ್ರಕಾರ ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಲೇವಿಯರ ಕೈಯಿಂದ ಲೆಕ್ಕಮಾಡಿಸಿದ ದೇವದರ್ಶನದ ಗುಡಾರದ ಖರ್ಚು ವೆಚ್ಚಗಳು.
मोशेह के आदेश के अनुसार बनाए गए पवित्र स्थान और वाचा के पवित्र स्थान के निर्माण में जो जो सामग्रियां उपयोग में आई थीं, उन सभी की गिनती, जो पुरोहित अहरोन के पुत्र इथामार के नेतृत्व में लेवियों द्वारा की गई, वह इस प्रकार है:
22 ೨೨ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನೇ ಮಾಡಿದನು.
जिन वस्तुओं को बनाने की आज्ञा याहवेह द्वारा मोशेह को दी गई थी, वह यहूदाह गोत्र के बसलेल ने बना दी—बसलेल उरी के पुत्र, हूर के पोते थे.
23 ೨೩ ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಸೇರಿದ್ದನು; ಇವನು ಶಿಲ್ಪವಿದ್ಯೆಬಲ್ಲವನಾಗಿದ್ದನು, ಕಲಾತ್ಮಕ ಕೆಲಸವನ್ನು ಮಾಡಿಸುವವನು ಹಾಗು ಹತ್ತಿಯ ಬಟ್ಟೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸ ಮಾಡುವವನು ಆಗಿದ್ದನು.
उनके साथ दान गोत्र के अहीसामक के पुत्र ओहोलियाब थे, जो नक्काशी और शिल्पकार तथा कढ़ाई करने तथा सूक्ष्म बंटी हुई सन और नीले, बैंगनी तथा लाल वस्त्रों के बनाने में निपुण थे.
24 ೨೪ ದೇವಮಂದಿರದ ಸಕಲವಿಧವಾದ ಕೆಲಸಗಳಲ್ಲಿ ಉಪಯೋಗಿಸಿದ ಕಾಣಿಕೆಯ ಬಂಗಾರವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಇಪ್ಪತ್ತೊಂಬತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲ್.
पवित्र स्थान को बनाने में जितना सोना भेंट चढ़ा था, वह सोना पवित्र स्थान की तौल के अनुसार कुल एक हजार दो किलो था.
25 ೨೫ ಸಮೂಹದ ಜನಗಣತಿಯಲ್ಲಿ ದಾಖಲಿಸಿದ ಜನರಿಂದ ದೇವರ ಸೇವೆಗೆಂದು ಸಂಗ್ರಹಿಸಿದ ಬೆಳ್ಳಿಯ ತೂಕವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ನೂರು ತಲಾಂತು ಹಾಗು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲ್.
इस्राएलियों ने पवित्र स्थान के लिए जो चांदी भेंट दी थी, वह पवित्र स्थान की तौल के अनुसार लगभग तीन हजार पांच सौ बीस किलो थी.
26 ೨೬ ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಒಂದೊಂದು “ಬೆಕಾ” ಅಂದರೆ ಅರ್ಧ ಶೆಕೆಲ್ ಆಗಿತ್ತು. ಜನಗಣತಿಯಲ್ಲಿ ಎಣಿಸಲ್ಪಟ್ಟವರಲ್ಲಿ ಇಪ್ಪತ್ತು ವರ್ಷದವರು ಹಾಗೂ ಅದಕ್ಕೂ ಮೇಲ್ಪಟ್ಟ ವಯಸ್ಸುಳ್ಳವರ ಲೆಕ್ಕ ಆರು ಲಕ್ಷದ ಮೂರು ಸಾವಿರದ ಐನೂರ ಐವತ್ತು ಮಂದಿಯಾಗಿತ್ತು.
जो इस्राएली बीस वर्ष की उम्र से ज्यादा के थे, वे संख्या में कुल छः लाख तीन हजार पांच सौ पचास व्यक्ति थे, उन्होंने पवित्र स्थान की तौल के अनुसार आधा शेकेल, अर्थात् छः ग्राम भेंट दी.
27 ೨೭ ದೇವಮಂದಿರದ ಗದ್ದಿಗೆಕಲ್ಲುಗಳನ್ನೂ ಪರದೆಯ ಕಂಬಗಳ ಮೆಟ್ಟುವಕಲ್ಲುಗಳನ್ನೂ ಎರಕಹೊಯ್ಯುವುದರಲ್ಲಿ ಒಂದೊಂದು ಗದ್ದಿಗೆಕಲ್ಲಿಗೆ ಒಂದೊಂದು ತಲಾಂತಿನ ಮೇರೆಗೆ ನೂರು ತಲಾಂತು ಬೆಳ್ಳಿಯು ಉಪಯೋಗಿಸಲಾಯಿತು.
पवित्र स्थान तथा बीच के पर्दों के लिए लगभग साढ़े तीन हजार किलो चांदी उपयोग की गई थी—एक सौ कुर्सियां साढ़े तीन हजार किलो चांदी से बनीं—एक कुर्सी के लिए लगभग पैंतीस किलो चांदी लगी.
28 ೨೮ ಮಿಕ್ಕ ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಕಂಬಗಳಿಗೆ ಕೊಂಡಿಗಳನ್ನೂ ಕಟ್ಟುಗಳನ್ನೂ ಮಾಡಿ ಅವುಗಳ ಅಗುಳಿಗಳಿಗೆ ತಗಡುಗಳನ್ನು ಹೊದಿಸಿದರು.
जो बीस किलो चांदी बच गई, उससे मीनारों के लिए कड़ियां बनाई और ऊपरी हिस्से की पट्टियां भी बना दीं.
29 ೨೯ ಜನರು ಕಾಣಿಕೆಯಾಗಿ ಕೊಟ್ಟ ತಾಮ್ರದ ಲೆಕ್ಕವು ಎಪ್ಪತ್ತು ತಲಾಂತು ಮತ್ತು ಎರಡು ಸಾವಿರದ ನಾನೂರು ಶೆಕೆಲ್ ಗಳಾಗಿತ್ತು.
भेंट में चढ़ाया गया कांस्य लगभग दो हजार सवा चार सौ किलो था.
30 ೩೦ ಅವುಗಳಿಂದ ದೇವದರ್ಶನದ ಗುಡಾರದ ಬಾಗಿಲಿನ ಮೆಟ್ಟುವಕಲ್ಲುಗಳನ್ನು, ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಯಜ್ಞವೇದಿಯ ಎಲ್ಲಾ ಉಪಕರಣಗಳನ್ನು,
उससे मिलनवाले तंबू के द्वार के लिए कुर्सियां, कांसे की वेदी तथा इसकी जाली तथा वेदी का सारा सामान,
31 ೩೧ ಅಂಗಳದ ಗದ್ದಿಗೆಕಲ್ಲುಗಳನ್ನು, ಅಂಗಳದ ಬಾಗಿಲಿನ ಮೆಟ್ಟುವ ಕಲ್ಲುಗಳನ್ನು ಹಾಗು ಗುಡಾರದ ಮತ್ತು ಅಂಗಳದ ಎಲ್ಲಾ ಗೂಟಗಳನ್ನು ಮಾಡಿದನು.
आंगन के चारों ओर की कुर्सियां तथा उसके द्वार की कुर्सियां तथा निवास और आंगन के चारों ओर की खूंटियां भी बनाई गईं.