< ವಿಮೋಚನಕಾಂಡ 39 >
1 ೧ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನೂ ಮತ್ತು ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನೂ ಮಾಡಿದರು.
Daga zare mai ruwan shuɗi, da shuɗayya da kuma jan zare suka yi tsarkaken rigunan domin hidima a wuri mai tsarki. Suka kuma yi tsarkaken riguna don Haruna, yadda Ubangiji ya umarci Musa.
2 ೨ ಮಹಾಯಾಜಕನ ಏಫೋದೆಂಬ ಕವಚವನ್ನು ನಯವಾಗಿ ಹೊಸೆದ ಹತ್ತಿಯ ಬಟ್ಟೆಯಿಂದಲೂ ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ಮಾಡಿದರು.
Suka yi efod na zinariya, da shuɗi, da shunayya, da jan zare, da kuma lallausan lilin.
3 ೩ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದೊಡನೆಯೂ ಹತ್ತಿಯ ಬಟ್ಟೆಯೊಡನೆಯೂ ಕಸೂತಿ ಕೆಲಸದವರ ಪದ್ಧತಿಯ ಮೇರೆಗೆ ಕಸೂತಿ ಕೆಲಸವನ್ನು ಮಾಡುವುದಕ್ಕಾಗಿ ಬಂಗಾರವನ್ನು ಬಡಿದು ಹಗುರವಾದ ತಗಡುಗಳನ್ನು ಮಾಡಿ ಸಣ್ಣ ಸಣ್ಣ ಎಳೆಗಳಾಗಿ ಕತ್ತರಿಸಿದರು.
Suka bubbuga zinariya ta zama falle, suka yayyanka ta zare-zare don su yi saƙa da ita, tare da zane na shuɗi, da na shunayya, da na jan zare, da na lallausan lilin, aikin gwani mai fasaha.
4 ೪ ಏಫೋದ್ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳನ್ನು ಮಾಡಿದರು; ಅದರ ಎರಡು ಅಂಚುಗಳು ಜೋಡಿಸಲ್ಪಟ್ಟಿದ್ದವು.
Suka yi wa efod kafaɗu, sa’an nan suka haɗa su a gefenta biyu na sama, don a iya ɗaurawa.
5 ೫ ಕವಚದ ಮೇಲಿರುವ ಕಸೂತಿ ನಡುಕಟ್ಟು ಕವಚಕ್ಕೆ ಏಕವಾಗಿದ್ದು ಅದರಂತೆಯೇ ನಯವಾಗಿ ಹೊಸೆದ ಹತ್ತಿಯ ಬಟ್ಟೆಯಿಂದಲು, ಚಿನ್ನದ ದಾರಗಳಿಂದಲು ಹಾಗೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಮಾಡಲ್ಪಟ್ಟಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.
Gwanin mai saƙa ya saƙa abin ɗamarar efod. Da irin kayan da aka saƙa efod ne aka saƙa abin ɗamarar, wato, da zinariya, da shuɗi, da shunayya, da jan zare, da zaren lallausan lilin, yadda Ubangiji ya umarci Musa.
6 ೬ ಮುದ್ರಾಕ್ಷವನ್ನು ಕೆತ್ತುವ ರೀತಿಯಲ್ಲಿ ಗೋಮೇಧಕರತ್ನಗಳಲ್ಲಿ ಇಸ್ರಾಯೇಲನ ಹನ್ನೆರಡು ಮಕ್ಕಳ ಹೆಸರುಗಳನ್ನು ಕೆತ್ತಿ ಆ ರತ್ನಗಳನ್ನು ಕುಂದಣದಲ್ಲಿ ಹಚ್ಚಿದರು.
Suka shimfiɗa duwatsun onis, suka jera su cikin tsaiko na zinariya, suka kuma zāna sunayen’ya’yan Isra’ila a kan duwatsun kamar yadda akan yi hatimi.
7 ೭ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ರತ್ನಗಳನ್ನು ಇಸ್ರಾಯೇಲರ ಜ್ಞಾಪಕಾರ್ಥವಾಗಿ ಅವುಗಳನ್ನು ಏಫೋದ್ ಕವಚದ ಹೆಗಲಿನ ಮೇಲಿರುವ ಪಟ್ಟಿಗಳಲ್ಲಿ ಬಿಗಿಸಿದನು.
Sa’an nan suka ɗaura su a ƙyallen kafaɗun efod a matsayin duwatsun tuni wa’ya’yan Isra’ila, yadda Ubangiji ya umarci Musa.
8 ೮ ಏಫೋದ್ ಕವಚದಂತೆಯೇ ಕಸೂತಿಯಿಂದಲೂ ಕೆಲಸದಿಂದ ಚಿನ್ನದ ದಾರಗಳಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ನಯವಾದ ನಾರಿನ ಬಟ್ಟೆಯಲ್ಲಿ ಎದೆಯಪದಕವನ್ನು ಮಾಡಿದನು.
Suka yi ƙyallen maƙalawa a ƙirji, aikin gwani. Suka yi shi kamar efod, na zinariya, da na shuɗi, da na shunayya, da na jan zare, da kuma na lallausan lilin.
9 ೯ ಅದು ಚಚ್ಚೌಕವಾಗಿತ್ತು. ಆ ಎದೆಯಪದಕವು ಎರಡು ಪದರುಗಳ್ಳುಳದ್ದಾಗಿತ್ತು; ಅದು ಒಂದು ಗೇಣು ಉದ್ದವೂ ಒಂದು ಗೇಣು ಅಗಲವೂ ಆಗಿತ್ತು.
Ƙyallen maƙalawa a ƙirjin murabba’i ne, aka ninka shi biyu, tsawonsa da fāɗinsa kamu ɗaya-ɗaya ne.
10 ೧೦ ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಇರಿಸಿದರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಫಟಿಕಗಳು.
Sa’an nan suka sa jeri huɗu na duwatsu masu daraja a bisansa. A jeri na farko akwai yakutu, da tofaz, da zumurrudu;
11 ೧೧ ಎರಡನೆಯ ಸಾಲಿನಲ್ಲಿ ಪಚ್ಚೆ, ನೀಲಮಣಿ ಮತ್ತು ವಜ್ರಗಳು.
a jeri na biyu akwai turkuwoyis, da saffaya, da daimon;
12 ೧೨ ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಸುಗಂಧಿ ಮತ್ತು ಪದ್ಮರಾಗಗಳು.
a jeri na uku akwai yakinta, da idon mage, da ametis;
13 ೧೩ ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ ಮತ್ತು ವೈಡೂರ್ಯಗಳು ಇದ್ದವು. ಈ ರತ್ನಗಳನ್ನು ಕುಂದಣಗಳಲ್ಲಿ ಇರಿಸಿದರು.
a jeri na huɗu akwai beril, da onis, da yasfa. Aka sa su cikin tsaiko na zinariya.
14 ೧೪ ಇಸ್ರಾಯೇಲರ ಕುಲಗಳ ಸಂಖ್ಯೆಯ ಪ್ರಕಾರ ಹನ್ನೆರಡು ರತ್ನಗಳಿದ್ದವು; ಮುದ್ರಾಕ್ಷಗಳಲ್ಲಿ ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರು ಕೆತ್ತಲ್ಪಟ್ಟಿತ್ತು.
Aka zāna duwatsu goma sha biyu, ɗaya don kowane sunan’ya’yan Isra’ila goma sha biyu, kamar yadda akan yi hatimi.
15 ೧೫ ಎದೆಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕಬಂಗಾರದ ಸರಪಣಿಗಳನ್ನು ನೇಯ್ಗೆಯ ಕೆಲಸದಿಂದ ಮಾಡಿದರು.
Sai suka yi tuƙaƙƙun sarƙoƙi na zinariya zalla a kan ƙyallen maƙalawa a ƙirji.
16 ೧೬ ಎರಡು ಚಿನ್ನದ ಬಳೆಗಳನ್ನೂ ಎರಡು ಚಿನ್ನದ ಉಂಗುರಗಳನ್ನೂ ಮಾಡಿ ಆ ಉಂಗುರಗಳನ್ನು ಎದೆಪದಕದ ಎರಡು ಮೂಲೆಗಳಿಗೆ ಜೋಡಿಸಿದರು.
Suka yi tsaiko biyu na zinariya da zoban zinariya biyu, suka kuma ɗaura zoban a kusurwoyi biyu na ƙyallen maƙalawa a ƙirji.
17 ೧೭ ಹೆಣಿಗೇಕೆಲಸದ ಆ ಎರಡು ಚಿನ್ನದ ಸರಪಣಿಗಳನ್ನು ಪದಕದ ಮೂಲೆಗಳಲ್ಲಿರುವ ಉಂಗುರಗಳಿಗೆ ಜೋಡಿಸಿದರು.
Suka ɗaura sarƙoƙi biyu na zinariya da kusurwoyi na ƙyallen maƙalawa a ƙirji.
18 ೧೮ ಹೆಣಿಗೇಕೆಲಸದ ಆ ಸರಪಣಿಗಳ ಅಂಚುಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಬಳೆಗಳ ಮುಂಭಾಗಕ್ಕೆ ಜೋಡಿಸಿದರು.
Suka maƙala waɗancan bakin sarƙoƙin zinariya a tsaikon nan biyu, sa’an nan suka rataya su a kafaɗun efod daga gaba.
19 ೧೯ ಅದಲ್ಲದೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಪದಕದ ಒಳಗಣ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೇ ಇಟ್ಟರು.
Suka yi zobai biyu na zinariya suka haɗa, suka sa su a gefe biyu na ƙyallen maƙalawa a ƙirji daga ciki kusa da efod.
20 ೨೦ ಅವರು ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಏಫೋದ್ ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಆ ಕಸೂತಿಯ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಿದರು.
Sa’an nan suka yi waɗansu ƙarin zobai biyu na zinariya, suka maƙale su daga ƙasa a gaban kafaɗu biyu na efod kusa da mahaɗin a bisa abin ɗamarar efod.
21 ೨೧ ಎದೆಯಪದಕವು ಕಸೂತಿಯ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ ಕವಚದಿಂದ ಕಳಚಿಬೀಳದಂತೆಯೂ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿ ದಾರದಿಂದ ಕಟ್ಟಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಿದರು.
Suka ɗaura zoban ƙyallen maƙalawa a ƙirjin a zoban efod da shuɗiyar igiya don ƙyallen maƙalawa a ƙirji, ya kwanta lif a bisa kan abin ɗamarar efod don kada yă kunce daga efod, sun yi yadda Ubangiji ya umarci Musa.
22 ೨೨ ಬೆಚಲೇಲನು ಏಫೋದ್ ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ನಿಲುವಂಗಿಯನ್ನು ನೀಲಿಬಣ್ಣದ ಬಟ್ಟೆಯಿಂದಲೇ ನೇಕಾರನ ಕೆಲಸದಿಂದ ಮಾಡಿದನು.
Suka kuma saƙa taguwa ta efod da shuɗi duka, aikin gwani mai saƙa,
23 ೨೩ ತಲೆತೂರಿಸುವುದಕ್ಕೆ ಅದರಲ್ಲಿ ಕೊರಳು ಪಟ್ಟಿಯನ್ನು ಮಾಡಿ ಅದು ಹರಿಯದಂತೆ ಅದರ ಸುತ್ತಲೂ ನೇಯ್ಗೆ ಕಸೂತಿಯನ್ನು ಹಾಕಿದನು.
an yi wa taguwar wuyan wundi a tsakiya kamar sulke, aka daje wuyan don kada yă kece.
24 ೨೪ ನಿಲುವಂಗಿಯ ಅಂಚಿನ ಸುತ್ತಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದಾಳಿಂಬೆ ಹಣ್ಣಿನಂತೆ ಚೆಂಡುಗಳನ್ನು ಮಾಡಿದರು.
Suka yi fasalin’ya’yan rumman da shuɗi, da shunayya, da jan zare, da lallausan lilin kewaye da gefe-gefen taguwar.
25 ೨೫ ಮತ್ತು ಚೊಕ್ಕ ಬಂಗಾರದಿಂದ ಗೆಜ್ಜೆಗಳನ್ನು ಮಾಡಿ ನಿಲುವಂಗಿಯ ಅಂಚಿನಲ್ಲಿ ದಾಳಿಂಬೆ ಚೆಂಡುಗಳ ನಡುವೆ ಇಟ್ಟರು.
Suka yi ƙararrawa da zinariya zalla, suka sa su a tsakanin fasalin’ya’yan rumman kewaye da gefe-gefen taguwa.
26 ೨೬ ಚಿನ್ನದ ಗೆಜ್ಜೆಯೂ ದಾಳಿಂಬೆಯಂತಿರುವ ಚೆಂಡೂ ಒಂದಾದ ಮೇಲೆ ಒಂದು ದೇವರ ಸೇವೆಗಾಗಿ ಇರುವ ಆ ನಿಲುವಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದನು.
Aka jera ƙararrawan da’ya’yan rumman bi da bi. Haka aka jera su kewaye da gefe-gefen taguwar aiki, yadda Ubangiji ya umarci Musa.
27 ೨೭ ಅವರು ಆರೋನನಿಗೂ ಅವನ ಮಕ್ಕಳಿಗೂ ನಯವಾದ ನಾರಿನಿಂದ ನೇಕಾರರ ಕೆಲಸದ ರೀತಿಯಲ್ಲಿ ಮೇಲಂಗಿಗಳನ್ನೂ,
Suka saƙa doguwar riga da lallausan lilin don Haruna da’ya’yansa, aikin gwani mai saƙa,
28 ೨೮ ನಯವಾದ ನಾರಿನಿಂದ ಮಹಾಯಾಜಕನ ಮುಂಡಾಸವನ್ನು, ಯಾಜಕರ ಅಲಂಕಾರವಾದ ಮುಂಡಾಸಗಳನ್ನು ಹಾಗೂ ಚಡ್ಡಿಗಳನ್ನು,
suka yi rawanin da lallausan lilin, da hulan lilin da rigunan ciki na lallausan lilin.
29 ೨೯ ಮತ್ತು ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದ ರೀತಿಯಲ್ಲಿ ನಡುಕಟ್ಟನ್ನೂ ಮಾಡಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.
Suka yi abin ɗamara da lallausan lilin da shuɗi, shunayya da jan zare, aikin gwanin mai ɗinki, yadda Ubangiji ya umarci Musa.
30 ೩೦ ಅವರು ಚೊಕ್ಕ ಬಂಗಾರದಿಂದ ಪರಿಶುದ್ಧ ಕಿರೀಟಕ್ಕೆ ಬಾಸಿಂಗವನ್ನು ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ, ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಬರೆದರು.
Suka yi allo tsattsarka da zinariya tsantsa, suka zāna rubutu irin na hatimi a kansa haka, Mai tsarki ga Ubangiji.
31 ೩೧ ಅದನ್ನು ಮುಂಡಾಸಕ್ಕೆ ಜೋಡಿಸುವುದಕ್ಕಾಗಿ ನೀಲಿ ದಾರವನ್ನು ಅದಕ್ಕೆ ಕಟ್ಟಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.
Sa’an nan suka ɗaura shi da shuɗiyar igiya a gaban rawanin, yadda Ubangiji ya umarci Musa.
32 ೩೨ ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಮುಗಿಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಅದನ್ನು ಮಾಡಿದರು.
Ta haka aka gama dukan aikin tabanakul da Tentin Sujada. Isra’ilawa suka yi kome yadda Ubangiji ya umarci Musa.
33 ೩೩ ಆಗ ಅವರು ಆ ದೇವದರ್ಶನ ಗುಡಾರವನ್ನು ಮೋಶೆಯ ಬಳಿಗೆ ತೆಗೆದುಕೊಂಡು ಬಂದರು. ಗುಡಾರವನ್ನು, ಅದಕ್ಕೆ ಸಂಬಂಧಪಟ್ಟ ಉಪಕರಣಗಳೆಲ್ಲವನ್ನೂ ಅಂದರೆ ಅದರ ಕೊಂಡಿಗಳನ್ನು, ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಮೆಟ್ಟುವಕಲ್ಲುಗಳನ್ನು,
Sa’an nan suka kawo wa Musa tabanakul, tentin da dukan kayayyakinsa, ƙugiyoyinsa, katakansa, da sandunansa, da dogayen sandunansa da rammukansa;
34 ೩೪ ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಮಾಡಿದ ಮೇಲ್ಹೊದಿಕೆಯನ್ನು, ಕಡಲಪ್ರಾಣಿಯ ತೊಗಲುಗಳಿಂದ ಮಾಡಿದ ಮೇಲ್ಹೊದಿಕೆಯನ್ನು ಹಾಗೂ ಗರ್ಭಗುಡಿಯನ್ನು ಮರೆಮಾಡುವ ಪರದೆಯನ್ನು,
murfi na fatun rago wanda aka rina ja, da murfi na fatun shanun teku; da kuma laɓulen
35 ೩೫ ಆಜ್ಞಾಶಾಸನಗಳ ಮಂಜೂಷವನ್ನು, ಅದರ ಕೋಲುಗಳನ್ನು, ಕೃಪಾಸನವನ್ನು,
akwatin Alkawari da sandunansa da murfin kafara;
36 ೩೬ ಮೇಜನ್ನು, ಅದರ ಎಲ್ಲಾ ಉಪಕರಣಗಳನ್ನು, ನೈವೇದ್ಯದ ರೊಟ್ಟಿಯನ್ನು,
tebur da dukan kayayyakinsa, da burodin Kasancewa;
37 ೩೭ ಚೊಕ್ಕ ಬಂಗಾರದ ದೀಪಸ್ತಂಭವನ್ನು, ಅದರ ಮೇಲಿಡಬೇಕಾದ ಹಣತೆಗಳನ್ನು, ಅದರ ಉಪಕರಣಗಳನ್ನು, ದೀಪಕ್ಕೆ ಬೇಕಾದ ಎಣ್ಣೆಯನ್ನು,
wurin ajiye fitilu na zinariya zalla, da jerin fitilunsa da dukan kayayyakinsa, da man fitila,
38 ೩೮ ಚಿನ್ನದ ಧೂಪವೇದಿಯನ್ನು, ಅಭಿಷೇಕತೈಲವನ್ನು, ಸುವಾಸನೆಯುಳ್ಳ ಧೂಪವನ್ನು, ಗುಡಾರದ ಬಾಗಿಲಿನ ಪರದೆಯನ್ನು,
bagade na zinariya, da man shafewa, da turare mai ƙanshi, da labulen ƙofar shiga tenti,
39 ೩೯ ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಅದರ ಕೋಲುಗಳನ್ನು, ಉಪಕರಣಗಳನ್ನು,
bagade na tagulla na raga, da sandunansa da kayan aikinsa; da daro da wurin ajiyarsa,
40 ೪೦ ತೊಟ್ಟಿಯನ್ನು, ಅದರ ಪೀಠವನ್ನು, ಅಂಗಳದ ತೆರೆಗಳನ್ನು, ಕಂಬಗಳನ್ನು, ಮೆಟ್ಟುವಕಲ್ಲುಗಳನ್ನು, ಅಂಗಳದ ಬಾಗಿಲಿನ ಪರದೆಯನ್ನು, ಅದರ ಹಗ್ಗಗಳನ್ನು, ಗೂಟಗಳನ್ನು, ದೇವದರ್ಶನದ ಗುಡಾರದ ಸೇವೆಗೆ ಬೇಕಾದ ಎಲ್ಲಾ ಉಪಕರಣಗಳನ್ನು,
labulen filin, sandunansa da rammukansa, labulen ƙofar shiga filin; igiyoyi da ƙarafan kafa filin; dukan kayan aikin tabanakul da Tentin Sujada;
41 ೪೧ ದೇವಮಂದಿರದೊಳಗೆ ನಡೆಯುವ ದೇವರಕಾರ್ಯಗಳಿಗೆ ಅಲಂಕಾರ ವಸ್ತ್ರ ಅಂದರೆ ಆರೋನನಿಗೆ ಬೇಕಾದ ಪವಿತ್ರ ವಸ್ತ್ರಗಳನ್ನು ಯಾಜಕಸೇವೆ ಮಾಡುವವರಾದ ಅವನ ಮಕ್ಕಳಿಗೆ ಬೇಕಾದ ವಸ್ತ್ರಗಳನ್ನು ತಂದರು.
da kuma saƙaƙƙun rigunan da ake sawa don hidima a wuri mai tsarki, duk da tsarkakan riguna na Haruna firist da rigunan’ya’yansa maza, sa’ad da suke hidima a matsayin firistoci.
42 ೪೨ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದಂತೆಯೇ ಇಸ್ರಾಯೇಲರು ಆ ಕೆಲಸಗಳನ್ನೆಲ್ಲಾ ಮಾಡಿದ್ದರು.
Isra’ilawa suka yi dukan aikin nan yadda Ubangiji ya umarci Musa.
43 ೪೩ ಅವರು ಮಾಡಿದ್ದ ಕೆಲಸವನ್ನು ಮೋಶೆಯು ಪರೀಕ್ಷಿಸಿ ನೋಡಲಾಗಿ ಯೆಹೋವನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿದ್ದರಿಂದ ಮೋಶೆಯು ಅವರನ್ನು ಆಶೀರ್ವದಿಸಿದನು.
Musa ya duba aikin, sai ya ga cewa sun yi shi daidai yadda Ubangiji ya umarta. Sai Musa ya sa musu albarka.