< ವಿಮೋಚನಕಾಂಡ 4 >
1 ೧ ಅದಕ್ಕೆ ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲ ಎಂದು ಹೇಳಬಹುದು?” ಎಂದನು.
১মোশি উত্তরে বললেন, “কিন্তু দেখুন, তারা আমাকে বিশ্বাস করবে না ও আমার কথা মনোযোগ দিয়ে শুনবে না, কারণ তারা বলবে, ‘সদাপ্রভু তোমাকে দেখা দেন নি’।”
2 ೨ ಅದಕ್ಕೆ ಯೆಹೋವನು ಅವನಿಗೆ, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದನು. ಅವನು, ಇದು “ಇದು ಒಂದು ಕೋಲು” ಅಂದನು.
২তখন সদাপ্রভু তাঁকে বললেন, “তোমার হাতে ওটা কি?” তিনি বললেন, “লাঠি।” তখন তিনি বললেন, “ওটা মাটিতে ফেল।”
3 ೩ ಯೆಹೋವನು ಅವನಿಗೆ, “ಅದನ್ನು ನೆಲದ ಮೇಲೆ ಹಾಕು” ಎಂದನು. ಅವನು ನೆಲದಲ್ಲಿ ಹಾಕುತ್ತಲೇ ಅದು ಹಾವಾಯಿತು! ಮೋಶೆ ಅದಕ್ಕೆ ಭಯಪಟ್ಟು ಓಡಿಹೋದನು.
৩পরে তিনি মাটিতে ফেললে সেটা সাপ হয়ে গেল; আর মোশি তার সামনে থেকে পালিয়ে গেলেন।
4 ೪ ಯೆಹೋವನು ಮೋಶೆಗೆ, “ನಿನ್ನ ಕೈಚಾಚಿ ಅದರ ಬಾಲವನ್ನು ಹಿಡಿ” ಎಂದು ಹೇಳಿದನು. ಅವನು ಅದನ್ನು ಹಿಡಿದ ಕೂಡಲೇ ಅದು ಕೋಲಾಯಿತು.
৪তখন সদাপ্রভু মোশিকে বললেন, “হাত বাড়িয়ে ওটার লেজ ধর, তাতে তিনি হাত বাড়ালেন এবং সেই সাপটি ধরলেন।” তখন এটি তাঁর হাতে লাঠি হয়ে গেল,
5 ೫ ಆಗ ಯೆಹೋವನು ಅವನಿಗೆ, “ಇದರಿಂದ ಅವರು ತಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು, ನಿನಗೆ ಕಾಣಿಸಿಕೊಂಡಿರುವುದು ನಿಜ ಎಂದು ನಂಬುವರು” ಎಂದು ಹೇಳಿದನು.
৫“যেন তারা বিশ্বাস করে যে, সদাপ্রভু, তাদের পূর্বপুরুষদের ঈশ্বর, অব্রাহামের ঈশ্বর, ইস্হাকের ঈশ্বর যাকোবের ঈশ্বর তোমাকে দেখা দিয়েছেন।”
6 ೬ ಯೆಹೋವನು ತಿರುಗಿ ಅವನಿಗೆ, “ನಿನ್ನ ಕೈಯನ್ನು ಎದೆಯಭಾಗದೊಳಗೆ ಇಟ್ಟುಕೋ” ಎಂದು ಹೇಳಿದನು. ಅವನು ಹಾಗೆ ಇಟ್ಟುಕೊಂಡು ಹೊರಗೆ ತೆಗೆಯಲು ಅವನ ಕೈ ಕುಷ್ಠ ಹತ್ತಿ ಹಿಮದಂತೆ ಬೆಳ್ಳಗಾಗಿತ್ತು.
৬পরে সদাপ্রভু তাঁকে আরও বললেন, “তুমি তোমার হাত বুকে দাও,” তাতে তিনি বুকে হাত দিলেন; পরে তা বের করে দেখলেন, তাঁর হাতে তুষারের মত সাদা কুষ্ঠ হয়েছে।
7 ೭ ಯೆಹೋವನು ಅವನಿಗೆ ನಿನ್ನ ಕೈಯನ್ನು ತಿರುಗಿ ಎದೆಯಭಾಗದೊಳಗೆ “ಸೇರಿಸು” ಎಂದು ಹೇಳಿದನು. ಅವನು ಅದನ್ನು ತಿರುಗಿ ಎದೆಯಭಾಗದೊಳಗೆ ಸೇರಿಸಿ ತೆಗೆದು ನೋಡಿದಾಗ ಅದು ಉಳಿದ ದೇಹದಂತೆ ಆಗಿತ್ತು.
৭পরে সদাপ্রভু বললেন, “তোমার হাত আবার বুকে দাও।” তিনি আবার বুকে হাত দিলেন, পরে বুক থেকে হাত বের করে দেখলেন, তা পুনরায় তাঁর মাংসের মত হয়ে গেল।
8 ೮ ಆಗ ಯೆಹೋವನು ಅವನಿಗೆ, “ಅವರು ನಿನ್ನನ್ನು ನಂಬದೆ, ಮೊದಲನೆಯ ಸೂಚಕಕಾರ್ಯವನ್ನು ಗಮನಿಸದೆ ತಿರಸ್ಕರಿಸಿದರೂ, ಎರಡನೆಯ ಸೂಚಕಕಾರ್ಯವನ್ನು ನಂಬುವರು.
৮“যদি তারা তোমাকে বিশ্বাস না করে এবং যদি আমার শক্তির প্রথম চিহ্নেও মনোযোগ না করে অথবা বিশ্বাস না করে, তবে তারা দ্বিতীয় চিহ্নে বিশ্বাস করিবে।
9 ೯ ಆ ಎರಡು ಸೂಚಕಕಾರ್ಯಗಳನ್ನೂ, ಅವರು ನಂಬದೆಯೂ, ನಿನ್ನ ಮಾತನ್ನು ಕೇಳದೆಯೂ ಹೋದರೆ, ನೀನು ನೈಲ್ ನದಿಯ ನೀರನ್ನು ತೆಗೆದುಕೊಂಡು ಒಣಗಿದ ನೆಲದ ಮೇಲೆ ಸುರಿಯಬೇಕು. ಆಗ ಒಣಗಿದ ನೆಲದಲ್ಲಿ ಸುರಿದ ನೀರು ರಕ್ತವಾಗುವುದು” ಎಂದು ಹೇಳಿದನು.
৯এবং তারা যদি আমার বিশ্বাসের এই দুই চিহ্নেও বিশ্বাস না করে অথবা তোমার কথায় যদি মনোযোগ না করে, তবে তুমি নদী থেকে কিছু জল নিয়ে শুকনো মাটিতে ঢেলে দিও; তাতে তুমি নদী থেকে যে জল তুলবে, তা শুকনো মাটিতে রক্ত হয়ে যাবে।”
10 ೧೦ ಆಗ ಮೋಶೆಯು ಯೆಹೋವನಿಗೆ, “ಕರ್ತನೇ, ನಾನು ಮೊದಲಿನಿಂದಲೂ, ನೀನು ನಿನ್ನ ದಾಸನ ಸಂಗಡ ಮಾತನಾಡಿದ ಮೇಲೆಯೂ ನಾನು ವಾಕ್ಚಾತುರ್ಯವಿಲ್ಲದವನು. ನಾನು ತೊದಲುವವನಾಗಿದ್ದು ನನ್ನ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.
১০পরে মোশি সদাপ্রভুকে বললেন, হায় প্রভু! আমি ভালো করে কথা বলতে পারি না, এর আগেও বলতে পারতাম না, বা তোমার সঙ্গে এই দাসের আলাপ করার পরেও নই; কারণ আমি আসতে আসতে কথা বলি ও তোতলা।
11 ೧೧ ಅದಕ್ಕೆ ಯೆಹೋವನು ಅವನಿಗೆ, “ಮನುಷ್ಯರಿಗೆ ಬಾಯಿಕೊಟ್ಟವನು ಯಾರು? ಒಬ್ಬನನ್ನು ಮೂಕನಾಗಿ, ಕಿವುಡನಾಗಿ, ದೃಷ್ಠಿಯುಳ್ಳವನಾಗಿ ಹಾಗೂ ಕುರುಡನಾಗಿ ಉಂಟುಮಾಡಿದವನಾರು? ಯೆಹೋವನಾದ ನಾನೇ ಅಲ್ಲವೇ?
১১সদাপ্রভু তাঁকে বললেন, “মানুষের মুখ কে তৈরী করেছে? আর বোবা, কালা, চোখে দেখতে পায় বা অন্ধকে কে তৈরী করে?
12 ೧೨ ಹಾಗಾದರೆ ಈಗಲೇ ನೀನು ಹೊರಡು, ನಾನು ನಿನ್ನಗೆ ಮಾತನಾಡಲು ಬೇಕಾದ ಸಾಮರ್ಥ್ಯವನ್ನು ಕೊಡುತ್ತಾ, ನೀನು ಮಾತನಾಡಬೇಕಾದದ್ದನ್ನು ನಿನಗೆ ಬೋಧಿಸುವೆನು” ಎಂದು ಹೇಳಿದನು.
১২আমি সদাপ্রভুই কি করি নি? এখন তুমি যাও; আমি তোমার মুখের সহায় হব ও কি বলতে হবে, তোমাকে শেখাব।”
13 ೧೩ ಅದಕ್ಕೆ ಮೋಶೆಯು, “ಕರ್ತನೇ, ದಯವಿಟ್ಟು ನೀನು ಬೇರೊಬ್ಬನನ್ನು ಕಳುಹಿಸಬೇಕು” ಎಂದನು.
১৩তিনি বললেন, “হে আমার প্রভু, অনুরোধ করি, অন্য কারো হাতে এই বার্তা পাঠাও, যাকে তুমি পাঠাতে চাও।”
14 ೧೪ ಆಗ ಯೆಹೋವನು ಮೋಶೆಯ ಮೇಲೆ ಕೋಪಗೊಂಡು ಅವನಿಗೆ, “ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡಬಲ್ಲವನೆಂದು ನನಗೆ ತಿಳಿದಿದೆ. ಅವನೇ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿದಾಗ ಅವನು ತನ್ನ ಹೃದಯದಲ್ಲಿ ಸಂತೋಷಿಸುವನು.
১৪তখন মোশির উপর সদাপ্রভু রেগে গেলেন; তিনি বললেন, “তোমার ভাই লেবীয় হারোণ কি নেই? আমি জানি সে ভালো কথা বলে; আরও দেখ, সে তোমার সঙ্গে দেখা করতে আসছে; তোমাকে দেখে খুব আনন্দিত হবে।
15 ೧೫ ನೀನು ಅವನ ಸಂಗಡ ಮಾತನಾಡಿ ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಿಕೊಡು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀವು ಮಾಡಬೇಕಾದದ್ದನ್ನು ಬೋಧಿಸುವೆನು.
১৫তুমি তাকে বলবে ও তাঁর মুখে বাক্য দেবে এবং আমি তোমার মুখের ও তার মুখের সহায় হব ও কি করতে হবে, তোমাদেরকে জানাব।
16 ೧೬ ಅವನು ನಿನಗೆ ಬದಲಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಂತಿರುವನು. ನೀನು ಅವನಿಗೆ ದೇವರಂತಿರುವಿ.
১৬তোমার পরিবর্তে সে লোকদের কাছে বক্তা হবে; তার ফলে সে তোমার মুখের মত হবে এবং তুমি তার ঈশ্বরের মত হবে।
17 ೧೭ ಇದಲ್ಲದೆ ಈ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಹೋಗಬೇಕು. ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ” ಅಂದನು.
১৭আর তুমি এই লাঠি হাতে ধরবে, এর মাধ্যমেই তোমাকে সে সমস্ত চিহ্ন কাজ করতে হবে।”
18 ೧೮ ಆಗ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು ಅವನಿಗೆ, “ನಾನು ಐಗುಪ್ತ ದೇಶದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ಎಂದು ಹೋಗಿ ನೋಡುವೆನು” ಎಂದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗು” ಅಂದನು.
১৮পরে মোশি তাঁর শ্বশুর যিথ্রোর কাছে ফিরে এসে বললেন, “অনুরোধ করি, আমাকে যেতে দিন যেন আমি মিশরে থাকা আমার ভাইদের কাছে ফিরে যেতে পারি এবং তারা এখনও জীবিত আছে কি না, তা দেখতে পাই।” যিথ্রো মোশিকে বললেন, “শান্তিতে যাও।”
19 ೧೯ ಯೆಹೋವನು ಮಿದ್ಯಾನಿನಲ್ಲಿ ಮೋಶೆಗೆ, ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗು. ನಿನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದವರೆಲ್ಲರೂ ಸತ್ತು ಹೋದರು ಎಂದನು.
১৯আর সদাপ্রভু মিদিয়নে মোশিকে বললেন, “তুমি মিশরে ফিরে যাও; কারণ যে লোকেরা তোমাকে হত্যা করার চেষ্টা করছিল, তারা সবাই মারা গেছে।”
20 ೨೦ ಮೋಶೆ ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕತ್ತೆಯ ಮೇಲೆ ಕುಳ್ಳಿರಿಸಿ ಅವರನ್ನು ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಜೊತೆಯಲ್ಲಿ ಅವನು ದೇವದಂಡವನ್ನು ಕೈಯಲ್ಲಿ ತೆಗೆದುಕೊಂಡನು.
২০তখন মোশি তাঁর স্ত্রী ও ছেলেদেরকে গাধায় চাপিয়ে মিশর দেশে ফিরে গেলেন এবং মোশি তাঁর হাতে ঈশ্বরের সেই লাঠি নিলেন।
21 ೨೧ ಯೆಹೋವನು ಮೋಶೆಗೆ ಇಂತೆಂದನು, “ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ.
২১আর সদাপ্রভু মোশিকে বললেন, “তুমি যখন মিশরে ফিরে যাবে, দেখো, আমি তোমার হাতে যে সব অদ্ভুত কাজের ভার দিয়েছি, ফরৌণের সামনে সে সব কোরো; কিন্তু আমি তার হৃদয় কঠিন করব, সে লোকদেরকে ছাড়বে না।
22 ೨೨ ಆಗ ನೀನು ಫರೋಹನಿಗೆ, ‘ಇಸ್ರಾಯೇಲನು ನನ್ನ ಮಗನು, ನನಗೆ ಚೊಚ್ಚಲಮಗನು.
২২আর তুমি ফরৌণকে বলবে, ‘সদাপ্রভু এই কথা বলেন, ইস্রায়েল আমার ছেলে, আমার প্রথমজাত।’
23 ೨೩ ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ’” ಎಂದು ತಿಳಿಸಬೇಕು.
২৩আর আমি তোমাকে বলেছি, আমার সেবা করার জন্য আমার ছেলেকে ছেড়ে দাও; কিন্তু তুমি তাঁকে ছেড়ে দিতে রাজি না হলে; দেখ, আমি তোমার সন্তানকে, তোমার প্রথমজাতকে, হত্যা করব।”
24 ೨೪ ಇದಲ್ಲದೆ ಮೋಶೆಯು ಹೋಗುವ ದಾರಿಯಲ್ಲಿ, ಛತ್ರದಲ್ಲಿದ್ದಾಗ ಯೆಹೋವನು ಅವನೆದುರಿಗೆ ಬಂದು ಅವನ ಪ್ರಾಣವನ್ನು ತೆಗೆಯಬೇಕೆಂದಿದ್ದನು.
২৪পরে পথে সরাইখানায় সদাপ্রভু তাঁর কাছে গিয়ে তাঁকে হত্যা করতে চেষ্টা করলেন।
25 ೨೫ ಹೀಗಿರುವಾಗ ಚಿಪ್ಪೋರಳು ಕಲ್ಲಿನ ಚೂರಿಯಿಂದ ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಮೋಶೆಯ ಪಾದಗಳಿಗೆ ಮುಟ್ಟಿಸಿದಳು. ನಂತರ ಅವಳು, “ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನು” ಎಂದಳು.
২৫তখন সিপ্পোরা একটি পাথরের ছুরি নিয়ে তাঁর ছেলের ত্বক্ ছেদ করলেন ও তা মোশির পায়ে স্পর্শ করে বললেন, “তুমি আমার রক্তের বর।”
26 ೨೬ ಆಗ ಯೆಹೋವನು ಅವನನ್ನು ಉಳಿಸಿದನು. ಆಗ ಅವಳು, “ಸುನ್ನತಿಯ ನಿಮಿತ್ತವೇ ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನು” ಎಂಬ ಮಾತನ್ನು ಹೇಳಿದಳು.
২৬আর ঈশ্বর তাঁকে ছেড়ে দিলেন; তখন সিপ্পোরা বললেন, “ত্বক্ছেদের কারণে তুমি রক্তের বর।”
27 ೨೭ ಇದಲ್ಲದೆ ಯೆಹೋವನು ಆರೋನನಿಗೆ, “ನೀನು ಮೋಶೆಯನ್ನು ಎದುರುಗೊಳ್ಳುವುದಕ್ಕೆ ಮರುಭೂಮಿಗೆ ಹೊರಟುಹೋಗು” ಎಂದನು. ಅವನು ಹೋಗಿ ದೇವರ ಬೆಟ್ಟದಲ್ಲೇ ಅವನನ್ನು ಎದುರುಗೊಂಡು ಮುದ್ದಿಟ್ಟನು.
২৭আর সদাপ্রভু হারোণকে বললেন, “তুমি মোশির সঙ্গে দেখা করতে মরুপ্রান্তে যাও।” তাতে তিনি গিয়ে ঈশ্বরের পর্বতে তাঁর দেখা পেলেন ও তাঁকে চুম্বন করলেন।
28 ೨೮ ಆಗ ಮೋಶೆಯು ಆರೋನನಿಗೆ, ತನ್ನನ್ನು ಕಳುಹಿಸಿದ ಯೆಹೋವನ ಎಲ್ಲಾ ಮಾತುಗಳನ್ನೂ, ತನಗೆ ಆಜ್ಞಾಪಿಸಿದ ಸೂಚಕಕಾರ್ಯಗಳನ್ನೂ, ತಾನು ಮಾಡಿದವುಗಳನ್ನೆಲ್ಲಾ ಆರೋನನಿಗೆ ತಿಳಿಸಿದನು.
২৮তখন মোশি তাঁকে যিনি পাঠিয়েছেন সদাপ্রভুর সমস্ত বাক্য ও তাঁর আদেশ মত সমস্ত চিহ্নের বিষয় হারোণকে জানালেন।
29 ೨೯ ತರುವಾಯ ಮೋಶೆ ಮತ್ತು ಆರೋನರು ಹೋಗಿ ಇಸ್ರಾಯೇಲ್ಯರ ಹಿರಿಯರನ್ನೆಲ್ಲಾ ಒಟ್ಟಿಗೆ ಸೇರಿಸಿದರು.
২৯পরে মোশি ও হারোণ গিয়ে ইস্রায়েল সন্তানদের সমস্ত প্রাচীনকে জড়ো করলেন।
30 ೩೦ ಯೆಹೋವನು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಅವರಿಗೆ ತಿಳಿಸಿ ಜನರ ಕಣ್ಣುಗಳ ಮುಂದೆ ಸೂಚಕಕಾರ್ಯಗಳನ್ನು ಮಾಡಿದನು.
৩০আর হারোণ মোশির প্রতি সদাপ্রভুর বলা সমস্ত বাক্য তাদেরকে জানালেন এবং তিনি লোকদের চোখের সামনে সেই সব চিহ্ন কাজ করলেন।
31 ೩೧ ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
৩১তাতে লোকেরা বিশ্বাস করল এবং ঈশ্বর সদাপ্রভু ইস্রায়েলীয়দের যত্ন নিয়েছেন ও তাদের দুঃখ দেখেছেন শুনে তারা মাথা নিচু করলেন এবং তাঁর আরাধনা করলেন।