< ವಿಮೋಚನಕಾಂಡ 4 >

1 ಅದಕ್ಕೆ ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲ ಎಂದು ಹೇಳಬಹುದು?” ಎಂದನು.
摩西回答說:「他們必不信我,也不聽我的話,必說:『耶和華並沒有向你顯現。』」
2 ಅದಕ್ಕೆ ಯೆಹೋವನು ಅವನಿಗೆ, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದನು. ಅವನು, ಇದು “ಇದು ಒಂದು ಕೋಲು” ಅಂದನು.
耶和華對摩西說:「你手裏是甚麼?」他說:「是杖。」
3 ಯೆಹೋವನು ಅವನಿಗೆ, “ಅದನ್ನು ನೆಲದ ಮೇಲೆ ಹಾಕು” ಎಂದನು. ಅವನು ನೆಲದಲ್ಲಿ ಹಾಕುತ್ತಲೇ ಅದು ಹಾವಾಯಿತು! ಮೋಶೆ ಅದಕ್ಕೆ ಭಯಪಟ್ಟು ಓಡಿಹೋದನು.
耶和華說:「丟在地上。」他一丟下去,就變作蛇;摩西便跑開。
4 ಯೆಹೋವನು ಮೋಶೆಗೆ, “ನಿನ್ನ ಕೈಚಾಚಿ ಅದರ ಬಾಲವನ್ನು ಹಿಡಿ” ಎಂದು ಹೇಳಿದನು. ಅವನು ಅದನ್ನು ಹಿಡಿದ ಕೂಡಲೇ ಅದು ಕೋಲಾಯಿತು.
耶和華對摩西說:「伸出手來,拿住牠的尾巴,牠必在你手中仍變為杖;
5 ಆಗ ಯೆಹೋವನು ಅವನಿಗೆ, “ಇದರಿಂದ ಅವರು ತಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು, ನಿನಗೆ ಕಾಣಿಸಿಕೊಂಡಿರುವುದು ನಿಜ ಎಂದು ನಂಬುವರು” ಎಂದು ಹೇಳಿದನು.
如此好叫他們信耶和華-他們祖宗的上帝,就是亞伯拉罕的上帝,以撒的上帝,雅各的上帝,是向你顯現了。」
6 ಯೆಹೋವನು ತಿರುಗಿ ಅವನಿಗೆ, “ನಿನ್ನ ಕೈಯನ್ನು ಎದೆಯಭಾಗದೊಳಗೆ ಇಟ್ಟುಕೋ” ಎಂದು ಹೇಳಿದನು. ಅವನು ಹಾಗೆ ಇಟ್ಟುಕೊಂಡು ಹೊರಗೆ ತೆಗೆಯಲು ಅವನ ಕೈ ಕುಷ್ಠ ಹತ್ತಿ ಹಿಮದಂತೆ ಬೆಳ್ಳಗಾಗಿತ್ತು.
耶和華又對他說:「把手放在懷裏。」他就把手放在懷裏,及至抽出來,不料,手長了大痲瘋,有雪那樣白。
7 ಯೆಹೋವನು ಅವನಿಗೆ ನಿನ್ನ ಕೈಯನ್ನು ತಿರುಗಿ ಎದೆಯಭಾಗದೊಳಗೆ “ಸೇರಿಸು” ಎಂದು ಹೇಳಿದನು. ಅವನು ಅದನ್ನು ತಿರುಗಿ ಎದೆಯಭಾಗದೊಳಗೆ ಸೇರಿಸಿ ತೆಗೆದು ನೋಡಿದಾಗ ಅದು ಉಳಿದ ದೇಹದಂತೆ ಆಗಿತ್ತು.
耶和華說:「再把手放在懷裏。」他就再把手放在懷裏,及至從懷裏抽出來,不料,手已經復原,與周身的肉一樣;
8 ಆಗ ಯೆಹೋವನು ಅವನಿಗೆ, “ಅವರು ನಿನ್ನನ್ನು ನಂಬದೆ, ಮೊದಲನೆಯ ಸೂಚಕಕಾರ್ಯವನ್ನು ಗಮನಿಸದೆ ತಿರಸ್ಕರಿಸಿದರೂ, ಎರಡನೆಯ ಸೂಚಕಕಾರ್ಯವನ್ನು ನಂಬುವರು.
又說:「倘或他們不聽你的話,也不信頭一個神蹟,他們必信第二個神蹟。
9 ಆ ಎರಡು ಸೂಚಕಕಾರ್ಯಗಳನ್ನೂ, ಅವರು ನಂಬದೆಯೂ, ನಿನ್ನ ಮಾತನ್ನು ಕೇಳದೆಯೂ ಹೋದರೆ, ನೀನು ನೈಲ್ ನದಿಯ ನೀರನ್ನು ತೆಗೆದುಕೊಂಡು ಒಣಗಿದ ನೆಲದ ಮೇಲೆ ಸುರಿಯಬೇಕು. ಆಗ ಒಣಗಿದ ನೆಲದಲ್ಲಿ ಸುರಿದ ನೀರು ರಕ್ತವಾಗುವುದು” ಎಂದು ಹೇಳಿದನು.
這兩個神蹟若都不信,也不聽你的話,你就從河裏取些水,倒在旱地上,你從河裏取的水必在旱地上變作血。」
10 ೧೦ ಆಗ ಮೋಶೆಯು ಯೆಹೋವನಿಗೆ, “ಕರ್ತನೇ, ನಾನು ಮೊದಲಿನಿಂದಲೂ, ನೀನು ನಿನ್ನ ದಾಸನ ಸಂಗಡ ಮಾತನಾಡಿದ ಮೇಲೆಯೂ ನಾನು ವಾಕ್ಚಾತುರ್ಯವಿಲ್ಲದವನು. ನಾನು ತೊದಲುವವನಾಗಿದ್ದು ನನ್ನ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.
摩西對耶和華說:「主啊,我素日不是能言的人,就是從你對僕人說話以後,也是這樣。我本是拙口笨舌的。」
11 ೧೧ ಅದಕ್ಕೆ ಯೆಹೋವನು ಅವನಿಗೆ, “ಮನುಷ್ಯರಿಗೆ ಬಾಯಿಕೊಟ್ಟವನು ಯಾರು? ಒಬ್ಬನನ್ನು ಮೂಕನಾಗಿ, ಕಿವುಡನಾಗಿ, ದೃಷ್ಠಿಯುಳ್ಳವನಾಗಿ ಹಾಗೂ ಕುರುಡನಾಗಿ ಉಂಟುಮಾಡಿದವನಾರು? ಯೆಹೋವನಾದ ನಾನೇ ಅಲ್ಲವೇ?
耶和華對他說:「誰造人的口呢?誰使人口啞、耳聾、目明、眼瞎呢?豈不是我-耶和華嗎?
12 ೧೨ ಹಾಗಾದರೆ ಈಗಲೇ ನೀನು ಹೊರಡು, ನಾನು ನಿನ್ನಗೆ ಮಾತನಾಡಲು ಬೇಕಾದ ಸಾಮರ್ಥ್ಯವನ್ನು ಕೊಡುತ್ತಾ, ನೀನು ಮಾತನಾಡಬೇಕಾದದ್ದನ್ನು ನಿನಗೆ ಬೋಧಿಸುವೆನು” ಎಂದು ಹೇಳಿದನು.
現在去吧,我必賜你口才,指教你所當說的話。」
13 ೧೩ ಅದಕ್ಕೆ ಮೋಶೆಯು, “ಕರ್ತನೇ, ದಯವಿಟ್ಟು ನೀನು ಬೇರೊಬ್ಬನನ್ನು ಕಳುಹಿಸಬೇಕು” ಎಂದನು.
摩西說:「主啊,你願意打發誰,就打發誰去吧!」
14 ೧೪ ಆಗ ಯೆಹೋವನು ಮೋಶೆಯ ಮೇಲೆ ಕೋಪಗೊಂಡು ಅವನಿಗೆ, “ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡಬಲ್ಲವನೆಂದು ನನಗೆ ತಿಳಿದಿದೆ. ಅವನೇ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿದಾಗ ಅವನು ತನ್ನ ಹೃದಯದಲ್ಲಿ ಸಂತೋಷಿಸುವನು.
耶和華向摩西發怒說:「不是有你的哥哥利未人亞倫嗎?我知道他是能言的;現在他出來迎接你,他一見你,心裏就歡喜。
15 ೧೫ ನೀನು ಅವನ ಸಂಗಡ ಮಾತನಾಡಿ ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಿಕೊಡು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀವು ಮಾಡಬೇಕಾದದ್ದನ್ನು ಬೋಧಿಸುವೆನು.
你要將當說的話傳給他;我也要賜你和他口才,又要指教你們所當行的事。
16 ೧೬ ಅವನು ನಿನಗೆ ಬದಲಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಂತಿರುವನು. ನೀನು ಅವನಿಗೆ ದೇವರಂತಿರುವಿ.
他要替你對百姓說話;你要以他當作口,他要以你當作上帝。
17 ೧೭ ಇದಲ್ಲದೆ ಈ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಹೋಗಬೇಕು. ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ” ಅಂದನು.
你手裏要拿這杖,好行神蹟。」
18 ೧೮ ಆಗ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು ಅವನಿಗೆ, “ನಾನು ಐಗುಪ್ತ ದೇಶದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ಎಂದು ಹೋಗಿ ನೋಡುವೆನು” ಎಂದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗು” ಅಂದನು.
於是,摩西回到他岳父葉忒羅那裏,對他說:「求你容我回去見我在埃及的弟兄,看他們還在不在。」葉忒羅對摩西說:「你可以平平安安地去吧!」
19 ೧೯ ಯೆಹೋವನು ಮಿದ್ಯಾನಿನಲ್ಲಿ ಮೋಶೆಗೆ, ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗು. ನಿನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದವರೆಲ್ಲರೂ ಸತ್ತು ಹೋದರು ಎಂದನು.
耶和華在米甸對摩西說:「你要回埃及去,因為尋索你命的人都死了。」
20 ೨೦ ಮೋಶೆ ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕತ್ತೆಯ ಮೇಲೆ ಕುಳ್ಳಿರಿಸಿ ಅವರನ್ನು ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಜೊತೆಯಲ್ಲಿ ಅವನು ದೇವದಂಡವನ್ನು ಕೈಯಲ್ಲಿ ತೆಗೆದುಕೊಂಡನು.
摩西就帶着妻子和兩個兒子,叫他們騎上驢,回埃及地去。摩西手裏拿着上帝的杖。
21 ೨೧ ಯೆಹೋವನು ಮೋಶೆಗೆ ಇಂತೆಂದನು, “ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ.
耶和華對摩西說:「你回到埃及的時候,要留意將我指示你的一切奇事行在法老面前。但我要使他的心剛硬,他必不容百姓去。
22 ೨೨ ಆಗ ನೀನು ಫರೋಹನಿಗೆ, ‘ಇಸ್ರಾಯೇಲನು ನನ್ನ ಮಗನು, ನನಗೆ ಚೊಚ್ಚಲಮಗನು.
你要對法老說:『耶和華這樣說:以色列是我的兒子,我的長子。
23 ೨೩ ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ’” ಎಂದು ತಿಳಿಸಬೇಕು.
我對你說過:容我的兒子去,好事奉我。你還是不肯容他去。看哪,我要殺你的長子。』」
24 ೨೪ ಇದಲ್ಲದೆ ಮೋಶೆಯು ಹೋಗುವ ದಾರಿಯಲ್ಲಿ, ಛತ್ರದಲ್ಲಿದ್ದಾಗ ಯೆಹೋವನು ಅವನೆದುರಿಗೆ ಬಂದು ಅವನ ಪ್ರಾಣವನ್ನು ತೆಗೆಯಬೇಕೆಂದಿದ್ದನು.
摩西在路上住宿的地方,耶和華遇見他,想要殺他。
25 ೨೫ ಹೀಗಿರುವಾಗ ಚಿಪ್ಪೋರಳು ಕಲ್ಲಿನ ಚೂರಿಯಿಂದ ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಮೋಶೆಯ ಪಾದಗಳಿಗೆ ಮುಟ್ಟಿಸಿದಳು. ನಂತರ ಅವಳು, “ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನು” ಎಂದಳು.
西坡拉就拿一塊火石,割下他兒子的陽皮,丟在摩西腳前,說:「你真是我的血郎了。」
26 ೨೬ ಆಗ ಯೆಹೋವನು ಅವನನ್ನು ಉಳಿಸಿದನು. ಆಗ ಅವಳು, “ಸುನ್ನತಿಯ ನಿಮಿತ್ತವೇ ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನು” ಎಂಬ ಮಾತನ್ನು ಹೇಳಿದಳು.
這樣,耶和華才放了他。西坡拉說:「你因割禮就是血郎了。」
27 ೨೭ ಇದಲ್ಲದೆ ಯೆಹೋವನು ಆರೋನನಿಗೆ, “ನೀನು ಮೋಶೆಯನ್ನು ಎದುರುಗೊಳ್ಳುವುದಕ್ಕೆ ಮರುಭೂಮಿಗೆ ಹೊರಟುಹೋಗು” ಎಂದನು. ಅವನು ಹೋಗಿ ದೇವರ ಬೆಟ್ಟದಲ್ಲೇ ಅವನನ್ನು ಎದುರುಗೊಂಡು ಮುದ್ದಿಟ್ಟನು.
耶和華對亞倫說:「你往曠野去迎接摩西。」他就去,在上帝的山遇見摩西,和他親嘴。
28 ೨೮ ಆಗ ಮೋಶೆಯು ಆರೋನನಿಗೆ, ತನ್ನನ್ನು ಕಳುಹಿಸಿದ ಯೆಹೋವನ ಎಲ್ಲಾ ಮಾತುಗಳನ್ನೂ, ತನಗೆ ಆಜ್ಞಾಪಿಸಿದ ಸೂಚಕಕಾರ್ಯಗಳನ್ನೂ, ತಾನು ಮಾಡಿದವುಗಳನ್ನೆಲ್ಲಾ ಆರೋನನಿಗೆ ತಿಳಿಸಿದನು.
摩西將耶和華打發他所說的言語和囑咐他所行的神蹟都告訴了亞倫。
29 ೨೯ ತರುವಾಯ ಮೋಶೆ ಮತ್ತು ಆರೋನರು ಹೋಗಿ ಇಸ್ರಾಯೇಲ್ಯರ ಹಿರಿಯರನ್ನೆಲ್ಲಾ ಒಟ್ಟಿಗೆ ಸೇರಿಸಿದರು.
摩西、亞倫就去招聚以色列的眾長老。
30 ೩೦ ಯೆಹೋವನು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಅವರಿಗೆ ತಿಳಿಸಿ ಜನರ ಕಣ್ಣುಗಳ ಮುಂದೆ ಸೂಚಕಕಾರ್ಯಗಳನ್ನು ಮಾಡಿದನು.
亞倫將耶和華對摩西所說的一切話述說了一遍,又在百姓眼前行了那些神蹟,
31 ೩೧ ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
百姓就信了。以色列人聽見耶和華眷顧他們,鑒察他們的困苦,就低頭下拜。

< ವಿಮೋಚನಕಾಂಡ 4 >