< ವಿಮೋಚನಕಾಂಡ 40 >

1 ಆಗ ಯೆಹೋವನು ಮೋಶೆಗೆ,
וַיְדַבֵּר יְהֹוָה אֶל־מֹשֶׁה לֵּאמֹֽר׃
2 “ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ದೇವದರ್ಶನದ ಗುಡಾರವನ್ನು ತೆರೆಯಬೇಕು.
בְּיוֹם־הַחֹדֶשׁ הָרִאשׁוֹן בְּאֶחָד לַחֹדֶשׁ תָּקִים אֶת־מִשְׁכַּן אֹהֶל מוֹעֵֽד׃
3 ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ಪರದೆಯಿಂದ ಮರೆಮಾಡಬೇಕು.
וְשַׂמְתָּ שָׁם אֵת אֲרוֹן הָעֵדוּת וְסַכֹּתָ עַל־הָאָרֹן אֶת־הַפָּרֹֽכֶת׃
4 ಆ ಮೇಲೆ ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು; ದೀಪಸ್ತಂಭವನ್ನು ಒಳಗೆ ತಂದು ಅದರ ಹಣತೆಗಳನ್ನು ಸರಿಯಾಗಿ ಇಡಬೇಕು.
וְהֵבֵאתָ אֶת־הַשֻּׁלְחָן וְעָרַכְתָּ אֶת־עֶרְכּוֹ וְהֵבֵאתָ אֶת־הַמְּנֹרָה וְהַעֲלֵיתָ אֶת־נֵרֹתֶֽיהָ׃
5 ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಯನ್ನು ಇಟ್ಟು ಗುಡಾರದ ಬಾಗಿಲಿನ ಪರದೆಯನ್ನು ಕಟ್ಟಬೇಕು.
וְנָתַתָּה אֶת־מִזְבַּח הַזָּהָב לִקְטֹרֶת לִפְנֵי אֲרוֹן הָעֵדֻת וְשַׂמְתָּ אֶת־מָסַךְ הַפֶּתַח לַמִּשְׁכָּֽן׃
6 ದೇವದರ್ಶನ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇರಿಸಬೇಕು.
וְנָתַתָּה אֵת מִזְבַּח הָעֹלָה לִפְנֵי פֶּתַח מִשְׁכַּן אֹֽהֶל־מוֹעֵֽד׃
7 ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ದೊಡ್ಡ ತೊಟ್ಟಿಯೊಂದನ್ನು ಇಟ್ಟು ಅದರಲ್ಲಿ ನೀರನ್ನು ತುಂಬಿಸಬೇಕು.
וְנָֽתַתָּ אֶת־הַכִּיֹּר בֵּֽין־אֹהֶל מוֹעֵד וּבֵין הַמִּזְבֵּחַ וְנָתַתָּ שָׁם מָֽיִם׃
8 ಅಂಗಳದ ಸುತ್ತಲಿನ ಆವರಣವನ್ನು ತೆರೆದು, ಅಂಗಳದ ಬಾಗಿಲಿಗೆ ಪರದೆಯನ್ನು ತೂಗಿಬಿಡಬೇಕು.
וְשַׂמְתָּ אֶת־הֶחָצֵר סָבִיב וְנָתַתָּ אֶת־מָסַךְ שַׁעַר הֶחָצֵֽר׃
9 “ನೀನು ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವುದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ನನಗಾಗಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವುದು.
וְלָקַחְתָּ אֶת־שֶׁמֶן הַמִּשְׁחָה וּמָשַׁחְתָּ אֶת־הַמִּשְׁכָּן וְאֶת־כׇּל־אֲשֶׁר־בּוֹ וְקִדַּשְׁתָּ אֹתוֹ וְאֶת־כׇּל־כֵּלָיו וְהָיָה קֹֽדֶשׁ׃
10 ೧೦ ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಸರ್ವಾಂಗಹೋಮ ಯಜ್ಞವೇದಿಯನ್ನು ಪ್ರತಿಷ್ಠಿಸಬೇಕು; ಆ ಯಜ್ಞವೇದಿ ಅತ್ಯಂತ ಪರಿಶುದ್ಧವಾಗಿರಬೇಕು.
וּמָשַׁחְתָּ אֶת־מִזְבַּח הָעֹלָה וְאֶת־כׇּל־כֵּלָיו וְקִדַּשְׁתָּ אֶת־הַמִּזְבֵּחַ וְהָיָה הַמִּזְבֵּחַ קֹדֶשׁ קׇֽדָשִֽׁים׃
11 ೧೧ ನೀನು ತಾಮ್ರದ ಬೋಗುಣಿಯನ್ನೂ ಅದರ ಪೀಠವನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು.
וּמָשַׁחְתָּ אֶת־הַכִּיֹּר וְאֶת־כַּנּוֹ וְקִדַּשְׁתָּ אֹתֽוֹ׃
12 ೧೨ “ಅದಲ್ಲದೆ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿ
וְהִקְרַבְתָּ אֶֽת־אַהֲרֹן וְאֶת־בָּנָיו אֶל־פֶּתַח אֹהֶל מוֹעֵד וְרָחַצְתָּ אֹתָם בַּמָּֽיִם׃
13 ೧೩ ಆರೋನನು ನನಗೆ ಯಾಜಕನಾಗುವಂತೆ ಅವನಿಗೆ ಪವಿತ್ರವಾದ ದೀಕ್ಷಾವಸ್ತ್ರಗಳನ್ನು ತೊಡಿಸಿ ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಬೇಕು.
וְהִלְבַּשְׁתָּ אֶֽת־אַהֲרֹן אֵת בִּגְדֵי הַקֹּדֶשׁ וּמָשַׁחְתָּ אֹתוֹ וְקִדַּשְׁתָּ אֹתוֹ וְכִהֵן לִֽי׃
14 ೧೪ ಆ ನಂತರ ನೀನು ಅವನ ಮಕ್ಕಳನ್ನು ಬರಮಾಡಿ
וְאֶת־בָּנָיו תַּקְרִיב וְהִלְבַּשְׁתָּ אֹתָם כֻּתֳּנֹֽת׃
15 ೧೫ ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನೂ ಅಭಿಷೇಕಿಸಬೇಕು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು” ಎಂದು ಹೇಳಿದನು.
וּמָשַׁחְתָּ אֹתָם כַּאֲשֶׁר מָשַׁחְתָּ אֶת־אֲבִיהֶם וְכִהֲנוּ לִי וְהָיְתָה לִהְיֹת לָהֶם מׇשְׁחָתָם לִכְהֻנַּת עוֹלָם לְדֹרֹתָֽם׃
16 ೧೬ ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.
וַיַּעַשׂ מֹשֶׁה כְּכֹל אֲשֶׁר צִוָּה יְהֹוָה אֹתוֹ כֵּן עָשָֽׂה׃
17 ೧೭ ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಪ್ರಥಮದಿನದಲ್ಲಿ ಮೋಶೆ ಗುಡಾರವನ್ನು ತೆರೆದನು.
וַיְהִי בַּחֹדֶשׁ הָרִאשׁוֹן בַּשָּׁנָה הַשֵּׁנִית בְּאֶחָד לַחֹדֶשׁ הוּקַם הַמִּשְׁכָּֽן׃
18 ೧೮ ಮೋಶೆಯು ಗುಡಾರವನ್ನು ತೆರೆದು ಅದಕ್ಕೆ ಮೆಟ್ಟುವಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು.
וַיָּקֶם מֹשֶׁה אֶת־הַמִּשְׁכָּן וַיִּתֵּן אֶת־אֲדָנָיו וַיָּשֶׂם אֶת־קְרָשָׁיו וַיִּתֵּן אֶת־בְּרִיחָיו וַיָּקֶם אֶת־עַמּוּדָֽיו׃
19 ೧೯ ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿ ಅದನ್ನು ಮರೆಮಾಡಿದನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಅದನ್ನೆಲ್ಲಾ ಮಾಡಿದನು.
וַיִּפְרֹשׂ אֶת־הָאֹהֶל עַל־הַמִּשְׁכָּן וַיָּשֶׂם אֶת־מִכְסֵה הָאֹהֶל עָלָיו מִלְמָעְלָה כַּאֲשֶׁר צִוָּה יְהֹוָה אֶת־מֹשֶֽׁה׃
20 ೨೦ ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಹಾಕಿ ಕೃಪಾಸನವನ್ನು ಇರಿಸಿದನು.
וַיִּקַּח וַיִּתֵּן אֶת־הָעֵדֻת אֶל־הָאָרֹן וַיָּשֶׂם אֶת־הַבַּדִּים עַל־הָאָרֹן וַיִּתֵּן אֶת־הַכַּפֹּרֶת עַל־הָאָרֹן מִלְמָֽעְלָה׃
21 ೨೧ ಮೋಶೆಯು ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ಪರದೆಯನ್ನು ಇರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.
וַיָּבֵא אֶת־הָאָרֹן אֶל־הַמִּשְׁכָּן וַיָּשֶׂם אֵת פָּרֹכֶת הַמָּסָךְ וַיָּסֶךְ עַל אֲרוֹן הָעֵדוּת כַּאֲשֶׁר צִוָּה יְהֹוָה אֶת־מֹשֶֽׁה׃
22 ೨೨ ಮೋಶೆ ದೇವದರ್ಶನದ ಗುಡಾರದೊಳಗೆ ಉತ್ತರ ಭಾಗದಲ್ಲಿ ತೆರೆಯ ಹೊರಗಡೆ ಮೇಜನ್ನು ಇರಿಸಿದನು.
וַיִּתֵּן אֶת־הַשֻּׁלְחָן בְּאֹהֶל מוֹעֵד עַל יֶרֶךְ הַמִּשְׁכָּן צָפֹנָה מִחוּץ לַפָּרֹֽכֶת׃
23 ೨೩ ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ ಮೇಜಿನ ಮೇಲೆ ರೊಟ್ಟಿಗಳನ್ನು ಕ್ರಮವಾಗಿ ಯೆಹೋವನ ಸನ್ನಿಧಿಯಲ್ಲಿ ಇರಿಸಿದನು.
וַיַּעֲרֹךְ עָלָיו עֵרֶךְ לֶחֶם לִפְנֵי יְהֹוָה כַּאֲשֶׁר צִוָּה יְהֹוָה אֶת־מֹשֶֽׁה׃
24 ೨೪ ಅವನು ದೇವದರ್ಶನದ ಗುಡಾರದಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇರಿಸಿದನು.
וַיָּשֶׂם אֶת־הַמְּנֹרָה בְּאֹהֶל מוֹעֵד נֹכַח הַשֻּׁלְחָן עַל יֶרֶךְ הַמִּשְׁכָּן נֶֽגְבָּה׃
25 ೨೫ ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ, ಅದರ ಹಣತೆಗಳನ್ನು ಯೆಹೋವನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು.
וַיַּעַל הַנֵּרֹת לִפְנֵי יְהֹוָה כַּאֲשֶׁר צִוָּה יְהֹוָה אֶת־מֹשֶֽׁה׃
26 ೨೬ ಮತ್ತು ಅವನು ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಎದುರಿಗೆ ಇರಿಸಿದನು.
וַיָּשֶׂם אֶת־מִזְבַּח הַזָּהָב בְּאֹהֶל מוֹעֵד לִפְנֵי הַפָּרֹֽכֶת׃
27 ೨೭ ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಅದರ ಮೇಲೆ ಪರಿಮಳ ದ್ರವ್ಯಗಳ ಧೂಪವನ್ನು ಹಾಕಿದನು.
וַיַּקְטֵר עָלָיו קְטֹרֶת סַמִּים כַּאֲשֶׁר צִוָּה יְהֹוָה אֶת־מֹשֶֽׁה׃
28 ೨೮ ಅವನು ಗುಡಾರದ ಬಾಗಿಲಿಗೆ ಪರದೆಯನ್ನು ಹಾಕಿದನು.
וַיָּשֶׂם אֶת־מָסַךְ הַפֶּתַח לַמִּשְׁכָּֽן׃
29 ೨೯ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇಟ್ಟು ಅದರ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯಸಮರ್ಪಣೆಯನ್ನೂ ಮಾಡಿದನು.
וְאֵת מִזְבַּח הָעֹלָה שָׂם פֶּתַח מִשְׁכַּן אֹֽהֶל־מוֹעֵד וַיַּעַל עָלָיו אֶת־הָעֹלָה וְאֶת־הַמִּנְחָה כַּאֲשֶׁר צִוָּה יְהֹוָה אֶת־מֹשֶֽׁה׃
30 ೩೦ ಯೆಹೋವನು ಆಜ್ಞಾಪಿಸಿದಂತೆ ಮೋಶೆ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ನೀರಿನ ತೊಟ್ಟಿಯನ್ನು ಇರಿಸಿ ತೊಳೆದುಕೊಳ್ಳುವುದಕ್ಕಾಗಿ ಅದರಲ್ಲಿ ನೀರು ತುಂಬಿಸಿದನು.
וַיָּשֶׂם אֶת־הַכִּיֹּר בֵּֽין־אֹהֶל מוֹעֵד וּבֵין הַמִּזְבֵּחַ וַיִּתֵּן שָׁמָּה מַיִם לְרׇחְצָֽה׃
31 ೩೧ ಮೋಶೆಯು, ಆರೋನನು ಮತ್ತು ಅವನ ಮಕ್ಕಳೂ ಅದರಲ್ಲಿ ಕೈಕಾಲು ತೊಳೆದುಕೊಂಡರು.
וְרָחֲצוּ מִמֶּנּוּ מֹשֶׁה וְאַהֲרֹן וּבָנָיו אֶת־יְדֵיהֶם וְאֶת־רַגְלֵיהֶֽם׃
32 ೩೨ ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ, ಯಜ್ಞವೇದಿಯ ಹತ್ತಿರ ಬರುವಾಗಲೂ ಯೆಹೋವನು ಆಜ್ಞಾಪಿಸಿದಂತೆ ಕೈಕಾಲುಗಳನ್ನು ತೊಳೆದುಕೊಳ್ಳುತ್ತಿದ್ದರು.
בְּבֹאָם אֶל־אֹהֶל מוֹעֵד וּבְקׇרְבָתָם אֶל־הַמִּזְבֵּחַ יִרְחָצוּ כַּאֲשֶׁר צִוָּה יְהֹוָה אֶת־מֹשֶֽׁה׃
33 ೩೩ ಮೋಶೆಯು ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಆವರಣವನ್ನು ತೆರೆದು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಈ ಪ್ರಕಾರ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು.
וַיָּקֶם אֶת־הֶחָצֵר סָבִיב לַמִּשְׁכָּן וְלַמִּזְבֵּחַ וַיִּתֵּן אֶת־מָסַךְ שַׁעַר הֶחָצֵר וַיְכַל מֹשֶׁה אֶת־הַמְּלָאכָֽה׃
34 ೩೪ ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು.
וַיְכַס הֶעָנָן אֶת־אֹהֶל מוֹעֵד וּכְבוֹד יְהֹוָה מָלֵא אֶת־הַמִּשְׁכָּֽן׃
35 ೩೫ ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಗೊಂಡಿದ್ದು ಯೆಹೋವನ ತೇಜಸ್ಸು ಪರಿಶುದ್ಧ ನಿವಾಸದ ತುಂಬಾ ಅವರಿಸಿ ಯೆಹೋವನ ಮಹಿಮೆಯು ಗುಡಾರದೊಳಗೆ ತುಂಬಿಕೊಂಡ್ದಿದರಿಂದಲೂ ಮೋಶೆಯು ಗುಡಾರದ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ.
וְלֹא־יָכֹל מֹשֶׁה לָבוֹא אֶל־אֹהֶל מוֹעֵד כִּֽי־שָׁכַן עָלָיו הֶעָנָן וּכְבוֹד יְהֹוָה מָלֵא אֶת־הַמִּשְׁכָּֽן׃
36 ೩೬ ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಾಯೇಲರು ಮುಂದೆ ಪ್ರಯಾಣ ಮಾಡುತ್ತಿದ್ದರು.
וּבְהֵעָלוֹת הֶֽעָנָן מֵעַל הַמִּשְׁכָּן יִסְעוּ בְּנֵי יִשְׂרָאֵל בְּכֹל מַסְעֵיהֶֽם׃
37 ೩೭ ಆ ಮೇಘವು ಮೇಲಕ್ಕೆ ಹೋಗದೇ ಇದ್ದು ಅದು ಹೊರಡುವ ತನಕ ಅವರು ಪ್ರಯಾಣ ಮಾಡದೆ ಇರುತ್ತಿದ್ದರು.
וְאִם־לֹא יֵעָלֶה הֶעָנָן וְלֹא יִסְעוּ עַד־יוֹם הֵעָלֹתֽוֹ׃
38 ೩೮ ಇಸ್ರಾಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣುಗಳ ಮುಂದೆ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಗುಡಾರದ ಮೇಲೆಯೂ ಇರುತ್ತಿತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಇರುತ್ತಿತ್ತು.
כִּי עֲנַן יְהֹוָה עַֽל־הַמִּשְׁכָּן יוֹמָם וְאֵשׁ תִּהְיֶה לַיְלָה בּוֹ לְעֵינֵי כׇל־בֵּֽית־יִשְׂרָאֵל בְּכׇל־מַסְעֵיהֶֽם׃

< ವಿಮೋಚನಕಾಂಡ 40 >