< ವಿಮೋಚನಕಾಂಡ 6 >
1 ೧ ಆನಂತರ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು” ಅಂದನು.
dixit Dominus ad Mosen nunc videbis quae facturus sum Pharaoni per manum enim fortem dimittet eos et in manu robusta eiciet illos de terra sua
2 ೨ ದೇವರು ಮೋಶೆಯ ಸಂಗಡ ಪುನಃ ಮಾತನಾಡಿ ಇಂತೆಂದನು, “ನಾನೇ ಯೆಹೋವನು,
locutusque est Dominus ad Mosen dicens ego Dominus
3 ೩ ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಸರ್ವಶಕ್ತನಾದ ದೇವರಾಗಿ ಕಾಣಿಸಿಕೊಂಡಿದ್ದೆನು. ಆದರೆ ಯೆಹೋವನೆಂಬ ನನ್ನ ಹೆಸರಿನಲ್ಲಿ ಅವರಿಗೆ ಗೋಚರವಾಗಿರಲಿಲ್ಲ.
qui apparui Abraham Isaac et Iacob in Deo omnipotente et nomen meum Adonai non indicavi eis
4 ೪ ನಾನು ಅವರಿಗೆ ಕಾನಾನ್ ದೇಶವನ್ನು ಅಂದರೆ, ಅವರು ಪರದೇಶದವರಾಗಿ ವಾಸವಾಗಿದ್ದ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ಮಾಡಿಕೊಂಡಿರುವೆನು.
pepigique cum eis foedus ut darem illis terram Chanaan terram peregrinationis eorum in qua fuerunt advenae
5 ೫ ಐಗುಪ್ತರು ದಾಸರಾಗಿ ಮಾಡಿಕೊಂಡಿರುವ ಇಸ್ರಾಯೇಲರ ಗೋಳು ಈಗ ನನಗೆ ಕೇಳಿಸಿತು. ನಾನು ಮಾಡಿದ ವಾಗ್ದಾನವನ್ನು ಪುನಃ ನೆನಪುಮಾಡಿಕೊಂಡೆನು.
ego audivi gemitum filiorum Israhel quo Aegyptii oppresserunt eos et recordatus sum pacti mei
6 ೬ ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.
ideo dic filiis Israhel ego Dominus qui educam vos de ergastulo Aegyptiorum et eruam de servitute ac redimam in brachio excelso et iudiciis magnis
7 ೭ ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.
et adsumam vos mihi in populum et ero vester Deus scietisque quod ego sim Dominus Deus vester qui eduxerim vos de ergastulo Aegyptiorum
8 ೮ ಇದಲ್ಲದೆ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ’ ಎಂದು ಅವರಿಗೆ ಹೇಳು” ಅಂದನು.
et induxerim in terram super quam levavi manum meam ut darem eam Abraham Isaac et Iacob daboque illam vobis possidendam ego Dominus
9 ೯ ಮೋಶೆ ಈ ಮಾತುಗಳನ್ನು ಅದೇ ಪ್ರಕಾರವಾಗಿ ಇಸ್ರಾಯೇಲರಿಗೆ ಹೇಳಿದಾಗ, ಅವರ ಮನಸ್ಸು ಕುಗ್ಗಿಹೋದದ್ದರಿಂದಲೂ, ಕಠಿಣವಾಗಿ ದಾಸತ್ವದ ಸೇವೆ ಮಾಡಬೇಕಾಗಿ ಬಂದದ್ದರಿಂದಲೂ ಅವರು ಮೋಶೆಯ ಮಾತಿಗೆ ಕಿವಿಗೊಡಲೇ ಇಲ್ಲ.
narravit ergo Moses omnia filiis Israhel qui non adquieverunt ei propter angustiam spiritus et opus durissimum
10 ೧೦ ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ,
locutusque est Dominus ad Mosen dicens
11 ೧೧ “ನೀನು ಐಗುಪ್ತ್ಯರ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲರನ್ನು ತನ್ನ ದೇಶದಿಂದ ಹೊರಟು ಹೋಗುವಂತೆ ಅವನ ಸಂಗಡ ಮಾತನಾಡು” ಅಂದನು.
ingredere et loquere ad Pharao regem Aegypti ut dimittat filios Israhel de terra sua
12 ೧೨ ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತುಗಳನ್ನು ಕೇಳುತ್ತಿಲ್ಲ; ಹೀಗಿರುವಾಗ ತೊದಲು ಮಾತನಾಡುವ ನನ್ನ ಮಾತುಗಳಿಗೆ ಫರೋಹನು ಕಿವಿಗೊಟ್ಟಾನೇ?” ಅಂದನು.
respondit Moses coram Domino ecce filii Israhel non me audiunt et quomodo audiet me Pharao praesertim cum sim incircumcisus labiis
13 ೧೩ ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಾಯೇಲರ ಬಳಿಗೂ ಐಗುಪ್ತದ ಅರಸನಾದ ಫರೋಹನ ಬಳಿಗೂ ಕಳುಹಿಸಿದನು.
locutus est Dominus ad Mosen et Aaron et dedit mandatum ad filios Israhel et ad Pharao regem Aegypti ut educerent filios Israhel de terra Aegypti
14 ೧೪ ಇಸ್ರಾಯೇಲ್ ಗೋತ್ರಗಳ ಕುಟುಂಬಗಳ ಮುಖ್ಯಸ್ಥರು: ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನ ಮಕ್ಕಳು: ಹನೋಕ್, ಫಲ್ಲು, ಹೆಚ್ರೋನ್, ಕರ್ಮೀ. ಇವರೇ ರೂಬೇನಿನಿಂದ ಉಂಟಾದ ಗೋತ್ರಗಳ ಮೂಲ ಪುರುಷರು.
isti sunt principes domorum per familias suas filii Ruben primogeniti Israhelis Enoch et Phallu Aesrom et Charmi
15 ೧೫ ಸಿಮೆಯೋನನ ಮಕ್ಕಳಾದ; ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ ಇವರು ಸಿಮೆಯೋನನಿಂದುಂಟಾದ ಗೋತ್ರಗಳಿಗೆ ಮೂಲ ಪುರುಷರು.
hae cognationes Ruben filii Symeon Iamuhel et Iamin et Aod Iachin et Soer et Saul filius Chananitidis hae progenies Symeon
16 ೧೬ ವಂಶಾವಳಿಗಳ ಪ್ರಕಾರ ಲೇವಿಯರ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ, ಇವರೇ. ಲೇವಿಯು ನೂರ ಮೂವತ್ತೇಳು ವರ್ಷ ಬದುಕಿದ್ದನು.
et haec nomina filiorum Levi per cognationes suas Gerson et Caath et Merari anni autem vitae Levi fuerunt centum triginta septem
17 ೧೭ ಗೋತ್ರಗಳಿಗನುಸಾರವಾಗಿ ಗೇರ್ಷೋನನ ಮಕ್ಕಳು: ಲಿಬ್ನೀ ಮತ್ತು ಶಿಮ್ಮಿ.
filii Gerson Lobeni et Semei per cognationes suas
18 ೧೮ ಕೊಹಾತನ ಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್. ಕೆಹಾತನು ನೂರ ಮೂವತ್ತಮೂರು ವರ್ಷ ಬದುಕಿದನು.
filii Caath Amram et Isuar et Hebron et Ozihel annique vitae Caath centum triginta tres
19 ೧೯ ಮೆರಾರೀಯ ಮಕ್ಕಳು: ಮಹ್ಲೀ, ಮೂಷೀ ವಂಶಾವಳಿಗಳ ಪ್ರಕಾರ ಲೇವಿಯಿಂದುಂಟಾದ ಗೋತ್ರಗಳು ಇವೇ ಆಗಿದ್ದವು.
filii Merari Mooli et Musi hae cognationes Levi per familias suas
20 ೨೦ ಅಮ್ರಾಮನು ತನ್ನ ತಂದೆಯ ತಂಗಿ ಯೋಕೆಬೆದಳನ್ನು ಮದುವೆಮಾಡಿಕೊಂಡನು. ಆಕೆಯು ಅವನಿಗೆ ಆರೋನನನ್ನೂ, ಮೋಶೆಯನ್ನೂ ಹೆತ್ತಳು. ಅಮ್ರಾಮನು ನೂರಮೂವತ್ತೇಳು ವರ್ಷ ಬದುಕಿದನು.
accepit autem Amram uxorem Iocabed patruelem suam quae peperit ei Aaron et Mosen fueruntque anni vitae Amram centum triginta septem
21 ೨೧ ಇಚ್ಹಾರನ ಮಕ್ಕಳು ಕೋರಹ, ನೆಫೆಗ್ ಮತ್ತು ಚಿಕ್ರಿ.
filii quoque Isuar Core et Napheg et Zechri
22 ೨೨ ಉಜ್ಜೀಯೇಲನ ಮಕ್ಕಳು: ಮೀಷಾಯೇಲ್, ಎಲ್ಜಾಫಾನ್ ಮತ್ತು ಸಿತ್ರಿ.
filii quoque Ozihel Misahel et Elsaphan et Sethri
23 ೨೩ ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆಗಿದ್ದ, ಎಲೀಶೇಬಳನ್ನು ಮದುವೆಯಾದನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರು ಹುಟ್ಟಿದರು.
accepit autem Aaron uxorem Elisabe filiam Aminadab sororem Naasson quae peperit ei Nadab et Abiu et Eleazar et Ithamar
24 ೨೪ ಕೋರಹನ ಮಕ್ಕಳು: ಅಸ್ಸೀರ್, ಎಲ್ಕಾನ್, ಅಬೀಯಾಸಾಫ್ ಇವರೇ ಕೋರಹೀಯರ ಗೋತ್ರಗಳು.
filii quoque Core Asir et Helcana et Abiasab hae sunt cognationes Coritarum
25 ೨೫ ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಹೆಣ್ಣು ಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡನು. ಆಕೆ ಅವನಿಗೆ ಫೀನೆಹಾಸನನ್ನು ಹೆತ್ತಳು. ಅವರವರ ಗೋತ್ರದ ಪ್ರಕಾರ ಇವರೇ ಲೇವಿಯರ ಪೂರ್ವಿಕರು.
at vero Eleazar filius Aaron accepit uxorem de filiabus Phutihel quae peperit ei Finees hii sunt principes familiarum leviticarum per cognationes suas
26 ೨೬ ಇಸ್ರಾಯೇಲರನ್ನು ಅವರ ಗೋತ್ರಗಳಿಗನುಸಾರವಾಗಿ, ಐಗುಪ್ತದೇಶದಿಂದ ಹೊರಗೆ ಬರಮಾಡಬೇಕೆಂದು ಯೆಹೋವನು ಯಾರಿಗೆ ಹೇಳಿದನೋ ಅವರೇ ಆರೋನ್ ಮತ್ತು ಮೋಶೆ.
iste est Aaron et Moses quibus praecepit Dominus ut educerent filios Israhel de terra Aegypti per turmas suas
27 ೨೭ ಇಸ್ರಾಯೇಲರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡುವುದಕ್ಕಾಗಿ ಐಗುಪ್ತ್ಯರ ಅರಸನಾದ ಫರೋಹನ ಸಂಗಡ ಮಾತನಾಡಿದಂತಹ ಮೋಶೆ ಮತ್ತು ಆರೋನರು ಇವರೇ.
hii sunt qui loquuntur ad Pharao regem Aegypti ut educant filios Israhel de Aegypto iste Moses et Aaron
28 ೨೮ ಯೆಹೋವನು ಐಗುಪ್ತದೇಶದಲ್ಲಿ, ಮೋಶೆಯ ಸಂಗಡ ಮಾತನಾಡಿದಾಗ
in die qua locutus est Dominus ad Mosen in terra Aegypti
29 ೨೯ ಆತನು ಮೋಶೆಗೆ, “ನಾನು ಯೆಹೋವನು ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಐಗುಪ್ತ್ಯರ ಅರಸನಾದ ಫರೋಹನನಿಗೆ ತಿಳಿಸು” ಎಂದನು.
et locutus est Dominus ad Mosen dicens ego Dominus loquere ad Pharao regem Aegypti omnia quae ego loquor tibi
30 ೩೦ ಆದರೆ ಮೋಶೆಯು ಯೆಹೋವನಿಗೆ, “ಇಗೋ, ಸ್ವಾಮಿ ನಾನು ಮಾತನಾಡುವುದರಲ್ಲಿ ಜಾಣನಲ್ಲ, ಫರೋಹನು ನನ್ನ ಮಾತನ್ನು ಹೇಗೆ ಕೇಳಾನು” ಅಂದನು.
et ait Moses coram Domino en incircumcisus labiis sum quomodo audiet me Pharao