< ಯೆಹೆಜ್ಕೇಲನು 1 >
1 ೧ ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು.
Ke len aklimekosr in malem akakosr in yac aktolngoul, nga Ezekiel, sie mwet tol, wen natul Buzi, wi mwet Jew ma sruoh su muta sisken Infacl Chebar in acn Babylonia. Kusrao ikakla ac nga liye sie aruruma ke God.
2 ೨ ಅರಸನಾದ ಯೆಹೋಯಾಖೀನನು ಸೆರೆಯಾದ ಐದನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ,
(Yac aklimekosrla tukun utukla Tokosra Jehoiachin nu ke sruoh.)
3 ೩ ಯೆಹೋವನ ವಾಕ್ಯವು ಕಸ್ದೀಯ ದೇಶದೊಳಗೆ ಕೆಬಾರ್ ನದಿಯ ಹತ್ತಿರ ಬೂಜಿಯ ಮಗನೂ, ಯಾಜಕನೂ ಆದ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಕೇಳಿಸಿತು; ಅಲ್ಲಿ ಯೆಹೋವನ ಹಸ್ತಸ್ಪರ್ಶದಿಂದ ಅವನು ಪರವಶನಾದನು.
Ingo, sisken Infacl Chebar in acn Babylonia, nga tuh lohng ke LEUM GOD El kaskas nu sik, ac nga pulakin ku lal oan fuk.
4 ೪ ಆಗ ನಾನು ನೋಡಲಾಗಿ; ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿಯು ಉಂಟಾಯಿತು.
Nga ngetak ac liye sie fohru tuku epang me. Sarom uh sarmelik liki sie pukunyeng lulap, ac yen nukewa rauneak arulana saromrom. Yen ma sarom uh sarmelik we, oasr sie ma saromrom oana osra bronze.
5 ೫ ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ಆಕಾರಗಳು ಕಂಡುಬಂದವು; ಅವುಗಳ ರೂಪವು ಮನುಷ್ಯನ ರೂಪದಂತಿತ್ತು.
Infulwen paka sac nga liye ma orekla akosr su moul, su oana luman mwet,
6 ೬ ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ಮತ್ತು ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು.
tusruktu kais sie selos oasr muta akosr ac posohksok akosr.
7 ೭ ಅವುಗಳ ಕಾಲುಗಳು ನೆಟ್ಟಗಿದ್ದು; ಹೆಜ್ಜೆಗಳು ಕರುವಿನ ಗೊರಸಿನಂತಿದ್ದವು. ಅವುಗಳು ಬೆಳಗಿದ ತಾಮ್ರದ ಹಾಗೆ ಹೊಳೆಯುತ್ತಿದ್ದವು.
Nialos suwohs, ac falkalos oana falken cow mukul uh, su saromrom oana bronze aksaromromyeyukla.
8 ೮ ಒಂದೊಂದು ಜೀವಿಯ ನಾಲ್ಕು ಪಾರ್ಶ್ವಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯನ ಹಸ್ತದಂಥ ಹಸ್ತಗಳಿದ್ದವು; ಆ ನಾಲ್ಕು ಜೀವಿಗಳ ಮುಖಗಳೂ, ರೆಕ್ಕೆಗಳೂ ಹೇಗಿದ್ದವೆಂದರೆ,
Sayen muta akosr ac posohksok akosr, oasr pac kais sie poun mwet ye posohksok kaclos.
9 ೯ ರೆಕ್ಕೆಗಳು ಒಂದಕ್ಕೊಂದು ತಗಲುತ್ತಿದ್ದವು; ಆ ಜೀವಿಗಳು ಮುಂದೆ ಹೋಗುವಾಗ ತಿರುಗಿಕೊಳ್ಳದೆ ನೇರ ಮುಖವಾಗಿಯೇ ಹೋಗುತ್ತಿದ್ದವು.
Kais sie ma moul inge elos foralik ac asroelik luo sin posohksok kaclos in akupasrila orala maspang se. Ke elos ac mukuila elos ac tukeni mukuiyak, a manolos tiana forla.
10 ೧೦ ಅವುಗಳ ಮುಖಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖವು ಮನುಷ್ಯನ ಮುಖದಂತಿತ್ತು, ಬಲಗಡೆಯ ಮುಖವು ಸಿಂಹದ ಮುಖದಂತಿತ್ತು, ಎಡಗಡೆಯ ಮುಖವು ಹೋರಿಯ ಮುಖದಂತಿತ್ತು, ಹಿಂದಿನ ಮುಖವು ಗರುಡಪಕ್ಷಿಯ ಮುಖದಂತಿತ್ತು.
Kais sie ma moul akosr inge oasr muta akosr kac su tiana oana sie: mutun mwet se nget nu meet, mutun lion nget nu layot, mutun cow mukul nget nu lasa, ac mutun eagle nget nu tok.
11 ೧೧ ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟಿದ್ದವು; ರೆಕ್ಕೆಗಳೂ ಮೇಲ್ಗಡೆ ಪ್ರತ್ಯೇಕಪ್ರತ್ಯೇಕವಾಗಿದ್ದವು; ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕೆಗಳಿಗೆ ತಗಲುತ್ತಿದ್ದವು, ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು.
Luo posohksok ke kais sie ma moul inge asrosrelik in apusralila nu ke ma soko siska lac lac, ac posohksol lula elos sang afinya manolos.
12 ೧೨ ಆ ಜೀವಿಗಳೆಲ್ಲಾ ನೇರ ಮುಖವಾಗಿಯೇ ಹೋಗುತ್ತಿದ್ದವು, ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಹಿಂತಿರುಗಿನೋಡದೆ ಮುಂದೆ ಹೋದವು.
Kais soko ma moul inge nget nu ke eng akosr lun faclu, ouinge u sac ku in fahsr nu yen nukewa, ac tia enenu in forla.
13 ೧೩ ಆ ಜೀವಿಗಳ ಮಧ್ಯದಲ್ಲಿ ಅದ್ಭುತಕಾಂತಿಯೊಂದು ಉರಿಯುವ ಕೆಂಡಗಳೋ, ಪಂಜುಗಳೋ ಎಂಬಂತೆ ಕಾಣಿಸಿತು; ಅದು ಜೀವಿಗಳ ನಡುವೆ ಓಲಾಡುತ್ತಿತ್ತು; ಆ ಉರಿಯು ತೇಜೋಮಯವಾಗಿತ್ತು, ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.
Inmasrlon ma moul inge oasr ma se oana sukan sul soko su mukuiwot mukuime pacl nukewa, ac e kac uh ngutyak, pusrukla sarom.
14 ೧೪ ಆ ಜೀವಿಗಳು ಮಿಂಚಿನಂತೆ ಮುಂದಕ್ಕೂ, ಹಿಂದಕ್ಕೂ ವೇಗವಾಗಿ ಚಲಿಸುತ್ತಿದ್ದವು.
Ma moul inge yuwot yume, wi na mui lun sarom uh.
15 ೧೫ ಇಗೋ, ನಾನು ಆ ಜೀವಿಗಳನ್ನು ನೋಡುತ್ತಿರಲಾಗಿ ಒಂದೊಂದು ಕಡೆಯಲ್ಲಿಯೂ ಜೀವಿಗಳ ಪಕ್ಕದಲ್ಲಿ ಭೂಮಿಯ ಮೇಲೆ ಒಂದು ಚಕ್ರವು ಕಾಣಿಸಿತು.
Ke nga ngetang nu ke ma orekla moul akosr inge, nga liyauk wheel akosr pusralla infohk uh, kais sie wheel oan sisken kais soko selos.
16 ೧೬ ಆ ಚಕ್ರಗಳ ವರ್ಣವೂ, ರಚನೆಯೂ ಹೇಗಿದ್ದವೆಂದರೆ, ಅವುಗಳ ವರ್ಣವು ಪೀತರತ್ನದ ಹಾಗೆ ಥಳಥಳಿಸುತ್ತಿತ್ತು. ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು; ಆ ನಾಲ್ಕು ಚಕ್ರಗಳು ಒಂದೇ ಮಾದರಿಯಾಗಿದ್ದವು.
Wheel inge kewa oana sie — kais sie selos saromrom oana luman wek saok uh, ac kais sie wheel oasr pac sie wheel pitukelik loac.
17 ೧೭ ಅವು ಚಲಿಸುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ತಿರುಗುತ್ತಿದ್ದವು; ಓರೆಯಾಗಿ ತಿರುಗುತ್ತಿರಲಿಲ್ಲ.
Ouinge wheel uh ku in mukui nu ke eng akosr inge kewa.
18 ೧೮ ಗಾಲಿಗಳ ಸುತ್ತಣ ಭಾಗಗಳು ಎತ್ತರವಾಗಿಯೂ, ಭಯಂಕರವಾಗಿಯೂ ಇದ್ದವು; ಈ ಭಾಗಗಳ ಎಲ್ಲಾ ಕಡೆಯಲ್ಲಿಯೂ ತುಂಬಾ ಕಣ್ಣುಗಳಿದ್ದವು;
Sisken acn raun ke wheel inge nwanala ke atronmuta.
19 ೧೯ ಜೀವಿಗಳು ಮುಂದೆ ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಮುಂದೆ ಹೋಗುತ್ತಿದ್ದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೇಳುವಾಗ ಚಕ್ರಗಳೂ ಮೇಲೆ ಏಳುತ್ತಿದ್ದವು;
Pacl nukewa ma moul inge ac mukuila, na wheel inge ac mukuiyak pac, ac ma moul inge fin sohkak liki faclu, na wheel inge ac wi pac sohkak.
20 ೨೦ ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಜೀವಿಗಳ ಒಳಗಿನ ಆತ್ಮವು ಚಕ್ರಗಳಲ್ಲಿ ಇದ್ದ ಕಾರಣ ಚಕ್ರಗಳು ಅವುಗಳ ಪಕ್ಕದಲ್ಲಿ ಏಳುತ್ತಿದ್ದವು.
Ma moul inge som nu yen nukewa elos lungse som nu we, ac wheel inge ac wi pacna, mweyen ma moul uh pa leum faclos.
21 ೨೧ ಅವು ಮುಂದೆ ಹೋಗುವಾಗ ಇವೂ ಮುಂದೆ ಹೋಗುತ್ತಿದ್ದವು, ಅವು ನಿಂತು ಹೋಗುವಾಗ ಇವೂ ನಿಂತುಹೋಗುತ್ತಿದ್ದವು, ಅವು ನೆಲದಿಂದ ಮೇಲಕ್ಕೆ ಏಳುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು; ಏಕೆಂದರೆ ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇತ್ತು.
Ouinge pacl nukewa ma moul inge mukuila ku tui ku sohkak nu yen engyeng uh, na wheel inge ac oru oapana.
22 ೨೨ ಭೀಕರವಾದ ಮಂಜುಗಡ್ಡೆಯಂತೆ ಥಳಥಳಿಸುವ ಒಂದು ರೀತಿಯ ಗಗನಮಂಡಲ ಆ ಜೀವಿಗಳ ತಲೆಯ ಮೇಲ್ಗಡೆ ಹರಡಿತ್ತು.
Lucng liki sifen ma moul inge, oasr sie ma raun oana luman sie pol lulap oankiyuki, orekla ke crystal na saromrom.
23 ೨೩ ಅದರ ಕೆಳಗೆ ಜೀವಿಗಳ ರೆಕ್ಕೆಗಳು ನೇರವಾಗಿ ಚಾಚಲ್ಪಟ್ಟು ಒಂದಕ್ಕೊಂದು ತಗಲುತ್ತಿದ್ದವು; ಇದಲ್ಲದೆ ಒಂದೊಂದು ಜೀವಿಗೆ ದೇಹವನ್ನು ಮುಚ್ಚಿಕೊಳ್ಳುವ ಎರಡೆರಡು ರೆಕ್ಕೆಗಳಿದ್ದವು.
Ma moul inge tu ye ma raun sac, ac kais sie selos asroela luo sin posohksok lal ah nu ke ma moul ma tu siskal kewa. Posohksok luo ngia el sang afinya manol.
24 ೨೪ ಅವು ಮುಂದೆ ಹೋಗುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ ಸರ್ವಶಕ್ತನ ಧ್ವನಿಯಂತೆ, ಆರ್ಭಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.
Ke pacl elos sohksok, nga lohng pusren posohksok lalos uh oana ngirngir lun noa tok uh, ku oana pusren un mwet mweun lulap, ku oana pusren God Kulana. Ac ke pacl elos ac tui tila sohk, elos ac orani posohksok lalos,
25 ೨೫ ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲದ ಮೇಲಿಂದ ಒಂದು ಧ್ವನಿಯು ಕಿವಿಗೆ ಬಿತ್ತು. ಜೀವಿಗಳು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.
tusruktu srakna oasr pusra se tuku lucng liki ma raun se fin sifalos.
26 ೨೬ ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರರೂಪದಂಥ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.
Lucng liki ma raun sac oasr ma se oan we oana luman tron se orekla ke eot sapphire, ac oasr sie ma su muta fin tron sac su oana luman mwet se.
27 ೨೭ ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತಕಾಂತಿಯನ್ನು ಕಂಡೆನು; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತದೋ ಎಂಬಂತಿರುವ ಮಹಾ ತೇಜಸ್ಸನ್ನು ನೋಡಿದೆನು; ಮತ್ತು ಪ್ರಕಾಶವು ಆತನನ್ನು ಆವರಿಸಿಕೊಂಡಿತ್ತು.
Infulwalyak nu lucng oana bronze saromrom infulwen sie e, ac infulwali nu ten oana luman firirrir lun e uh. Acn nukewa rauneak arulana kalem,
28 ೨೮ ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲೂ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡಾಗ ನಾನು ಅಡ್ಡಬಿದ್ದೆ; ಮಾತನಾಡುವಾತನ ವಾಣಿಯನ್ನು ಕೇಳಿದೆ.
ac tuhn nukewa ke lelakem uh oasr kac. Kalem se inge, su arulana saromrom, akkalemye lah LEUM GOD El oasr we. Ke nga liye ma se inge, nga putati ac oankiyuki infohk uh. Na nga lohng pusra se kaskas.