< ಯೆಹೆಜ್ಕೇಲನು 10 >
1 ೧ ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ಗಗನಮಂಡಲದ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.
Nañente iraho, le ingo, amy lañelañe ambone’ ty añambone’ o kerobeoy te niboak’ ambone’ iareo ey ty raha hoe safira, nibentatse ho fiambesatse.
2 ೨ ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡ ಆ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಗಳ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ, ತಂದು ಅದನ್ನು ಪಟ್ಟಣದ ಮೇಲೆ ಎರಚು” ಎಂದು ಅಪ್ಪಣೆಕೊಡಲು ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು.
Le hoe re amy misikin-damba leniy: Akia, añivo’ o larò mininike ambane’ o kerobeo naho atsafo vaen’ afo boak’ añivo’ o kerobeo ty fità’o roe vaho aparatsaho ambone’ i rovay. Aa le nimb’ao re, ampahatreavako.
3 ೩ ಅವನು ಒಳಗೆ ಸೇರಿದಾಗ ಕೆರೂಬಿಗಳು ದೇವಾಲಯದ ದಕ್ಷಿಣಭಾಗದಲ್ಲಿ ನಿಂತಿದ್ದವು, ಮೇಘವು ಒಳಗಣ ಪ್ರಾಕಾರವನ್ನು ತುಂಬಿತ್ತು.
Nijohañe ankavana’ i kivohoy o kerobeo amy nimoaha’ indatiy, naho nahatsake i kiririsa añate’ey i rahoñey;
4 ೪ ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಅಂಗಳದಲ್ಲೆಲ್ಲಾ ವ್ಯಾಪಿಸಿತ್ತು.
le nionjoñe boak’ amo kerobeo ty enge’ Iehovà nijohañe an-tsarira’ i lalañey, naho nilifore’ i rahoñey i kivohoy, vaho nañatseke i kiririsay ty fireandrea’ ty enge’ Iehovà.
5 ೫ ಆಗ ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತನಾದ ದೇವರು ಮಾತನಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಅಂಗಳದವರೆಗೂ ಕೇಳಿಸಿತು.
Le jinanjiñe an-kiririsa alafe’e ao ty fangotrohan’ ela’ o kerobeo manahake ty fiarañanañan’ Andriampañontroñe, t’ie mitsara.
6 ೬ ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೆಂಕಿಯನ್ನು ತೆಗೆದುಕೋ” ಎಂದು ಅಪ್ಪಣೆ ಕೊಡಲು ಅವನು ಒಳಕ್ಕೆ ಹೋಗಿ ಒಂದು ಚಕ್ರದ ಪಕ್ಕದಲ್ಲಿ ನಿಂತುಕೊಂಡನು.
Aa ie namantoke am’indaty misikin-deniy ami’ty hoe: Andrambeso afo boak’ añivo’ o larò mininike añivo’ o kerobeoo, le nimoak’ ao re nijohañe añivo’ o larò mininikeo.
7 ೭ ಆಗ ಒಬ್ಬ ಕೆರೂಬಿಯು ಇತರ ಕೆರೂಬಿಗಳ ನಡುವೆ ಕೈ ಚಾಚಿ ಅವುಗಳ ಮಧ್ಯದಲ್ಲಿದ್ದ ಬೆಂಕಿಯನ್ನು ತೆಗೆದು ನಾರಿನ ಬಟ್ಟೆಯನ್ನು ಹೊದ್ದುಕೊಂಡವನ ಬೊಗಸೆಯಲ್ಲಿ ಹಾಕಿತು; ಅವನು ಅದನ್ನು ತೆಗೆದುಕೊಂಡು ಆಚೆಗೆ ಹೊರಟನು.
Ie amy zao, nahiti’ ty kerobe ty fità’e boak’ añivo’ o kerobeo mb’ amy afo an-teñateña’ o kerobeoy le nandrambesa’e naho natolo’e am-pità’ i nisikin-deniy, rinambe’e vaho niavotse.
8 ೮ ಕೆರೂಬಿಗಳ ಒಂದೊಂದು ರೆಕ್ಕೆಯ ಕೆಳಗೂ ಮನುಷ್ಯಹಸ್ತದಂಥ ಒಂದೊಂದು ಹಸ್ತವು ಕಾಣಿಸಿತು.
Niloneak’ amy zao, amo kerobeo ambane’ o ela’eo ty manahake te fità’ ondaty.
9 ೯ ಇಗೋ, ನಾನು ನೋಡಲಾಗಿ ಆ ಕೆರೂಬಿಗಳ ಪಕ್ಕಗಳಲ್ಲಿ, ಒಂದೊಂದು ಕೆರೂಬಿಯ ಪಕ್ಕದಲ್ಲಿ ಒಂದೊಂದು ಚಕ್ರದಂತೆ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ಬಣ್ಣವು ಪೀತರತ್ನದ ಹಾಗೆ ಹೊಳೆಯುತ್ತಿತ್ತು.
Aa ie nañente iraho, hehe ty larò efatse marine o kerobeo, songa larò raike i kerobe rey, le hoe vaton-Tarsise ty volo’ i larò rey.
10 ೧೦ ಅವುಗಳ ರೂಪವು ಹೇಗಿತ್ತೆಂದರೆ ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು, ಆ ನಾಲ್ಕು ಒಂದೇ ಮಾದರಿಯಾಗಿದ್ದವು.
Le ty vinta’ iareo, hambañe i efatse rey, manahake te añate’ ty larò ty larò.
11 ೧೧ ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು, ಓರೆಯಾಗಿ ಹೊರಳುತ್ತಿರಲಿಲ್ಲ; ಎದುರುಮುಖವಾಗಿ ಹೋಗುತ್ತಿದ್ದವೇ ಹೊರತು ಓರೆಯಾಗಿ ಹೋಗುತ್ತಿರಲಿಲ್ಲ.
Ie nandeha le nionjomb’amy ze joro-tane tea’e, tsy nivio t’ie nandeha, fa amy ze nitoliha’ ty loha’e ty norihe’ iereo le tsy niviombio am-pandenañe.
12 ೧೨ ಕೆರೂಬಿಗಳ ಬೆನ್ನು, ಕೈ, ರೆಕ್ಕೆ, ಅಂತು ಸರ್ವಾಂಗಗಳಲ್ಲಿಯೂ ಮತ್ತು ಚಕ್ರಗಳಲ್ಲಿಯೂ ಕಣ್ಣುಗಳು ಸುತ್ತಲೂ ತುಂಬಿದ್ದವು; ನಾಲ್ಕು ಕೆರೂಬಿಗಳಲ್ಲಿ ಒಂದೊಂದಕ್ಕೂ ಒಂದೊಂದು ಚಕ್ರವಿತ್ತು.
Tsitsike fihaino ty sandri’ iareo, o pa’eo, o fità’eo, o ela’eo, naho o larò’eo, vaho añariari’ i larò efatse rey.
13 ೧೩ ನಾನು ಕೇಳಿದಂತೆ ಆ ಚಕ್ರಗಳ ಹೆಸರು ಗರಗರಗಾಲಿ ಎಂಬುದೇ.
Tsinanoko te nitokaveñe ty hoe Larò-Mpininike i larò rey.
14 ೧೪ ಒಂದೊಂದು ಕೆರೂಬಿಗೆ ನಾಲ್ಕು ನಾಲ್ಕು ಮುಖಗಳಿದ್ದವು; ಮೊದಲನೆಯದು ಕೆರೂಬಿಯದು, ಎರಡನೆಯದು ಮನುಷ್ಯನದು, ಮೂರನೆಯದು ಸಿಂಹದ್ದು, ನಾಲ್ಕನೆಯದು ಗರುಡಪಕ್ಷಿಯದು.
Songa aman-daharañe efatse: laharan-kerobe ty valoha’e; lahara’ ondaty ty faharoe; tarehen-diona ty fahatelo; vaho tarehem-bantio ty fahefatse.
15 ೧೫ ಆ ಕೆರೂಬಿಗಳು ಮೇಲಕ್ಕೆ ಏರಿದವು; ನಾನು ಕೆಬಾರ್ ನದಿಯ ಹತ್ತಿರ ನೋಡಿದ ಜೀವಿಗಳು ಇವೇ.
Niongake i kerobe rey. Ie i raha veloñe nitreako añ’olo’ i saka Kebarey rey.
16 ೧೬ ಕೆರೂಬಿಗಳು ಮುಂದೆ ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಹೋಗುತ್ತಿದ್ದವು; ಕೆರೂಬಿಗಳು ನೆಲದಿಂದ ಮೇಲಕ್ಕೆ ಏರಬೇಕೆಂದು ರೆಕ್ಕೆಗಳನ್ನು ಹರಡಿಕೊಂಡಾಗ ಚಕ್ರಗಳೂ ಓರೆಯಾಗದೆ ಅವುಗಳ ಸಂಗಡಲೇ ಏರಿದವು.
Aa naho mañavelo i kerobe rey le mindre lia ama’e i larò rey; aa ie onjone’ i kerobe rey o ela’eo hiavotse i taney mb’ añ’ abo ey, le tsy mivike tsy ho rekets’ ama’e i larò rey.
17 ೧೭ ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇದ್ದ ಕಾರಣ, ಅವು ನಿಂತುಹೋದಾಗ ಇವೂ ನಿಂತುಹೋದವು, ಅವು ಏರಿದಾಗ ಇವೂ ಅವುಗಳ ಜೊತೆಯಲ್ಲೇ ಏರಿದವು.
Ie mitsangañe, le mijohañe ka iretoañe; ie mionjoñe, le mañambone ka iretoa; fa am’ iareo ao ty arofo’ o raha veloñeo.
18 ೧೮ ಬಳಿಕ ಯೆಹೋವನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಗಳ ಮೇಲೆ ನಿಂತಿತು.
Nienga i sariran-kivohoy amy zao ty enge’ Iehovà nijohañe ambone’ i kerobe rey.
19 ೧೯ ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಯೆಹೋವನ ಆಲಯದ ಪೂರ್ವ ಬಾಗಿಲಿನ ಮುಂದೆ ನಿಂತವು, ಅವುಗಳ ಮೇಲ್ಗಡೆ ಇಸ್ರಾಯೇಲಿನ ದೇವರ ತೇಜಸ್ಸು ನೆಲಸಿತ್ತು.
Nonjone’ i kerobe rey o ela’eo henane zay le nienga i taney am-pahatreavako eo; ie niavotse le niaoloa’ i laro rey, naho nijohañe am-pimoaha’ i lalambey atiñana’ i anjomba’ Iehovày eoy; vaho ambone’ iereo eo ty engen’ Añahare’ Israele.
20 ೨೦ ಇಸ್ರಾಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು.
Ie i raha veloñe nitreako ambanen’ Andrianañahare’ Israele añ’ olon-tsaka Kebare rey; le napotako t’ie kerobe.
21 ೨೧ ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ, ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯ ಹಸ್ತದಂಥ ಹಸ್ತಗಳು ಇದ್ದವು.
Songa aman-daharañe efatse naho elats’ efatse; vaho hoe fità’ ondaty ty ambane’ ela’eo.
22 ೨೨ ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು, ಅವು ಆ ಮುಖಗಳೇ; ಪ್ರತಿಯೊಂದು ಜೀವಿಯು ನೇರವಾಗಿಯೇ ಹೋಗುತ್ತಿದ್ದವು.
Le nihambañe amo laharañe nitreako añ’ olo-tsaka-Kebareo ty vintan-dahara’ iareo, ty vinta’ iareo naho ty fañova’ iareo, songa nionjoñe mahity mb’am-piatrefa’e.