< ಯೆಹೆಜ್ಕೇಲನು 12 >
1 ೧ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
Awurade asɛm baa me nkyɛn se,
2 ೨ “ನರಪುತ್ರನೇ, ನೀನು ದ್ರೋಹಿ ವಂಶದ ಮಧ್ಯದಲ್ಲಿ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.
“Onipa ba, wote nnipa a wɔtew atua mu. Wɔwɔ ani nanso wonhu ade, wɔwɔ aso nanso wɔnte asɛm, efisɛ wɔyɛ nnipa atuatewfo.
3 ೩ “ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿ ವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು.
“Enti onipa ba, boaboa wo nneɛma ano ma asutwa, na adekyee mu a wɔrewɛn no, fi nea wowɔ, na kɔ beae foforo. Ebia wɔbɛte ase, ɛwɔ mu sɛ wɔyɛ atuatewfo.
4 ೪ ನೀನು ನಿನ್ನ ಸಾಮಗ್ರಿಗಳನ್ನು, ವಲಸೆಯ ಸಾಮಗ್ರಿಗಳನ್ನೋ ಎಂಬಂತೆ ಹಗಲಿನಲ್ಲಿ ಅವರ ಕಣ್ಣೆದುರಿಗೆ ಮನೆಯೊಳಗಿಂದ ಆಚೆಗೆ ಹಾಕಿ, ವಲಸೆ ಹೋಗುವವನಂತೆ ಸಾಯಂಕಾಲ ಅವರ ಸಮಕ್ಷಮದಲ್ಲಿ ಹೊರಟು ಹೋಗು.
Adekyee mu a wɔrewɛn no, fa wo nneɛma a woaboa ano ama asutwa no pue. Afei anwummere a wɔrewɛn no, fi adi sɛnea wɔn a wotwa wɔn asu yɛ no.
5 ೫ ಅವರು ನೋಡುತ್ತಿರುವಾಗ, ನೀನು ಗೋಡೆಯನ್ನು ತೋಡಿ, ಕಿಂಡಿಯ ಮೂಲಕ ನಿನ್ನ ಸಾಮಗ್ರಿಗಳನ್ನು ಸಾಗಿಸಿಕೊಂಡು ಹೋಗು.
Bere a wɔrewɛn no, tu ɔfasu no mu tokuru na yi wo nneɛma no fa mu.
6 ೬ ಅವರ ಕಣ್ಣ ಮುಂದೆ, ಅದನ್ನು ಹೆಗಲ ಮೇಲೆ ಹಾಕಿ, ಕತ್ತಲಲ್ಲಿ ಹೊತ್ತುಕೊಂಡು ಹೋಗು; ನೆಲವನ್ನು ನೋಡದಂತೆ ಮುಖವನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಗುರುತನ್ನಾಗಿ ಮಾಡಿದ್ದೇನೆ.”
Fa to wo mmati so, bere a wɔrewɛn, na afei anim biribiri a, soa kɔ. Kata wʼanim sɛnea wunhu asase no, efisɛ mede wo ayɛ nsɛnkyerɛnne ama Israelfi.”
7 ೭ ಆಗ ನಾನು ನನಗಾದ ಅಪ್ಪಣೆಯನ್ನು ನೆರವೇರಿಸಿದೆನು; ಹಗಲಿನಲ್ಲಿ ನನ್ನ ಸಾಮಗ್ರಿಗಳನ್ನು, ವಲಸೆಯ ಸಾಮಗ್ರಿಯನ್ನೋ ಎಂಬಂತೆ ಮನೆಯೊಳಗಿಂದ ಆಚೆಗೆ ಹಾಕಿ, ಸಾಯಂಕಾಲ ನನ್ನ ಕೈಯಿಂದಲೇ ಗೋಡೆಯಲ್ಲಿ ಕಿಂಡಿಯನ್ನು ಮಾಡಿ, ಕತ್ತಲಲ್ಲಿ ಆ ಸಾಮಾನನ್ನು ಆಚೆಗೆ ಸಾಗಿಸಿ, ಅವರ ಕಣ್ಣ ಮುಂದೆ ಹೆಗಲ ಮೇಲೆ ಹೊತ್ತುಕೊಂಡು ಹೋದೆನು.
Enti meyɛɛ sɛnea wɔhyɛɛ me no. Adekyee mu no, mede me nneɛma a maboa ano ama asutwa no puei. Anwummere no, mede me nsa tuu tokuru wɔ ɔfasu no mu, na anim biribirii no, miyii me nneɛma no soaa wɔ me mmati so a wɔrehwɛ.
8 ೮ ಬೆಳಿಗ್ಗೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
Adekyee no, Awurade asɛm baa me nkyɛn se,
9 ೯ “ನರಪುತ್ರನೇ, ದ್ರೋಹಿ ವಂಶದವರಾದ ಇಸ್ರಾಯೇಲರು, ‘ನೀನು ಏನು ಮಾಡುತ್ತಿರುವೆ?’ ಎಂದು ನಿನ್ನನ್ನು ಕೇಳಿದ್ದಾರಲ್ಲವೆ?
“Onipa ba, saa Israelfi atuatewfo no ammisa wo se, ‘Dɛn na woreyɛ yi?’
10 ೧೦ ನೀನು ಅವರಿಗೆ ಹೀಗೆ ನುಡಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಈ ಹೊರೆಯು ಯೆರೂಸಲೇಮಿನಲ್ಲಿರುವ ರಾಜನಿಗೂ, ಅಲ್ಲಿನ ಇಸ್ರಾಯೇಲ್ ವಂಶದವರೆಲ್ಲರಿಗೂ ಸಂಬಂಧಪಟ್ಟಿದೆ.’
“Ka kyerɛ wɔn se, sɛɛ na Otumfo Awurade se: Saa nkɔmhyɛ yi fa ɔhene babarima a ɔwɔ Yerusalem ne Israelfi a wɔwɔ hɔ nyinaa ho.
11 ೧೧ ಇದನ್ನೂ ನುಡಿ, ‘ನಾನು ನಿಮಗೆ ಗುರುತಾಗಿದ್ದೇನೆ; ನಾನು ಮಾಡಿದಂತೆಯೇ ಅವರಿಗಾಗುವುದು; ಅವರು ವಲಸೆಯಾಗಿ ಸೆರೆ ಹೋಗುವರು.
Ka kyerɛ wɔn se, ‘Meyɛ nsɛnkyerɛnne ma mo.’ “Sɛnea mayɛ no, saa ara na wɔbɛyɛ wɔn. Wobetwa wɔn asu akɔ nnommum mu.
12 ೧೨ ಅವರಲ್ಲಿನ ರಾಜನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ತೋಡಿ, ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಆಚೆಗೆ ಸಾಗಿಸುವರು; ಅವನು ಮುಖವನ್ನು ಮುಚ್ಚಿಕೊಳ್ಳುವನು, ಭೂಮಿಯು ಅವನ ಕಣ್ಣಿಗೆ ಕಾಣಿಸುವುದಿಲ್ಲ.’
“Ɔhene ba a ɔwɔ wɔn mu no de nʼadesoa bɛto ne mmati so bere a anim rebiribiri na wafi hɔ, na wobetu tokuru wɔ ɔfasu no mu ama wafa mu. Ɔbɛkata nʼanim sɛnea ɔrenhu faako a ɔrekɔ.
13 ೧೩ ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು; ಕಸ್ದೀಯರ ದೇಶವಾದ ಬಾಬಿಲೋನಿಗೆ ಅವನನ್ನು ಒಯ್ಯುವೆನು, ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡುವುದಿಲ್ಲ.
Mɛtrɛw mʼasau mu agu ne so na makyere no wɔ mʼafiri mu; mede no bɛkɔ Babilonia Kaldeafo asase so, nanso ɔrenhu na hɔ na obewu.
14 ೧೪ ಅವನ ಸುತ್ತಲಿನ ಸಕಲ ಸಹಾಯಕರನ್ನೂ, ಅವನ ಸಮಸ್ತ ವ್ಯೂಹಗಳವರನ್ನೂ ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.
Mɛhwete wɔn a wɔatwa ne ho ahyia nyinaa akɔ mmaa nyinaa; nʼadwumayɛfo ne nʼasraafo nyinaa, na mede afoa ataa wɔn.
15 ೧೫ “ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು ಅನ್ಯದೇಶಗಳಲ್ಲಿ ಚೆಲ್ಲಾಪಿಲ್ಲಿ ಮಾಡುವಾಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.
“Bere a mahwete wɔn akɔ amanaman so, na mahwete wɔn agu nsase so no, wobehu sɛ me ne Awurade no.
16 ೧೬ ನಾನು ಕೆಲವರನ್ನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯ ಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”
Nanso mɛma wɔn mu kakra anya wɔn ti adidi mu wɔ ɔkɔm, ɔyaredɔm ne afoa ano, sɛnea ɛbɛyɛ a wɔn ani bɛba wɔn akyiwade ahorow no so wɔ aman a wɔbɛkɔ so no mu. Afei wobehu sɛ me ne Awurade no.”
17 ೧೭ ಇದಲ್ಲದೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
Awurade asɛm baa me nkyɛn se,
18 ೧೮ “ನರಪುತ್ರನೇ, ನೀನು ಅನ್ನವನ್ನು ನಡುಗುತ್ತಾ ತಿನ್ನು ಮತ್ತು ನೀರನ್ನು ಹೆದರಿಕೆಯಿಂದ ಕುಡಿ.
“Onipa ba, sɛ woredidi a ma wo ho nwosow, na fa hu nom wo nsu.
19 ೧೯ ಆ ದೇಶದಲ್ಲಿರುವ ಜನರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಸ್ರಾಯೇಲ್ ದೇಶದ ಯೆರೂಸಲೇಮಿನ ನಿವಾಸಿಗಳ ವಿಷಯವಾಗಿ ಇಂತೆನ್ನುತ್ತಾನೆ, ಅವರು ಅನ್ನವನ್ನು ನಡಗುತ್ತಾ ತಿನ್ನುವರು ಮತ್ತು ನೀರನ್ನು ಹೆದರಿಕೆಯಿಂದ ಕುಡಿಯುವರು; ಏಕೆಂದರೆ ಆ ದೇಶದವರೆಲ್ಲರು ಬಲಾತ್ಕಾರಿಗಳಾಗಿರುವುದರಿಂದ ಅಲ್ಲಿನ ಸೊತ್ತೆಲ್ಲಾ ಸೂರೆಯಾಗಿ, ದೇಶವು ಬರಿದಾಗುವುದು.
Ka kyerɛ nnipa a wɔwɔ asase no so no se, ‘Sɛɛ na Otumfo Awurade ka fa wɔn a wɔte Yerusalem ne Israel asase so no ho: Wɔde ahopere bedidi na wɔde abasamtu anom nsu, efisɛ wɔbɛsɛe asase no so nneɛma nyinaa, esiane wɔn a wɔtete so no akakabensɛm nti.
20 ೨೦ ಆಗ ಜನ ತುಂಬಿದ ಊರುಗಳು ಹಾಳಾಗಿ ದೇಶವು ಬೀಡುಬೀಳುವುದು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”
Wɔbɛsɛe nkurow a nnipa tete so no nyinaa na asase no bɛda mpan. Afei wubehu sɛ mene Awurade no.’”
21 ೨೧ ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
Awurade asɛm baa me nkyɛn se,
22 ೨೨ “ನರಪುತ್ರನೇ, ಕ್ಲುಪ್ತಕಾಲವು ದೂರ ಹೋಗುತ್ತಲಿದೆ; ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂಬುದಾಗಿ ಇಸ್ರಾಯೇಲ್ ದೇಶದವರು ಆಡಿಕೊಳ್ಳುವ ಈ ಗಾದೆ ಮಾತು ಎಂಥದ್ದು?”
“Onipa ba, bɛ a mowɔ wɔ Israel a ese, ‘Nna no twa mu nanso Israel anisoadehu biara mma mu,’ yi ase ne dɛn?
23 ೨೩ ಅವರಿಗೆ ಹೀಗೆ ಹೇಳು, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಗಾದೆಯನ್ನು ಬಳಸುವುದನ್ನು ನಿಲ್ಲಿಸಿಬಿಡುವೆನು, ಅದು ಇಸ್ರಾಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಈ ಮಾತನ್ನು ಕೇಳಿರಿ, ‘ಕ್ಲುಪ್ತಕಾಲವು ಸಮೀಪಿಸಿದೆ, ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವ ಕಾಲ ಸಮೀಪಿಸಿದೆ.
Ka kyerɛ wɔn se, ‘Sɛɛ na Otumfo Awurade se: Merebɛma bɛ yi aso ha ara, na wɔrenka wɔ Israel bio.’ Ka kyerɛ wɔn se, ‘Nna a anisoadehu biara bɛba mu no abɛn.
24 ೨೪ ಇನ್ನು ಮೇಲೆ ಇಸ್ರಾಯೇಲ್ ವಂಶದವರಲ್ಲಿ ಯಾರಿಗೂ ಸುಳ್ಳು ದರ್ಶನವಾಗದು, ಮೋಸದ ಕಣಿಯೂ ಇರದು.
Na atoro anisoadehu ne nnaadaa abisa wɔ Israelfo mu no to betwa.
25 ೨೫ ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು’” ಇದು ಕರ್ತನಾದ ಯೆಹೋವನ ವಾಕ್ಯ.
Nanso me Awurade, mɛka nea ɛsɛ sɛ meka na ɛrenkyɛ na ɛbɛba mu. Na mo atuatewfo, mo bere so na mɛma nea maka biara no aba mu. Sɛɛ na Otumfo Awurade se.’”
26 ೨೬ ಮತ್ತು ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
Awurade asɛm baa me nkyɛn se,
27 ೨೭ “ನರಪುತ್ರನೇ, ಇಗೋ, ಇಸ್ರಾಯೇಲ್ ವಂಶದವರು, ‘ಇವನಿಗಾದ ದಿವ್ಯದರ್ಶನವು ಮುಂದೆ ಬಹುದೂರ ಕಾಲಕ್ಕೆ ಸಂಬಂಧಪಟ್ಟದ್ದು; ಬಹಳ ದಿನಗಳ ಮೇಲೆ ಆಗತಕ್ಕದ್ದನ್ನು ಮುಂತಿಳಿಸುತ್ತಾನೆ’ ಎಂದು ಹೇಳುತ್ತಾರೆ.
“Onipa ba, Israelfi reka se, ‘Anisoade a ohu no bɛba mu mfe bebree akyi, na nneɛma a ɛwɔ daakye akyirikyiri ho nkɔm na ɔhyɛ.’
28 ೨೮ “ಆದಕಾರಣ ನೀನು ಅವರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ನೆರವೇರದೆ ಇರದು; ನಾನಾಡುವ ಮಾತು ನೆರವೇರುವುದು ಖಂಡಿತ’ ಇದು ಕರ್ತನಾದ ಯೆಹೋವನ ನುಡಿ.”
“Ɛno nti ka kyerɛ wɔn se, ‘Sɛɛ na Otumfo Awurade se: Merentwe me nsɛm nkɔ kyi bio, nea meka biara bɛba mu, Otumfo Awurade na ose.’”