< ಯೆಹೆಜ್ಕೇಲನು 13 >
1 ೧ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
And the word of the Lord came to me, saying:
2 ೨ “ನರಪುತ್ರನೇ, ಪ್ರವಾದನೆ ಮಾಡಿ, ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತಾ ಹೀಗೆ ಹೇಳು, ‘ಯೆಹೋವನ ವಾಕ್ಯವನ್ನು ಕೇಳಿರಿ.
Son of man, prophesy thou against the prophets of Israel that prophesy: and thou shalt say to them that prophesy out of their own heart: Hear ye the word of the Lord:
3 ೩ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖ ಪ್ರವಾದಿಗಳ ಗತಿಯನ್ನು ಏನೆಂದು ಹೇಳಲಿ!
Thus saith the Lord God: Woe to the foolish prophets that follow their own spirit, and see nothing.
4 ೪ ಇಸ್ರಾಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ನರಿಗಳ ಹಾಗೆ ಇದ್ದಾರೆ.
Thy prophets, O Israel, were like foxes in the deserts.
5 ೫ ಯೆಹೋವನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿ ಗೋಡೆಯ ಒಡಕುಗಳನ್ನೇರಲಿಲ್ಲ, ಇಸ್ರಾಯೇಲ್ ವಂಶದ ರಕ್ಷಣೆಗಾಗಿ ಗೋಡೆಯನ್ನು ಭದ್ರ ಮಾಡಲೂ ಇಲ್ಲ. ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ,
You have not gone up to face the enemy, nor have you set up a wall for the house of Israel, to stand in battle in the day of the Lord.
6 ೬ ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.
They see vain things, and they foretell lies, saying: The Lord saith: whereas the Lord hath not sent them: and they have persisted to confirm what they have said.
7 ೭ ನಾನು ಮಾತನಾಡದೆ ಹೋದರೂ, ‘ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನವು ಮಿಥ್ಯ, ನೀವು ಹೇಳಿದ ಕಣಿಯು ಸುಳ್ಳು.
Have you not seen a vain vision and spoken a lying divination: and you say: The Lord saith: whereas I have not spoken.
8 ೮ “ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀವು ವ್ಯರ್ಥವಾದದ್ದನ್ನು ನುಡಿದು, ಸುಳ್ಳಾದ ದರ್ಶನವನ್ನು ಕಂಡಿದ್ದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ’ ಇದು ಕರ್ತನಾದ ಯೆಹೋವನೆಂಬ ನನ್ನ ನುಡಿ.
Therefore thus saith the Lord God: Because you have spoken vain things, and have seen lies: therefore behold I come against you, saith the Lord God.
9 ೯ ‘ಮಿಥ್ಯ ದರ್ಶನಹೊಂದಿ, ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರೀಸಭೆಯಲ್ಲಿ ಸೇರಬಾರದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗಬಾರದು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.
And my hand shall be upon the prophets that see vain things, and that divine lies: they shall not be in the council of my people, nor shall they be written in the writing of the house of Israel, neither shall they enter into the land of Israel, and you shall know that I am the Lord God.
10 ೧೦ “ಅಶಾಂತಿಯಿದ್ದರೂ ಅವರು ‘ಶಾಂತಿಯಿದೆ’ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರೆ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೂ, ಇಗೋ, ಅದಕ್ಕೆ ಸುಣ್ಣಬಳಿಯುತ್ತಾರೆ;
Because they have deceived my people, saying: Peace, and there is no peace: and the people built up a wall, and they daubed it with dirt without straw.
11 ೧೧ ಆದಕಾರಣ, ನೀನು ಸುಣ್ಣಬಳಿಯುವವರಿಗೆ ಹೀಗೆ ನುಡಿ, ‘ವಿಪರೀತ ಮಳೆಯಾಗಿ ಗೋಡೆಯು ಬಿದ್ದುಹೋಗುವುದು, ಆನೆಕಲ್ಲುಗಳು ಸುರಿಯುವವು; ಬಿರುಗಾಳಿಯು ಗೋಡೆಯನ್ನು ಒಡೆದುಹಾಕುವುದು.’
Say to them that daub without tempering, that it shall fall: for there shall be an overflowing shower, and I will cause great hailstones to fall violently from above, and a stormy wind to throw it down.
12 ೧೨ ಇಗೋ, ಗೋಡೆಯು ಬಿದ್ದ ಮೇಲೆ, ‘ನೀವು ಬಳಿದ ಸುಣ್ಣ ಎಲ್ಲಿ?’ ಎಂದು ನಿಮ್ಮನ್ನು ಕೇಳುವರಲ್ಲವೆ?”
Behold, when the wall is fallen: shall it not be said to you: Where is the daubing wherewith you have daubed it?
13 ೧೩ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶ ಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು, ನನ್ನ ರೋಷದಿಂದ ಆನೆಕಲ್ಲುಗಳು ಸುರಿಯುವವು;
Therefore thus saith the Lord God: Lo, I will cause a stormy wind to break forth in my indignation, and there shall be an overflowing shower in my anger: and great hailstones in my wrath to consume.
14 ೧೪ ನೀವು ಸುಣ್ಣಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲ ಸಮಮಾಡಿ ಅದರ ಅಸ್ತಿವಾರವನ್ನು ಬಯಲುಪಡಿಸುವೆನು; ಅದು ಬಿದ್ದುಹೋಗುವುದು ಮತ್ತು ನೀವು ಅದರೊಳಗೆ ಸಿಕ್ಕಿಕೊಂಡು ನಾಶವಾಗುವಿರಿ ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.
And I will break down the wall that you have daubed with untempered mortar: and I will make it even with the ground, and the foundation thereof shall be laid bare: and it shall fall, and shall be consumed in the midst thereof: and you shall know that I am the Lord.
15 ೧೫ ಹೀಗೆ ನಾನು ಗೋಡೆಯಲ್ಲಿಯೂ, ಅದಕ್ಕೆ ಸುಣ್ಣ ಬಳಿದ ನಿಮ್ಮಲ್ಲಿಯೂ ರೋಷವನ್ನು ತೀರಿಸಿಕೊಂಡು ಇಂತೆನ್ನುವೆನು,
And I will accomplish my wrath upon the wall, and upon them that daub it without tempering the mortar, and I will say to you: The wall is no more, and they that daub it are no more.
16 ೧೬ ‘ಇಸ್ರಾಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯಿದೆ ಎಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇಮಿನ ವಿಷಯವಾಗಿ ಪ್ರವಾದಿಸಿದ್ದೀರಲ್ಲವೆ? ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು’” ಇದು ಕರ್ತನಾದ ಯೆಹೋವನ ನುಡಿ.
Even the prophets of Israel that prophesy to Jerusalem, and that see visions of peace for her: and there is no peace, saith the Lord God.
17 ೧೭ “‘ನರಪುತ್ರನೇ, ಸ್ವಕಲ್ಪಿತವಾದುದನ್ನು ಕಣಿ ಎಂದು ಹೇಳುವ ನಿನ್ನ ಸ್ವಕುಲ ಸ್ತ್ರೀಯರ ಕಡೆಗೆ ಮುಖ ಮಾಡಿಕೊಂಡು ಅವರನ್ನೂ ಖಂಡಿಸಿ ಹೀಗೆ ಪ್ರವಾದಿಸು.’
And thou, son of man, set thy face against the daughters of thy people that prophesy out of their own heart: and do thou prophesy against them,
18 ೧೮ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು, ಎಲ್ಲರ ಮೊಣಕೈಗಳಿಗೆ ತಾಯಿತಗಳನ್ನು ಕಟ್ಟಿ, ಉದ್ದವಾದವರಿಗೂ, ಗಿಡ್ಡವಾದವರಿಗೂ ತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಸ್ತ್ರೀಯರ ಗತಿಯನ್ನು ಏನೆಂದು ಹೇಳಲಿ! ಸ್ತ್ರೀಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ ಸ್ವಂತ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ?
And say: Thus saith the Lord God: Woe to them that sew cushions under every elbow: and make pillows for the heads of persons of every age to catch souls: and when they caught the souls of my people, they gave life to their souls.
19 ೧೯ ನೀವು ಜವೆಗೋದಿಯ ಹಿಡಿಗಳನ್ನೂ, ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳು ಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವುದರಿಂದ ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.’
And they violated me among my people, for a handful of barley, and a piece of bread, to kill souls which should not die, and to save souls alive which should not live, telling lies to my people that believe lies.
20 ೨೦ “ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಗಳಿಗೆ ನಾನು ಹೇಸಿ, ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತು ಹಾಕುವೆನು; ನೀವು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವ ಪ್ರಾಣಿಗಳನ್ನು ನಾನು ಬಿಡಿಸಿ, ಪಕ್ಷಿಗಳ ಹಾಗೆ ಸ್ವತಂತ್ರವಾಗಿಸುವೆನು.
Therefore thus saith the Lord God: Behold I declare against your cushions, wherewith you catch flying souls: and I will tear them off from your arms: and I will let go the souls that you catch, the souls that should fly.
21 ೨೧ ನಾನು ನಿಮ್ಮ ಮುಸುಕುಗಳನ್ನೂ ಹರಿದು, ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
And I will tear your pillows, and will deliver my people out of your hand, neither shall they be any more in your hands to be a prey: and you shall know that I am the Lord.
22 ೨೨ ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.
Because with lies you have made the heart of the just to mourn, whom I have not made sorrowful: and have strengthened the hands of the wicked, that he should not return from his evil way, and live.
23 ೨೩ ಆದಕಾರಣ ನೀವು ಮಿಥ್ಯ ದರ್ಶನವನ್ನು ಹೊಂದಿ, ಕಣಿಹೇಳುವ ಕೆಲಸವು ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು, ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.”
Therefore you shall not see vain things, nor divine divinations any more, and I will deliver my people out of your hand: and you shall know that I am the Lord.