< ಯೆಹೆಜ್ಕೇಲನು 14 >
1 ೧ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಬಂದು,
Kati na bakambi ya Isalaele, ndambo bayaki epai na ngai mpe bavandaki liboso na ngai.
2 ೨ ನನ್ನ ಮುಂದೆ ಕುಳಿತುಕೊಂಡಿರುವಾಗ ಯೆಹೋವನು ಈ ವಾಕ್ಯವನ್ನು ನನಗೆ ಅನುಗ್ರಹಿಸಿದನು,
Bongo Yawe alobaki na ngai:
3 ೩ “ನರಪುತ್ರನೇ, ಇವರು ತಮ್ಮ ವಿಗ್ರಹಗಳನ್ನು, ಮನಸ್ಸಿನಲ್ಲಿ ನೆಲೆಗೊಳಿಸಿ, ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಇಲ್ಲ.”
« Mwana na moto, bato oyo bazali kotia mitema epai ya banzambe ya bikeko. Bongo lokola bazali kotia banzambe ya bikeko liboso na bango, ekobetisa bango mabaku oyo ekokweyisa bango na masumu. Boni, natikela bango lisusu nzela ya kotuna Ngai toli?
4 ೪ ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರಲ್ಲಿ ಯಾರು ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬರುವ ಅವನಿಗೆ ಯೆಹೋವನಾದ ನಾನು ಅವನ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಉತ್ತರವನ್ನು ಕೊಡುವೆನು.
Mpo na yango, loba na bango: ‹ Tala liloba oyo Nkolo Yawe alobi: Soki moto ya Isalaele atie motema epai ya banzambe ya bikeko oyo ekobetisa ye mabaku mpe ekokweyisa ye na masumu, bongo atie yango liboso na ye mpe akei epai ya mosakoli, Ngai moko Yawe nde nakoyanola ye kolanda motango ya banzambe na ye ya bikeko.
5 ೫ ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.”
Nakosala bongo mpo na kozongisa lisusu epai na Ngai, mitema ya bana ya Isalaele oyo batikaki Ngai mpo na kolanda banzambe ya bikeko. ›
6 ೬ ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿ, ನಿಮ್ಮ ಎಲ್ಲಾ ಅಸಹ್ಯ ವಸ್ತುಗಳ ಕಡೆಗೆ ಬೆನ್ನುಮಾಡಿರಿ.
Yango wana, loba na libota ya Isalaele: ‹ Tala liloba oyo Nkolo Yawe alobi: Bobongola mitema! Bopesa banzambe na bino ya bikeko mikongo mpe botika misala na bino ya mbindo!
7 ೭ “ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು.
Soki moto moko ya Isalaele to mopaya nyonso oyo avandi kati na Isalaele akabwani na Ngai, atie motema na ye na banzambe ya bikeko mpe atie liboso na ye banzambe yango ya bikeko oyo ekobetisa ye mabaku mpe ekokweyisa ye na masumu, bongo akei epai ya mosakoli mpo na kotuna Ngai toli na nzela na ye, Ngai moko Yawe nde nakoyanola ye.
8 ೮ ಅವನ ಮೇಲೆ ಉಗ್ರಕೋಪಗೊಂಡು, ಅವನನ್ನು ಎಚ್ಚರಿಕೆಗೆ ಗುರುತಾಗಿಯೂ, ಕಟ್ಟು ಗಾದೆಗಳಿಗೂ ವಸ್ತುವಾಗಿ ಮಾಡಿ, ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
Nakotombokela moto wana, nakokomisa ye elembo mpe lisese epai na bato mpe nakolongola ye na molongo ya bato na Ngai. Na bongo, bokoyeba solo ete Ngai nazali Yawe.
9 ೯ “ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.
Soki mosakoli moko akosami mpe asakoli makambo, ezali Ngai moko Yawe nde napengwisi ye. Boye, nakosembola loboko na Ngai mpo na kopesa ye etumbu, mpe nakobeta ye kati na bato na Ngai, Isalaele.
10 ೧೦ ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆಕೇಳುವವನ ದೋಷವೂ ಅಷ್ಟೇ; ಇಬ್ಬರೂ ತಮ್ಮ ತಮ್ಮ ದೋಷ ಫಲವನ್ನು ಅನುಭವಿಸುವರು.
Bango mibale, mosakoli yango mpe moto oyo akei kotuna ye toli, bakomema mikumba ya masumu na bango.
11 ೧೧ ಹೀಗಾದರೆ ಇಸ್ರಾಯೇಲ್ ವಂಶದವರು ಇನ್ನು ನನ್ನನ್ನು ತೊರೆಯುವುದಿಲ್ಲ, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆ ಮಾಡಿಕೊಳ್ಳುವುದಿಲ್ಲ; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು” ಇದು ಕರ್ತನಾದ ಯೆಹೋವನ ನುಡಿ.
Na bongo, bato ya Isalaele bakokabwana na Ngai lisusu te mpe bakomikomisa lisusu mbindo te na nzela ya masumu na bango; kasi bakozala bato na Ngai, mpe Ngai, nakozala Nzambe na bango, elobi Nkolo Yawe. › »
12 ೧೨ ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
Yawe alobaki na ngai:
13 ೧೩ “ನರಪುತ್ರನೇ, ಅಪರಾಧವನ್ನು ನಡೆಸಿ ನನ್ನ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ, ಅದರ ಆಹಾರ ಸರಬರಾಜನ್ನು ತೆಗೆದುಬಿಟ್ಟು, ಕ್ಷಾಮವನ್ನು ಬರಮಾಡಿ, ಜನರನ್ನು, ಪಶುಗಳನ್ನು ಅದರೊಳಗಿಂದ ನಿರ್ಮೂಲ ಮಾಡುತ್ತೇನೆ.
« Mwana na moto, soki bato ya ekolo moko basali masumu liboso na Ngai mpe batamboli na boyengebene te, bongo Ngai nasemboli loboko na Ngai mpo na kopimela bango bilei mpe kotindela bango nzala makasi mpo ete ezala bato to banyama bakufa,
14 ೧೪ ನೋಹ, ದಾನಿಯೇಲ, ಯೋಬ ಎಂಬ ಮೂವರು ಪುರುಷರು ಆ ದೇಶದಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು” ಇದು ಕರ್ತನಾದ ಯೆಹೋವನ ನುಡಿ.
ata soki bato misato oyo, ‹ Noa, Daniele mpe Yobo, › bazalaki kati na bavandi ya ekolo yango, bango misato kaka nde balingaki kobika mpo na bosembo na bango, elobi Nkolo Yawe.
15 ೧೫ “ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳ್ಳಿಸಿ, ಹಾಳುಮಾಡಿ, ಯಾರೂ ಹಾದು ಹೋಗದಂತೆ ಹೆದರಿಸುವ ಪಕ್ಷದಲ್ಲಿ,
To soki natindi banyama mabe kati na ekolo yango mpo ete eboma bavandi na yango, mpe mpo ete ekolo yango etikala lisusu na bato te mpe bato balekela lisusu wana te mpo na banyama mabe yango;
16 ೧೬ ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ದೇಶವು ಹಾಳಾಗಿ ಹೋಗುವುದು” ಇದು ಕರ್ತನಾದ ಯೆಹೋವನ ನುಡಿ.
na Kombo na Ngai, elobi Nkolo Yawe, ata soki bato oyo misato bazalaki kuna, balingaki kokoka te kobikisa bana na bango ya mibali mpe ya basi; bango misato kaka nde balingaki kobika, kasi ekolo elingaki kotikala lisusu na bato te.
17 ೧೭ “ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ,
To soki natindi mopanga ete eboma bato ya ekolo wana mpe nalobi: ‹ Tika ete mopanga eleka na mokili mobimba! › Soki nabomi bato mpe bibwele na yango;
18 ೧೮ ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.
na Kombo na Ngai, elobi Nkolo Yawe, ata soki bato oyo misato bazalaki kuna, balingaki kokoka te kobikisa bana na bango ya mibali mpe ya basi; bango misato kaka nde balingaki kobika.
19 ೧೯ “ನಾನು ಆ ದೇಶದ ಮೇಲೆ ನನ್ನ ಕೋಪವನ್ನು ಹೊಯ್ದು, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನರನ್ನು, ಪಶುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ,
To soki natindi kati na mokili yango bokono oyo ebomaka mpe nasopeli yango kanda na Ngai mpo na kosopa makila, koboma bato mpe bibwele ya mokili yango;
20 ೨೦ ನೋಹ, ದಾನಿಯೇಲ, ಯೋಬ ಎಂಬುವರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಗನನ್ನಾಗಲಿ, ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.
na Kombo na Ngai, elobi Nkolo Yawe, ata soki Noa, Daniele mpe Yobo bazalaki kati na bavandi na yango, balingaki kokoka te kobikisa ata mwana moko ya mobali to ya mwasi; bango misato kaka nde balingaki kobika mpo na bosembo na bango.
21 ೨೧ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!
Kasi tala liloba oyo Nkolo Yawe alobi: Atako natindeli Yelusalemi bitumbu na Ngai oyo minei ya somo: mopanga, nzala makasi, banyama mabe mpe bokono oyo ebomaka, mpo na kosilisa koboma bato mpe bibwele na yango,
22 ೨೨ ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿ ಸಮಾಧಾನ ಹೊಂದುವಿರಿ.
ekozala na ndambo ya bato oyo bakobika: bana mibali mpe ya basi. Bakoya epai na bino; mpe tango bokomona bizaleli mpe misala na bango, bokobondisama mpo na pasi oyo natindelaki Yelusalemi, mpo na bitumbu nyonso oyo natindelaki yango.
23 ೨೩ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಯೆರೂಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ತಿಳಿದು ಬರುವುದು” ಇದು ಕರ್ತನಾದ ಯೆಹೋವನ ನುಡಿ.
Solo, bokobondisama tango bokomona bizaleli mpe misala na bango; pamba te bokososola ete ezali na pamba te nde nasalaki makambo oyo nyonso kati na Yelusalemi, elobi Nkolo Yawe. »